Breaking News

Yearly Archives: 2026

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ  ನಡೆದಿದೆ. ಜಿಲ್ಲೆಯ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತ ಯುವಕನನ್ನ ರಾಕೇಶ್ (20) ಎಂದು ಗುರುತಿಸಲಾಗಿದೆ. ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್, ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ. ಭಾನುವಾರ ಸಂಜೆ ಆರಂಭಗೊAಡಿದ್ದ ಗಣೇಶ ವಿಸರ್ಜನಾ ಮೆರವಣಿಗೆ ತಡರಾತ್ರಿ …

Read More »

ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿರೈತ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಗಶಾಮಣ್ಣ (60) ಮೃತ ದುರ್ದೈವಿ. ರಂಗಶಾಮಣ್ಣ ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ರಂಗಶಾಮಣ್ಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ …

Read More »

​ಹಕ್ಕುಪತ್ರಕ್ಕಾಗಿ ಬೆಂಗಳೂರಿಗೆ 550 ಕಿ.ಮೀ ಪಾದಯಾತ್ರೆ ಆರಂಭಿಸಿದ ಬಾಗಲಕೋಟೆಯ ಗ್ರಾಮಸ್ಥರು

ಬಾಗಲಕೋಟೆ: ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ನಿರಂತರ ನಿರ್ಲಕ್ಷ್ಯಕ್ಕೆ ಬೇಸತ್ತ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೊಣ್ಣೂರು ಮಡ್ಡಿ ಪ್ಲಾಟ್‌ನ ನೂರಾರು ಗ್ರಾಮಸ್ಥರು ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ರಾಜಧಾನಿ ಬೆಂಗಳೂರಿಗೆ ಬರೋಬ್ಬರಿ 550 ಕಿಲೋಮೀಟರ್ ಸುದೀರ್ಘ ಪಾದಯಾತ್ರೆ ಆರಂಭಿಸಿದ್ದಾರೆ. ಕಳೆದ 30 ವರ್ಷಗಳಿಂದ ಸೂರು ಮತ್ತು ಹಕ್ಕುಪತ್ರಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಮಟ್ಟದಲ್ಲಿ ಯಾವುದೇ ನ್ಯಾಯ ಸಿಗದ ಹಿನ್ನೆಲೆಯಲ್ಲಿ, ಅಂತಿಮವಾಗಿ ಮುಖ್ಯಮಂತ್ರಿಗಳ ಮೊರೆ ಹೋಗಲು ಗ್ರಾಮಸ್ಥರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. …

Read More »

ಯುಪಿಎ ರಚಿಸಿದ ಗಾಡ್ಗೀಳ್ ವರದಿಯೇ ಇಂದಿನ ಸಮಸ್ಯೆಗೆ ಮೂಲ: ಅಶೋಕ್ ವಾಗ್ದಾಳಿ

ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ವಿಚಾರದಲ್ಲಿ ಎದುರಾಗಿರುವ ಪ್ರಸ್ತುತ ಬಿಕ್ಕಟ್ಟಿಗೆ ಅಂದಿನ ಯುಪಿಎ ಸರ್ಕಾರ  ರಚಿಸಿದ ಮಾಧವ ಗಾಡ್ಗೀಳ್ ವರದಿಯೇ ಮೂಲ ಕಾರಣ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕಸ್ತೂರಿ ರಂಗನ್ ವರದಿ ಕುರಿತು ವಿಧಾನಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವರದಿಯ ಪರಿಣಾಮಗಳ ಕುರಿತು ಕಳವಳ ವ್ಯಕ್ತಪಡಿಸುವುದರ ಜತೆಗೆ ರಾಜ್ಯ ಸರ್ಕಾರಕ್ಕೆ ಮೂರು ಪ್ರಮುಖ ಸಲಹೆಗಳನ್ನು ನೀಡಿದರು. ತಾಪಿ ನದಿಯಿಂದ …

Read More »

ಹನೂರು ತಾಲೂಕಲ್ಲಿ ಮಳೆ ಆರ್ಭಟ; ಮನೆ, ಬೃಹತ್‌ ಮರ, ವಿದ್ಯುತ್‌ ಕಂಬಗಳು ಕುಸಿತ – ಕೊಚ್ಚಿಹೋದ ಚೆಕ್‌ ಡ್ಯಾಂ

