ಬೆಂಗಳೂರು: ಬನಶಂಕರಿಯ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ʻಗಾಂಧಿ ಹತ್ಯೆಯ ಸತ್ಯʼ ನಾಟಕ ಪ್ರದರ್ಶನದ ವೇಳೆ ಏರ್ಪಟ್ಟ ಗದ್ದಲದ ವೇಳೆ ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ. ಬನಶಂಕರಿಯ ಸುಚಿತ್ರ ಫಿಲಂ ಅಕಾಡೆಮಿಯಲ್ಲಿ ಆಯೋಜಿಸಿದ್ದ ನಾಟಕದಲ್ಲಿ ಮಹಾತ್ಮ ಗಾಂಧೀಜಿ ವಿರುದ್ಧ ಆಕ್ಷೇಪಾರ್ಹ ಸಂಭಾಷಣೆ ಬಳಸಲಾಗಿದೆ ಎಂದು ಆಕ್ರೋಶಗೊಂಡ ಸಂಘಟನೆಗಳ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಕಾಡೆಮಿಗೆ ನುಗ್ಗಿದ್ದಾರೆ. ಬಳಿಕ ಮಾತಿನ ಚಕಮಕಿ …
Read More »Yearly Archives: 2026
ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಬೆಲೆ ಏರಿಕೆ: ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಜೇಬಿಗೆ ಕನ್ನ ಹಾಕಿದೆ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಕರ್ನಾಟಕದ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭಾರಿ ಬೆಲೆ ಏರಿಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಜೇಬಿಗೆ ಕನ್ನ ಹಾಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ತನ್ನ ಆರ್ಥಿಕ ದುರಾಡಳಿತ ಹಾಗೂ ಖಾಲಿ ಬೊಕ್ಕಸವನ್ನು ಮುಚ್ಚಿಕೊಳ್ಳಲು ಕೆಎಂಎಫ್ (KMF) ಮೂಲಕ ಮೊಸರಿನ ದರವನ್ನು ಅತಿರೇಕದ ಮಟ್ಟಕ್ಕೆ ಏರಿಸಲಾಗಿದೆ ಎಂದು ಕಿಡಿಕಾರಿದ್ದಾರೆ. ಅರ್ಧ ಲೀಟರ್ ಮೊಸರು: ₹28 ರಿಂದ ₹34 ಕ್ಕೆ ಏರಿಕೆ (₹6 ಅಂದರೆ ಶೇ. …
Read More »ಶಿವಾನಂದ ನೀಲಣ್ಣನವರ್ಗೆ ಇಡಿ ಬಿಗ್ ಶಾಕ್: ನೂರಾರು ಕೋಟಿ ಆಸ್ತಿ ಜಪ್ತಿ
ಶಿವಂ ಅಸೋಸಿಯೇಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಶಿವಾನಂದ ನೀಲಣ್ಣನವರ್ಗೆ ಜಾರಿ ನಿರ್ದೇಶನಾಲಯ- ಇಡಿ ಬಿಗ್ ಶಾಕ್ ನೀಡಿದೆ. ಫಿಕ್ಸೆಡ್ ಡೆಪಾಸಿಟ್, ಬ್ಯಾಂಕ್ ಖಾತೆ, ಷೇರು ಹೂಡಿಕೆ, ಕೃಷಿ ಜಮೀನು, ಬಂಗಲೆಗಳನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಶಿವಂ ಅಸೋಸಿಯೇಟ್ಸ್ನಿಂದ 2,459 ಕೋಟಿ ರೂ. ವಂಚನೆ ಆಗಿರುವುದು ಇ.ಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲವಣ್ಣನವರ್ ಅವರ ಬರೋಬ್ಬರಿ 427 ಕೋಟಿ ರೂ. ಮೌಲ್ಯದ …
Read More »ಅನಧಿಕೃತ ಬಡಾವಣೆಗಳಿಗೆ ಅನುಮತಿ ನೀಡಿದರೆ ಪಿಡಿಓಗಳ ವಿರುದ್ಧ ಪ್ರಕರಣ: ಬೆಳಗಾವಿಯಲ್ಲಿ ಲೋಕಾಯುಕ್ತ ಎಚ್ಚರಿಕೆ
