Breaking News

Yearly Archives: 2026

ಮೂಲ ಸೌಕರ್ಯ ವಿಕಾಸಕ್ಕೆ ಮೊದಲ ಆದ್ಯತೆ

ಅಥಣಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ೨೦೨೬-೨೭ನೇ ಸಾಲಿನ ಬಜೆಟ್‌ನ್ನು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ ಮಂಡಿಸಿದರು. ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆಯ ಒಟ್ಟು ಆದಾಯ ೩೮,೭೭,೭೯,೦೦೦ ರೂ. ಎಂದು ನಿರೀಕ್ಷಿಸಲಾಗಿದ್ದು, ಇದರಲ್ಲಿ ಮುಂಬರುವ ವರ್ಷದಲ್ಲಿ ೩೮,೪೩,೦೧,೬೦೩ ರೂ. ಒಟ್ಟು ಖರ್ಚು ಮಾಡಲು ಅಂದಾಜಿಸಲಾಗಿದೆ. ಒಟ್ಟು ೩೪,೭೬,೮೯೭ ರೂ. ಉಳಿತಾಯವಾಗಲಿದ್ದು, ಪುರಸಭೆ ಆರ್ಥಿಕವಾಗಿ ಸದೃಢ ಸ್ಥಿತಿಯಲ್ಲಿದೆ. ರಸ್ತೆ ನಿರ್ಮಾಣ, ಕುಡಿಯುವ ನೀರು ಪೂರೈಕೆ, ಒಳಚರಂಡಿ, ಬೀದಿದೀಪ …

Read More »

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

ಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ವಿಶೇಷ ಸ್ಥಾನವಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿಗಳ ಬೆನ್ನು ಹತ್ತಿ ಮಂಡಿಸಿದ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆರ್ಥಿಕ ತಜ್ಞರೆಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ, ಉತ್ತರ ಕರ್ನಾಟಕ …

Read More »

ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ : ರಾಜ್ಯದಲ್ಲಿ 1995ರಿಂದ ಪ್ರಾರಂಭವಾಗಿರುವ ಅನುದಾನ ರಹಿತ ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ಅನುದಾನ ರಹಿತ ಶಾಲಾ ಕಾಲೇಜ್ ನೌಕರರ ಆಡಳಿತ ಮಂಡಳಿಗಳ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‌್ಯಾಲಿ ಮೂಲಕ ಆಗಮಿಸಿ, ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಹೋರಾಟ ಸಮಿತಿಯ ಗೌರವ …

Read More »

ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ : ರಾಜ್ಯದಲ್ಲಿ 1995ರಿಂದ ಪ್ರಾರಂಭವಾಗಿರುವ ಅನುದಾನ ರಹಿತ ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ಅನುದಾನ ರಹಿತ ಶಾಲಾ ಕಾಲೇಜ್ ನೌಕರರ ಆಡಳಿತ ಮಂಡಳಿಗಳ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‌್ಯಾಲಿ ಮೂಲಕ ಆಗಮಿಸಿ, ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಹೋರಾಟ ಸಮಿತಿಯ ಗೌರವ …

Read More »

ನಿರಂತರ ನೀರು ಸರಬರಾಜು ಯೋಜನೆ ಪರಿಶೀಲನೆಗೆ ವಿಶ್ವಬ್ಯಾಂಕ್ ನಿಯೋಗ ಭೇಟಿ ನೀಡಿ

ಬೆಳಗಾವಿ: ವಿಶ್ವ ಬ್ಯಾಂಕ್ ದಕ್ಷಿಣ ಏಷ್ಯಾ ಪ್ರದೇಶದ ಉಪಾಧ್ಯಕ್ಷ ಜೋಹಾನ್ಸ್  ಜುಟ್ ನೇತೃತ್ವದ ವಿಶ್ವ ಬ್ಯಾಂಕ್ ನಿಯೋಗವು ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ (24/7 ನಿರಂತರ ನೀರು ಸರಬರಾಜು ಯೋಜನೆ) ಪರಿಶೀಲನೆಗಾಗಿ ಗುರುವಾರ ಬೆಳಗಾವಿ ನಗರಕ್ಕೆ ಭೇಟಿ ನೀಡಿತ್ತು. ವಂಟಮುರಿ ಕಾಲನಿ ಮತ್ತು ಮುತ್ತ್ಯಾನಟ್ಟಿಗೆ ಘಟಕಗಳಿಗೆ ಭೇಟಿ ನೀಡಿ, ಸಾರ್ವಜನಿಕೊಂದಿಗೆ ಸಂವಾದ ನಡೆಸಿದರು. ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕಿ ಪೂವಿತಾ ಎಸ್. ವಿಶ್ವಬ್ಯಾಂಕ ಪ್ರತಿನಿಧಿಗಳಿಗೆ ನಗರ ನೀರು ಸರಬರಾಜು ಆಧುನೀಕರಣ …

