ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ತಿಂಗಳು ಮುಂಗಾರು ಬಿರುಸು ಪಡೆಯುವ ಸಾಧ್ಯತೆಯಿದ್ದು, 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಹಲವೆಡೆ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಇನ್ನು ಸಿಲಿಕಾನ್ …
Read More »Yearly Archives: 2026
ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ
ಹಾವೇರಿ: ನೌಕಾಪಡೆಯ ಯೋಧ ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿ ಯಶೋಧರ ವಡ್ಡರ್ (29) ಭಾರತೀಯ ನೌಕಾಪಡೆಯ ಯೋಧ. ಕರ್ತವ್ಯದ ವೇಳೆ ಕೇರಳದ ಕೊಚ್ಚಿಯಲ್ಲಿ ನಡೆದ ಫೈರಿಂಗ್ ತರಬೇತಿ ಸಂದರ್ಭ ಹುತಾತ್ಮರಾಗಿದ್ದಾರೆ. ಕಳೆದ 10 ವರ್ಷಗಳಿಂದ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯಶೋಧರ ವಡ್ಡರ್, 2016ರಲ್ಲಿ ನೌಕಾದಳಕ್ಕೆ ಸೇರ್ಪಡೆಯಾಗಿದ್ದರು. ಹುತಾತ್ಮ ಯೋಧನ ಪಾರ್ಥಿವ ಶರೀರ ಸ್ವಗ್ರಾಮ ಉಪ್ಪುಣಸಿಗೆ …
Read More »ಜೈಶ್ ಉಗ್ರರ ಜೊತೆ ನಂಟು; ಗುಜರಾತಲ್ಲಿ 8 ಮಂದಿ ಅರೆಸ್ಟ್
ಗಾಂಧೀನಗರ: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಹಲವು ರಾಜ್ಯಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ ಎಂಟು ಜನರನ್ನು ಬಂಧಿಸಲಾಗಿದೆ. ಗುಜರಾತ್‌ನ ಬನಸ್ಕಾಂತ, ಪಠಾಣ್, ನವಸಾರಿ ಹಾಗೂ ಮಧ್ಯಪ್ರದೇಶದ ದೇವಾಸ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಘಟಿತ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಯಿತು. ಬಂಧಿತರು ಗುಜರಾತ್‌ನಲ್ಲಿ ದಾಳಿಗಳನ್ನು ನಡೆಸಲು ಪ್ಲ್ಯಾನ್ ಮಾಡುತ್ತಿದ್ದ ಜೈಶ್ ಉಗ್ರರಿಗೆ ಸಹಕಾರ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬಂಧಿತರಲ್ಲಿ ಹಲವರು ಪಠಾಣ್‌ನ …
Read More »ಪತಿಯ ಕೊಂದು ಬಾತ್ ರೂಂನಲ್ಲೇ ಹೂತಿದ್ದ ಪತ್ನಿ
ಲಕ್ನೋ: ಪತಿಯನ್ನು ಕೊಂದು ನಾಟಕವಾಡಿದ ಹಂತಕಿಯರಾದ ಸೋನಂ, ಸಿಯಾ ಘಟನೆ ಮಾಸುವ ಮುನ್ನವೇ ಇದೀಗ ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಚ್ಚಿಬೀಳಿಸುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿ, ಶವವನ್ನು ಮನೆಯ ಬಾತ್‌ರೂಂ ನೆಲದಡಿ ಹೂತು, ಬಳಿಕ ಪತಿ ಕಾಣೆಯಾಗಿದ್ದಾನೆ ಎಂದು ನಾಟಕವಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಘಟನೆ ನಡೆದು 45 ದಿನಗಳ ಬಳಿಕ ಪತ್ನಿ ರೂಬಿ ಶರ್ಮಾ ಪೊಲೀಸರ ಮುಂದೆ ಸತ್ಯ ಕಕ್ಕಿದ್ದು, …
Read More »ಬಿಎಲ್‌ಒಗಳೇ ಒಂದು ಅರ್ಜಿಗೆ 50 ರೂಪಾಯಿ ಕೊಟ್ಟು ಕೆಲ ಕಾರ್ಯಕರ್ತರಿಂದ ಭರ್ತಿ ಮಾಡಿಸ್ತಿದ್ದಾರೆ: ಸಾ.ರಾ.ಮಹೇಶ್ ಆರೋಪ
ಮೈಸೂರು: ಬಿಎಲ್‌ಒಗಳೇ ಒಂದು ಅರ್ಜಿಗೆ 50 ರೂಪಾಯಿ ಕೊಟ್ಟು ಕೆಲ ಕಾರ್ಯಕರ್ತರಿಂದ ಅರ್ಜಿ ಭರ್ತಿ ಮಾಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯ ಕೆ.ಆರ್. ನಗರದ ಮೂರು ವಾರ್ಡ್ಗಳಲ್ಲಿ ಯಾರದೋ SIR ಅರ್ಜಿಗಳನ್ನು ಇನ್ಯಾರೋ ಭರ್ತಿ ಮಾಡ್ತಿದ್ದಾರೆ. ಬಿಎಲ್‌ಒಗಳೇ ಒಂದು ಅರ್ಜಿಗೆ 50 ರೂಪಾಯಿ ಕೊಟ್ಟು ಕೆಲ ಕಾರ್ಯಕರ್ತರಿಂದ ಅರ್ಜಿ ಭರ್ತಿ ಮಾಡಿಸುತ್ತಿದ್ದಾರೆ. ಬಿಎಲ್‌ಒಗಳು ಬಿಸಿಲಲ್ಲಿ ಪ್ರತಿ …