ಚಾಮರಾಜನಗರ: ಹನೂರು  ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ಲಾಜರ್‌ ದೊಡ್ಡಿಯಲ್ಲಿ ಚೆಕ್‌ ಡ್ಯಾಂ ಕೊಚ್ಚಿ ಹೋಗಿದೆ. ಸುಮಾರು 12 ವರ್ಷಗಳ ಹಿಂದೆ ಚೆಕ್ ಡ್ಯಾಂ ಕಟ್ಟಲಾಗಿತ್ತು. ನೀರಿನಲ್ಲಿ ರಭಸಕ್ಕೆ ಚೆಕ್ ಡ್ಯಾಂ ಅಳವಡಿಸಿದ್ದ ಕಲ್ಲುಗಳು ಕುಸಿತವಾಗಿವೆ. ಈ ಭಾಗದ ಜನರ ನೀರಾವರಿಗೆ ಅನುಕೂಲವಾಗಿತ್ತು. ಹೊಸ ಚೆಕ್ ಡ್ಯಾಂ ನಿರ್ಮಾಣ ಮಾಡಿಕೊಡುವಂತೆ ಸ್ಥಳೀಯರ ಮನವಿ ಮಾಡಿದ್ದಾರೆ. ಮನೆ ಕುಸಿತ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ …

Read More »

`ವಂದೇ ಮಾತರಂ’ಗೆ ಕತ್ತರಿ; ಕಾಂಗ್ರೆಸ್ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ: ಪ್ರಹ್ಲಾದ್ ಜೋಶಿ

ನವದೆಹಲಿ: `ವಂದೇ ಮಾತರಂ’  ಗೀತೆಯನ್ನು ಎರಡೇ ಚರಣಕ್ಕೆ ಕತ್ತರಿಸಿದ ರಾಜ್ಯ ಕಾಂಗ್ರೆಸ್  ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ ಮೊಳಗಿಸಲಿದ್ದೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ) ಎಚ್ಚರಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶವಿರೋಧಿ ಕ್ರೂರ ಮನಸ್ಥಿತಿ ಹೊಂದಿದ್ದು, ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದೆ. ಸರ್ಕಾರ ಕಾನೂನು ಬಾಹಿರವಾಗಿ ಮನಸೋ ಇಚ್ಛೆ ಫರ್ಮಾನು ಹೊರಡಿಸುತ್ತಿದೆ. ವಿಧಾನಸೌಧದಲ್ಲಿ `ವಂದೇ ಮಾತರಂ’ ಗೀತೆಯನ್ನು ಕಾನೂನು …

Read More »

ಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿ

ಯರಗಟ್ಟಿ: ಪ್ರಜಾಸೇವಾ ಆಂದೋಲನ ಸಭೆಯನ್ನು ಮೊದಲ ಬಾರಿಗೆ ಯರಗಟ್ಟಿಯಲ್ಲಿ ಆಯೋಜಿಸಲಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ರಾಜ್ಯದ ಎಲ್ಲ ತಾಲೂಕುಗಳಲ್ಲೂ ಇಂತಹ ಸಭೆಗಳನ್ನು ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬೆಳಗಾವಿಯ ಯರಗಟ್ಟಿಯಲ್ಲಿ ಮೊದಲ ಜನಸ್ಪಂದನ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಮೂರು ತಿಂಗಳೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಈ ಕಾರ್ಯಕ್ರಮವನ್ನು ವಿಸ್ತರಿಸಿ ಸಾರ್ವಜನಿಕರಿಗೆ ಶೀಘ್ರವಾಗಿ …

Read More »

ರೂರ್ಕೆಲಾ ಸರ್ಕ್ಯೂಟ್‌ ಸರ್ಕಾರಿ ಗೆಸ್ಟ್‌ಹೌಸ್‌ನಲ್ಲಿ ನೀಲಿ ತಾರೆಗೆ ರಾಜಾತಿಥ್ಯ – ವಿಡಿಯೋ ವೈರಲ್‌ ಬೆನ್ನಲ್ಲೇ ತನಿಖೆ ಶುರು