ಬೆಳಗಾವಿ: ಅನಧಿಕೃತ ಬಡಾವಣೆಗಳಿಗೆ ಪರವಾನಿಗೆ ನೀಡಿದರೆ ಸಂಬಂಧಪಟ್ಟ ಬಡಾವಣೆ ಮಾಲೀಕರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ವಿರುದ್ಧ ಲೋಕಾಯುಕ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ ನೀಡಿದರು. ಬೆಳಗಾವಿ ತಾಲೂಕಿನ ಮುತಗಾ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿದ ಅವರು, ಪಂಚಾಯಿತಿ ಆಡಳಿತ ವ್ಯವಸ್ಥೆ, ಅಧಿಕಾರಿಗಳ ಹಾಜರಾತಿ ನಿರ್ವಹಣೆ ಹಾಗೂ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿ …
Read More »ಬೆಳಗಾವಿ ನಗರದಲ್ಲಿ ಈ ರಸ್ತೆಗಳ ಮೇಲೆ ಸಂಚರಿಸುವಂತಿಲ್ಲ: ಪೊಲೀಸರ ವಾರ್ನಿಂಗ್
ಬೆಳಗಾವಿ: ನಾಡಿನ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಕುಂದಾನಗರಿ ಬೆಳಗಾವಿ ಸಜ್ಜಾಗಿದ್ದು, ನವೆಂಬರ್ 1ರಂದು ನಡೆಯಲಿರುವ ಅದ್ಧೂರಿ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ನವೆಂಬರ್ 1ರಂದು ಬೆಳಿಗ್ಗೆ 11 ಗಂಟೆಯಿಂದ ರಾಜ್ಯೋತ್ಸವದ ಮೆರವಣಿಗೆ ಮುಕ್ತಾಯವಾಗುವವರೆಗೆ ಎಲ್ಲಾ ಭಾರಿ ವಾಹನಗಳ ಬೆಳಗಾವಿ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಮೆರವಣಿಗೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗಗಳನ್ನು ನಿಗದಿಪಡಿಸಲಾಗಿದೆ. …
Read More »ಮಟ್ಕಾ ಅಡ್ಡೆ ಮೇಲೆ ಬೆಳಗಾವಿ ಪೊಲೀಸರ ದಾಳಿ: ಮದ್ಯ ಸೇವನೆಗೆ ಅವಕಾಶ ನೀಡಿದವರ ಮೇಲೂ ಕೇಸ್
ಬೆಳಗಾವಿ: ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಹಿರೇಬಾಗೇವಾಡಿ ಪೊಲೀಸರು, ಮಟ್ಕಾ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಹಾಗೂ ಮದ್ಯಪಾನಕ್ಕೆ ಅವಕಾಶ ಕಲ್ಪಿಸಿದ ಆರೋಪದ ಮೇಲೆ ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಟ್ಕಾ ಜೂಜಾಟಕ್ಕೆ ಕಡಿವಾಣ ಹಾಕಲು ಪೊಲೀಸರ ದಾಳಿ ಅಕ್ಟೋಬರ್ 29ರಂದು ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಯುತ್ತಿರುವ …
Read More »ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿ ಪೊಲೀಸ್ರಿಂದ ಭಾರಿ ಭದ್ರತೆ
ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಲಕ್ಷಾಂತರ ಜನರು ರಾಜ್ಯೋತ್ಸವದ ಮೆರವಣಿಗೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಬೃಹತ್ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಬೆಳಗಾವಿ ನಗರದಿಂದ 3 ಡಿಎಸ್ಪಿ, 6 ಪೊಲೀಸ್ ಇನ್ಸ್ಪೆಕ್ಟರ್, 20 ಪಿಎಸ್ಐ ಹಾಗೂ 98 ಎಎಸ್ಐ ಸೇರಿದಂತೆ 528 ಹೆಡ್ಕಾನ್ಸ್ಟೇಬಲ್ ಮತ್ತು ಪೊಲೀಸ್ ಕಾನ್ಸ್ಟೇಬಲ್ಗಳನ್ನು ನಿಯೋಜಿಸಲಾಗಿದೆ. …
