Breaking News

Yearly Archives: 2026

ನಿವೃತ್ತ ಸುಭೇದಾರ ಶಿವಾಜೀರಾವ್ ಯಲ್ಲಪ್ಪ ಪಾಟೀಲ್ ನಿಧನ

ಬೆಳಗಾವಿ ತಾಲೂಕಿನ ಮುಚ್ಚಂಡಿ ಮೂಲದ ಸದಸ್ಯ ವಡಗಾಂವನ ರಹಿವಾಸಿಯಾಗಿದ್ದ ನಿವೃತ್ತ ಸುಭೇದಾರ ಶಿವಾಜೀರಾವ್ ಯಲ್ಲಪ್ಪ ಪಾಟೀಲ್ (67) ಅವರು ಇಂದು ನಿಧನರಾದರು. ಮೃತರು ಸಹೋದರ, ಸಹೋದರಿ, ಪತ್ನಿ, ಸುಪುತ್ರ, ಸುಪುತ್ರಿ, ಅಳಿಯ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಬುಧವಾರ ಮಾರ್ಚ್ 11 ರಂದು ಬೆಳಿಗ್ಗೆ 11 ಗಂಟೆಗೆ ವಡಗಾಂವ ಸ್ಮಶಾನಭೂಮಿಯಲ್ಲಿ ನಡೆಯಲಿದೆ. ಗುರುವಾರ 12 ರಂದು ಬೆಳಿಗ್ಗೆ 8 ಗಂಟೆಗೆ ಅಸ್ಥಿ ವಿಸರ್ಜನೆ ನಡೆಯಲಿದೆ.

Read More »

ಅಗಸಗೆಯಲ್ಲಿ ಸಡಗರದ ವಿಶ್ವ ಮಹಿಳಾ ದಿನಾಚರಣೆ: ಮಹಿಳೆಯರಿಗೆ ಸೀರೆ ವಿತರಿಸಿ ಸಂಭ್ರಮ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಳಗಾವಿ ಜಿಲ್ಲೆಯ ಅಗಸಗೆ ಗ್ರಾಮದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವರಾದ ಸತೀಶ್ ಜಾರಕೀಹೊಳಿ, ಸಂಸದೆ ಪ್ರಿಯಾಂಕಾ ಜಾರಕೀಹೊಳಿ ಮತ್ತು ಯುವ ನಾಯಕ ರಾಹುಲ್ ಜಾರಕೀಹೊಳಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಯಿತು. ಬೆಳಗಾವಿ ಜಿಲ್ಲೆಯ ಅಗಸಗೆ ಗ್ರಾಮದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವು ಅತ್ಯಂತ ಉತ್ಸಾಹದಿಂದ ನೆರವೇರಿತು. ರಾಜ್ಯ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ …

Read More »

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ, ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಸಂಭ್ರಮ

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸರ್ವೋದಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹಾಗೂ ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್” ಎಂದು …

Read More »

ಖೋಖೋ ಆಟದಿಂದ ಭವಿಷ್ಯ ನಿರ್ಮಾಣ: ಡಾ. ಜಗದೀಶ ಚಿತ್ತರಗಿ

ಬಾಗಲಕೋಟೆ : ಖೋಖೋ ಕ್ರೀಡೆಯಾಗಿರದೇ ಜೀವನ ಶೈಲಿಯಾಗಿದ್ದು ಇದರಲ್ಲಿ ತೊಡಗಿಸಿಕೊಳ್ಳವುದರಿಂದ ಆರೋಗ್ಯದ ಜೊತೆಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕ ಎಂದು ಕರ್ನಾಟಕ ರಾಜ್ಯದ ಖೋಖೋ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಧಾರಾವಾಡದ ಎಕ್ಸಲೆಂಟ್ ನೀಟ್ ಅಕಾಡೆಮಿ ಅಧಿಕಾರಿಗಳಾದÀ ಡಾ. ಜಗದೀಶ ಚಿತ್ತರಗಿ ಹೇಳಿದರು. ಬಾಗಲಕೋಟ ವಿಶ್ವವಿದ್ಯಾಲಯ ಹಾಗೂ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ಏಕವಲಯ ಮಹಿಳೆಯರ ಖೋ – ಖೋ ಪಂದ್ಯಾವಳಿಗಳು ಹಾಗೂ ವಿಶ್ವವಿದ್ಯಾಲಯ ತಂಡದ …

Read More »

