ಬೆಳಗಾವಿ: ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ಯ ಬೆಳಗಾವಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಇಂದು ಸರ್ವಪಕ್ಷಗಳ ಲಿಂಗಾಯತ ಮುಖಂಡರು ಸಭೆ ನಡೆಸಿದರು. ಈ ಸಭೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ, ರಾಜ್ಯ ಸಭೆ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ, ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, ಈ …
Read More »Yearly Archives: 2026
ನಾಲ್ವಾರ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಸಿಎಂ ಭೇಟಿ – ಸಿದ್ದರಾಮಯ್ಯಗೆ ಚಿನ್ನದ ಉಂಗುರ ತೊಡಿಸಿ ಸತ್ಕಾರ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ನಾಲ್ವಾರ ಗ್ರಾಮದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ದಾಖಲೆ ಮಟ್ಟದಲ್ಲಿ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡನೆ ಮಾಡಿದ ಸಾಧನೆಗಾಗಿ, ಮಠದ ವತಿಯಿಂದ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಮರ್ಪಿಸಲಾಯಿತು. ಶ್ರೀ ಕೋರಿಸಿದ್ದೇಶ್ವರ ಮಠದ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಚಿನ್ನದ ಉಂಗುರ ತೊಡಿಸಿ, ಶಾಲು ಹೊದಿಸಿ …
Read More »ಇಬ್ಬರು ಅಪರಾಧಿಗಳಿಗೆ ಪೋಕ್ಸೊ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ
ಬೆಳಗಾವಿ : ಬಾಲಕಿ ಮೇಲೆ ಅಪರಾಧ ಶಿಕ್ಷೆ ಅತ್ಯಾಚಾರ ಎಸಗಿದ್ದ ಅಪರಾಧಿ ಖಾನಾಪುರ ತಾಲೂಕಿನ ನಂದಗಡ ಗ್ರಾಮದ ನಿವಾಸಿ ಕಲ್ಲಪ ಪರುಶುರಾಮ ಸುತಾರ(೨೨) ಎಂಬಾತನಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಮತ್ತು ೧ ಲಕ್ಷ ರೂ. ದಂಡ ಹಾಗೂ ಮತ್ತೊಂದು ಪ್ರಕರಣದಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ್ದ ಬೈಲಹೊಂಗಲ ಪಟ್ಟಣದ ನಿವಾಸಿ ನಂದೀಶ ಉರ್ಪ ನಂದು ಬಂಡಿವಡ್ಡರ ಎಂಬಾತನಿಗೆ ೩ ವರ್ಷ ಕಾರಾಗೃಹ ಶಿಕ್ಷೆ ಮತ್ತು ೧೦ ಸಾವಿರ ರೂ. ದಂಡ …
Read More »ಶಿಶುಗೀತೆ ರಚಿಸಿದ 6ನೇ ತರಗತಿ ವಿದ್ಯಾರ್ಥಿನಿ
ಬೆಳಗಾವಿ : ನಗರದ ಬಿರ್ಲಾ ಇಂಟರ್‌ನ್ಯಾಷನಲ್ ಸ್ಕೂಲ್‌ನ 6ನೇ ತರಗತಿ ವಿದ್ಯಾರ್ಥಿನಿ 12 ವರ್ಷದ ಲಾವಣ್ಯ ಪೃಥ್ವಿರಾಜ ಕಮ್ಮಾರ ಭಾರತೀಯ ಸಂಸ್ಕೃತಿ, ವೀರ ನಾಯಕರು, ಮಹಿಳೆಯರು ಹಾಗೂ ವಿವಿಧ ಆದರ್ಶ ವ್ಯಕ್ತಿತ್ವಗಳನ್ನು ಆಧರಿಸಿ ಶಿಶುಗೀತೆ(ರೇಮ್ಸ್)ಗಳನ್ನು ರಚಿಸಿದ್ದು ’ದಿ ಶ್ಯಾಡೋ ಆಫ್ ಇನೋಸೆನ್ಸ್ ಆ್ಯಂಡ್ ಇಮ್ಯಾಜಿನೇಷನ್’ ಎಂಬ ಶೀರ್ಷಿಕೆಯ ಕೃತಿ ಬಿಡುಗಡೆಗೆ ಸಜ್ಜಾಗಿದೆ. ತನ್ನ ಚೊಚ್ಚಲ ಕವನ ಸಂಕಲನ ಸಾಹಿತ್ಯ ಲೋಕಕ್ಕೆ ಪದಾರ್ಪಣೆಗೊಳ್ಳುತ್ತಿರುವ ಹಿನ್ನೆಲೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತನ್ನ ಕೃತಿಯನ್ನು ಪ್ರದರ್ಶಿಸಿ ಮಾತನಾಡಿದ …
Read More »ನರ್ಸಿಂಗ್ ಎಂದರೆ ಉದ್ಯೋಗವಲ್ಲ ಅದು ಸೇವಾ ಧರ್ಮ
ಬೆಳಗಾವಿ : ನರ್ಸಿಂಗ್ ಎಂದರೆ ಕೇವಲ ಒಂದು ಉದ್ಯೋಗವಲ್ಲ, ಅದು ಒಂದು ಸೇವಾ ಧರ್ಮ. ನರ್ಸ್ ಗಳು ಹೃದಯ ಶ್ರೀಮಂತರು. ಅವರ ಒಂದು ನಗು, ಒಂದು ಧೈರ್ಯದ ಮಾತು, ಒಂದು ಮಮತೆಯ ಸ್ಪರ್ಶ ರೋಗಿಗೆ ಅರ್ಧ ಔಷಧಿಯಂತೆ ಕೆಲಸ ಮಾಡುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಬಿಮ್ಸ್ (BIMS) ಕಟ್ಟಡದ ಹೊಸ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನರ್ಸಿಂಗ್ ಶಾಲೆಯ 109ನೇ ಬ್ಯಾಚ್ ವಿದ್ಯಾರ್ಥಿಗಳ …
