Breaking News

Yearly Archives: 2026

ಸವಣೂರಿನಲ್ಲಿ ಗಣೇಶ ವಿಸರ್ಜನಾ ವಿವಾದ: ರಾಜಬೀದಿಯಲ್ಲಿ ಅನುಮತಿ ನೀಡದ್ದಕ್ಕೆ ದೇವಸ್ಥಾನಕ್ಕೆ ವಾಪಸ್

ಹಾವೇರಿ: ಗಣೇಶ ವಿಸರ್ಜನಾ ಮೆರವಣಿಗೆಯ ಮಾರ್ಗಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಭಾವಸಾರ ಕ್ಷತ್ರಿಯ ಗಜಾನನ ಯುವಕ ಮಂಡಳಿಯ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದೆ. ರಾಜಬೀದಿ ಮೂಲಕವೇ ಮೆರವಣಿಗೆಗೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿರುವ ಮಂಡಳಿಯ ಸದಸ್ಯರು, ಮಾರ್ಗ ಬದಲಾವಣೆಗೆ ಪೊಲೀಸರು ಒಪ್ಪದ ಹಿನ್ನೆಲೆಯಲ್ಲಿ ಅರ್ಧ ದಾರಿಯಲ್ಲೇ ಮೆರವಣಿಗೆಯನ್ನು ಮೊಟಕುಗೊಳಿಸಿ ಗಣೇಶ ಮೂರ್ತಿಯನ್ನು ಮರಳಿ ದೇವಸ್ಥಾನದಲ್ಲೇ ಪ್ರತಿಷ್ಠಾಪಿಸಿದ್ದಾರೆ. ಭಾನುವಾರ ರಾತ್ರಿ ಸವಣೂರು ಪಟ್ಟಣದ ದಂಡಿನ ಪೇಟೆಯ ಭಾವಸಾರ ಕ್ಷತ್ರಿಯ …

Read More »

ಮೈಸೂರು ದಸರಾ | ಖಾಸಗಿ ದರ್ಬಾರ್ ಬಗ್ಗೆ ಮಾಹಿತಿ ನೀಡಿದ ರಾಜಮಾತೆ, ಯಾವ ದಿನ ಯಾವ ಕಾರ್ಯಕ್ರಮ?

ಮೈಸೂರು: ಮೈಸೂರು ದಸರಾ  ಖಾಸಗಿ ದರ್ಬಾರ್ ಬಗ್ಗೆ ರಾಜಮನೆತನದ ಪ್ರಮೋದದೇವಿ ಒಡೆಯರ್ ಅವರು ಮಾಹಿತಿ ನೀಡಿದ್ದಾರೆ. ಅ.5 ರಂದು ಸಿಂಹಾಸನ ಜೋಡಣೆ ಮಾಡಲಾಗುತ್ತದೆ. ಅ.11ಕ್ಕೆ 11:45ಕ್ಕೆ ಖಾಸಗಿ ದರ್ಬಾರ್ ಆರಂಭವಾಗಲಿದೆ. ಅ.16 ರಂದು ಸರಸ್ವತಿ ಪೂಜೆ ನೆರವೇರಲಿದೆ. ಅ.20ರ ಬೆಳಗ್ಗೆ 11:35ಕ್ಕೆ ಆಯುಧ ಪೂಜೆ ನಡೆಯಲಿದೆ. ಅ.21 ರಂದು ಬೆಳಗ್ಗೆ 8:15ಕ್ಕೆ ವಿಜಯದಶಮಿ ಮೆರವಣಿಗೆ ನೆರವೇರಲಿದೆ ಎಂದು ತಿಳಿಸಿದ್ದಾರೆ. ಕಂಬಳ ಮಾಡುವುದು ಬೇಡ ದಸರಾದಲ್ಲಿ ಕಂಬಳ ಮಾಡುವುದು ಬೇಡ. ದಸರಾದಲ್ಲಿ …

Read More »

RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು

ಬೆಳಗಾವಿ : ಸದಾ ಒಂದಿಲ್ಲೊಂದು ಕರ್ಮಕಾಂಡದ ಮೂಲಕ ಸುದ್ದಿಯಲ್ಲಿರುವ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಈ ಬಾರಿ ಮೂರು ವರ್ಷಗಳಲ್ಲಿ  ನಾಲ್ವರು ಲಪಂಗ ಸಿಬ್ಬಂದಿಗಳು ಸೇರಿ PF, NPS ಗಳಲ್ಲಿ ಲಕ್ಷಾಂತರ ರೂ ಭ್ರಷ್ಟಾಚಾರ ಮಾಡಿ ಜೈಲು ಸೇರುವ ಮೂಲಕ ಇತಿಹಾಸ ಪುಟದಲ್ಲಿ ರಾಚವಿ ಗೆ ಕಪ್ಪು ಚುಕ್ಕೆ ತಂದಿದ್ದಾರೆ. ALSO READ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಹಣಕಾಸು ಇಲಾಖೆಯ ಸಹಾಯಕ ರಿಜಿಸ್ಟ್ರಾರ್ 1.ಮುರಿಗೇಶ ಎಚ್ ಎಂ …

Read More »

ಬಿಡಿಸಿಸಿ ವಿವಿಧ ಹುದ್ದೆಗೆ ನೇಮಕಾತಿ ಶೀಘ್ರ: ಜೊಲ್ಲೆ ಸ್ಪಷ್ಟನೆ

ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಮಧ್ಯವರ್ತಿ ಬ್ಯಾಂಕಿನ (ಬಿಡಿಸಿಸಿ)ವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಸಹಕಾರ ಇಲಾಖೆ ಸೂಚನೆಯಂತೆ ಮುಂದೂಡಲ್ಪಟ್ಟಿದೆ, ನೇಮಕಾತಿ ನಿಮಯಗಳ ಪ್ರಕಾರ ಶೀಘ್ರವೇ ನೇಮಕಾತಿ ಪ್ರಾರಂಭವಾಗಲಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಈ ಹಿಂದೆ ಬ್ಯಾಂಕಿನ ವಿವಿಧ 104 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ.ಆದರೆ ಇದೀಗ ನಿಯಮಾನುಸಾರ 140 ಹುದ್ದೆಗಳಿಗೆ ನೇಮಕಾತಿ.ಹೊಸ ನೇಮಕಾತಿಯಲ್ಲಿ ಮಹಿಳಾ …

Read More »

ಭಾರಿ ಮಳೆ: ಸಿಡಿಲು ಬಡಿದು ಬೆಳಗಾವಿಯಲ್ಲಿ ರೈತ ಸಾವು

ಬೆಳಗಾವಿ: ಕಳೆದ ರಾತ್ರಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರ ಗ್ರಾಮದಲ್ಲಿ ಭಾರಿ ಮಳೆ ಹಾಗೂ ಸಿಡಿಲಿಗೆ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ರೈತರಾದ ಕೇದಾರಪ್ಪ ಬಸಪ್ಪ ಗುರ್ಲಹೊಸೂರ ಮತ್ತು ಭೀಮಪ್ಪ ಕೇದಾರಪ್ಪ ಗುರ್ಲಹೊಸೂರ ನಿನ್ನೆ ರಾತ್ರಿ ಲ್ಲಿ ಮೆಕ್ಕೆಜೋಳ ಮಷಿನ್ ಗೆ ಒಡೆಸಿದ್ದನ್ನು ರಾಶಿ ಕಾಯಲು ಹೋಗಿದ್ದರು. ಈ ವೇಳೆ ಅತಿಯಾದ ಭಾರಿ ಮಳೆಯಾಗಿ ಸಿಡಿಲು ಬಡಿದು ಸ್ಥಳದಲ್ಲಿಯೇ ಕೇದಾರಪ್ಪ ಬಸಪ್ಪ ಗುರ್ಲಹೊಸೂರ (47) ಎಂಬುವರು ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ …

Read More »

ಚಾಕುವಿನಿಂದ ಇರಿದು ಯುವಕನ ಕೊಲೆ: ಬೆಳಗಾವಿ ಪೊಲೀಸರಿಂದ ಇಬ್ಬರು ಅರೆಸ್ಟ್

ಬೆಳಗಾವಿ: ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟವೇಸದ ನಿವಾಸಿಗಳಾದ ಸಾಯಿನಾಥ ಶುಭಮ್ ರಾಮನಾಥ ಬಾಮನೆ (19) ಹಾಗೂ ವಿಠಲ …

Read More »

