ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಬೀದರ್ ಜನ್ರ ಪಾಲಿಗೆ ಇದ್ದು ಇಲ್ಲವಾಗಿದೆ. ಗೃಹಲಕ್ಷ್ಮಿ ಹಣದಲ್ಲೇ ಬದುಕಿರುವ ಬಡಪಾಯಿ ಮಹಿಳೆಯರಿಗೆ ಸರಿಯಾಗಿ ಹಣ ನೀಡದೇ ಸತ್ತವರ ಖಾತೆಗೆ 10 ಕೋಟಿ ರೂ. ಹಣ ನೀಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಹೌದು, ಹಣ ಬಿಡುಗಡೆ ವಿಳಂಬ ಸೇರಿ ತಾಂತ್ರಿಕ ಸಮಸ್ಯೆಗಳಿಂದ ಸದಾ ಚರ್ಚೆಗೆ ಬರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂಡು ಯಡವಟ್ಟು ಬಟಾಬಯಲಾಗಿದೆ. ಬೀದರ್ ಜಿಲ್ಲೆಯಲ್ಲಿ ಅಧಿಕಾರಿಗಳ ನಿಷ್ಕಾಳಜಿಯಿಂದ …
Read More »Yearly Archives: 2026
ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ
ದಾವಣಗೆರೆ: ತುಂಗಾಭದ್ರ ನದಿಗೆ ಹಾರಿ ಪ್ರೇಮಿಗಳು ಅತ್ಮಹತ್ಯೆಗೆ ಯತ್ನಿಸಿದ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ತುಂಗಾಭದ್ರ ಬ್ರಿಡ್ಜ್ ಮೇಲಿಂದ ದಾವಣಗೆರೆ ಮೂಲದ ಪ್ರೇಮಿಗಳು ನದಿಗೆ ಜಿಗಿದಿದ್ದಾರೆ. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದಿದ್ದರಿಂದ ಜೀವಕ್ಕೆ ಹಾನಿಯಾಗಿಲ್ಲ. ಮನೆಯಲ್ಲಿ ಇಬ್ಬರ ಮದುವೆಗೆ ಒಪ್ಪಿಗೆ ನೀಡದ ಹಿನ್ನಲೆ ಅತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು …
Read More »ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ
ನವದೆಹಲಿ: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳಿಂದ ದೇಶೀಯ ಗ್ರಾಹಕರನ್ನು ರಕ್ಷಿಸಲು ಸರ್ಕಾರವು ಕಾರ್ಯತಂತ್ರದ ಯೋಜನೆಯನ್ನು ಸಕ್ರಿಯಗೊಳಿಸಿದೆ. ಅಮೆರಿಕ, ಇಸ್ರೇಲ್ ಒಳಗೊಂಡ ಮಿಲಿಟರಿ ಕ್ರಮಗಳು ಮತ್ತು …
Read More »ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ
ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜಿಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ರ‍್ಕಾರ ನಿರಂತರ …
Read More »ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ ಪರಿಷತ್‌ನಲ್ಲಿ ಇಂದು ಸದ್ದು ಮಾಡಿತು. ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿಎಸ್.ಅರುಣ್ ಮಾತನಾಡಿ, ಕಾಂಗ್ರೆಸ್ ಭವನಕ್ಕೆ ಸರ್ಕಾರದ ಸಿಎ ಜಾಗ ಕೊಡಲಾಗಿದೆ. ಇದು ಹಗಲು ದರೋಡೆ. ದರ ಕಡಿಮೆ ಮಾಡಿ ಜಾಗ ಕೊಡಲಾಗಿದೆ. ರಾಜ್ಯದಲ್ಲಿ 40 ಕೋಟಿ ಮೌಲ್ಯದ ಜಾಗವನ್ನು 2 ಕೋಟಿ ಮೊತ್ತಕ್ಕೆ ಜಾಗ ಕೊಡಲಾಗಿದೆ. ಯಾವ ಆಧಾರದಲ್ಲಿ ಜಮೀನು ಕಡಿಮೆ …
Read More »ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್
ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ ಮಾಡಲು ಕ್ರಮವಹಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್ ಗುತ್ತೇದಾರ್ ಪ್ರಶ್ನೆ ಕೇಳಿದರು. ಕಲಬುರಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ತಿಂಡಿ ಕೊಡುತ್ತಿಲ್ಲ. ಕ್ವಾಲಿಟಿ ಊಟ ಸಿಗುತ್ತಿಲ್ಲ. ಕೊಡೋ ಊಟವೂ ಸರಿಯಾಗಿಲ್ಲ. ಈ ವ್ಯವಸ್ಥೆ ಸರಿ ಮಾಡಬೇಕು. ಇಂದಿರಾ ಕ್ಯಾಂಟೀನ್‌ನಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ …
Read More »ಚಿಕ್ಕೋಡಿ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಿನ ವಿದ್ಯಾರ್ಥಿನಿ ಹ್ಯಾಂಡಬಾಲ್ ನಲ್ಲಿ ಯುನಿವರ್ಸಿಟಿ ಬ್ಲೂ ಆಯ್ಕೆ