Read More »

ಅಂತಾರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ

ಬೆಳಗಾವಿ: ಕೌನ್ಸೆಲಿಂಗ್ ಸೆಲ್ ಮತ್ತು ಡಿಪಾರ್ಟ್‌ಮೆಂಟ್ ಆಫ್ ಸೈಕಾಲಜಿ ಹಾಗೂ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಆ್ಯಂಡ್ ರಿಸರ್ಚ್ (ಕಾಹೇರ್) ವತಿಯಿಂದ ಅಡ್ವಾನ್ಸಡ್ ಟೆಕ್ನಾಲಜಿ ಮತ್ತು ಥೆರಪಿಸ್-ಎ ಮಲ್ಟಿಡಿಸಿಪ್ಲಿನರಿ ಅಪ್ರೋಚ್ ಫಾರ್ ಮೆಂಟಲ್ ಹೆಲ್ತ್ ಮ್ಯಾನೇಜ್‌ಮೆಂಟ್ ಕುರಿತು 3ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇಸ್ರೋದ ಎಸ್‌ಪಿಸಿಜಿ ಸಮೂಹ ನಿರ್ದೇಶಕ ಡಾ.ಶ್ರೀನಿವಾಸ ರಾವ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಆಧುನಿಕ ತಂತ್ರಜ್ಞಾನಗಳ ಯುಗದಲ್ಲಿ ಮಾನಸಿಕ ಆರೋಗ್ಯದ ಕುರಿತು ಹಾಗೂ ಸಮುದಾಯದ ವಿವಿಧ ಗುಂಪುಗಳಿಗೆ ಮಾನಸಿಕ …

Read More »

ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮಹಾಪೌರ ಸ್ಥಾನಕ್ಕೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು

ಬೆಳಗಾವಿ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮಹಾಪೌರ ಸ್ಥಾನಕ್ಕೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಒತ್ತಾಯಿಸಿದ್ದಾರೆ. ಮೇಯರ್ ಹುದ್ದೆ ಸಾಮಾನ್ಯ ಮಹಿಳೆ, ಉಪ ಮೇಯರ್  ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇಂತಹ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಬಹು ಮುಖ್ಯ. …

Read More »

ಮಾ.18ರಿಂದ ಏ.2ರವರೆಗೆ ನಿಷೇಧಾಜ್ಞೆ ಜಾರಿ

ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾ.18ರಿಂದ ಏ.2ರವರೆಗೆ ಚಿಕ್ಕೋಡಿಯ 131 ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 104 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಒಟ್ಟು 235 ಪರೀಕ್ಷಾ ಕೇಂದ್ರಗ ಸುತ್ತ ಪರೀಕ್ಷೆ ಅವಧಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಅನ್ವಯ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ …

Read More »

ಮಕ್ಕಳ ಮೇಲಿನ ದೌರ್ಜನ್ಯ ತೊಲಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು

ಐನಾಪುರ: ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ವಕೀಲ ರಾಹುಲ ಕಟಗೇರಿ ಹೇಳಿದರು. ಪಟ್ಟಣದ ಶಾಂತಿಸಾಗರ ಆಂಗ್ಲ ಮಾಧ್ಯಮ ಶಾಲೆ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳನ್ನು ರಕ್ಷಿಸಲು ಪೋಕ್ಸೋ ಕಾಯ್ದೆ ಬೆಂಬಲವಿದ್ದು, ಮಕ್ಕಳು ಮೊಬೈಲ್ ಬಳಕೆ …

Read More »

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

ಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು ಗುರುವಾರ ಗುರುವಾರ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತ ಹಾಗೂ ಮೇಯರ್‌ಗೆ ಮನವಿ ಸಲ್ಲಿಸಿದ್ದಾರೆ. ವಡಗಾವಿ, ಭಾರತ ನಗರ, ಖಾಸಬಾಗ ಹಾಗೂ ಹಳೇಬೆಳಗಾವಿ ಭಾಗದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ನೇಕಾರರು ವಾಸವಾಗಿದ್ದೇವೆ. ನಾವು ನೇಕಾರರ ಸಂತ ಆದ್ಯ ವಚನಕರ ದೇವರ ದಾಸಿಮಯ್ಯನವರನ್ನು ಪೂಜಿಸುವ ಸಮುದಾಯದವರಾಗಿದ್ದೇವೆ. ಈ ಭಾಗದ ರಸ್ತೆಗೆ ನಮ್ಮ ಸಮುದಾಯದ …

Read More »