Breaking News

Yearly Archives: 2026

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ. ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು ಆರೋಪಿಸಿ ಒಂದು ಬ್ಯಾಚ್ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಜೆ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ. ಮುಸ್ಲಿಂ …

Read More »

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

ಬೆಂಗಳೂರು: ಡಿ.ಕೆ.ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ ಶಾಸಕರಿಗೆ ಭೋಜನಕೂಟ  ಆಯೋಜಿಸಿದ್ದರು. ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗೊಂದಲದ ನಡುವೆ ಡಿಸಿಎಂ ಡಿನ್ನರ್ ಕೂಟ ಸಾಕಷ್ಟು ಕುತೂಹಲ ಮೂಡಿಸಿದೆ ಎನ್ನಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಶಾಸಕರು ಇಂದಿನ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡೋ ಬಗ್ಗೆ ಡಿಕೆಶಿ ಸುಳಿವು ಕೊಟ್ಟಿದ್ದರು. ಬಿಜೆಪಿ …

Read More »

15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ : ಮಧು ಬಂಗಾರಪ್ಪ

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸೋಮವಾರ ವಿಧಾನಪರಿಷತ್ತಿನ ಕಲಾಪದ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್.ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದ …

Read More »

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ

ಬೆಳಗಾವಿ : ಕಾರು ಮತ್ತು ಬೊಲೆರೊ ನಡುವೆ ಭೀಕರ ಅಪಘಾತ ಸಂಭವಿಸಿರುವ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಕೆಂಗಾನೂರ- ಗರ್ಜೂರು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿರುವವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣವು ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತದ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ …

Read More »

ಫೇಸ್ಬುಕ್ ಪರಿಚಯದಿಂದ ಹನಿಟ್ರ್ಯಾಪ್: ಶ್ರೀಮಂತರನ್ನೇ ಟಾರ್ಗೆಟ್ ಮಾಡಿದ ಮಹಿಳೆ ಬೆಳಗಾವಿಯಲ್ಲಿ ಬಂಧನ

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮೂಲಕ ಮೋಸ ಮಾಡುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು, ನಂತರ ಲಾಡ್ಜ್ಗೆ ಕರೆಸಿ ಹಣ, ಚಿನ್ನ ಸೇರಿದಂತೆ ಅಮೂಲ್ಯ ವಸ್ತುಗಳನ್ನು ದೋಚುತ್ತಿದ್ದ ಆರೋಪ ಆಕೆಯ ಮೇಲೆ ಇದೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದೆ. ಫ್ಯಾಶನ್ ಡಿಸೈನರ್ ಆಗಿದ್ದ …

Read More »

ಬೆಳಗಾವಿ: ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ 97.49 ಲಕ್ಷ ರೂ. ಕಾಣಿಕೆ ಸಂಗ್ರಹ

ಬೆಳಗಾವಿ: ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹಂಡಿಯಿಂದ 97.49 ಲಕ್ಷ ರೂ. ಮೌಲ್ಯದ ಕಾಣಿಕೆ ಸಂಗ್ರಹಗೊಂಡಿದೆ. ಮಾರ್ಚ್ 6 ಮತ್ತು 7ರಂದು ನಡೆದ ಎಣಿಕೆಯಲ್ಲಿ 94,06,596 ರೂ. ನಗದು, 1,50,400 ರೂ. ಮೌಲ್ಯದ ಚಿನ್ನಾಭರಣ ಹಾಗೂ 1,92,860 ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಹಂಡಿ ಎಣಿಕೆ ಪ್ರಕ್ರಿಯೆ ಯಾದಿರಾಯ್ ಎಂಬ ದೇವಸ್ಥಾನದ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ, ಬೆಳಗಾವಿ …

Read More »