Read More »ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ 21 ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣದಲ್ಲಿ 2,83,34,944 ರೂ. ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮೆ ಮಾಡದೇ ಅಧಿಕಾರಿಗಳೇ ದುರುಪಯೋಗಪಡಿಸಿಕೊಂಡಿರುವ ಪ್ರಕರಣ ಲೋಕಾಯುಕ್ತ ತನಿಖೆಯಿಂದ ಬಹಿರಂಗೊಂಡಿದೆ. 1994-95ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸ್ಥಳೀಯ ಲೆಕ್ಕ ಪರಿಶೋಧನಾ ವರದಿಗಳ ಪ್ರಕಾರ ಗ್ರಾಮ ಪಂಚಾಯಿತಿಗಳು ಜನರಿಂದ ಪಡೆದ ತೆರಿಗೆ ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮಾ ಮಾಡದಿರುವುದು ಕಂಡುಬಂದಿದೆ. ಈ ಹಣವನ್ನು ಅಧಿಕಾರಿಗಳೇ ದುರ್ಬಳಕೆ …
Read More »ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡೋದ್ರಲ್ಲಿ ತಪ್ಪಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪವರ್ ಫೈಟ್, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಿನಿಸ್ಟರ್ ಗಾದಿಗಾಗಿ ಡೆಲ್ಲಿ ಪರೇಡ್ ಮಾಡ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ರು. ಸುಮಾರು 30 ಜನ ಕಾಂಗ್ರೆಸ್ ಹಿರಿಯ ಶಾಸಕರು ದೆಹಲಿ ವಿಮಾನ ಹತ್ತಿದ್ದಾರೆ. …
Read More »ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ
ನವದೆಹಲಿ: ಭಾರತದಲ್ಲಿ ಸಮಾನತೆ ಇರಬಾರದು ಎಂಬ ಕಾರಣಕ್ಕೆ ಸಂವಿಧಾನವನ್ನು ಮುಗಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಏಪ್ರಿಲ್ 14ರಂದು ನಡೆಯಲಿರುವ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ದೆಹಲಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ಹಾದಿಯಲ್ಲಿ ನಡಿಗೆ, ಸಂವಿಧಾನಕ್ಕಾಗಿ ನಡಿಗೆ ಮ್ಯಾರಾಥಾನ್ ಚಾಲನೆ ನೀಡಿ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಸಂವಿಧಾನ ಭಾರತದ ಅಡಿಪಾಯವಾಗಿದೆ. ಸಂವಿಧಾನವಿಲ್ಲದಿದ್ದರೆ ಇಂದು ನಾವು ಭಾರತ ಎಂದು …
Read More »ಬೆಳಗಾವಿ ಉದ್ಯಮಿಗೆ ಡಿಜಿಟಲ್ ಅರೆಸ್ಟ್ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್
ಬೆಳಗಾವಿ: ಇಲ್ಲಿನ ಉದ್ಯಮಿಯೊಬ್ಬರನ್ನ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂಪಾಯಿ ವಂಚಿಸಿದ್ದ ಇಬ್ಬರನ್ನ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7 ರಿಂದ ಮಾರ್ಚ್ 9 ರ ವರೆಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿತ್ತು. ಈ ಅವಧಿಯಲ್ಲಿ, ಹಂತ ಹಂತವಾಗಿ ಬರೋಬ್ಬರಿ 15.45 ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಈ ಕುರಿತು ಬೆಳಗಾವಿ ಸೈಬರ್ ಕ್ರೈಮ್ ಠಾಣೆಯಲ್ಲಿ …
Read More »ಬೆಳಗಾವಿಯಲ್ಲಿ ಕ್ರಾಂತಿಸೂರ್ಯ ಮಹಾತ್ಮ ಫುಲೆ ಅವರ 200ನೇ ಜಯಂತಿ ಸಂಭ್ರಮ: ಸಮಾನತೆಯ ಸಂದೇಶ ಸಾರಿದ ಗಣ್ಯರು
ಬೆಳಗಾವಿಯ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಇಂದು ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಸಾಮಾಜಿಕ ಸಮಾನತೆ ಮತ್ತು ಸ್ತ್ರೀ ಶಿಕ್ಷಣದ ಹರಿಕಾರನಿಗೆ ನಗರದ ಗಣ್ಯರು ಪುಷ್ಪ ನಮನ ಸಲ್ಲಿಸಿ, ಅವರ ವಿಚಾರಧಾರೆಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪಾಯುಕ್ತರಾದ ಉದಯಕುಮಾರ್ ತಳವಾರ್ ಅವರು ಮಹಾತ್ಮ ಫುಲೆ ಅವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂದು ಸಾವಿತ್ರಿಬಾಯಿ …
Read More »
Laxmi News 24×7