ಚಿಕ್ಕೋಡಿಯ ಕೆ. ಎಲ್. ಇ. ಇಂಜಿನೀಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿಧ್ಯಾರ್ಥಿನಿಯಾದ ಕು. ಸಹನಾ ಲಾಟೆ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯದ ಹ್ಯಾಂಡಬಾಲ್ ಕ್ರೀಡೆಯಲ್ಲಿ 2025-26ನೇ ಸಾಲಿನ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವೆಂದು ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ತಿಳಿಸಿದ್ದಾರೆ. ಈ ವಿದ್ಯಾರ್ಥಿನಿ ಕೇರಳದ ಕೊಟ್ಟಾಯಮ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯದಲ್ಲಿ ಮಾರ್ಚ 22 ರಿಂದ 26 ರ ವರೆಗೆ ಜರುಗಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹ್ಯಾಂಡಬಾಲ್ …
Read More »ಯಾರದ್ದೋ ಕೈಕಾಲು ಹಿಡಿದು ನಾ ಬಿಜೆಪಿಗೆ ಸೇರುವುದಿಲ್ಲ: ಯತ್ನಾಳ್
ನವದೆಹಲಿ: ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗೆಂದು ನಾನು ದೆಹಲಿಗೆ ಬಂದಿಲ್ಲ. ಯಾರದ್ದೋ ಕೈಕಾಲು ಹಿಡಿದು ಬಿಜೆಪಿ ಸೇರಲ್ಲ. ಬಿಜೆಪಿಗೆ ತಗೊಳ್ಳಿ ಅಂತಾ ಯಾರ ಬಳಿಯೂ ಹೋಗಲ್ಲ. ನಾವು ಸ್ವಾಭಿಮಾನದಿಂದ ಬದುಕಿರೋರು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿ ದ್ದಾರೆ. ಬಿಜೆಪಿ ಸೇರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭ್ರಷ್ಟ ಕುಟುಂಬದ ನೇತೃತ್ವವನ್ನು ನಾವು ಒಪ್ಪಲ್ಲ. ರಾಜ್ಯ ದಲ್ಲಿ ಭ್ರಷ್ಟ ಕುಟುಂಬ ಎಲ್ಲಿವರೆಗೆ ಇರುತ್ತೋ, ಅಲ್ಲಿವ ರೆಗೂ ಬಿಜೆಪಿ ಸೇರುವ ಪ್ರಶ್ನೆ …
Read More »ಮನೆ ಬೆಂಕಿ ಅಹುತಿಯಾದ ಕುಟುಂಬಕ್ಕೆ ಕನ್ನಡ ರಕ್ಷಣಾ ವೇದಿಕೆ ಮತ್ತು ಕನ್ನಡ ಸೇನೆ ಸಂಘಟನೆಯಿಂದ ಆಹಾರ ಕಿಟ್,ಬಟ್ಟೆ ವಿತರಣೆ
ಮೂಡಲಗಿ: ತಾಲೂಕಿನ ಬಡಿಗವಾಡ ಗ್ರಾಮದ ರೈತ ರಂಗಪ್ಪ ಮಾಳಪ್ಪ ಚೂಡಪ್ಪಗೋಳ ಹಾಗೂ ಪತ್ನಿ,ನಾಲ್ಕು ಜನ ಮಕ್ಕಳು ಸೇರಿ ಮನೆಯಲ್ಲಿ ವಾಸಿಸುತ್ತಿದ್ದರು. ಇತ್ತಿಚ್ಚೇಗೆ ಶನಿವಾರರಂದು ಬೆಳಗ್ಗೆ 10.30 ರ ಸುಮಾರಿಗೆ ಮನೆಯಲ್ಲಿ ಗ್ಯಾಸ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ಸಂಭವಿಸಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿತ್ತು ಮನೆಯಲ್ಲಿ ಚಿನ್ನಾಭರಣ,ಲಕ್ಷಾಂತರ ನಗದು ಹಣ,ಎರಡು ಎಮ್ಮೆ,ಒಂದು ಆಕಳು,ಗೃಹಬಳಕೆಯ ವಸ್ತುಗಳು,ದವಸ ಧಾನ್ಯಗಳು,ಬಟ್ಟೆ ಬರೆಗಳು,ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿರುವದರಿಂದಾ,ಕನ್ನಡ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಮತ್ತು …
Read More »ಇಸ್ಪೀಟ್ ಅಡ್ಡೆ ಮೇಲೆ ಯಮಕನಮರಡಿ ಪೊಲೀಸರ ದಾಳಿ: 9 ಜನರ ಬಂಧನ
ಬೆಳಗಾವಿ: ಜಿನರಾಳ ಗ್ರಾಮದ ಬ್ಯಾಡರಟ್ಟಿ ಕ್ರಾಸ್ ಹತ್ತಿರವಿರುವ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಯಮಕನಮರಡಿ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ನೇತೃತ್ವದ ಪೊಲೀಸ್ ತಂಡವು ಜಿನರಾಳ ಗ್ರಾಮದ ಹದ್ದಿಯಲ್ಲಿರುವ ಬ್ಯಾಡರಟ್ಟಿ ಕ್ರಾಸ್ ಬಳಿಯ ಡೈಕ್ ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಮಿಂಚಿನ ದಾಳಿ ನಡೆಸಿದೆ. ಬಂಧಿತರಲ್ಲಿ ಹುಕ್ಕೇರಿ ತಾಲೂಕಿನ ಹೊಸೂರು, ಯರನಾಳ ನಿವಾಸಿಗಳು ಹಾಗೂ …
Read More »
Laxmi News 24×7