Read More »ಬ್ಯಾಲೆಟ್ ಪೇಪರ್ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ
ರಾಮನಗರ: ಕಾಂಗ್ರೆಸ್ ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್ ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ ಪೇಪರ್ನಲ್ಲೇ ಕಾಂಗ್ರೆಸ್ ಸೋತಿದೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಪರಿಷತ್ ಚುನಾವಣೆ ಫಲಿತಾಂಶ ವಿಚಾರವಾಗಿ ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ರಾಜ್ಯಗಳಲ್ಲಿ ನಡೆದ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆದ್ದಿದ್ದಾರೆ. ನಮ್ಮ ರಾಜ್ಯದ ನಾಲ್ಕು ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಗೆದ್ದಿದ್ದಾರೆ. ಇದು ಎರಡೂ ಪಕ್ಷಗಳ ಕಾರ್ಯಕರ್ತರ ಶ್ರಮ. …
Read More »3 ತಿಂಗಳಲ್ಲಿ 17.78 ಲಕ್ಷ ಕೆಜಿ ಪಡಿತರ ವಶಕ್ಕೆ – ಕಳ್ಳ ಸಾಗಣೆ ಮಾಡುತ್ತಿದ್ದ 215 ಜನ ಅರೆಸ್ಟ್
ಬೆಂಗಳೂರು: ಪಡಿತರ ಕಳ್ಳ ಸಾಗಣೆ ವಿರುದ್ಧ ಆಹಾರ, ಸಾರ್ವಜನಿಕ ವಿತರಣೆ ಹಾಗೂ ಗ್ರಾಹಕ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಮೂರು ತಿಂಗಳಲ್ಲಿ 17.78 ಲಕ್ಷ ಕೆಜಿ ಪಡಿತರ ಅಕ್ಕಿ, ಕಾಳು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 215 ಜನರನ್ನು ಅರೆಸ್ಟ್ ಮಾಡಿದ್ದಾರೆ. ಸಚಿವ ರಿಜ್ವಾನ್ ಅರ್ಷದ್ ಅವರ ನಿರ್ದೇಶನದ ಮೇರೆಗೆ, ಕಳೆದ ಆಗಸ್ಟ್ 1ರಿಂದ ಪಡಿತರ ಸಾಗಣೆ ವಾಹನಗಳ ನಿರಂತರ ತಪಾಸಣೆ ಹಾಗೂ ಖಾಸಗಿ ಗೋಡೌನ್ಗಳ ಪರಿಶೀಲನೆ ನಡೆಸಲಾಗಿದೆ. ಈ ವೇಳೆ 17.78 …
Read More »SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ ಪಬ್ಲಿಕ್ ಪರೀಕ್ಷೆ-1 ಮತ್ತು ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷಾ ಮಂಡಳಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆ-1 ಮಾರ್ಚ್ 22 ರಿಂದ ಏಪ್ರಿಲ್ 5ರವರೆಗೆ ಹಾಗೂ ಪರೀಕ್ಷೆ-2 ಮೇ 24 ರಿಂದ ಮೇ 31ರ ವರೆಗೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿಯ ಈ ವೇಳಾಪಟ್ಟಿ ಮಹತ್ವದ್ದಾಗಿದೆ. ಮಾರ್ಚ್ 22- …
Read More »
Laxmi News 24×7