ಬೆಳಗಾವಿ: ಶನಿವಾರ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ವಡ್ಡರ ಓಣಿಯ ಕಳಸನ್ನವರ ಪ್ಲಾಟ್‌ನಲ್ಲಿ ನಡೆದಿದ್ದ ಯುವಕನ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲೇ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷ್ಮಣ ಬಂಡಿವಡ್ಡರ (22) ಕೊಲೆಯಾದ ದುರ್ದೈವಿ. ಆರೋಪಿಗಳು ತಿಮ್ಮಣ್ಣನಿಗೆ ಚೂರಿಯಿಂದ ಬರ್ಬರವಾಗಿ ಇರಿದು ಪರಾರಿಯಾದ ತಕ್ಷಣ, ಆತ ರಕ್ತದ ಮಡುವಿನಲ್ಲೇ ಬಿದ್ದೂ ತನ್ನ ಸಂಬಂಧಿಕರ ಮನೆಗೆ ಫೋನ್ ಕರೆ ಮಾಡಿದ್ದನು. “ನನಗೆ ಯಾರೋ ಚಾಕು ಇರಿದಿದ್ದಾರೆ ಬನ್ನಿ” ಎಂದಿದ್ದಾನೆ. …
Read More »Yearly Archives: 2026
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ
ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದರು ಎಂದು ಮಾಜಿ ಸಚಿವ ಸಿ.ಟಿ.ರವಿ ಅವರು ಹೇಳಿದ್ದಾರೆ. ನಿತಿನ್ ನಬಿನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‍ನ ವೈಫಲ್ಯಗಳನ್ನು ಜನರಿಗೆ ಎತ್ತಿತೋರಿಸಿ ಬಿಜೆಪಿ ವಿಶ್ವಾಸಾರ್ಹ ಪಕ್ಷ …
Read More »ವಿಮಾನ ಟಿಕೆಟ್ ರದ್ದತಿಗೆ ದುಪ್ಪಟ್ಟು ಶುಲ್ಕ – ತನಿಖೆಗೆ ಪ್ರಹ್ಲಾದ್ ಜೋಶಿ ಆದೇಶ
ಹುಬ್ಬಳ್ಳಿ: ವಿಮಾನ ಪ್ರಯಾಣಿಕರಿಗೆ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ವೇದಿಕೆಗಳು ದುಪ್ಪಟ್ಟು ಶುಲ್ಕ ವಿಧಿಸುತ್ತಿದ್ದು, ತಕ್ಷಣವೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ CCPA ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆನ್‌ಲೈನ್ ಟಿಕೆಟ್ ಬುಕಿಂಗ್ ವೇದಿಕೆಗಳು ಗ್ರಾಹಕರಿಗೆ ವಿಮಾನಯಾನ ಸಂಸ್ಥೆಗಳು ಈ ವಿಧಿಸುವುದಕ್ಕಿಂತ ದುಪ್ಪಟ್ಟು ಶುಲ್ಕ ಸುಲಿಗೆ ಮಾಡುತ್ತಿರುವುದನ್ನು ಗ್ರಾಹಕರೊಬ್ಬರು ಬಯಲಿಗೆಳೆದಿದ್ದು, ಇದನ್ನು ಗಮನಿಸಿದ ಸಚಿವರು ತನಿಖೆ ನಡೆಸಿ ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ …
Read More »ರಾಜ್ಯದ 8 ಮಂದಿ ಸೇರಿ 131 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ ಗೌರವ
ನವದೆಹಲಿ: ಕರ್ನಾಟಕದ 8 ಸಾಧಕರು ಸೇರಿ 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 131 ಮಂದಿಗೆ ನಾಳೆ (ಮೇ 25) ರಾಷ್ಟ್ರಪತಿ ದ್ರೌದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೋಮವಾರ (ಮೇ 25) ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನ ಸಾಧಕರಿಗೆ ಪ್ರದಾನ ಮಾಡಲಿದ್ದಾರೆ. ಈ ವರ್ಷ ಒಟ್ಟು 131 ಸಾಧಕರು ಪದ್ಮ ಪ್ರಶಸ್ತಿ ಗೌರವಕ್ಕೆ …
Read More »ಕ್ರಿಕೆಟ್ ಆಡುವಾಗಲೇ ಹೃದಯಾಘಾತ – ಮಾಜಿ ರಣಜಿ ಆಟಗಾರ ಎಸ್.ಎಲ್ ಅಕ್ಷಯ್ ನಿಧನ
ಬೆಂಗಳೂರು: ಕ್ರಿಕೆಟ್ ಪಂದ್ಯವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕರ್ನಾಟಕದ ಮಾಜಿ ರಣಜಿ ಆಟಗಾರ ಎಸ್. ಎಲ್ ಅಕ್ಷಯ್ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ ಅಕ್ಷಯ್ (39), ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯದ ವೇಳೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ರಣಜಿ ತಂಡದ ಪರ ಆಡಿದ್ದ ಅಕ್ಷಯ್, ತಮ್ಮ ಕರಾರುವಕ್ಕಾದ ಬೌಲಿಂಗ್ ಮೂಲಕ ಗಮನ ಸೆಳೆದಿದ್ದರು. ರಣಜಿ ಮಾತ್ರವಲ್ಲದೇ ಕೆಪಿಎಲ್ ಟೂರ್ನಿಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಹೆಸರು ಮಾಡಿದ್ದರು. ಕರ್ನಾಟಕ ಪರ ಅವರು 6 …
Read More »ಅಕ್ರಮ ದಾಸ್ತಾನು ಮಾಡಿದ್ದ 600 ಬ್ಯಾಗ್ ಯೂರಿಯಾ ರಸಗೊಬ್ಬರ ಜಪ್ತಿ
ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿರುವ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ರಸಗೊಬ್ಬರದ ಅಂದಾಜು ಮೌಲ್ಯ ಸುಮಾರು 14,40,000 ರೂ. ಎಂದು ಅಂದಾಜಿಸಲಾಗಿದೆ. ರೈತರಿಗೆ ವಿತರಿಸಬೇಕಾದ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಲು ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು. …
Read More »ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!