ಗುತ್ತಿಗೆದಾರರ ಬಾಕಿ ಬಿಲ್‌ ಒಂದೇ ಬಾರಿ ಪಾವತಿ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಒಂದೇ ಬಾರಿ ಪಾವತಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ತಿಳಿಸಿದ್ದಾರೆ. ಈ ವಿಷಯವನ್ನು ಮುಖ್ಯಮಂತ್ರಿಯಾಗಿರುವ ಹಾಗೂ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಸಿದ್ದರಾಮಯ್ಯ ಅವರು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಮುಖ್ಯಮಂತ್ರಿ ಸ್ವತಃ ಹಣಕಾಸು ಇಲಾಖೆಯನ್ನೂ ನೋಡಿಕೊಳ್ಳುತ್ತಿರುವುದರಿಂದ ಈ ವಿಷಯದ ಕುರಿತು ಸಭೆ ಕರೆದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು. ಗುತ್ತಿಗೆದಾರರ ಬಾಕಿ …

Read More »

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ ಅವರ ಗೀತೆಗಳ ಸಮೂಹ ಗಾಯನಕ್ಕೆ ಸಂಬಂಧಿಸಿ ಎರಡು ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತರಬೇತಿಗಾಗಿ ಕೆಲವು ಸರ್ಕಾರಿ ಶಾಲೆ ಆಯ್ಕೆ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಹಾಗೂ ಎಂಎನ್‌ಆರ್‌ಎಸ್‌ ಬಿಇಡಿ …

Read More »

ಬೆಳಗಾವಿ: ₹75 ಕೋಟಿ ವೆಚ್ಚದ ಪ್ರಸ್ತಾವಕ್ಕೆ ಅನುಮೋದನೆ

ಬೆಳಗಾವಿ: ನಗರದಲ್ಲಿ ‘ಸಿಟೀಸ್‌ 2.0’ ಯೋಜನೆ ಅನುಷ್ಠಾನಕ್ಕಾಗಿ ಮಾರ್ಪಡಿಸಿದ ಘಟಕಗಳು ಹಾಗೂ ₹75 ಕೋಟಿ ವೆಚ್ಚದ ಪ್ರಸ್ತಾವಕ್ಕೆ ಅನುಮೋದನೆ ನೀಡುವ ನಿರ್ಣಯವನ್ನು ಇಲ್ಲಿ ಸೋಮವಾರ ನಡೆದ ಪಾಲಿಕೆ ಪರಿಷತ್‌ ಸಭೆಯಲ್ಲಿ ಕೈಗೊಳ್ಳಲಾಯಿತು. ಯೋಜನೆ ಅನುಷ್ಠಾನಕ್ಕೆ ಬರುವ ಯಾವುದೇ ಕಾನೂನು ಅಡೆತಡೆಗಳನ್ನು ಬೆಳಗಾವಿ ಸ್ಮಾರ್ಟ್‌ಸಿಟಿ ಯೋಜನೆ ಮೂಲಕ ಪರಿಹರಿಸಿಕೊಳ್ಳಲು ನಿರ್ಧರಿಸಲಾಯಿತು. ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕಿ ಕವಿತಾ ವಾರಂಗಲ್‌, ‘ಸಿಟೀಸ್ 2.0 ಅನುಷ್ಠಾನದಲ್ಲಿ ಕೆಲವು ಅಂತರಗಳನ್ನು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಗುರುತಿಸಿದೆ. …

Read More »

ಬೆಳಗಾವಿ ಮಹಾನಗರ ಪಾಲಿಕೆಗೆ 170 ಕೋಟಿ ರೂ. ನೀಡಲಾಗಿದೆ : ಸಚಿವ ಬಿ.ಎಸ್‌‍.ಸುರೇಶ್‌

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆಗೆ 170 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್‌‍.ಸುರೇಶ್‌ ವಿಧಾನಪರಿಷತ್‌ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಳವಾರ್‌ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆಳಗಾವಿ ನಗರದ ಬಸವನಕುಡುಚಿಯ ದೇವರಾಜ ಅರಸು ಕೆ.ಎಚ್‌.ಬಿ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಯುಜಿಡಿ, ವಿದ್ಯುತ್‌ ಸಂಪರ್ಕ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು 15 ಕೋಟಿ ರೂ. ಮೊತ್ತದ ಅಂದಾಜು ಪಟ್ಟಿಯನ್ನು ಪಾಲಿಕೆಯಿಂದ ಸಿದ್ಧಪಡಿಸಿದ್ದು, ಇದು ಪ್ರತ್ಯೇಕ …

Read More »