Breaking News

Yearly Archives: 2026

ಸಿಲಿಂಡರ್ ಬೆಲೆ ಏರಿಕೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬೆಳಗಾವಿ: ‘ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಎಂಬ ‘ಉಡುಗೊರೆ’ ನೀಡಿದೆ. ಕೇಂದ್ರದ ಈ ಕ್ರಮ ಅತ್ಯಂತ ದುಃಖಕರ ಹಾಗೂ ಖಂಡನೀಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ₹60 ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಬಳಕೆಯ …

Read More »

GBA ಚುನಾವಣೆ: ಐದು ನಗರ ಪಾಲಿಕೆಗಳ ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು …

Read More »

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿದ್ದು, ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಅಡ್ಡಿಪಡಿಸಿದ್ದರಿಂದ ಸದನದಲ್ಲಿ  ಗದ್ದಲ ಉಂಟಾಯಿತು. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ …

Read More »

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ಗಳ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಯೋಜನೆಯನ್ನ ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೇ ಎಂಬ ಪ್ರಶ್ನೆ ಮೂಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ತೆರವು ಮಾಡುವ ನಿರ್ಧಾರಕ್ಕೆ ಸಾಕಷ್ಟು ವಿವಾದ, ವಿರೋಧ ವ್ಯಕ್ತವಾಯಿತು. ಕೋರ್ಟ್ ಕೂಡ ತೆರವು ಮಾಡದಂತೆ ಸೂಚಿಸಿತು. ಇದಾದ ಬಳಿಕವೂ ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ …

Read More »

ಪರಿಚಯದವರಂತೆ ನಂಬಿಸಿ 2.29 ಲಕ್ಷ ರೂ. ವಂಚನೆ

ಹುಬ್ಬಳ್ಳಿ: ಅಯೋಧ್ಯೆಗೆ ಹೋಗಿದ್ದ ವೇಳೆ ನಗ-ನಗದು, ಕಾರು ಕಳವಾಗಿದೆ. ನಾನು ನಿಮಗೆ ದೂರದ ಸಂಬಂಧಿಯಾಗಬೇಕೆಂದು ಧಾರವಾಡದ ಗುತ್ತಿಗೆದಾರರನ್ನು ನಂಬಿಸಿದ ವಂಚಕ ರಮೇಶಕುಮಾರ, ವಾಪಸ್ ಕೊಡುವುದಾಗಿ 80 ಸಾವಿರ ರೂ. ಕೇಳಿದ್ದಾರೆ. ಈ ಮಾತು ನಂಬಿದ ಗುತ್ತಿಗೆದಾರ ನಿಂಗರಡ್ಡಿ ಟಿ., ರಮೇಶಕುಮಾರ ಖಾತೆಗೆ 2.29 ಲಕ್ಷ ರೂ. ವರ್ಗಾಯಿಸಿ ವಂಚನೆಗೆ  ಒಳಗಾಗಿದ್ದಾರೆ. ಕೆಇಬಿ ಇಂಜಿನಿಯರ್ ಎಂದು ಪರಿಚಯಿಸಿಕೊಂಡ ರಮೇಶಕುಮಾರ, ಅಯೋಧ್ಯೆಗೆ ಹೋಗಿದ್ದ ವೇಳೆ ಹಣ, ಕಾರು, ಬಂಗಾರ ಕಳವಾಗಿದೆ. ಕುಟುಂಬ ಸಮೇತ ಬೆಂಗಳೂರಿಗೆ …

Read More »

ನಾರಿ ಶಕ್ತಿಗೆ ನಮನ: ಕಿತ್ತೂರಿನಲ್ಲಿ ಮಹಿಳಾ ದಿನಾಚರಣೆಯ ಸಂಭ್ರಮ! 

​ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ರೊಹಿಣಿ ಬಾ. ಪಾಟೀಲ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ಮಹಿಳಾ ಅಭಿಮಾನಿ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ​ಈ ವಿಶೇಷ ಸಂದರ್ಭದಲ್ಲಿ ನನ್ನ ಧರ್ಮಪತ್ನಿಯವರಾದ ಶ್ರೀಮತಿ Shruti Vaidya ರವರು ಭಾಗವಹಿಸಿ, ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ. ಮಹಿಳಾ ಸಬಲೀಕರಣ ಮತ್ತು ಸಮಾಜದಲ್ಲಿ ಮಹಿಳೆಯರ ಪಾತ್ರದ ಕುರಿತು ಅವರು ತಮ್ಮ ವಿಚಾರಗಳನ್ನು ಹಂಚಿಕೊಂಡರು. ಧೈರ್ಯ ಮತ್ತು …

Read More »

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಇಂದಿರಾ ಕ್ಯಾಂಟಿನ್’ ಅನ್ನು ಉದ್ಘಾಟಿಸಲಾಯಿತು. ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳಲ್ಲ, ಪ್ರತಿಯೊಬ್ಬ ಸಾಮಾನ್ಯ ಮನುಷ್ಯನ ಹೊಟ್ಟೆ ತುಂಬಿಸುವುದು ಕೂಡ ನಮ್ಮ ಆದ್ಯತೆ. ಈ ಯೋಜನೆಯ ಲಾಭವನ್ನು ಸೌದತ್ತಿ-ಯಲ್ಲಮ್ಮ ಕ್ಷೇತ್ರದ ಜನತೆ ಪಡೆದುಕೊಳ್ಳಬೇಕೆಂದು ಕೋರುತ್ತೇನೆ. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ದೊರೆಯಬೇಕು ಎನ್ನುವುದು ನಮ್ಮ ಆಶಯ. ಈ ಸಂದರ್ಭದಲ್ಲಿ …

Read More »

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ

ಬೆಳಗಾವಿ: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಸ್ಪಷ್ಟನೆ ನೀಡಿದರು. ಬಜೆಟ್‌ ಅಧಿವೇಶನದ ಎರಡನೇ ದಿನವಾದ ಸೋಮವಾರ ನಡೆದ ವಿಧಾನ ಪರಿಷತ್‌ ಕಲಾಪದ ಶೂನ್ಯದ ವೇಳೆ ಕಾಂಗ್ರೆಸ್‌ ಸದಸ್ಯರಾದ ಎಂ.ನಾಗರಾಜ್‌ ಅವರು, “ಬೆಳಗಾವಿ ಅಂಗನವಾಡಿ ಮಕ್ಕಳಿಗೆ ‘ಎಕ್ಸ್‌ಪೈರಿ’ ಮಿಲೆಟ್ ಲಡ್ಡು!” ಎಂದು ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿರುವ …

Read More »

ದೇಶ ಹಾಳು ಮಾಡುವ ಮೋದಿಗೆ ತಕ್ಕಪಾಠ ಕಲಿಸಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ನೀತಿಯಿಂದ ದೇಶ ಹಾಳು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕು ಎಂದು ರಾಜ್ಯಸಭೆ ವಿಪ ನಾಯಕರೂ ಆದ ಎಐಸಿಸಿ ಅಧ್ಯ ಮಲ್ಲಿಕಾರ್ಜುನ ರ್ಖಗೆ ಹೇಳಿದರು. ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ 1069.41 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಟ್ರಂಪ್​ ಒಬ್ಬ ಡಿಕ್ಟೇಟರ್​, ಮೋದಿ ಅವರ ಗುಲಾಮ. ರಷ್ಯಾದಿಂದ …

Read More »

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ  ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ  ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಾಗಣ್ಣನವರ್ ಎಂಬವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ. ಸುಮಾರು 4 ಲಕ್ಷ ಮೌಲ್ಯದ ಮೆಕ್ಕೆಜೋಳದ ಫಸಲು ಸುಟ್ಟು ಭಸ್ಮವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ …

Read More »