ಶಿವಮೊಗ್ಗ: ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲರೊಬ್ಬರ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್‍ಮೇಲ್ ಆರೋಪ ಕೇಳಿಬಂದಿದ್ದು, ಸಂತ್ರಸ್ತೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಬಿಜೆಪಿ ಮುಖಂಡ, ವಕೀಲ ಭರತ್ ಬಿ.ಎಸ್. ಎಂಬುವವರ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಭರತ್, 23 ವರ್ಷದ ವಿವಾಹಿತ ಮಹಿಳೆಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ. ತಾನು ಆಕೆಯ ಪತಿಯ ಸ್ನೇಹಿತ …
Read More »ಬ್ಯಾಂಕಿನಿಂದ ಪಿಂಚಣಿ ಪಡೆಯಲು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ಸಾಗಿದ ಮಹಿಳೆ
ಬ್ಯಾಂಕಿನಿಂದ ಪಿಂಚಣಿ ಪಡೆಯಲು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ಸಾಗಿದ ಮಹಿಳೆ ಅಂಬಿಕಾಪುರ: ಬ್ಯಾಂಕಿನಿಂದ ಪಿಂಚಣಿ ಪಡೆಯಲು ಮಹಿಳೆಯೊಬ್ಬರು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ದೂರ ಸಾಗಿದ್ದಾರೆ. 90 ವರ್ಷದ ಅತ್ತೆಯ ಭಾರಕ್ಕೆ ಬಾಗಿ, ಸುಡುವ ಸೂರ್ಯನ ಕೆಳಗೆ ಕಾಡಿನ ಹಾದಿಗಳು, ಕಲ್ಲು ಬಂಡೆಗಳು ಮತ್ತು ಹೊಳೆಗಳ ಮೂಲಕ ಮಹಿಳೆಯೊಬ್ಬರು ನಡೆದಿದ್ದಾರೆ. ದೃಶ್ಯಗಳು ಹಳೆಯ ವಿಕ್ರಮ್-ಬೇತಾಲ್ ಕಥೆಗಳನ್ನು ನೆನಪಿಸುತ್ತವೆ. …
Read More »ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ: ಮೃತಳ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದ ಕಳ್ಳರು
ಉಡುಪಿ: ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಕಳ್ಳರು ಮೃತ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಮೇ 17ರಂದು ತಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕೊಲ್ಲೂರಿನ ದಳಿ ಎಂಬಲ್ಲಿ ಕೇರಳಂ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟ ಇನ್ಸುಲೇಟರ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. …
Read More »ಕಪ್ಪೆ ಚಿಪ್ಪಿಗಾಗಿ ಸಾಗರಕ್ಕಿಳಿದ 8 ಮಂದಿ ಸಾವು; 5 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಪ್ಪೆ ಚಿಪ್ಪುಗಳ ತರಲು ಸಮುದ್ರಕ್ಕೆ ಇಳಿದಿದ್ದ ಒಂದೇ ಕುಟುಂಬದ 08 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ತಟ್ಟೆಹಕ್ಕಲು ಕಡಲ ತೀರದಲ್ಲಿ ಜರುಗಿದೆ. ಸಾಗರ ಅಲೆಗೆ ಕೊಚ್ಚಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನುಳಿದವರಿಗಾಗಿ ಹುಟುಕಾಟ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಮುದ್ರ ಮಟ್ಟದಲ್ಲಿ ನಿರಂತರ ಬಿರುಗಾಳಿ, ಹವಾಮಾನ ಬದಲಾವಣೆಗಳು ಸಂಭವಿಸುತ್ತಿದ್ದು, …
Read More »
Laxmi News 24×7