ಬೆಂಗಳೂರು: ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026 ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ ಕೃಷಿಕರ ಸಬಲೀಕರಣವನ್ನು ಸಾಧಿಸಲು …
Read More »Yearly Archives: 2026
ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ
ನವದೆಹಲಿ: ಜಲಮಂಡಳಿಯ ಯಮಗುಂಡಿಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದಾನೆ. ಆಳವಾದ ಗುಂಡಿಗೆ ಬಿದ್ದು ಬೈಕ್ ಸವಾರ ಕಮಲ್ ಪ್ರಾಣಪಕ್ಷಿ ಹಾರಿ ಹೋಗಿದೆ. ಪಶ್ಚಿಮ ದೆಹಲಿಯ ಜನಕಪುರಿಯಲ್ಲಿ ಜಲಮಂಡಳಿಯಿಂದ ದುರಸ್ತಿ ಕಾಮಗಾರಿ ನಡೆಯುತ್ತಿತ್ತು. 20 ಅಡಿ ಆಳವಾದ ಗುಂಡಿ ಅಗೆಯಲಾಗಿತ್ತು. ನಿನ್ನೆ ರಾತ್ರಿ ರೋಹಿಣಿಯಲ್ಲಿರುವ ಕಚೇರಿಯಿಂದ ಜನಕಪುರಿಯ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಕಮಲ್ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅಗೆಯಲಾಗಿದ್ದ ಗುಂಡಿಗೆ ಯಾವುದೇ ಎಚ್ಚರಿಕಾ ಚಿಹ್ನೆಗಳು, ಬ್ಯಾರಿಕೇಡ್‌ಗಳು, ರಿಫ್ಲೆಕ್ಟರ್ ಅಳವಡಿಸದೇ ಇದ್ದಿದ್ದರಿಂದ ಈ …
Read More »ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂ ನಿರ್ಧರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧಾರ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿಯ ಶ್ರೀನಗರದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಜಿಲ್ಲಾ ಬಾಲಭವನದ ಒಳಾಂಗಣ ಬಾಕ್ಸ್ ಕ್ರಿಕೆಟ್ ಮೈದಾನವನ್ನು ಉದ್ಘಾಟಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಬೇಕೆಂದು ಈಗಾಗಲೇ ಹಲವು ಬಾರಿ ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಆದರೆ …
Read More »ಕೋಲಾರ | ವ್ಹೀಲಿಂಗ್ ಮಾಡ್ತಿದ್ದ ಐವರು ಪುಂಡರು ಅರೆಸ್ಟ್
ಕೋಲಾರ: ಬೈಕ್ ವ್ಹೀಲಿಂಗ್ ಮಾಡ್ತಿದ್ದ ಐವರನ್ನು ಮಾಲೂರು (Maluru) ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ ನಹೀಂ, ಮಹಮ್ಮದ್ ಇಂಜುಮಾನ್, ಇಕ್ಬಾಲ್ ಶೇಕ್ ವಿಕ್ರಂ ಹಾಗೂ ಮಹಮ್ಮದ್ ತೋಹಿದ್ ಎಂದು ಗುರುತಿಸಲಾಗಿದೆ. ಇವರೆಲ್ಲ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಳಿ ವ್ಹೀಲಿಂಗ್ ಮಾಡುತ್ತಿದ್ದರು. ಆರೋಪಿಗಳು ಬಳಸಿದ್ದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ
Read More »ಬೌಂಡರಿ, ಸಿಕ್ಸರ್‌ನಲ್ಲಿ 150 ರನ್ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ
ಹರಾರೆ: ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇಂದಿನ ಪಂದ್ಯದಲ್ಲಿ ಸೂರ್ಯವಂಶಿ ( 175 ರನ್ ಹೊಡೆದಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ಪುರುಷರ ಅಥವಾ ಮಹಿಳೆಯರ ವಿಭಾಗ ಮತ್ತು ವಯೋಮಾನದ ಎಲ್ಲಾ ವಿಭಾಗಗಳಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ ಎಂಬ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಹಿಂದೆ ಸೌತಾಂಪ್ಟನ್‌ನಲ್ಲಿ ಭಾರತ ವಿರುದ್ಧ ನಡೆದ …
Read More »ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ
ನವದೆಹಲಿ: ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್ ಅಪ್ರಾಪ್ತ ವಯಸ್ಸಿನ ಬಾಲಕಿಯ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ಕೊನೆಗೊಳಿಸಲು ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ತೀರ್ಪು ನೀಡಿದೆ. ಪ್ರಕರಣವೊಂದರಲ್ಲಿ ಬಾಲಕಿ ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಗರ್ಭ ಧರಿಸಿದ್ದಳು. ಪ್ರಸ್ತುತ ಅವಳು ಗರ್ಭವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯವು, ಆಕೆಯ ಪುನರುತ್ಪಾದಕ ಸ್ವಾಯತ್ತತೆಗೆ …
