ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟ ರೈತನನ್ನು ದ್ಯಾವಪ್ಪ (35) ಎಂದು ಗುರುತಿಸಲಾಗಿದೆ. ರಾಮಕೃಷ್ಣ ಎಂಬುವವರ ಜಮೀನಿನಲ್ಲಿ ಜೋಳ ಬಿತ್ತನೆ ಕೆಲಸಕ್ಕಾಗಿ ಮೂವರು ರೈತರು ಹೋಗಿದ್ದರು. ಈ ವೇಳೆ ಮಳೆ ಬಂದಿದ್ದು, ಮೂವರು ಮರದ ಕೆಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದಿದ್ದು, ಪರಿಣಾಮ ರೈತ ದ್ಯಾವಪ್ಪ ಸ್ಥಳದಲ್ಲೇ …
Read More »Yearly Archives: 2026
ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ
ಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ ರಾಜಕೀಯ ಜಟಾಪಟಿ ತೀವ್ರಗೊಂಡಿರುವ ನಡುವೆಯೇ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಹತ್ವದ ಸೂಚನೆ ನೀಡಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 26ನೇ ಘಟಿಕೋತ್ಸವದಲ್ಲಿ ವಂದೇ ಮಾತರಂ ಗೀತೆಯ ಪೂರ್ಣ ಆವೃತ್ತಿಯನ್ನು ಹಾಡುವಂತೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಅವರಿಗೆ ರಾಜ್ಯಪಾಲರು ಖಡಕ್ ನಿರ್ದೇಶನ ನೀಡಿದ್ದಾರೆ. ಸೆಪ್ಟೆಂಬರ್ 26ರಂದು ವಿಟಿಯು ಕ್ಯಾಂಪಸ್‌ನಲ್ಲಿ …
Read More »ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ
ಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಧಾರವಾಡ ಹೈಕೋರ್ಟ್ ಪೀಠ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೈಕೋರ್ಟ್ ಆದೇಶದ ವಿರುದ್ಧ ವಿಶೇಷ ಅನುಮತಿ ಅರ್ಜಿ ಸಲ್ಲಿಸಲು ಕಾನೂನು ಇಲಾಖೆ ಕೋರಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಹಾಗೂ ಪ್ರಾಸಿಕ್ಯೂಷನ್ ವಿಭಾಗ ಪೂರ್ವಾನುಮತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಈ ಪೂರ್ವಾನುಮತಿಯ ಹಿನ್ನೆಲೆಯಲ್ಲಿ, …
Read More »ಸಾರಿಗೆ ಬಸ್, ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ
ಹಾವೇರಿ: ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರವಾದ ಘಟನೆ ಹಾವೇರಿ ತಾಲೂಕಿನ ಹಳೇರತ್ತಿ ಗ್ರಾಮದ ಬಳಿ ನಡೆದಿದೆ. ಚನ್ನೂರು ಗ್ರಾಮದ ನಿವಾಸಿ ಎಸ್.ಎಸ್.ಮಠದ್ ಮೃತ ದುರ್ದೈವಿ. ಸಾರಿಗೆ ಬಸ್‌ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತೆಗೆ ರವಾನೆ ಮಾಡಲಾಗಿದೆ. …
Read More »ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಗದ್ದಲ – ಸಿಎಂ ಸ್ಪಷ್ಟನೆ
ಬೆಂಗಳೂರು: ಯಶವಂತರಾಯ ಗೌಡ ಪಾಟೀಲ್ ಅವರ ರಾಜೀನಾಮೆ ಇದು ಬೇರೆ ತರಹದ್ದಲ್ಲ. ಇದು ರೈತರಗಾಗಿ ತೆಗೆದುಕೊಂಡು ನಿರ್ಣಯ. ಅವರೊಂದಿಗೆ ಮಾತನಾಡಿ, ಸಮಾಧಾನಪಡಿಸಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಯಶವಂತರಾಯ ಗೌಡ ಪಾಟೀಲ್ ಬಂದಿದ್ರು, ಮಾತಾಡಿದ್ರು. ಸಮಾಧಾನ ಮಾಡಿ ಕಳಿಸಿದ್ದೇನೆ. ಇದೇನು ಬೇರೆ ಥರದ ರಾಜೀನಾಮೆ ಅಲ್ಲ, ಈಶ್ವರಪ್ಪ ಥರದ ರಾಜೀನಾಮೆ ಅಲ್ಲ. ರೈತರಿಗಾಗಿ, ಜನರಿಗಾಗಿ ಅವರು ತೆಗೆದುಕೊಂಡ ನಿರ್ಣಯ. ನಾನು 224 …
Read More »ನಟ ಅನಂತ್ ನಾಗ್‌ಗೆ ವಿಧಾನ ಪರಿಷತ್‌ನಲ್ಲಿ ಗೌರವ ಸಲ್ಲಿಕೆ
