ಗದಗ: ಐತಿಹಾಸಿ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ಬಳಿಕ ಸಂಪತ್ತಿನ ಖಜಾನೆಗಳ ಒಂದೊಂದು ರಹಸ್ಯಗಳು ಬಯಲಾಗುತ್ತಿವೆ. ಲಕ್ಕುಂಡಿ ಸಂಪತ್ತನ್ನೂ ಮೀರಿಸುವ ಸಂಪತ್ತಿನ ಖಜಾನೆಗಳು ಗದಗ ಜಿಲ್ಲೆಯಲ್ಲಿವೆ. ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ಬಗ್ಗೆಯೂ ಟಿವಿ9 ಇಂಚಿಂಚು ವರದಿ ಮಾಡಿದೆ. ಆದರೆ ಇದೀಗ ರಹಸ್ಯ ಗವಿಯೊಳಗೆ ಸಂಪತ್ತು ಸುದ್ದಿ ಕೇಳಿದರೆ ನೀವು ಬೆಚ್ಚಿಬೀಳ್ತೀರಾ. ಈ ಸಂಜೀವಿನಿ ಗುಡ್ಡದ ಗವಿಯೊಳಗೆ ಅನಂತಪದ್ಮನಾಭ, ಕುಬೇರನ ಸಂಪತ್ತಿಗೂ ಅಪಾರವಿದೆಯಂತೆ. ಲಕ್ಕುಂಡಿ ಕಲ್ಯಾಣ ಚಾಲುಕ್ಯರು, …
Read More »Yearly Archives: 2026
ಭೀಕರ ಸರಣಿ ಅಪಘಾತಕ್ಕೆ 7 ಬಲಿ
ಬೆಂಗಳೂರು: ಹೊರವಲಯ ಹೊಸಕೋಟೆ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿದೆ. ಕ್ಯಾಂಟರ್, ಬೈಕ್ ಮತ್ತು ಕಾರಿನ ನಡುವಿನ ಸರಣಿ ಅಪಘಾತಕ್ಕೆ 7 ಜನ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಒಂದೇ ಕಾರಿನಲ್ಲಿದ್ದ ಆರು ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಹೊಸಕೋಟೆಯಿಂದ ದೇವನಹಳ್ಳಿ ಕಡೆ ಅತಿವೇಗವಾಗಿ ಬರ್ತಿದ್ದ ಎಕ್ಸ್ಯುವಿ ಕಾರು, ಬೈಕ್‌ಗೆ ಡಿಕ್ಕಿಯಾಗಿ ನಂತರ …
Read More »ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ: ಪಿಯೂಷ್ ಗೋಯಲ್
ನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬಾಂಗ್ಲಾದೇಶಕ್ಕೆ ವಿಸ್ತರಿಸಿದಂತೆಯೇ ಭಾರತವು ಜವಳಿ ಉತ್ಪನ್ನಗಳಿಗೆ ಶೂನ್ಯ ಸುಂಕ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಆದ್ರೆ ಭಾರತ – ಅಮೆರಿಕ ಒಪ್ಪಂದದ ಜಂಟಿ ಹೇಳಿಕೆಯಾಗಲಿ ಅಥವಾ ಶ್ವೇತಭವನ ಫ್ಯಾಕ್ಟ್‌ಶೀಟ್ ಆಗಲಿ ಈ ಷರತ್ತನ್ನ ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದೇಶವು ಭಾರತಕ್ಕಿಂತ ಹೆಚ್ಚಿನ ಪ್ರಯೋಜನ ಪಡೆದುಕೊಂಡಿದೆ ಎಂಬ ರಾಹುಲ್ …
Read More »ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಕೆಶಿ
ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. …
Read More »ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್ನಲ್ಲಿ ಕಿಡ್ನಿ ರವಾನೆ
ವಿಜಯಪುರ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಬಲರಾಮ ಅವರಿಗೆ ಚಿಕಿತ್ಸೆ …
Read More »ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್ ಪಟ್ಟಣ್
ಕೊಪ್ಪಳ: ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ ಇದೆ ಎಂದು ಸಿಎಂ ಆಪ್ತ ಶಾಸಕ ಅಶೋಕ್ ಪಟ್ಟಣ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿಎಂ ಬದಲಾವಣೆ ಆಗಲ್ಲ ಅಂತ ಎಲ್ಲರೂ ಹೇಳಿದ್ದಾರೆ. ಸಿಎಂ ಸಹ ಹೈಕಮಾಂಡ್ ಹೇಳಿದ್ರೆ ನಾನು ರಾಜೀನಾಮೆ ಕೊಡತ್ತೇನೆ ಎಂದಿದ್ದಾರೆ. ಹೈಕಮಾಂಡ್ ಹೇಳುತ್ತಿಲ್ಲ, ಅವರು ಬಿಡ್ತಾ ಇಲ್ಲ. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಜಗಳ …
Read More »ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್ ಮಾಡಲೂ ಲಂಚ – ಐವರು ಸಿಬ್ಬಂದಿ ಅಮಾನತು
ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್ ಮಾಡಿಕೊಡಲು ಲಂಚ (Bribe) ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೊರ ಗುತ್ತಿಗೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಮಹಿಳೆಯೊಬ್ಬಳ ಶವವನ್ನು ಪ್ಯಾಕ್ ಮಾಡಲು ಐವರು ಸಿಬ್ಬಂದಿ ಹಣ ವಸೂಲಿ ಮಾಡಿದ್ದರು. ಸಿಬ್ಬಂದಿಯ ಅಮಾನವೀಯ ಕೃತ್ಯಕ್ಕೆ ಮೃತಳ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದರು. ಲಂಚಾವತಾರ ಬಯಲಾದ ಬಳಿಕ ಹಣ ವಸೂಲಿ ಮಾಡಿದ ಐವರು ಡಿ ಗ್ರೂಪ್ ನೌಕರರನ್ನು ಅಮಾನತು ಮಾಡಲಾಗಿದೆ. ರಾಯಚೂರು …
Read More »ಇಂದು ವಿಶ್ವ ರೇಡಿಯೋ ದಿನ..