Read More »ಪರಸ್ಪರ ಒಪ್ಪಿಗೆಯಿಂದ ಪ್ರೇಮವಿವಾಹ ಇಬ್ಬರ ಸಾವಿಗೆ ಕಾರಣ
ಚಿಕ್ಕೋಡಿ: ಪರಸ್ಪರ ಒಪ್ಪಿಗೆಯಿಂದ ಯುವಕ-ಯುವತಿ ಮಾಡಿಕೊಂಡ ಪ್ರೇಮವಿವಾಹ ಇಬ್ಬರ ಸಾವಿಗೆ ಕಾರಣವಾಗಿದೆ. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಠಾಣೆ ವ್ಯಾಪ್ತಿಯ ಕಮತನೂರಿನ ಪ್ರೇಮಿಗಳಿಬ್ಬರೂ ಕುಟುಂಬಸ್ಥರಿಗೆ ತಿಳಿಯದಂತೆ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಕೊಂಡಿದ್ದಾರೆ. ತಂಗಿ ಮನೆತನದ ಕಳೆದಿದ್ದಾಳೆಂದು ಬೇಸರಗೊಂಡು ವಧುವಿನ ಅಣ್ಣ ಪ್ರಶಾಂತ ನಿಕ್ಕಂ(೨೫)ಬುಧವಾರ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮದುವೆಯಾದ ಯುವಕನನ್ನು ಪ್ರೀತಿಸುತ್ತಿದ್ದ ಮತ್ತೋರ್ವ ಯುವತಿ ಕಮತನೂರ ಗ್ರಾಮದ ರಕ್ಷಿತಾ ಕಾಂಬಳೆ (20), ತನಗೆ ಮೋಸವಾಗಿದೆ ಎಂಬ ನೋವಿನಿಂದ ಅದೇ …
Read More »Belagavi-ಹೆಚ್ಚುವರಿ ವಿಮಾನಯಾನಕ್ಕೆ ಶೀಘ್ರ ಕ್ರಮ
ಬೆಳಗಾವಿ: ಬೆಳಗಾವಿಯಿಂದ ವಿಮಾನ ಸಂಚಾರ ಕಡಿಮೆಯಾಗಿರುವುದನ್ನು ಖಂಡಿಸಿ ವಾಣಿಜ್ಯೋದ್ಯಮ ಸಂಘ ಪ್ರತಿಭಟನೆಗೆ ಮುಂದಾಗಿದ್ದರಿಂದ ವಿವಿಧ ಖಾಸಗಿ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳು ಗುರುವಾರ ಸಂಘದ ಕಚೇರಿಗೆ ಭೇಟಿ ನೀಡಿ ಚರ್ಚಿಸಿದರು. ಸಂಚಾರ ದಟ್ಟಣೆ ಇದ್ದರೂ ಬೆಳಗಾವಿಯಿಂದ ಸಂಚರಿಸುತ್ತಿದ್ದ ಹಲವಾರು ವಿಮಾನಗಳು ಏಕಾಏಕಿ ರದ್ದಾಗುತ್ತಿರುವುದು ಉದ್ಯಮಗಳ ಕಾರ್ಯಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಜತೆಗೆ ಬೆಳಗಾವಿ ಅಭಿವೃದ್ಧಿಗೆ ಇದು ಹಿನ್ನಡೆಯುಂಟು ಮಾಡುವ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ವಾಣಿಜ್ಯೋದ್ಯಮ …
Read More »ವೀರಶೈವ ಲಿಂಗಾಯತ ಧರ್ಮ ಸಮನ್ವಯತೆಯ ಧರ್ಮ : ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು
ವೀರಶೈವ ಲಿಂಗಾಯತ ಧರ್ಮ ಸಮನ್ವಯತೆಯ ಧರ್ಮ : ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಬಾಗಲಕೋಟೆ: ಸಮಾನತೆಯನ್ನು ಭೋದಿಸುವ ಮೂಲಕ ಎಲ್ಲ ಸಮುದಾಯಗಳೊಡನೆ ಸಮನ್ವಯವನ್ನು ಸಾಧಿಸಿದ ಶಿಕ್ಷಣ, ಅನ್ನ, ಉದ್ಯೋಗ ನೀಡುವ ಮೂಲಕ ಎಲ್ಲರ ಪ್ರಗತಿಗೆ ಕಾರಣವಾಗಿರುವ ಸಮಾಜ ವೀರಶೈವ ಲಿಂಗಾಯತ ಸಮಾಜ ಎಂದು ಸವದತ್ತಿಯ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ನಗರದ ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವದ ನಿಮಿತ್ಯ ಚರಂತಿಮಠದ ಆವರಣದಲ್ಲಿ ಶುಕ್ರವಾರ ನಡೆದ ಧರ್ಮತತ್ವ ಚಿಂತನೆ …
Read More »ಡಾ.ಕೋರೆಗೆ ಗೋವಾ ಮಾಜಿ ಸಿಎಂ ಕಾಮತ ಸನ್ಮಾನ
ಬೆಳಗಾವಿ: ಗೋವಾದ ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ದಿಗಂಬರ ಕಾಮತ, ಗುರುವಾರ ನಗರದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆಯವರನ್ನು ಸನ್ಮಾಸಿದರು ಈ ವೇಳೆ ಮಾತನಾಡಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆ ಗುರುತಿಸಿ ಡಾ.ಕೋರೆಯವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿರುವುದು ಅವರ ಸಾಧನೆಗೆ ಸಲ್ಲಿಸಿದ ಗೌರವವಾಗಿದೆ ಎಂದು ಶ್ಲಾಘಿಸಿದರು. ಸೋಮಣ್ಣ ಭೇಟಿ: ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಫೆ.7ರಂದು ಡಾ.ಕೋರೆಯವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ನಗರಕ್ಕೆ …
Read More »
Laxmi News 24×7