ಮಂಡ್ಯ: ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್, ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ರಾಜ್ಯಪಾಲರುಗಳ ವಿಷಯದಲ್ಲಿ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಒಮ್ಮೆ ನೆನಪು ಮಾಡಿಕೊಂಡರೆ ಅವರ ಬಣ್ಣ ಏನೆಂದು ಗೊತ್ತಾಗುತ್ತದೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸಮಯ …
Read More »Yearly Archives: 2026
ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳು, ರಾಷ್ಟ್ರೀಯ ಹಬ್ಬಗಳ ಆಚರಣೆ, ಶಾಲಾ-ಕಾಲೇಜುಗಳ ಇತರೇ ಸಾಂಸ್ಕೃತಿಕ, ಆಡಳಿತಾತ್ಮಕ ಕಾರ್ಯಕ್ರಮ ಆಯೋಜನೆ ವೇಳೆ ವಿದ್ಯಾರ್ಥಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕಾ ಶಿಕ್ಷಣ ಇಲಾಖೆ 13 ಅಂಶಗಳ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಈ ಮಾರ್ಗಸೂಚಿಯನ್ನು ಎಲ್ಲಾ ಶಾಲಾ-ಕಾಲೇಜುಗಳು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಮಾರ್ಗಸೂಚಿಯಲ್ಲಿ ಏನಿದೆ? 1. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಧ್ವಜಾರೋಹಣ ಕಂಬದ ಬಳಿ ವಿದ್ಯುತ್ ತಂತಿಗಳು ಹಾದುಹೋಗದಂತೆ ಮತ್ತು ಕಂಬವು ವಿದ್ಯುತ್ ತಂತಿಗಳನ್ನು ಸಂಪರ್ಕಿಸದಂತೆ …
Read More »77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಇದು ಕೇವಲ ಆಚರಣೆ ಅಲ್ಲ. ಸಂವಿಧಾನ ಜಾರಿಗೆ ಬಂದ ದಿನವನ್ನು ಗೌರವಿಸುವ ಅಭೂತಪೂರ್ವ ದಿನ. 1950 ಜನವರಿ 26ರಂದು ಭಾರತೀಯರೆಲ್ಲರೂ ಹೆಮ್ಮೆಯಿಂದ ಆಚರಿಸುವ ದಿನ. ರಾಜಪ್ರಭುತ್ವವನ್ನ ತ್ಯಜಿಸಿ ಪ್ರಜಾಪ್ರಭುತ್ವಕ್ಕೆ ಬದಲಾದ ದಿನ. ಹೀಗಾಗಿ ಪ್ರತಿಯೊಬ್ಬ ಭಾರತೀಯನಿಗೂ ಈ ದಿನ ಅತ್ಯಂತ ಮಹತ್ವದ ದಿನ. ಈ ಬಾರಿ ಜನವರಿ 26ರಂದು ಭಾರತೀಯರೆಲ್ಲರೂ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಿದ್ದಾರೆ. …
Read More »ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR
ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ …
Read More »ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು: ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡಿನ ಬೆಂಕಿಗೆ ಅರಣ್ಯ ಸಂಪತ್ತು ನಾಶವಾಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ಡ್ರೋನ್ ಸೌಲಭ್ಯ ಇರುವ ಕಡೆ ಕ್ಯಾಮೆರಾ …
Read More »KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ
ಬೆಳಗಾವಿ: ಸುದೀರ್ಘ 40 ವರ್ಷಗಳ ಕಾರ್ಯಾಧ್ಯಕ್ಷರಾಗಿ ಕರ್ನಾಟಕ ಲಿಂಗಾಯತ ಎಜುಕೇಶನ್ ಸಂಸ್ಥೆಯ ನೊಗ ಹೊತ್ತಿದ್ದ ಡಾ. ಪ್ರಭಾಕರ ಕೋರೆ ಈಗ ಆ ಸ್ಥಾನದಿಂದ ಮುಕ್ತರಾಗಿದ್ದಾರೆ. ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಗೆ ಸಲ್ಲಿಸಿದ್ದ ನಾಮಪತ್ರವನ್ನು ದಿಢೀರ್ ಹಿಂದಕ್ಕೆ ಪಡೆದು ಅಚ್ಚರಿ ಮೂಡಿಸಿದ್ದಾರೆ. ನಿರ್ದೇಶಕ (Director) ಹುದ್ದೆಗೆ ಮೊದಲು ನಾಮಪತ್ರವನ್ನು ಪ್ರಭಾಕರ ಕೋರೆ ಸಲ್ಲಿಸಿದ್ದರು. ಆದರೆ ಅವರು ನಾಮಪತ್ರ ವಾಪಸ್ ಪಡೆಯುವ ಮೂಲಕ ಅಚ್ಚರಿಯ ನಿರ್ಧಾರವನ್ನು ಕೈಗೊಂಡಿದ್ದಾರೆ. 1984 ರಲ್ಲಿ ಕೆಎಲ್ಇ ಸಂಸ್ಥೆಯ …
Read More »ʻಅಪ್ಪ ನನಗೆ ಜೀವನ ಸಾಕಾಗಿದೆ, ಹುಡುಕ್ಬೇಡಿʼ- ಝಾಕಿಯಾಳನ್ನು ಕೊಂದು ಅವರಪ್ಪನಿಗೆ ಮೆಸೇಜ್ ಕಳ್ಸಿದ್ದ ಹಂತಕ!
