Breaking News

Yearly Archives: 2026

ತಿಗಡಿಯಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕಟ್ಟಡಕ್ಕೆ ಅಡಿಗಲ್ಲು

ಬೈಲಹೊಂಗಲ: ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿತು. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಅಡಿಗಲ್ಲು ಸಮಾರಂಭದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.ಗ್ರಾಮಸ್ಥರ ಧಾರ್ಮಿಕ ಭಾವನೆ ಹಾಗೂ ಬಹುದಿನಗಳ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಚನ್ನರಾಜ ಹಟ್ಟಿಹೊಳಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು. ದೇವಸ್ಥಾನದ ಕಟ್ಟಡ …

Read More »

ಬಾಚಿ, ಸುಳಗಾ ಗ್ರಾಮಗಳಿಗೆ ಆಟದ ಮೈದಾನ, ಕೆರೆ: ಲಕ್ಷ್ಮೀ ಹೆಬ್ಬಾಳಕರ್ ಮಹತ್ವದ ಹೆಜ್ಜೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಲಾ ಮಕ್ಕಳು, ಯುವಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಗ್ರಾಮಸ್ಥರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಿರುವ ಅವರು, ಬಾಚಿ ಹಾಗೂ ಸುಳಗಾ ಗ್ರಾಮಗಳಲ್ಲಿ ಆಟದ ಮೈದಾನ ಮತ್ತು ಸಾರ್ವಜನಿಕ ಕೆರೆ ನಿರ್ಮಾಣಕ್ಕೆ ಅಗತ್ಯವಿರುವ ಸರ್ಕಾರಿ ಜಮೀನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಬುಧವಾರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ …

Read More »

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ: ಸಂಘಟನೆಗಳಿಂದ ವಿಜಯೋತ್ಸವ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕನ್ನಡ ಪರ ಮಹತ್ವದ ಗೊತ್ತುವಳಿ ಅಂಗೀಕಾರವಾದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಹಾಗೂ ಚನ್ನಮ್ಮ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಸರ್ಕಾರದ ಪರ ಘೋಷಣೆಗಳನ್ನು ಕೂಗಿ ಪಾಲಿಕೆಯ ನಿರ್ಧಾರವನ್ನು ಸ್ವಾಗತಿಸಿದರು. 1988ರಲ್ಲಿ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮಹಾಜನ್ ವರದಿಯ ನಿರ್ಣಯದಂತೆ ಮುಂದುವರಿಯುವ ಕುರಿತು ಪಾಲಿಕೆ ಸಭೆಯಲ್ಲಿ ಗೊತ್ತುವಳಿ …

Read More »

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಅಂತಿಮ ಹಂತದಲ್ಲಿ ಕನ್ನಡ ಭಾಷೆ ಹಾಗೂ ಬೆಳಗಾವಿಯ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ಸಭೆಯಲ್ಲಿ ಸರ್ಕಾರದಿಂದ ಪಾಲಿಕೆಗೆ ಬಂದಿದ್ದ ಪತ್ರವನ್ನು ಆಯುಕ್ತ ಕಾರ್ತಿಕ ಎಂ. ಅವರು ಸದಸ್ಯರ ಮುಂದೆ ಓದಿ, ಸರ್ಕಾರದ ಸೂಚನೆಗಳನ್ನು ಸಭೆಯ ಗಮನಕ್ಕೆ ತಂದರು. 1988ರಲ್ಲಿ ಪಾಲಿಕೆ ಸದನದಲ್ಲಿ ಕೈಗೊಂಡಿದ್ದ ನಿರ್ಣಯದಂತೆ ಮುಂದುವರಿಯುವಂತೆ ಸರ್ಕಾರ ಸೂಚಿಸಿರುವುದನ್ನು ಆಯುಕ್ತರು ವಿವರಿಸಿದರು. ಇದರ ಬೆನ್ನಲ್ಲೇ ಮಹಾಜನ್ ವರದಿಯೇ …

Read More »

ಕೆಲಸ ಬಿಡಲು ಸಿದ್ಧ, ಆದರೆ ಅವರನ್ನು ಬಿಡುವುದಿಲ್ಲ” ಎಂದ ಉಪ ಆಯುಕ್ತೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯ ಬಳಿಕ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಪಾಲಿಕೆ ಆವರಣದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಪಾಲಿಕೆ ಅಭಿವೃದ್ಧಿ ಶಾಖೆಯ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಕರ್ ಅವರು ಎಂಐಎಂ ಪಾಲಿಕೆ ಸದಸ್ಯ ಶಾಹಿದ್ ಖಾನ್ ಪಠಾಣ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ, ಶಾಹಿದ್ ಖಾನ್ ಅವರು ಅಧಿಕಾರಿಯ …

Read More »