ಭುವನೇಶ್ವರ: ಒಡಿಶಾದ ರೂರ್ಕೆಲಾ ಸರ್ಕ್ಯೂಟ್‌ ಹೌಸ್‌ನಲ್ಲಿ (ಸರ್ಕಾರಿ ಅತಿಥಿ ಗೃಹದಲ್ಲಿ) ನೀಲಿ ಚಿತ್ರ ತಾರೆ ಟೀನಾ ನಂದಿ ವಾಸ್ತವ್ಯ ಹೂಡಿದ್ದ ವಿಡಿಯೋವೊಂದು ಸೋಷಿಯಲ್‌ ಹರಿದಾಡುತ್ತಿದೆ. ಇದು ವಿವಾದಕ್ಕೂ ಕಾರಣವಾಗಿದೆ. ಕಳೆದ ವರ್ಷದ ಡಿಸೆಂಬರ್‌ 1ರಂದು ರೂರ್ಕೆಲಾಕ್ಕೆ ಭೇಟಿ ನೀಡಿದ್ದ ವೇಳೆ ಸರ್ಕ್ಯೂಟ್‌ ಹೌಸ್‌ನಲ್ಲಿ ತಂಗಿದ್ದ ಟೀನಾ, ತಮಗೆ ವಿಶೇಷ ಆತಿಥ್ಯ ದೊರೆತಿತ್ತು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದರು. ಇದೀಗ ಸರ್ಕಾರಿ ವಸತಿ ಸೌಲಭ್ಯವನ್ನ ಅವರಿಗೆ ಹೇಗೆ ಒದಗಿಸಲಾಯಿತು? ನಿಗದಿತ ನಿಯಮಗಳನ್ನ ಪಾಲಿಸಲಾಗಿತ್ತೇ …

Read More »

ಪರೀಕ್ಷೆಯಲ್ಲಿ ChatGPT ಬಳಕೆ – ಪ್ರೊಫೆಸರ್‌ಗೆ ಸಿಕ್ಕಿಬಿದ್ದ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಬಳಸಿ ChatGPT (ಚಾಟ್‌ ಜಿಪಿಟಿ) ಮೂಲಕ ಉತ್ತರ ಪಡೆಯಲು ಯತ್ನಿಸಿದ್ದ ಆರೋಪದ ಬೆನ್ನಲ್ಲೇ ಐಐಟಿ ಬಾಂಬೆಯ ದ್ವಿತೀಯ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಹಿಲ್ ವಕೋಡೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇದಕ್ಕೆ ಐಐಟಿ ಬಾಂಬೆ ಪ್ರತಿಕ್ರಿಯಿಸಿದ್ದು, ಎನರ್ಜಿ ಸೈನ್ಸ್‌ & ಎಂಜಿನಿಯರಿಂಗ್‌  ವಿಭಾಗದ ವಿದ್ಯಾರ್ಥಿ ಪರೀಕ್ಷೆ ವೇಳೆ ಮೊಬೈಲ್‌ ಬಳಸಿ ಪ್ರಶ್ನೆಪತ್ರಿಕೆಯನ್ನ AI ಗೆ ಅಪ್ಲೋಡ್‌ ಮಾಡಿ ಮಾಡಿ ಉತ್ತರ ಪಡೆಯಲು …

Read More »

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

ದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) ಕೊಲೆಯಾದ ಮಹಿಳೆ. ನಾಗರಾಜ್ (36) ಕೊಲೆ ಆರೋಪಿಯಾಗಿದ್ದಾನೆ. ಈತ ಮಹಿಳೆಯೊಂದಿಗೆ ಹಲವು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಮಹಿಳೆಯನ್ನು ಕೊಲೆಗೈದು ಆರೋಪಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಮಹಿಳೆಯ ಕಿರುಚಾಟ ಕೇಳಿ ಬಂದ ಜನ ಆತನನ್ನು ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಾಕಿದ್ದರು. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆಗೆ …

Read More »