Breaking News

Yearly Archives: 2026

ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ; ಬಿಜೆಪಿ ವಿರುದ್ಧ ‘ನರೇಗಾ ಬಚಾವ್’ ಹೋರಾಟಕ್ಕೆ ಸಲೀಂ ಅಹ್ಮದ್ ಕರೆ

ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ; ಬಿಜೆಪಿ ವಿರುದ್ಧ ‘ನರೇಗಾ ಬಚಾವ್’ ಹೋರಾಟಕ್ಕೆ ಸಲೀಂ ಅಹ್ಮದ್ ಕರೆ ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ ಬಿಜೆಪಿ ವಿರುದ್ಧ ನರೇಗಾ ಬಚಾವ್ ಹೋರಾಟ ಸಲೀಂ ಅಹ್ಮದ್ ನೀಡಿದ ಬಹಿರಂಗ ಸವಾಲು ಕಾಲೇಜುಗಳಲ್ಲಿ ಶೀಘ್ರವೇ ವಿದ್ಯಾರ್ಥಿ ಸಂಘ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆಯ ಚರ್ಚೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಜನವರಿ ೩೧ರ …

Read More »

ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ ಆಯೋಜನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ಕಾಲ್ತುಳಿತ ದುರಂತ ಸಂಭವಿಸಿದ ಏಳು ತಿಂಗಳ ಬಳಿಕ ಆರ್​​ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಅಂತಾರಾಷ್ಟ್ರೀಯ ಪಂದ್ಯಾವಳಿ ಆಯೋಜನೆಗೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಈ ಬಾರಿ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವುದರ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹಾ ನೀಡಿದ ಶಿಫಾರಸ್ಸುಗಳನ್ನ ಪಾಲಿಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಭರವಸೆ …

Read More »

10 ಎಕರೆ ಗೋಮಾಳ ಜಮೀನು ವಶಕ್ಕೆ ಪಡೆದ ಬೆಂಗಳೂರು ನಗರ ಜಿಲ್ಲಾಡಳಿತ

ಆನೇಕಲ್‌(ಬೆಂಗಳೂರು): ತಾಲೂಕಿನ ಜಿಗಣಿ-ಬನ್ನೇರುಘಟ್ಟ ಮುಖ್ಯರಸ್ತೆಯ ಕೊಪ್ಪ ಗೇಟ್​ಗೆ ಹೊಂದಿಕೊಂಡ ಕೊಪ್ಪ ಸರ್ವೆ ನಂ 110ರ 10 ಎಕರೆ ಗೋಮಾಳ ಜಮೀನನ್ನು ಬೆಂಗಳೂರು ನಗರ ಜಿಲ್ಲಾಡಳಿತ ಶನಿವಾರ ವಶಕ್ಕೆ ಪಡೆಯಿತು. ಜಿಲ್ಲಾಧಿಕಾರಿ ಜಗದೀಶ್‌, ಉಪವಿಭಾಗಾಧಿಕಾರಿ ವಿಶ್ವನಾಥ್‌ ಹಾಗು ತಹಶೀಲ್ದಾರ್‌ ಶಶಿಧರ್‌ ಮಾಡ್ಯಾಳ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಸರ್ಕಾರಿ ಜಾಗದಲ್ಲಿ ಎಂಟು ಸೂಚನಾಫಲಕ ನೆಟ್ಟು, ಸುತ್ತಲೂ ತಂತಿ ಬೇಲಿ ಹಾಕಿಸುವ ಕೆಲಸಕ್ಕೆ ಕಂದಾಯ ಇಲಾಖೆ ಚಾಲನೆ ನೀಡಿದೆ.‌ ಸ್ಥಳದಲ್ಲಿ ಈ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರು, …

Read More »

ಭೀಮಣ್ಣ ಖಂಡ್ರೆ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಇತರರು

ಬೀದರ್: ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಶತಾಯುಷಿ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನೆರವೇರಿತು. ವೀರಶೈವ ಲಿಂಗಾಯತ ವಿಧಿ ವಿಧಾನಗಳಂತೆ ಪಟ್ಟಣದ ಹೊರವಲಯದ ಚಿಕಲ್ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಅಪಾರ ಜನಸ್ತೋಮದ ಮಧ್ಯೆ ಅಂತ್ಯಸಂಸ್ಕಾರ ನಡೆಯಿತು. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಹಾಗೂ ನೆರೆಯ ತೆಲಂಗಾಣ, ಮತ್ತು ಮಹಾರಾಷ್ಟ್ರದಿಂದಲೂ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು …

Read More »

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

ಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Read More »

