ಮಂಗಳೂರು: ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿ, 8 ಮಂದಿಗೆ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. MRPLನ CHT ಘಟಕದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಸ್ಫೋಟದ ಬಳಿಕ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿತ್ತು. ಘಟನೆಯಿಂದ MRPL ಪಕ್ಕದಲ್ಲೇ ಇರುವ ಅಂಗನವಾಡಿಗೂ ಹಾನಿಯಾಗಿದೆ. ಅಂಗನವಾಡಿಯ ಕಿಟಕಿ ಗಾಜು ಹಾಗೂ ಗೋಡೆಗೆ ಹಾನಿಯಾಗಿದ್ದು, ಮುನ್ನೆಚ್ಚರಿಕಾ …
Read More »Yearly Archives: 2026
ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್
ಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ಪ್ರತಿಪಕ್ಷ ಬಿಜೆಪಿ ಇಟ್ಟಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ. ಬದಲಾಗಿ ರೈತರಿಗೆ ಕೇವಲ 2,500 ರೂ. ಪರಿಹಾರ ನೀಡಿ ಕೈತೊಳೆದುಕೊಂಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಜನರ ಬಳಿಗೆ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ. ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಮೊದಲು ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕಿತ್ತು ಎಂದು ಹೇಳಿದರು. ರಾಜ್ಯ ಸರ್ಕಾರ …
Read More »ಬೆಂಗಳೂರಿನಲ್ಲಿ ಬಿಕಾಂ ವಿದ್ಯಾರ್ಥಿಗೆ ಸಹಪಾಠಿಯಿಂದಲೇ ಚಾಕು ಇರಿತ
ಬೆಂಗಳೂರು: ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೀಪಾ ಕಾಂಪ್ಲೆಕ್ಸ್ ಬಳಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಫಸ್ಟ್ ಇಯರ್ ಬಿಕಾಂ ಓದುತ್ತಿದ್ದ 19 ವರ್ಷದ ಯೋಗೀಶ್ ಕೊಲೆಯಾದ ವಿದ್ಯಾರ್ಥಿ. ಯೋಗೀಶ್ ಕಾಲೇಜಿನಲ್ಲಿ ಒಳ್ಳೆಯ ವಿದ್ಯಾರ್ಥಿಯಾಗಿದ್ದ. ಜೊತೆಗೆ ಉತ್ತಮ ಡಾನ್ಸರ್ ಕೂಡ ಆಗಿದ್ದ. ಇಂದು ಎಂದಿನಂತೆ ಯೋಗೀಶ್ ಕಾಲೇಜಿಗೆ ಬಂದಿದ್ದ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅದೇ ಕಾಲೇಜಿನ ಮತ್ತೊಬ್ಬ …
Read More »ಬಳ್ಳಾರಿ ಚಲೋ ಪ್ರೇರಣೆಯಿಂದಲೇ ಕಾಂಗ್ರೆಸ್ ಪಾದಯಾತ್ರೆ: ವಿಜಯೇಂದ್ರ
ಚಿತ್ರದುರ್ಗ: ಬಿಜೆಪಿ ನಡೆಸಿದ `ಬಳ್ಳಾರಿ ಚಲೋ’ ಪಾದಯಾತ್ರೆಯ ಪ್ರೇರಣೆಯಿಂದಲೇ ಇಂದು ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು. ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿರುವ `ಹಿಂದೂ ಮಹಾಗಣಪತಿ’ಯ ದರ್ಶನ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ನನ್ನದೇ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿಸಿದ ಕೀರ್ತಿ ಶಿಕಾರಿಪುರಕ್ಕೆ …
Read More »ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆಗೆ ಭಾರೀ ಮಳೆ ಸುರಿದಿದ್ದು, ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಪೀಣ್ಯ-ದಾಸರಹಳ್ಳಿ ಸಮೀಪದ ಭಾರತಿ ಚಿತ್ರಮಂದಿರದಲ್ಲೂ ಮಳೆಯಿಂದಾಗಿ ಅವಘಡ ಸಂಭವಿಸಿದೆ. ಸಿನಿಮಾ ವೀಕ್ಷಿಸುತ್ತಿದ್ದ ವೇಳೆ ಚಿತ್ರಮಂದಿರದ ಮೇಲ್ಛಾವಣಿಯ ಭಾಗವೊಂದು ಹಠಾತ್ ಕುಸಿದು ಪ್ರೇಕ್ಷಕನ ಮೇಲೆ ಬಿದ್ದಿದೆ. ಪರಿಣಾಮ ಪ್ರೇಕ್ಷಕನ ತಲೆಗೆ ತೀವ್ರ ಪೆಟ್ಟಾಗಿದೆ. ಅವಘಡ …
Read More »ಜೋಗ ಜಲಪಾತವನ್ನು ಸರ್ವಋತು ಪ್ರವಾಸಿ ತಾಣವಾಗಿಸುವ ಕಾಮಗಾರಿಗಳನ್ನು ಚುರುಕುಗೊಳಿಸಿ: ಕೆ.ಜೆ.ಜಾರ್ಜ್
