ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ …
Read More »Yearly Archives: 2026
ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಪ್ರಶ್ನೆ ಕೇಳಿದರು. 3 ವರ್ಷಗಳಲ್ಲಿ ವಸತಿ ನಿಲಯಗಳಲ್ಲಿ ನೂರಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಫಲ್ಯ, ವೈಯಕ್ತಿಕ ಕಾರಣ ಸೇರಿ ಹಲವು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. 7-8ನೇ ತರಗತಿ …
Read More »ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ
ನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ನೀಡಿದರೆ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ನಾವು ಅಂತಹ ಕಾನೂನನ್ನು ರೂಪಿಸಲು ನಿರ್ದೇಶನ ನೀಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅಭಿಪ್ರಾಯಪಟ್ಟಿದ್ದಾರೆ. ವಕೀಲ ಶೈಲೇಂದ್ರ ಮಣಿ ಎಂಬವರು ಸಂಬಳದೊಂದಿಗೆ ಮುಟ್ಟಿನ ರಜೆ ನೀಡುವಂತೆ ನಿಯಮಗಳನ್ನು ರೂಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಸಿಜೆಐ ಮತ್ತುನ್ಯಾಯಮೂರ್ತಿ …
Read More »ನಿಯಮ ಉಲ್ಲಂಘಿಸಿದರೆ ದಂಡ, ಶಿಕ್ಷೆ: ತಂಬಾಕು ಮಾರಾಟಗಾರರಿಗೆ ಎಚ್ಚರಿಕೆ
ಬೆಳಗಾವಿ: ತಂಬಾಕು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಕೋಟ್ಟಾ-2003 ರ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ರಾಮದುರ್ಗ ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಗುರುವಾರ(ಮಾ.12) ರಾಮದುರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಿಪಿಐ ವಿನಾಯಕ ಬಡಿಗೇರ ಅವರು, ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಕೋಟ್ಟಾ ಕಾಯ್ದೆ ಕುರಿತು ತಿಳಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಶ್ವೇತಾ ಪಾಟೀಲ್, ತಂಬಾಕು …
Read More »ಯಲ್ಲಮ್ಮ ದೇವಸ್ಥಾನದ ಹುಂಡಿ ಏಣಿಕೆ: 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ
ಬೆಳಗಾವಿ: ಸವದತ್ತಿಯ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಈ ಬಾರಿ ಮಾರ್ಚ್ 9ರಿಂದ 12ರ ಅವಧಿಯಲ್ಲಿ ನಡೆದ ಎಣಿಕೆಯಲ್ಲಿ ದಾಖಲೆ ಕಾಣಿಕೆ ಸಂಗ್ರಹವಾಗಿದ್ದು, 2.78 ರೂ. ಕೋಟಿ ನಗದು, 16.16 ಲಕ್ಷ ಮೌಲ್ಯದ ಮೌಲ್ಯದ 100 ಗ್ರಾಂ ಚಿನ್ನಾಭರಣ, 12.35 ಲಕ್ಷ ಮೌಲ್ಯದ 4.547 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿದೆ. ದೇವಸ್ಥಾನದ ಅಭಿವೃದ್ಧಿಗೆ ಹಣ ಬಳಸುವುದಾಗಿ ಅಧಿಕಾರಿಗಳು …
Read More »ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ
ಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ ಎಂ.ಕೆ.ನಂಬಿಯಾರ್ ಸ್ಮರಣಾರ್ಥ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಚೇರ್ಮನ್ ಆರ್.ಎಸ್.ಮುತಾಲಿಕ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನ ಹಳೇ ವಿದ್ಯಾರ್ಥಿ, ಮಾಜಿ ಅಟಾರ್ನಿ ಜನರಲ್ ಪದ್ಮವಿಭೂಷಣ ಕೆ.ಕೆ. ವೇಣುಗೋಪಾಲ್ ಪ್ರಾಯೋಜಕತ್ವದಲ್ಲಿ ಆಯೋಜಿಸಿರುವ ಈ ಸ್ಪರ್ಧೆಯಲ್ಲಿ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಂದ ಒಟ್ಟು …
Read More »ಮೂಲ ಸೌಕರ್ಯ ವಿಕಾಸಕ್ಕೆ ಮೊದಲ ಆದ್ಯತೆ
ಅಥಣಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ೨೦೨೬-೨೭ನೇ ಸಾಲಿನ ಬಜೆಟ್‌ನ್ನು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ ಮಂಡಿಸಿದರು. ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆಯ ಒಟ್ಟು ಆದಾಯ ೩೮,೭೭,೭೯,೦೦೦ ರೂ. ಎಂದು ನಿರೀಕ್ಷಿಸಲಾಗಿದ್ದು, ಇದರಲ್ಲಿ ಮುಂಬರುವ ವರ್ಷದಲ್ಲಿ ೩೮,೪೩,೦೧,೬೦೩ ರೂ. ಒಟ್ಟು ಖರ್ಚು ಮಾಡಲು ಅಂದಾಜಿಸಲಾಗಿದೆ. ಒಟ್ಟು ೩೪,೭೬,೮೯೭ ರೂ. ಉಳಿತಾಯವಾಗಲಿದ್ದು, ಪುರಸಭೆ ಆರ್ಥಿಕವಾಗಿ ಸದೃಢ ಸ್ಥಿತಿಯಲ್ಲಿದೆ. ರಸ್ತೆ ನಿರ್ಮಾಣ, ಕುಡಿಯುವ ನೀರು ಪೂರೈಕೆ, ಒಳಚರಂಡಿ, ಬೀದಿದೀಪ …
Read More »ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ
ಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ವಿಶೇಷ ಸ್ಥಾನವಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿಗಳ ಬೆನ್ನು ಹತ್ತಿ ಮಂಡಿಸಿದ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆರ್ಥಿಕ ತಜ್ಞರೆಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ, ಉತ್ತರ ಕರ್ನಾಟಕ …
Read More »ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ : ರಾಜ್ಯದಲ್ಲಿ 1995ರಿಂದ ಪ್ರಾರಂಭವಾಗಿರುವ ಅನುದಾನ ರಹಿತ ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ಅನುದಾನ ರಹಿತ ಶಾಲಾ ಕಾಲೇಜ್ ನೌಕರರ ಆಡಳಿತ ಮಂಡಳಿಗಳ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‌್ಯಾಲಿ ಮೂಲಕ ಆಗಮಿಸಿ, ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಹೋರಾಟ ಸಮಿತಿಯ ಗೌರವ …
Read More »ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ : ರಾಜ್ಯದಲ್ಲಿ 1995ರಿಂದ ಪ್ರಾರಂಭವಾಗಿರುವ ಅನುದಾನ ರಹಿತ ಶಾಲಾ ಕಾಲೇಜ್‌ಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ಅನುದಾನ ರಹಿತ ಶಾಲಾ ಕಾಲೇಜ್ ನೌಕರರ ಆಡಳಿತ ಮಂಡಳಿಗಳ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‌್ಯಾಲಿ ಮೂಲಕ ಆಗಮಿಸಿ, ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಹೋರಾಟ ಸಮಿತಿಯ ಗೌರವ …
Read More »
Laxmi News 24×7