Read More »ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು
ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಇಂದು (ಜು.4) ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ನಿನ್ನೆಯಿಂದ ಅವರು ಜ್ವರ ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ವೈದ್ಯರ ಸಲಹೆಯ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ. ಸದ್ಯ ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ವಿಶೇಷ ತಂಡವೊಂದು ಅವರ ಆರೋಗ್ಯದ ಮೇಲೆ …
Read More »SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ವಿಎ ಸಾವು ಬದುಕಿನ ನಡುವೆ ಹೋರಾಟ
ತುಮಕೂರು: ಎಸ್‌ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರಿನ ಗೂಳೂರಿನಲ್ಲಿ ನಡೆದಿದೆ. ಭಾವನಾ (26) ಗಂಭೀರ ಗಾಯಗೊಂಡಿರುವ ವಿಎ. ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಭಾವನಾಗೆ ಸಿದ್ದಗಂಗಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ …
Read More »ಕೆಆರ್ ಸರ್ಕಲ್ ಬಳಿ ಭೀಕರ ಅಪಘಾತ – ಗಾಯಾಳುಗಳ ಆರೋಗ್ಯ ವಿಚಾರಿಸಿದ ಬೈರತಿ ಸುರೇಶ್
ಬೆಂಗಳೂರು: ಕೆಆರ್ ಸರ್ಕಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ಕೆ.ಆರ್ ಸರ್ಕಲ್‌ನಲ್ಲಿ ಬೆಳಗ್ಗೆ ಎರಡು ಇವಿ ಬಿಎಂಟಿಸಿ ನಡುವೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ 16 ಜನ …
Read More »480 ಕೋಟಿ ರೂ. ವೆಚ್ಚದ ಜೋಧ್‌ಪುರ ಏರ್‌ಪೋರ್ಟ್ ಟರ್ಮಿನಲ್ ಉದ್ಘಾಟಿಸಿದ ಮೋದಿ
ಜೈಪುರ: ರಾಜಸ್ಥಾನದ ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ 480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಇದೇ ವೇಳೆ ಮುಂದಿನ ಹತ್ತು ವರ್ಷಗಳ ಅವಧಿಗೆ 28,840 ಕೋಟಿ ರೂ. ಅನುದಾನ ಹೊಂದಿರುವ ಪರಿಷ್ಕೃತ ಉಡಾನ್ ಯೋಜನೆಗೂ ಅಧಿಕೃತ ಚಾಲನೆ ನೀಡಿದರು. ಪ್ರಧಾನಿ ಮೋದಿ ಜೋಧ್‌ಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜಸ್ಥಾನ ರಾಜ್ಯಪಾಲ ಹರಿಭಾವು ಬಾಗಡೆ, ಕೇಂದ್ರ ಜಲಶಕ್ತಿ ಸಚಿವ ಹಾಗೂ ಜೋಧ್‌ಪುರ …
Read More »ಆತ್ಮಹತ್ಯೆಗೆ ಹೇಮಾವತಿ ನದಿಗೆ ಹಾರಿ ಮರಳಿನ ಮೇಲೆ ಬಿದ್ದವನ ರಕ್ಷಣೆ
ಹಾಸನ: ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಿಸಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಮಳಲಿ ಬೈಪಾಸ್‌ನಲ್ಲಿ ನಡೆದಿದೆ. ಹಾಸನ ಮೂಲದ ಚಿರಂತ್ (38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಿರಂತ್ ರಾಷ್ಟ್ರೀಯ ಹೆದ್ದಾರಿ 75ರ ಬಿಎಂ ರಸ್ತೆಯ ಮಳಲಿ ಬೈಪಾಸ್‌ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದಿದ್ದಾನೆ. ಚಿರಂತ್ ಜಿಗಿದಿದ್ದನ್ನು ಕಂಡು ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. …
Read More »
Laxmi News 24×7