ಬಸ್ ಟಿಕೆಟ್ ದರ ಏರಿಕೆ ಫಿಕ್ಸ್ – ಬೈರತಿ ಸುರೇಶ್ ಸುಳಿವು

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ  ವಿಚಾರ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ವರದಿ ಗುರುವಾರ, ಶುಕ್ರವಾರ ಸಲ್ಲಿಕೆಯಾಗುವ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್  ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಕೇಂದ್ರ ಸರ್ಕಾರ ನಾಲ್ಕು ಬಾರಿ ಡಿಸೇಲ್ ದರ ಏರಿಕೆ ಮಾಡಿದೆ. ಸದ್ಯ ಬಸ್ ಟಿಕೆಟ್ ದರ ಏರಿಸುವುದ ಅಗತ್ಯವಾಗಿದೆ. ವರದಿ ಸಿದ್ದಪಡಿಸಲು ಹೇಳಿದ್ದೆವು. ಅದರಂತೆ ಗುರುವಾರ, ಶುಕ್ರವಾರ ವರದಿ ಸಲ್ಲಿಕೆಯಾಗಲಿದೆ. ವರದಿ ನೋಡುತ್ತೇನೆ. …

Read More »

PSI ಎಂದು ನಂಬಿಸಿ ಕೋಟಿಗಟ್ಟಲೇ ಹಣ ವಂಚನೆ; ನಕಲಿ ಲೇಡಿ ಪೊಲೀಸ್‌ ಅಂದರ್‌

ಚಿಕ್ಕಮಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್  ಎಂದು ನಂಬಿಸಿ ಸಾರ್ವಜನಿಕರಿಗೆ ಹಣ ಹಾಗೂ ಚಿನ್ನಾಭರಣ ವಂಚಿಸುತ್ತಿದ್ದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್‌ಐಯೊಬ್ಬಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ ನಿವೇದಿತಾ ಗೌಡ ಬಂಧಿತ ಮಹಿಳೆ. ಚಿಕ್ಕಮಗಳೂರು ನಗರದಲ್ಲಿ ಕೆಫೆ ನಡೆಸುತ್ತಿದ್ದ ನಿವೇದಿತಾ, ಕೆಫೆಗೆ ಬರುತ್ತಿದ್ದ ಯುವಕರು ಹಾಗೂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪರಿಚಯ ಬೆಳೆಸುತ್ತಿದ್ದಳು. ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂದು ಪರಿಚಯಿಸಿಕೊಂಡು, ಸದ್ಯ ರಜೆಯ ಮೇಲೆ ಚಿಕ್ಕಮಗಳೂರಿಗೆ ಬಂದಿರುವುದಾಗಿ …

Read More »

ಗದಗ KRIDL AEE ಪರ್ವೇಜ್ ಭೋಪಾಲ್ ರೈಲ್ವೆ ನಿಲ್ದಾಣದ ಸಿಸಿಟಿವಿಯಲ್ಲಿ ಪತ್ತೆ

ಗದಗ: ನಾಪತ್ತೆಯಾಗಿದ್ದ KRIDL ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ಪರ್ವೇಜ್ ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿರುವುದು ತನಿಖೆಗೆ ಮಹತ್ವದ ಸುಳಿವು ನೀಡಿದೆ. ಪರ್ವೇಜ್ ಗದಗದಿಂದ ಬೆಂಗಳೂರಿಗೆ, ಬಳಿಕ ಆಂಧ್ರಪ್ರದೇಶದ ವಿಜಯವಾಡ ಹಾಗೂ ಅಲ್ಲಿಂದ ಮಧ್ಯಪ್ರದೇಶದ ಭೋಪಾಲ್‌ಗೆ ತೆರಳಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಮೂಲಕ ಅವರು ಸುಮಾರು 1,200 ಕಿಲೋಮೀಟರ್‌ಗೂ ಹೆಚ್ಚು ಪ್ರಯಾಣಿಸಿರುವ ಸುಳಿವು ಸಿಕ್ಕಿದೆ. ವಿಜಯವಾಡ ತಲುಪಿದ ಬಳಿಕ ಪರ್ವೇಜ್ ಅವರ ಮೊಬೈಲ್ ಲೊಕೇಷನ್ …

Read More »

ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ  ತಾಲೂಕಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸುತ್ತಮುತ್ತಿಲು ಕಂಪನದ ಅನುಭವವಾಗಿದೆ. ತಡರಾತ್ರಿ 2:04ಕ್ಕೆ ಭೂಕಂಪನ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಮುನ್ನಚ್ಚರಿಕೆಗಾಗಿ ಜಿಲ್ಲಾಡಳಿತಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಸೂಚನೆ.

Read More »

ಮಂಗಳೂರಿನ MRPLನಲ್ಲಿ ಭಾರಿ ಸ್ಫೋಟದ ಶಬ್ದ

ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿ ಇರುವ ಎಂಆರ್‌ಪಿಎಲ್‌ನಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿಬಂದಿದ್ದು, ದಟ್ಟ ಹೊಗೆ ಆವರಿಸಿದೆ. ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನ ಬಾಯ್ಲರ್ ಸ್ಫೋಟಗೊಂಡಿರುವ‌ ಸಾಧ್ಯತೆ ಇದೆ. ಅಕ್ಕಪಕ್ಕದ ಏರಿಯಾಗಳಿಗೆ ಹೊಗೆ ಆವರಿಸಿರುವುದು ಕಂಡುಬಂದಿದೆ.

Read More »