ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ಗೆ ತಂದೆಯ ತಿಥಿ ಕಾರ್ಯದಲ್ಲಿ ಭಾಗವಹಿಸಲು ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ನ್ಯಾ. ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿದ್ದು, ಇಪ್ಪತ್ತು ದಿನಗಳ ಕಾಲ ಪ್ರದೋಷ್ ತಂದೆಯ ತಿಥಿ ಕಾರ್ಯದಲ್ಲಿ ಭಾಗವಹಿಸಲು ಅವಕಾಶ ಕೊಡುವಂತೆ ಕೋರಿದ್ದರು. ಇದಕ್ಕೆ ದರ್ಶನ್ ಪರ ವಕೀಲರು, ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅವಕಾಶ ನೀಡದಂತೆ ಮನವಿ ಮಾಡಿದ್ದರು. ಇಂದು ಎರಡು ಕಡೆ ವಾದ-ಪ್ರತಿವಾದ …
Read More »Yearly Archives: 2026
ಚಿಂತಾಮಣಿಯಲ್ಲಿ 3 ತಿಂಗಳ ಗರ್ಭಿಣಿ ಆತ್ಮಹತ್ಯೆ – ಪತಿ ಬಂಧನ
ಚಿಂತಾಮಣಿ: ಮದುವೆಯಾಗಿ ಕೇವಲ 9 ತಿಂಗಳಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು 3 ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ (24) ಮೃತ ಮಹಿಳೆ. ಮೂರು ತಿಂಗಳ ಗರ್ಭಿಣಿಯಾಗಿದ್ದ ಪ್ರತಿಭಾ ಸಾವಿನ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರಿನ ಕೆ.ಆರ್.ಪುರಂ ತಾಲೂಕಿನ ಬಿದರಹಳ್ಳಿ ಗ್ರಾಮದ ಪ್ರತಿಭಾ ಅವರನ್ನು ನಾಯನಹಳ್ಳಿ ಗ್ರಾಮದ ಬಚ್ಚನ್ನಗಾರಿ ಕೃಷ್ಣಾರೆಡ್ಡಿ ಅವರ ಪುತ್ರ ರಘು ಎಂಬುವವರಿಗೆ …
Read More »2 ಕೋಟಿ ಲಂಚ ಕೇಳಿದ ಆರೋಪ ಕೇಸ್ – ಜ್ಞಾನೇಶ್ ಕುಮಾರ್ ವಿರುದ್ಧ ತನಿಖೆಗೆ ಕೇರಳ ಸರ್ಕಾರ ಆದೇಶ
ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಲಂಚದ ಆರೋಪಗಳ ತನಿಖೆಗೆ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಸುಮಾರು 20 ವರ್ಷಗಳ ಹಿಂದೆ ಕೇರಳದ ಸಾರ್ವಜನಿಕ ನಿರ್ಮಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಜ್ಞಾನೇಶ್ ಕುಮಾರ್ ರಸ್ತೆ ಯೋಜನೆ ಬಿಲ್ ಮಂಜೂರು ಮಾಡಲು 2 ಕೋಟಿ ಲಂಚ ಕೇಳಿದ ಆರೋಪ ಇದಾಗಿದೆ. 2 ಕೋಟಿ ರೂ. ಲಂಚಕ್ಕಾಗಿ 17 ಕೋಟಿ ಮೌಲ್ಯದ ಅನುಮೋದಿತ ಬಿಲ್ಗಳನ್ನು ತಡೆಹಿಡಿಯಲಾಗಿತ್ತು ಅಂತ ಕೊಲ್ಲಂ ಜಿಲ್ಲೆಯ ಗುತ್ತಿಗೆದಾರರಾದ …
Read More »ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್
ವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣವು 2024ರ ಅಂತ್ಯಕ್ಕೆ ಭೌತಿಕವಾಗಿ ಪೂರ್ಣಗೊಂಡಿದ್ದು, ಸರ್ವೋಚ್ಚ ನ್ಯಾಯಾಲಯದ ತಡೆಯಾಜ್ಞೆಯೂ ತೆರವಾಗಿದೆ. 2026ರ ಅ.7ರಂದು ಪರಿಸರ ಇಲಾಖೆಗೆ ಎನ್ಒಸಿ ಹಾಗೂ ಡಿಜಿಸಿಎ ವತಿಯಿಂದ ಲೈಸೆನ್ಸ್ ಪಡೆದುಕೊಳ್ಳಲು ಪ್ರಗತಿ ಪೋರ್ಟಲ್ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಪ್ರಯಾಣ ಆರಂಭಿಸಲು …
Read More »ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಬೆಂಗಳೂರು: ಕಳ್ಳತನಕ್ಕೆ ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕನೊಬ್ಬ ತಪ್ಪಿಸಿಕೊಳ್ಳಲು ಯುವತಿಯನ್ನೇ ನಡು ರಸ್ತೆಯಲ್ಲಿ ಎಳೆದಾಡಿ ಬೆದರಿಸಿರುವ ಘಟನೆ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನನ್ನನ್ನು ಹಿಡಿಯಲು ಬಂದರೆ ಯುವತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರಭುರಾಜ್ ಅಲಿಯಾಸ್ ರಾಜ್ ಬಂಧಿತ ಆರೋಪಿ. ಈತ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ನಾಲ್ಕು ದಿನಗಳ ಹಿಂದೆ …
Read More »ನಕಲಿ ಔಷಧಿ ದಂಧೆ ಪ್ರಕರಣ; ಆರೋಪಿ ವೀರೇಶ್ ಖಾತೆಯಲ್ಲಿದ್ದ 9 ಲಕ್ಷ ಫ್ರೀಜ್ ಮಾಡಿದ ಇಡಿ
ಬೆಂಗಳೂರು: ಬೆಂಗಳೂರಿನಲ್ಲಿ ಪತ್ತೆಯಾಗಿರುವ ನಕಲಿ ಔಷಧಿ ಜಾಲದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಸಂಬಂಧ ಇಸಿಐಆರ್ ದಾಖಲಿಸಿರುವ ಅಧಿಕಾರಿಗಳು, ಬೆಂಗಳೂರಿನ ಐದು ಕಡೆಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿ ವೀರೇಶ್ಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿರುವ ಇಡಿ ಅಧಿಕಾರಿಗಳು, ಖಾತೆಯಲ್ಲಿದ್ದ ಸುಮಾರು 9 ಲಕ್ಷ ಹಣವನ್ನು ಫ್ರೀಜ್ ಮಾಡಿದ್ದಾರೆ. ಜೊತೆಗೆ ಡಿಜಿಟಲ್ ಸಾಧನಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. …
Read More »ಬೇಕಾದ್ರೆ ಪಕ್ಷ ಬಿಟ್ಟು ಹೋಗಲಿ: ರಾಜಣ್ಣ, ರಾಜೇಂದ್ರ ವಿರುದ್ಧ ಬಾಲಕೃಷ್ಣ ಕೆಂಡಾಮಂಡಲ
ಚಿತ್ರದುರ್ಗ: ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಅವರ ಪುತ್ರ ರಾಜೇಂದ್ರ ವಿರುದ್ಧ ಸಚಿವ ಹೆಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದು, “ಪಕ್ಷದಲ್ಲೇ ಇದ್ದು ಅನ್ನ ತಿಂದು ದ್ರೋಹ ಬಗೆಯುವುದಾದರೆ ಪಕ್ಷ ಬಿಟ್ಟು ಹೋಗಲಿ” ಎಂದು ನೇರ ಸವಾಲೆಸೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ನಿಂದಾಗಿಯೇ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಬೇಕಾಯಿತು ಎಂದು ಕೆ.ಎನ್. ರಾಜಣ್ಣ ಹೇಳಿದ ಹೇಳಿಕೆಗೆ ಹಿರಿಯೂರು ತಾಲೂಕಿನ ಧರ್ಮಪುರದಲ್ಲಿ ಮಾಧ್ಯಮಗಳು …