ವಿಶ್ವ ರೇಡಿಯೋ ದಿನವನ್ನು ಪ್ರತಿವರ್ಷ ಫೆಬ್ರವರಿ 13ರಂದು ಆಚರಿಸಲಾಗುತ್ತದೆ. ಈ ದಿನವನ್ನು UNESCO 2011ರಲ್ಲಿ ಘೋಷಿಸಿದ್ದು, ನಂತರ United Nations General Assembly 2012ರಲ್ಲಿ ಅಧಿಕೃತವಾಗಿ ಅಂಗೀಕರಿಸಿತು. ರೇಡಿಯೋ ಎಂಬ ಮಾಧ್ಯಮದ ಮಹತ್ವವನ್ನು ಜಗತ್ತಿಗೆ ನೆನಪಿಸುವುದು ಮತ್ತು ಜನರ ನಡುವೆ ಮಾಹಿತಿ ಹಂಚಿಕೆಯನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ. ರೇಡಿಯೋ ಒಂದು ಸರಳ, ಸುಲಭ ಮತ್ತು ಅಗ್ಗದ ಸಂವಹನ ಮಾಧ್ಯಮವಾಗಿದೆ. ವಿದ್ಯುತ್ ಇಲ್ಲದ ಪ್ರದೇಶಗಳಲ್ಲಿಯೂ ಬ್ಯಾಟರಿ ಮೂಲಕ ರೇಡಿಯೋ ಕೇಳಬಹುದು. …
Read More »ಬೆಳಗಾವಿ: ಒಂದೇ ವರ್ಷದಲ್ಲಿ ಅಪಘಾತಕ್ಕೆ 800 ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಚಾಲಕರ ರ್ನಿಲಕ್ಷ$್ಯ ಮದ್ಯಸೇವನೆ ಮಾಡಿ ವಾಹನ ಚಲಾವಣೆ, ಅತಿಯಾದ ವೇಗ ಹೀಗೆ ವಿವಿಧ ಕಾರಣಗಳಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ವರ್ಷದಲ್ಲಿ 800 ಜನ ಮೃತಪಟ್ಟಿದ್ದಾರೆ ಎಂದು ಎಸ್ಪಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಅಪಘಾತ ತಡೆಗಟ್ಟಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಶಬ್ದಮಾಲಿನ್ಯ …
Read More »ಸೌಲಭ್ಯ ಸದುಪಯೋಗಪಡಿಸಿಕೊಳ್ಳಲಿ
ಸವದತ್ತಿ: ಅಂಗವಿಕಲರು ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ನಗರಸಭೆ ವ್ಯಾಪ್ತಿಯ ರಾಜ್ಯ ಹಣಕಾಸು ಯೋಜನೆ ಹಾಗೂ ಪುರಸಭೆ ನಿಧಿ ಯೋಜನೆಯಡಿ ಅಂಗವಿಕಲ ಪಲಾನುಭವಿಗಳಿಗೆ ಬುಧವಾರ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ತ್ರಿಚಕ್ರ ವಾಹನ ಲಾನುಭವಿಗಳ ದೈನಂದಿನ ಬದುಕಿಗೆ ನೆರವಾಗುವ ಮೂಲಕ ಆಸರೆಯಾಗಲಿ ಎಂದು ಆಶಿಸಿದರು. ನಗರಸಭೆ ಆಯುಕ್ತ ಸಂಗನಬಸಯ್ಯ ಗದ್ದಗಿಮಠ, ತಾಪಂ ಇಒ ಆನಂದ ಬಡಕುಂದ್ರಿ, ಸಿಡಿಪಿಒ ಅಮೃತ …
Read More »
Laxmi News 24×7