Breaking News

Yearly Archives: 2026

ಗುಂಡಿ ಮುಕ್ತ ಬೆಳಗಾವಿಗೆ ಶಾಸಕ ಅಸೀಫ್ ಸೇಠ್ ಕರೆ

ಬೆಳಗಾವಿ: ಬೆಳಗಾವಿ ಉತ್ತರ ಮತ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ಶಾಸಕ ಆಸಿಫ್ (ರಾಜು) ಸೇಠ್ ಅವರು “Pothole-Free Belagavi” ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಆಸಿಫ್ (ರಾಜು) ಸೇಠ್ ಅವರು, ಕ್ಷೇತ್ರದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಸುರಕ್ಷತಾ ಸಮಸ್ಯೆಗಳ ಕುರಿತು ನಿವಾಸಿಗಳು ನಿರಂತರವಾಗಿ ತಮ್ಮ ಗಮನಕ್ಕೆ ತರುತ್ತಿದ್ದಾರೆ …

Read More »

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: 49 ಲೀಟರ್ ಕಳ್ಳಭಟ್ಟಿ ಸರಾಯಿ ವಶ, ಆರೋಪಿ ಬಂಧನ

ಬೆಳಗಾವಿ: ಅಬಕಾರಿ ಇಲಾಖೆಯ ಉನ್ನತಾಧಿಕಾರಿಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಭಾರಿ ಪ್ರಮಾಣದ ಕಳ್ಳಭಟ್ಟಿ ಸರಾಯಿಯನ್ನು ವಶಪಡಿಸಿಕೊಂಡು ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆಗಸ್ಟ್ 18, 2026 ರಂದು ಡಾ. ವೈ. ಮಂಜುನಾಥ (ಅಬಕಾರಿ ಅಪರ ಆಯುಕ್ತರು, ಅಪರಾಧ, ಬೆಳಗಾವಿ), ಎಫ್. ಎಚ್. ಚಲವಾದಿ (ಅಬಕಾರಿ ಜಂಟಿ ಆಯುಕ್ತರು, ಜಾರಿ ಮತ್ತು ತನಿಖೆ) ಅವರ ಮಾರ್ಗದರ್ಶನದಲ್ಲಿ ಹಾಗೂ ಸ್ವಪ್ನ ಆರ್. ಎಸ್. …

Read More »

ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ಹಣಕ್ಕಾಗಿ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯ ಬೆತ್ತಲೆ ವಿಡಿಯೋ ಕಾಲ್

ಬೆಳಗಾವಿ ಹಿಂಡಲಗಾ ಜೈಲಿನ ಹೊಸ ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ಅಧಿಕಾರಿಗಳೇ ಹಣಕ್ಕಾಗಿ ವಿವಿಧ ವಾಮಮಾರ್ಗಗಳ ಮೂಲಕ ಕೈದಿಗಳ ಜೀವ ಹಿಂಡುತ್ತಿದ್ದಾರೆ. ಜೈಲಿನ ಅಧಿಕಾರಿಗಳೇ ಹಣಕ್ಕಾಗಿ ಕೈದಿಗಳಿಗೆ ಮೊಬೈಲ್, ನಿಷೇಧಿತ ವಸ್ತುಗಳನ್ನು ತಂದು ಮಾರಾಟ ಮಾಡುತ್ತಾರೆ ಎಂದು ಯುವಕನೊಬ್ಬ ವಿಡಿಯೋ ಮೊಲಕ ಮಾಹಿತಿ ನೀಡಿದ್ದಾನೆ. ತುಮಕೂರು ಮೂಲದ ಸಾಯಿಕುಮಾರ್ ಎಂಬ ಯುವಕ 2024ರಲ್ಲಿ ಹಿಂಡಲಗಾ ಜೈಲಿನಲ್ಲಿ ಕೈದಿಯಾಗಿದ್ದ ಸಂದರ್ಭದಲ್ಲಿ ಅಲ್ಲಿ ನಡೆಯುತ್ತಿದ್ದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಿಂದಲಗಾ ಜೈಲಿನಲ್ಲಿ ವೇಶ್ಯಾವಾಟಿಕೆ …

Read More »

ಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದ ನಡೆದಿದೆ. ಅವನ್ನಾ ಸಿದ್ದಪ್ಪ ತಪಶಿ ಬಂಧಿತ ಆರೋಪಿ, ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಪತ್ತೆಯಾಗಿದೆ. ಆರೋಪಿತನಿಂದ ಸುಮಾರು 13 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಘಟನೆ …

Read More »

ಸಿಖ್ ವಿರೋಧಿ ದಂಗೆ ಕೇಸ್‌ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್ ಕುಮಾರ್ ನಿಧನ

ನವದೆಹಲಿ: ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್  ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ  ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ್ಅ  ವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ ದೆಹಲಿ ಮತ್ತು ಉತ್ತರ …

Read More »

ಸಿಖ್ ವಿರೋಧಿ ದಂಗೆ ಕೇಸ್‌ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್ ಕುಮಾರ್ ನಿಧನ

ನವದೆಹಲಿ: ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ  ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್  ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ್ ) ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ  ) ಅವರ ಹತ್ಯೆಯ ನಂತರ ದೆಹಲಿ …

Read More »

ವಂದೇ ಮಾತರಂನ ಎರಡು ಚರಣ ಹಾಡುವ ನಿರ್ಧಾರ ದೇಶ ವಿರೋಧಿ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಚೆನ್ನೈ: ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ನಿರ್ಧಾರವನ್ನು ಅವರು ‘ದೇಶವಿರೋಧಿ’ ಎಂದು ಟೀಕಿಸಿದ್ದು, ಇದು ಕಾಂಗ್ರೆಸ್‌ನ ಹಳೆಯ ತುಷ್ಟೀಕರಣ ರಾಜಕಾರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟಿನಲ್ಲಿ ಮಾತನಾಡಿದ ಅಮಿತ್ ಶಾ, 1937ರಲ್ಲಿ ಕಾಂಗ್ರೆಸ್ ವಂದೇ ಮಾತರಂ ಅನ್ನು ಎರಡು …

Read More »

ಬ್ಯಾಂಕ್‌ ಎದುರೇ ಗುಂಡಿಕ್ಕಿ ಪತ್ನಿ ಕೊಂದ ಲಕ್ನೋ SBI ಉದ್ಯೋಗಿ – ಮನೆಯಲ್ಲಿ ಸಹೋದರಿ ಕೊಂದು ತಾನೂ ಆತ್ಮಹತ್ಯೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಇಂದು  ಆಘಾತಕಾರಿ ದುರಂತ ನಡೆದಿದೆ. ‌ಎಸ್‌ಬಿಐ ಬ್ಯಾಂಕ್‌ ಉದ್ಯೋಗಿಯೊಬ್ಬರು  ಬ್ಯಾಂಕ್‌ ಎದುರಲ್ಲೇ ತನ್ನ ಪತ್ನಿಯನ್ನ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಸಹೋದರಿಯನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಎಸ್‌ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದ ಮಾನಸ್ ವಾಜಪೇಯಿ (38) ಎಂಬಾತ ತನ್ನ ಪತ್ನಿಯನ್ನ ಬ್ಯಾಂಕ್‌ ಹೊರಗೆ ಗುಂಡಿಕ್ಕಿ (Shootout) ಹತ್ಯೆ ಮಾಡಿದ್ದಾನೆ. ಬಳಿಕ ಮನೆಗೆ ತೆರಳಿ ಸಹೋದರಿಯನ್ನೂ ಗುಂಡಿಕ್ಕಿ ಕೊಂದು, ನಂತರ ತಾನೂ ಗುಂಡು …

Read More »

ಅಡಿಕೆ ತೋಟಕ್ಕೆ ನುಗ್ಗಿದ ಬಸ್‌ – ಓರ್ವ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ  ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಎದುರಿನಿಂದ ಬೈಕ್‌ ಅಡ್ಡ ಬಂದಿದೆ. ಬಸ್‌ ಚಾಲಕ ಬೈಕ್‌ ಸವಾರನನ್ನು ಬಚಾವ್‌ ಮಾಡಲು ಯತ್ನಿಸಿದ್ದಾನೆ. ಆದರೆ ಬಸ್‌ ಬೈಕ್‌ಗೆ ಡಿಕ್ಕಿಯಾಗಿ ತೋಟಕ್ಕೆ ನುಗ್ಗಿದೆ. ಗಂಭೀರ ಗಾಯಗೊಂಡಿದ್ದ …

Read More »

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್‌ – ತನಿಖೆಗೆ ಸುಪ್ರೀಂನಿಂದ ಉನ್ನತ ಮಟ್ಟದ ಸಮಿತಿ ರಚನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್  ಹಾಗೂ ಇತರ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿವೆ ಎಂಬ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್  ಗುರುವಾರ ಐವರು ಸದಸ್ಯರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ. ಸುಪ್ರೀಂ …

Read More »