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ ಮಂಡಳಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಾಲಯವು ತನ್ನ ಮಾರ್ಗಸೂಚಿಗಳ ಅಡಿಯಲ್ಲಿ ನಿಷ್ಕ್ರಿಯ ದಯಾಮರಣವನ್ನು ಅನುಮತಿಸಿದ ಮೊದಲ ಪ್ರಕರಣ ಇದಾಗಿದೆ. ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಹರೀಶ್ ರಾಣಾ  2013 ರಲ್ಲಿ ಪೇಯಿಂಗ್ ಗೆಸ್ಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು …

Read More »

ಹರ್ಷ ಸಕ್ಕರೆ ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ, ಕೆಎಲ್ಇ ವಿಶ್ವವಿದ್ಯಾಲಯ ಮತ್ತು ಡಾ.ಪ್ರಭಾಕರ ಕೊರೆ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಮಿಕರು ಮತ್ತು ನೌಕರರ ಆರೋಗ್ಯದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಈ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರಕ್ಕೆ ಮೃಣಾಲ ಶುಗರ್ಸ್ ಚೇರಮನ್ ಮೃಣಾಲ ಹೆಬ್ಬಾಳಕರ್ ಚಾಲನೆ ನೀಡಿದರು. ಶಿಬಿರದಲ್ಲಿ ವೈದ್ಯಕೀಯ ತಜ್ಞರ ತಂಡ …

Read More »

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣ, ಬೆಳಗಾವಿ ಇಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸಂದೀಪ್ ಪಾಟೀಲ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, …

Read More »

ಹನಿಟ್ರ್ಯಾಪ್  ನಡೆಸುತ್ತಿದ್ದ ಫ್ಯಾಶನ್ ಡಿಸೈನರ್ ಬೆಳಗಾವಿ ಪೊಲೀಸರ ಬಲೆಗೆ

ಬೆಳಗಾವಿ : ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್  ನಡೆಸುತ್ತಿದ್ದ ಫ್ಯಾಶನ್ ಡಿಸೈನರ್ ಮಹಿಳೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಬಂಧಿತ ಆರೋಪಿಯಾಗಿದ್ದು, ಆಕೆಯ ಸ್ನೇಹಿತ ಶಿವಾನಂದ ಮಠಪತಿ ಪರಾರಿಯಾಗಿದ್ದಾನೆ. ಶಿವಾನಂದನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿಯಾಗಿದ್ದು ಶ್ರೀಮಂತ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ದೀಪಾಗೆ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಬೆಳೆಸಿ …

Read More »

ರಾಣಿ ಚನ್ನಮ್ಮಾಜಿ ಐಕ್ಯ ಸ್ಥಳದಲ್ಲಿರುವ ರಾಕ್ ಗಾರ್ಡನ್ ಲೋಕಾರ್ಪಣೆ ಮಲತಾಯಿ ಧೋರಣೆ

ಬೈಲಹೊಂಗಲ: ವೀರವನಿತೆ ರಾಣಿ ಚನ್ನಮ್ಮಾಜಿ ಐಕ್ಯ ಸ್ಥಳದಲ್ಲಿರುವ ರಾಕ್ ಗಾರ್ಡನ್ ಯಾರಿಗೂ ಹೇಳದೆ ಉದ್ಘಾಟನೆ ಮಾಡಿ, ಶಾಸಕರು ಮಲತಾಯಿ ಧೋರಣೆ ಅನುಸರಿಸಿದ್ದಾರೆ. ಅದ್ದೂರಿ ಕಾರ್ಯಕ್ರಮದೊಂದಿಗೆ ಮುಖ್ಯಮಂತ್ರಿಗಳನ್ನು ಕರೆಸಿ ರಾಕ್ ಗಾರ್ಡನ್ ಉದ್ಘಾಟಿಸಬೇಕು,  ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು. ರಾಕ್ ಗಾರ್ಡನ್ ಉದ್ಘಾಟನೆ ವೇಳೆ ರಾಣಿ ಚನ್ನಮ್ಮಾಜಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ಕನ್ನಡ, ರೈತ ಪರ ಸಂಘಟನೆ ಹಾಗೂ ಹಲವು ಸಂಘ ಸಂಸ್ಥೆಗಳು, …

Read More »

ಸರ್ಕಾರಿ ಕಾಲೇಜಿನಲ್ಲಿ ಅನುದಾನ ದುರ್ಬಳಕೆ: ವಿದ್ಯಾರ್ಥಿಗಳ ಪ್ರತಿಭಟನೆ

ಕಿತ್ತೂರು: ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಸರ್ಕಾರದಿಂದ ಬರುವ ಅನುದಾನ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಕೆಲ ಬೋಧಕರು ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಿದ್ದಾರೆ. ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಪ್ರಾಂಶುಪಾಲರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನಾ ನಡೆದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಶೀಘ್ರ ಸಿಡಿಪಿ ಸಭೆ …

Read More »