ಬೆಂಗಳೂರು: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರು ನಟ ಅನಂತ್ ನಾಗ್‌ಗೆ ವಿಧಾನ ಪರಿಷತ್‌ನಲ್ಲಿ ಅಭಿನಂದನೆ ಸಲ್ಲಿಸಲಾಯ್ತು. ಕಲಾಪ ಪ್ರಾರಂಭ ಆದ ಕೂಡಲೇ ಸಭಾಪತಿಗಳು ಅಭಿನಂದನೆ ನಿರ್ಣಯ ಮಂಡಿಸಿದರು. ಈ ವೇಳೆ ಮಾತಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ , ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರೋದು ಕನ್ನಡ ರಾಜ್ಯಕ್ಕೆ ಗೌರವ ತಂದಿದೆ. ಪ್ರಶಸ್ತಿ ಕೊಟ್ಟ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಅನಂತ್ ನಾಗ್ ಸಹಜ ನಟರು, …
Read More »ಕೇಂದ್ರದಿಂದ 50,000 ರೂ. ಬರ ಪರಿಹಾರ ಕೊಡಬೇಕು – ಎಂಎಲ್‌ಸಿ ಶಿವಕುಮಾರ್ ಆಗ್ರಹ
ಬೆಂಗಳೂರು: ಬರದಿಂದ ಕೃಷಿ, ಕೂಲಿ ಮಾಡೋರಿಗೆ ಸಮಸ್ಯೆ ಆಗಿದೆ. ಕಬ್ಬು ಬೆಳೆ ಇಳುವರಿ ಕಡಿಮೆ ಆಗಿದ್ದು, ಅದಕ್ಕೆ ಪರಿಹಾರ ಕೊಡಬೇಕು. ಎನ್‌ಡಿಆರ್‌ಎಫ್ ನಿಯಮದಲ್ಲಿ ಬದಲಾವಣೆ ಮಾಡಬೇಕು. ಕೇಂದ್ರ ಸರ್ಕಾರದಿಂದ 50 ಸಾವಿರ ರೂ. ಬರ ಪರಿಹಾರ ಕೊಡಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಶಿವಕುಮಾರ್ ಒತ್ತಾಯಿಸಿದರು. ವಿಧಾನ ಪರಿಷತ್‌ನಲ್ಲಿ ಇಂದು ಚರ್ಚೆ ನಡೆಸಿದ ಕಾಂಗ್ರೆಸ್ ಸದಸ್ಯ ಶಿವಕುಮಾರ್, ಬರ ಪರಿಸ್ಥಿತಿ ವೇಳೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ …
Read More »ಸಿಎಂಗೆ ಶಾಸನದ ಗಂಧಗಾಳಿ ಗೊತ್ತಿಲ್ಲ – KPSC ಮುಚ್ಚುವೆ ಎಂದ ಮುಖ್ಯಮಂತ್ರಿಗೆ ಹೆಚ್‌ಡಿಕೆ ತರಾಟೆ
ನವದೆಹಲಿ: ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ …
Read More »ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ – ಎಎಸ್‌ಐ ಅಮಾನತು
ಚಿಕ್ಕಮಗಳೂರು: ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ ಎಎಸ್‌ಐ ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ವೀರೇಂದ್ರ ಅವರನ್ನು ಸಸ್ಪೆಂಡ್ ಮಾಡಿ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಆದೇಶ ಹೊರಡಿಸಿದ್ದಾರೆ. ಎಎಸ್‌ಐ ವೀರೇಂದ್ರ ಬಾರ್‌ನಲ್ಲಿ ಪಾರ್ಟಿ ಆಯೋಜನೆ ಮಾಡಿ ಇಡೀ ರಾತ್ರಿ ಜೋರಾಗಿ ಹಾಡು ಹಾಕಿದ್ದರು. ಈ ಹಿನ್ನೆಲೆ ಗ್ರಾಮಸ್ಥರು ಬಾರ್ ಮುಂದೆ ರಾತ್ರೋರಾತ್ರಿ …
Read More »ನವವಿವಾಹಿತೆ ನಿಗೂಢ ಕಣ್ಮರೆ – ನಾಲ್ಕನೇ ದಿನ ಮುಂದುವರಿದ ಶೋಧ
ಹಾಸನ: ಜಿಲ್ಲೆಯಲ್ಲಿ ನವವಿವಾಹಿತೆ ನಿಗೂಢವಾಗಿ ಕಣ್ಮರೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಾವತಿ ನಾಲೆಯಲ್ಲಿ ಸತತ ನಾಲ್ಕು ದಿನದಿಂದ ಶೋಧ ಕಾರ್ಯ ನಡೆಯುತ್ತಿದ್ದು, ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕುರುವಂಕ ಗ್ರಾಮದ ನವವಿವಾಹಿತೆ ಪ್ರಿಯಾಂಕಾ (24) ಕಣ್ಮರೆಯಾಗಿದ್ದಾರೆ. ಸೆ.19ರ ರಾತ್ರಿ ಸುಮಾರು 9 ಗಂಟೆಗೆ ಪ್ರಿಯಾಂಕಾ ಕಾಲುವೆಗೆ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬಳಿಕ ಚನ್ನರಾಯಪಟ್ಟಣ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಚಿಕ್ಕನಾಯಕನಹಳ್ಳಿ ಬಳಿಯ ಹೇಮಾವತಿ ನಾಲೆಯಲ್ಲಿ …
Read More »
Laxmi News 24×7