Breaking News

Yearly Archives: 2026

ಆಲಿಕಲ್ಲು ಮಳೆ: ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಸೂಚನೆ

ಧಾರವಾಡ: ‘ಆಲಿಕಲ್ಲು ಮಳೆಯಿಂದ ಕಲಘಟಗಿ, ಹುಬ್ಬಳ್ಳಿ, ನವಲಗುಂದ ತಾಲ್ಲೂಕಿನಲ್ಲಿ ಜಾನುವಾರು, ಮನೆ ಮತ್ತು ಬೆಳೆ ಹಾನಿ ವರದಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಪಾರದರ್ಶಕವಾಗಿ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಎಲ್ಲ ತಾಲ್ಲೂಕುಮಟ್ಟದ ಅಧಿಕಾರಿಗಳ ಜೊತೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದರು. …

Read More »

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

ಕೊಪ್ಪಳ: ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದಕ್ಕಾಗಿ ಭಾರತ ಧ್ವಜ ಇರೋ ಹಡುಗಗಳು ಸುರಕ್ಷಿತವಾಗಿ ನಮ್ಮ ದೇಶಕ್ಕೆ ಬರುತ್ತಿವೆ ಎಂದು ಶಾಸಕ ಜನಾರ್ದನ ರೆಡ್ಡಿ  ಹೇಳಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಭಾರತದಲ್ಲಿ ಮುಸ್ಲಿಮರಿಗೆ ಸುರಕ್ಷತೆ ನೀಡಿದ್ದಾರೆ. ಅದಕ್ಕಾಗಿ ಇರಾನ್ ನಮ್ಮ ದೇಶದ ಹಡಗುಗಳಿಗೆ ರಕ್ಷಣೆ ಕೊಟ್ಟು ಕಳಿಸುತ್ತಿದೆ ಎಂದಿದ್ದಾರೆ. ಸಚಿವ ಬೋಸರಾಜು ಹೇಳಿಕೆ ಬಗ್ಗೆ ಮಾತನಾಡಿದ ಅವರು, ಮೋದಿ, ಟ್ರಂಪ್ ಗೆಳೆತನ ಜೋರಾಗಿರೋದಕ್ಕೆ ನಮಗೆ …

Read More »

ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ನಾಳೆ ಬೆಳಗ್ಗೆ ಒಳಗೆ ಘೋಷಣೆ ಆಗಲಿದೆ: ರಣದೀಪ್ ಸುರ್ಜೇವಾಲಾ

ಬೆಂಗಳೂರು: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಗೆ (By Election) ಕಾಂಗ್ರೆಸ್ (Congress) ಟಿಕೆಟ್ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಒಳಗೆ ಘೋಷಣೆ ಮಾಡುತ್ತೇವೆ ಅಂತಾ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ( ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಟಿಕೆಟ್ ವಿಚಾರವಾಗಿ ವ್ಯಾಪಕವಾಗಿ ಚರ್ಚೆ ಮಾಡಲಾಗಿದೆ. ಯಾವುದೇ ಒಬ್ಬ ಕಾರ್ಯಕರ್ತರ ಅಪಸ್ವರ ಇದ್ದರೂ ಕೂಡ ಪರಿಗಣನೆಗೆ ತೆಗೆದುಕೊಂಡಿದ್ದೇವೆ. ಶುಕ್ರವಾರ ತಡರಾತ್ರಿಯವರೆಗೆ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಎಲ್ಲರ …

Read More »

ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ

ದಾವಣಗೆರೆ: ರಂಜಾನ್  ಪ್ರಾರ್ಥನೆ ಮಾಡುವ ವೇಳೆ ಹೆಜ್ಜೇನು  ದಾಳಿ ನಡೆಸಿದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು  ಬಳಿ ನಡೆದಿದೆ. ರಂಜಾನ್ ಪ್ರಯುಕ್ತ ಸುಮಾರು 800ಕ್ಕೂ ಅಧಿಕ ಮುಸ್ಲಿಂ ಬಾಂಧವರು ಆನಗೋಡು ಬಳಿಯ, ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿ ಇರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ಗೂಡಿಗೆ ಕೆಲ ಯುವಕರು ಕಲ್ಲು ಹೊಡೆದಿದ್ದಾರೆ. ಈ ಪರಿಣಾಮ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಹೆಜ್ಜೇನು …

Read More »

ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹುಬ್ಬಳ್ಳಿಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಹೊಸೂರು, ಕಮರಿಪೇಟೆ ಸೇರಿದಂತೆ ಪ್ರಮುಖ ವೃತ್ತಿಗಳಲ್ಲಿ ಸಂಚಾರ ಬಂದ್ ಮಾಡಿ, ಪ್ರಾರ್ಥನೆಗೆ ಅನುವು ಮಾಡಿಕೊಡಲಾಗಿತ್ತು. ಪ್ರಾರ್ಥನೆ ಬಳಿಕ ಅಂಜುಮನ್ ಇಸ್ಲಾಮಿಕ್ ಸಂಸ್ಥೆಯ ಮುಖಂಡರು ಹಾಗೂ ಮುಸ್ಲಿಂ ಮುಖಂಡರು 3 ಸಾವಿರ ಮಠಕ್ಕೆ ತೆರಳಿ, …

Read More »

ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ – ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು

ತುಮಕೂರು: ಏ.1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ಆಗಮಿಸಲಿದ್ದಾರೆ. ಮಾ.31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ, ಅಂದು ರಾಜಭವನದಲ್ಲಿ ತಂಗಲಿದ್ದಾರೆ. ಮಾರನೇ ದಿನ ಏ.1ರಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ  ಆಗಮಿಸಲಿದ್ದಾರೆ. ಬಳಿಕ ಸಿದ್ದಗಂಗಾ ಶ್ರೀಗಳ ಗದ್ದಿಗೆ ದರ್ಶನ ಪಡೆದು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು ಒಂದೂವರೆ ಗಂಟೆಗಳ ಕಾಲ ಇರಲಿದ್ದಾರೆ ಎಂದು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವ ಭಾವಿ …