ಧಾರವಾಡ: ಧಾರವಾಡ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣದಲ್ಲಿ ಬಗೆದಷ್ಟು ಹೊಸಹೊಸ ವಿಚಾರಗಳು ಬಯಲಾಗುತ್ತಿವೆ. ಈ ಕೊಲೆ ಮಾಡಿದ್ದ ಸಾಬೀರ್ ಆಕೆಯ ಮೊಬೈಲ್‌ನಿಂದ ಆಕೆಯ ತಂದೆಗೆ, ʻನನಗೆ ಜೀವನ ಸಾಕಾಗಿದೆ. ನಾನು ಮನೆಗೆ ಬರೋದಿಲ್ಲ. ನನ್ನನ್ನು ಹುಡುಕಬೇಡಿʼ ಎಂದು ಮೆಸೇಜ್ ಮಾಡಿದ್ದ ಎಂಬ ವಿಚಾರ ತಿಳಿದುಬಂದಿದೆ. ಝಾಕಿಯಾ ಹಾಗೂ ಸಾಬೀರ್ ಇಬ್ಬರೂ ಕಳೆದ ಮೂರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಷಯ ಇಬ್ಬರ ಮನೆಯಲ್ಲೂ ಗೊತ್ತಾಗಿ, …
Read More »Gold, Silver ಪ್ರಿಯರಿಗೆ ಶಾಕ್; 10 ಗ್ರಾಂ ಚಿನ್ನಕ್ಕೆ 5,400 ರೂ, ಕೆಜಿ ಬೆಳ್ಳಿಗೆ 15,000 ರೂ. ಏರಿಕೆ
ನವದೆಹಲಿ: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ರಾಜಕೀಯ ಅನಿಶ್ಚಿತತೆ ಮತ್ತು ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಚಿನ್ನ, ಬೆಳ್ಳಿ ದರಗಳಲ್ಲಿ ಏರಿಳಿತ ಆಗುತ್ತಿದೆ. ಎರಡೂ ಲೋಹಗಳ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡಿದ್ದು, ಹೂಡಿಕೆದಾರರು ಸುರಕ್ಷಿತ ಸ್ವರ್ಗದ ಸ್ವತ್ತುಗಳತ್ತ ಮುಖ ಮಾಡಲು ಕಾರಣವಾಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 5,400 ರೂ. ಏರಿಕೆಯಾಗಿ 1,59,710 ರೂ.ಗೆ ತಲುಪಿದೆ. …
Read More »ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ
ಕಾರವಾರ: ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧ ವಿತರಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದ ಪಿಕ್ಳೆ ನರ್ಸಿಂಗ್ ಹೋಂನ ಔಷಧಿ ವಿತರಕ ರಾಜು ಪಿಕ್ಳೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ಇರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹದಿನೈದು ದಿನದ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಆರೋಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ರಾಜು ಅವರು ಮಾನಸಿಕ ಖಿನ್ನತೆಗೆ …
Read More »ಬಿಜೆಪಿಗೆ ಅಧಿಕಾರ ನೀಡಿದರೆ ಶಬರಿಮಲೆ ಚಿನ್ನ ಕಳವು ತನಿಖೆ – ಇದು ಮೋದಿ ಗ್ಯಾರಂಟಿ : ಕೇರಳದಲ್ಲಿ ಪ್ರಧಾನಿ ವಚನ
ತಿರುವನಂತಪುರಂ: ಕೇರಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಲಾಗುವುದು. ಇದು ಮೋದಿಯ ಗ್ಯಾರಂಟಿ ಎಂದು ಪ್ರಧಾನಿ ಹೇಳಿದ್ದಾರೆ. ಚುನಾವಣಾ ದಿನಾಂಕ ಪ್ರಕಟವಾಗುವ ಮೊದಲೇ ಕೇರಳದಲ್ಲಿ ಮೋದಿ ಪಕ್ಷದ ಪರ ಪ್ರಚಾರಕ್ಕೆ ಇಳಿದಿದ್ದು ಇಂದು ತಿರುವನಂತಪುರದಲ್ಲಿ ಬಿಜೆಪಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಲ್‌ಡಿಎಫ್, ಯುಡಿಎಫ್ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ತಿರುವನಂತಪುರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಇದು ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ …
Read More »
Laxmi News 24×7