ಬೆಂಗಳೂರು: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಮಳೆಗಾಲಕ್ಕೆ ಮಾತ್ರ ಸೀಮಿತವಾಗದಂತೆ ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ಸರ್ವಋತು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವಂತಹ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು ಇಂಧನ ಭವನದ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ, ಜೋಗ ಜಲಪಾತ ಪ್ರದೇಶದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ವರ್ಷವಿಡೀ ನಿಗದಿತ ಅವಧಿಯಲ್ಲಿ ಜಲಪಾತಕ್ಕೆ ನೀರು ಹರಿಸುವ ಉದ್ದೇಶಿತ ಯೋಜನೆಯ ಕುರಿತು ಬುಧವಾರ …
Read More »ಟಿಪ್ಪು ಜಯಂತಿ ಬಳಿಕ ಉರ್ದು ಹಬ್ಬ- ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ
ಬೆಂಗಳೂರು: ಈ ಹಿಂದೆ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಮೂಲಕ ರಾಜಕೀಯ ಜಟಾಪಟಿಗೆ ಕಾರಣವಾಗಿದ್ದ ಕಾಂಗ್ರೆಸ್ ಸರ್ಕಾರ ಇದೀಗ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆಯೇ ಅಧಿಕೃತವಾಗಿ ಉರ್ದು ಭಾಷಾ ಹಬ್ಬ ಆಚರಿಸಲು ಮುಂದಾಗಿದೆ. ಸರ್ಕಾರದ ಈ ನಿರ್ಧಾರವು ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ವಿವಾದ ಹಾಗೂ ತೀವ್ರ ಚರ್ಚೆಗೆ ನಾಂದಿ ಹಾಡಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಆಶ್ರಯದಲ್ಲೇ ನವೆಂಬರ್ 9 ರ ‘ಉರ್ದು ದಿನಾಚರಣೆ’ಯ ಅಂಗವಾಗಿ ಈ …
Read More »ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾ ರಾವ್‌ಗೆ ಬರೋಬ್ಬರಿ 89.91 ಕೋಟಿ ದಂಡ
ಬೆಂಗಳೂರು: ಬಹುಕೋಟಿ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ನಟಿ ರನ್ಯಾರಾವ್‌ಗೆ ಕಸ್ಟಮ್ಸ್ ಇಲಾಖೆಯು ಬರೋಬ್ಬರಿ 89.91 ಕೋಟಿ ರೂ. ದಂಡ ವಿಧಿಸಿ ಐತಿಹಾಸಿಕ ಆದೇಶ ಹೊರಡಿಸಿದೆ. ಕಸ್ಟಮ್ಸ್ ಜಂಟಿ ನಿರ್ದೇಶಕ ಸಂದೀಪ್ ಅವರು ಹೊರಡಿಸಿರುವ 399 ಪುಟಗಳ ಸುದೀರ್ಘ ಆದೇಶದಲ್ಲಿ ನಟಿ ರನ್ಯಾರಾವ್ ಅಂತರರಾಷ್ಟ್ರೀಯ ಮಟ್ಟದ ಗೋಲ್ಡ್ ಸ್ಮಗ್ಲಿಂಗ್ ಜಾಲದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಸಾಕ್ಷಿ ಸಮೇತ ಸಾಬೀತುಪಡಿಸಲಾಗಿದೆ. ದಂಡದ ಮೊತ್ತ ಹಾಗೂ ಆದೇಶದ ಅಧಿಕೃತ ಪ್ರತಿಯನ್ನು ಕಸ್ಟಮ್ಸ್ ಇಲಾಖೆ …
Read More »ಬೆಳಗಾವಿ ಪಾಲಿಕೆಯಲ್ಲಿ ಐತಿಹಾಸಿಕ ಕ್ಷಣ| ಕರ್ನಾಟಕದ ಅವಿಭಾಜ್ಯ ಅಂಗ, ಮಹಾಜನ್ ವರದಿಯೇ ಅಂತಿಮ – ಮಹತ್ವದ ನಿರ್ಣಯ ಪಾಸ್
ಬೆಳಗಾವಿ: ಗಡಿ ವಿಚಾರವಾಗಿ ಸದಾ ಒಂದಿಲ್ಲೊಂದು ವಿವಾದಗಳಿಂದ ಸದ್ದು ಮಾಡುತ್ತಿದ್ದ ಕುಂದಾನಗರಿ ಬೆಳಗಾವಿ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯು ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಹಾಗೂ ‘ಮಹಾಜನ್ ವರದಿಯೇ ಅಂತಿಮ’ ಎಂದು ಸ್ಪಷ್ಟಪಡಿಸುವ ಅಧಿಕೃತ ಹಾಗೂ ಮಹತ್ವದ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಿದೆ. ಪಾಲಿಕೆಯ ಸಾಮಾನ್ಯ ಸಭೆಯ ಅಂತ್ಯದಲ್ಲಿ ಕನ್ನಡಪರ ನಿರ್ಣಯದ ಕುರಿತು ಪ್ರಸ್ತಾಪಿಸಲಾಯಿತು. ಈ ವೇಳೆ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು 1988ರ ಕರ್ನಾಟಕ …
Read More »ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ: ಸಿಎಂ ಅಣಕು ಶವಯಾತ್ರೆಗೆ ಪೊಲೀಸರ ತಡೆ
ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ಮುಖ್ಯಮಂತ್ರಿ ಅವರ ಅಣಕು ಶವಯಾತ್ರೆ ನಡೆಸಲು ಮುಂದಾದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಘಟನೆ ನಡೆಯಿತು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಖಾಲಿ ಚಂಬುಗಳು ಹಾಗೂ ವಿವಿಧ ಬಿತ್ತಪತ್ರಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಭಾಗವಾಗಿ ಸಿಎಂ ಅಣಕು ಶವಯಾತ್ರೆ …
Read More »
Laxmi News 24×7