Read More »

ಕಗ್ಗಂಟಾಗಿದ್ದ ದಾವಣಗೆರೆ, ಬಾಗಲಕೋಟೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್! ಇವರಿಗೆ ಟಿಕೆಟ್ ಕೊಡೋದು ಕನ್ಫರ್ಮ್

ಪಚುನಾವಣೆ ದಿನಾಂಕ  ಘೋಷಣೆಯಾದಾಗಿನಿಂದಲೂ ದಾವಣಗೆರೆ ದಕ್ಷಿಣ ಮತ್ತು ಬಾಲಕೋಟೆಯಲ್ಲಿ ಚುನಾವಣಾ ರಂಗು ಹೆಚ್ಚಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಾಜಕೀಯವಾಗಿ ಬಹಳ ಆಸಕ್ತಿಕರವಾಗಿ ಮುಂದುವರೆಯುತ್ತಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್​​ನಲ್ಲಿ ಮಾತ್ರ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಯುತ್ತಿತ್ತು. ಇದೀಗ ಕೊನೆಗೂ ಟಿಕೆಟ್​​ ಹಂಚಿಕೆ ಮುಕ್ತಾಯ ಹಂತಕ್ಕೆ ಬಂದಿದೆ. ಸದ್ಯ ಬಿಜೆಪಿ ಟಿಕೆಟ್​ ಅಧಿಕೃತವಾಗಿ ಘೋಷಣೆಯಾಗಿದ್ದು, ಈಗ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ …

Read More »

ರಂಜಾನ್ ಹಬ್ಬದ ಶುಭಕೋರಿದ ಸಿಎಂ: ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಸಿದ್ದರಾಮಯ್ಯ

 ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ(Happy Ramzan) ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ ಎಂದರು. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. …

Read More »

ಕಾಂಗ್ರೆಸ್‌ಗೆ ಯಾರೂ ಬ್ಲ್ಯಾಕ್‌ಮೇಲ್‌ ಮಾಡಲು ಆಗುವುದಿಲ್ಲ: ಎಂ.ಬಿ.ಪಾಟೀಲ್‌

ಬೆಂಗಳೂರು: ಕಾಂಗ್ರೆಸ್‌ಗೆ ಯಾರೂ ಒತ್ತಡ ಹೇರಲು ಆಗುವುದಿಲ್ಲ. ಬ್ಲ್ಯಾಕ್‌ಮೇಲ್‌ ಮಾಡಲಿಕ್ಕೂ ಆಗುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಕುಟುಂಬವೂ ಕೇಳುತ್ತಿದೆ. ಹಾಗೆಯೇ ಅಲ್ಪಸಂಖ್ಯಾತ ಸಮುದಾಯವೂ ಬೇಡಿಕೆ ಇಟ್ಟಿದೆ. ಯಾರು ಬೇಕಾದರೂ ಟಿಕೆಟ್‌ ಕೇಳಬಹುದು. ಅದು ತಪ್ಪೇನಲ್ಲ. ಆದರೆ, ಯಾರೂ ಒತ್ತಡ ಹಾಕಲು ಬರುವುದಿಲ್ಲ. ಬ್ಲ್ಯಾಕ್‌ಮೇಲ್‌ ಮಾಡಲಿಕ್ಕೂ ಆಗದು ಎಂದು ಹೇಳಿದರು. ಈಗಾಗಲೇ ನಾಮಪತ್ರ ಕೂಡ ಸಲ್ಲಿಸಿದ್ದಾರಲ್ಲ ಎಂದು ಕೇಳಿದಾಗ, …

Read More »

ರಂಜಾನ್​ ವೇಳೆ 1 ತಿಂಗಳ ಕಠಿಣ ಉಪವಾಸ ಮಾಡಿದ 10ವರ್ಷದ ಬಾಲಕ,6 ವರ್ಷದ ಬಾಲಕಿ!

ಘಟಪ್ರಭಾ: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಕುಡಿಯದೆ ಮುಸ್ಲಿಂ ಬಾಂಧವರು ಕಟ್ಟುನಿಟ್ಟಾದ ಉಪವಾಸ ಪಾಲನೆ ಮಾಡುತ್ತಾರೆ.ಇಂತಹ ಕಠಿಣ ಉಪವಾಸ ಒಂದು ತಿಂಗಳವರೆಗೆ ಮಾಡೋದು ಕೆಲವೊಂದು ಸಲ ದೊಡ್ಡವರಿಗೂ ಕಷ್ಟವಾಗುತ್ತದೆ.ಆದರೆ,ಇಂತಹ ಕಠಿಣ ಉಪವಾಸವನ್ನು ಒಂದು ತಿಂಗಳವರೆಗೆ ಕಟ್ಟು ನಿಟ್ಟಾಗಿ ಆಚರಿಸುವ ಮೂಲಕ ಘಟಪ್ರಭಾ ಪಟ್ಟಣದಲ್ಲಿ ಇಬ್ಬರು ಸಹೋದರ,ಸಹೋದರಿ ಗಮನ ಸೆಳೆದಿದ್ದಾರೆ. ಘಟಪ್ರಭಾ ಪಟ್ಟಣದ ಬಸವ ನಗರದದಲ್ಲಿರುವ ಫಾರೂಖ್ ಅತ್ತಾರ ಎಂಬುವರ ಮಕ್ಕಳಾದ 10ವರ್ಷದ ಪುತ್ರ ಫಹೀಮ್ ಹಾಗೂ …

Read More »