ಸಿದ್ದರಾಮಯ್ಯ ಮೂರ್ತಿ ತೆರವು; ಧಾರವಾಡದಲ್ಲಿ ಪ್ರತಿಭಟನಾಕಾರರ ಆಕ್ರೋಶ

ಧಾರವಾಡ: ಕಲಬುರಗಿಯ ಕೋರ್ಟ್  ವೃತ್ತದ ಬಳಿ ಪ್ರತಿಷ್ಠಾಪಿಸಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೂರ್ತಿ ತೆರವುಗೊಳಿಸಿದ್ದನ್ನು ವಿರೋಧಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸಿದ್ದರಾಮಯ್ಯ ಅವರು ಅಹಿಂದ ಹಾಗೂ ಹಾಲುಮತದ ನಾಯಕರು. ಸಿದ್ದರಾಮಯ್ಯ ಅವರ ಶಕ್ತಿ ಏನೆಂಬುದು ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ಹೈಕಮಾಂಡ್‌ಗೆ ಗೊತ್ತಿದೆ. ಜನನಾಯಕರಾಗಿರುವ ಸಿದ್ದರಾಮಯ್ಯ ಅವರ ಮೂರ್ತಿಯನ್ನು …

Read More »

ಬಿಡದಿ ಟೌನ್‌ಶಿಪ್ ವಿರುದ್ಧ ಮುಂದುವರಿದ ಹೋರಾಟ – ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತರು

ರಾಮನಗರ: ಬಿಡದಿ ಟೌನ್‌ಶಿಪ್  ವಿರುದ್ಧ ರೈತರ ಹೋರಾಟ ಮುಂದುವರಿದಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬಿಡದಿ- ಹಾರೋಹಳ್ಳಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತರು, ರಸ್ತೆ ಮಧ್ಯೆ ಎತ್ತಿನ ಗಾಡಿ, ಟ್ರಾಕ್ಟರ್ ನಿಲ್ಲಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊರಕೆ ಹಿಡಿದು ಕುಳಿತ ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದರು. ಕೂಡಲೇ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು. ಸರ್ಕಾರ ರಚನೆ ಮಾಡಿದ ಸಮಿತಿ ಕಾರ್ಯಾರಂಭ …

Read More »

ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು

ಕೊಪ್ಪಳ: ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲಿಯೇ ವೃದ್ಧೆ ಮೃತಪಟ್ಟಿರುವ ಘಟನೆ ಕೊಪ್ಪಳದ ಬಿ.ಟಿ ಪಾಟೀಲ್ ನಗರದಲ್ಲಿ ನಡೆದಿದೆ. ನಜಮುನಿಸಾ ಬೇಗಂ (91) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗ್‌ಂ ಮನೆ ಮುಂದೆ ನಿಂತುಕೊಂಡಿದ್ದರು. ಈ ವೇಳೆ ನಜಮುನಿಸಾ ಬೇಗಂ ಮೇಲೆ ಕೋತಿ ದಾಳಿ ನಡೆಸಿ ತಳ್ಳಿದೆ. ಈ ಪರಿಣಾಮ ನಜಮುನಿಸಾ ಬೇಗಂ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಜಮುನಿಸಾ ಬೇಗಂ ಅವರನ್ನು ಎಬ್ಬಿಸಲು ಬಂದ ಮಹಿಳೆಯ ಮೇಲೂ ಕೋತಿ ದಾಳಿ …

Read More »

ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದರ್ಥ: ಶಿವಲಿಂಗೇಗೌಡ ಸ್ಪಷ್ಟನೆ

ಹಾಸನ: ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದು ಅರ್ಥ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಜಾ ಸೇವಾ  ಆಂದೋಲನ ಸಭೆಯಲ್ಲಿ ಮಾತಿನ ಭರದಲ್ಲಿ ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ಧರ್ಮ ಎಂಬ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಕಲೇಶಪುರದಲ್ಲಿ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಒಬ್ಬ ವ್ಯಕ್ತಿ ಕೆಲಸ ಮಾಡಿಕೊಡಬೇಕಾದರೆ ಲಂಚ ಕೇಳುತ್ತಾರೆ ಎಂದು ಹೇಳಿದ್ದರು. ಕಾನೂನಿನಲ್ಲಿ ಅವಕಾಶ ಇಲ್ಲ, …

Read More »