Read More »ಆಸ್ತಿ ವಿವಾದಕ್ಕೆ ಮಹಿಳೆಯ ಶಿರಚ್ಛೇದನ – ಪತಿಯ ಅಣ್ಣಂದಿರಿಂದಲೇ ಹತ್ಯೆ
ಹೈದರಾಬಾದ್: ಕೃಷಿ ಭೂಮಿ ವಿವಾದದ ಹಿನ್ನೆಲೆಯಲ್ಲಿ 26 ವರ್ಷದ ಮಹಿಳೆಯನ್ನು ಪತಿಯ ಅಣ್ಣಂದಿರು ಶಿರಚ್ಛೇದನ ಮಾಡಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯ ಕೊಯಿಲ್ಕೊಂಡ ಮಂಡಲದ ಚಿಂತಲ್ ತಾಂಡಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕತ್ರಾವತ್ ಸುನೀತಾ (26) ಎಂದು ಗುರುತಿಸಲಾಗಿದೆ. ಸುಮಾರು 10 ವರ್ಷಗಳ ಹಿಂದೆ ಚಿಂತಲ್ ತಾಂಡಾದ ಕತ್ರಾವತ್ ಬಲರಾಮ್ ಎಂಬುವವರನ್ನು ಸುನೀತಾ ವಿವಾಹವಾಗಿದ್ದರು. ದಂಪತಿಗೆ ರಿಷಿಕಾ ಮತ್ತು ಶೈಲಜಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಬಲರಾಮ್ …
Read More »ಅಥಣಿಯಲ್ಲಿ ಬೀದಿ ನಾಯಿಗಳ ಪಾಲಾದ ನವಜಾತ ಶಿಶು!
ಚಿಕ್ಕೋಡಿ: ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಅಮಾನವೀಯ ಘಟನೆಯೊಂದು ಅಥಣಿ ಪಟ್ಟಣದ ಹೊರವಲಯದ ಕಾಗವಾಡ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ನವಜಾತ ಶಿಶುವೊಂದನ್ನು ರಸ್ತೆ ಪಕ್ಕದಲ್ಲಿ ಎಸೆದು ಹೋಗಿರುವ ಘಟನೆ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ರಸ್ತೆಯ ಪಕ್ಕದಲ್ಲಿ ಎಸೆದು ಹೋಗಿದ್ದ ನವಜಾತ ಶಿಶುವಿನ ದೇಹವನ್ನು ಬೀದಿ ನಾಯಿಗಳು ಎಳೆದಾಡಿ ತಿನ್ನುತ್ತಿದ್ದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಸ್ಥಳೀಯರಿಗೆ ಮಗುವಿನ ತಲೆ ಹಾಗೂ ಒಂದು ಕಾಲು ಪತ್ತೆಯಾಗಿವೆ. ಈ …
Read More »ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಕನಿಷ್ಠ 750 ರೂ. ಬೆಲೆ ಕೊಡಬೇಕು: ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಕನಿಷ್ಠ 750 ರೂ. ಆದರೂ ಬೆಲೆ ಕೊಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಿಎಂ ಡಿಕೆ ಶಿವಕುಮಾರ್ ಅವರನ್ನು ಆಗ್ರಹಿಸಿದ್ದಾರೆ. ಜೆಪಿ ಭವನದಲ್ಲಿ ಮಾತಾಡಿದ ಅವರು, ಈ ಸರ್ಕಾರದವರು 2500 ರೂ. ಕೊಡೋಕೆ 18 ಷರತ್ತು ಹಾಕಿದ್ದಾರೆ. ಇದಕ್ಕೆ ಇವರಿಗೆ ಪೆನ್ನು ಪೇಪರ್ ಕೊಡಬೇಕಾ? ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ವಿರುದ್ದ ಕುಮಾರಸ್ವಾಮಿ ಕಿಡಿಕಾರಿದರು. ರೈತರು, ಕಾರ್ಖಾನೆ …
Read More »
Laxmi News 24×7