ಬಸವನ ಬಾಗೇವಾಡಿಯಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ*

ಬಸವನ ಬಾಗೇವಾಡಿಯಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಹಾಗೂ ಸಿಪಿಐ ಗುರು ಶಾಂತಗೌಡ ದಾಶ್ಯಾಳ ಅವರ ನೇತೃತ್ವದಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ 2026 ಕಾರ್ಯಕ್ರಮ ನಡೆಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿದ್ದಲಿಂಗ ಮಹಾ ಸ್ವಾಮೀಜಿಯವರು ಮತ್ತು ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಅವರು ಸೇರಿಕೊಂಡು ರಸ್ತೆ ಸುರಕ್ಷಾ ಜಾಥಾ ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. …

Read More »

ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ * ನಂದಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಶಿವಾಜಿ ಪುತ್ಥಳಿ ಸುತ್ತ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಸಚಿವರು ಬೆಳಗಾವಿ: ನಾನು ಕೇವಲ ಭಾಷಣ ಮಾಡುವುದಿಲ್ಲ, ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ. ಚುನಾವಮೆ ಪೂರ್ವ ಮಾತುಕೊಟ್ಟಂತೆ ಕೆಲಸ ಮಾಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ …

Read More »

ನಕಲಿ ಆಧಾರ್‌ ಕಾರ್ಡ್ ನೀಡಿ ಪಡೆದ ಪಾಸ್‌ಪೋರ್ಟ್‌ ಬಳಸಿ 5 ಬಾರಿ ಬಾಂಗ್ಲಾ ಪ್ರಯಾಣ: ಜಾಮೀನು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು: ನಕಲಿ ಆಧಾರ್ ಕಾರ್ಡ್ ಸಲ್ಲಿಸಿ ಪಡೆದುಕೊಂಡಿದ್ದ ಪಾಸ್ಪೋರ್ಟ್(Passport) ಬಳಸಿ ಐದು ಬಾರಿ ಬಾಂಗ್ಲಾದೇಶಕ್ಕೆ ಪ್ರಯಾಣ ಮಾಡಿ ಮಾನವ ಕಳ್ಳಸಾಗಣೆ ಆರೋಪದಲ್ಲಿ ಬಂಧಿತನಾಗಿರುವ ಬಾಂಗ್ಲಾ ದೇಶದ ಪ್ರಜೆಯೊಬ್ಬನಿಗೆ ಜಾಮೀನು ನೀಡಲು ಹೈಕೋರ್ಟ್‌ ಸೋಮವಾರ ನಿರಾಕರಿಸಿ ಆದೇಶಿಸಿತು. ತಾನು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಎನ್ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಾಂಗ್ಲಾದೇಶದ ಪ್ರಜೆಯಾಗಿರುವ ಸದ್ಯ ಅಸ್ಸಾಂನ ವಿಳಾಸ ಹೊಂದಿರುವ ಅಮೋಲ್ ಚಂದ್ರ ದಾಸ್ ಅಲಿಯಾಸ್ ಸುಜೀಬ್ ಎಂಬವರು ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ …

Read More »

ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧ ಕಡೆ ಅಕ್ರಮ ಡ್ರಗ್ಸ್ ಮಾರಾಟಕ್ಕೆಂದು ಆಗಮಿಸಿ ನಗರದಲ್ಲೇ ನೆಲೆಯೂರಿದ್ದವರ ವಿರುದ್ಧ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಜಹಿದುಲ್ ಇಸ್ಲಾಂ(35) ಮತ್ತು ಫೈರೋಡ್ಸ್(32) ಬಂಧಿತರು. ಇವರು ಎರಡು ವರ್ಷಗಳ ಹಿಂದೆ ಹೆಬ್ಬಗೋಡಿ ಭಾಗದಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳದ ಮೂಲಕ ಭಾರತ ಪ್ರವೇಶಿಸಿದ ಈ ಆರೋಪಿಗಳು ಬೆಂಗಳೂರಿಗೆ ಬಂದು ವಾಸವಾಗಿದ್ದರು ಎಂಬ ಸಂಗತಿ ಪೊಲೀಸ್ ವಿಚಾರಣೆಯಲ್ಲಿ ತಿಳಿದು …

Read More »

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಬಿಎಂಐಸಿ ಯೋಜನೆಗಾಗಿ ವಶಪಡಿಸಿಕೊಂಡು ತಮ್ಮ ಜಮೀನಿಗೆ ಪರಿಹಾರ ವಿತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಮಾರಪ್ಪ ಗಾರ್ಡನ್ ನಿವಾಸಿ ಚಂದ್ರಿಕಾ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ ನ್ಯಾ.ಡಿ.ಕೆ.ಸಿಂಗ್ ಮತ್ತು ನ್ಯಾ.ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠ …

Read More »