ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ …
Read More »Yearly Archives: 2026
ಕೆಕೆಆರ್‌ಟಿಸಿ ಬಸ್ ಹರಿದು 4 ವರ್ಷದ ಕಂದಮ್ಮ ಸಾವು
ರಾಯಚೂರು: ಕೆಕೆಆರ್‌ಟಿಸಿ ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಮೃತ ಕಂದಮ್ಮ. ಸಾರಿಗೆ ಬಸ್ ಗೂಗಲ್‌ನಿಂದ ದೇವದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಚಾನಕ್ಕಾಗಿ ಅಡ್ಡ ಬಂದ ಕಾರಣ ಮಗುವಿನ ಮೇಲೆ ಬಸ್ ಹರಿದು ದುರ್ಘಟನೆ ಸಂಭವಿಸಿದೆ. ಬಸ್ ಬರುವುದನ್ನು ಗಮನಿಸದೆ ಮಗು ರಸ್ತೆ ದಾಟಲು ಮುಂದಾದಾಗ ಅಪಘಾತ ನಡೆದಿದೆ. ಧಿಡೀರ್ ಆಗಿ …
Read More »ಕಲಬುರಗಿ| ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ
ಕಲಬುರಗಿ: ಪ್ರೀತಿಸಿ ಮದುವೆಯಾದ ನವವಿವಾಹಿತೆ ಎರಡೇ ತಿಂಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅನಸೂಯಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಕಲಬುರಗಿ ನಗರದ ಆಜಾದಪುರ್ ಬಡಾವಣೆಯ ನಿವಾಸಿಯಾಗಿದ್ದು, ಈಕೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಅತ್ತೆ ಮಗ ಅವಿನಾಶ್ ಜೊತೆ ಪ್ರೀತಿಸಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಾದ ಎರಡೇ ತಿಂಗಳಲ್ಲಿ ಈಕೆಗೆ ತನ್ನ ಮೂರು ಜನ ಸಹೋದರಿಯರು ಕ್ಯಾಪಿಟಲ್ ಸಿಟಿಗಳಲ್ಲಿ ವಾಸವಿದ್ರು, ತಾನು ಮಾತ್ರ ಹಳ್ಳಿಯಲ್ಲಿ …
Read More »ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ನಿಷೇಧ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮುಖ್ಯಪೀಠ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ಜಾಗರೂಕತೆಯ ಬಗ್ಗೆ ನಿಯಮಾವಳಿ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಬ್ರೇಕ್ ಹಾಕಲಾಗಿತ್ತು. ಜೂನ್‌ನಲ್ಲಿ ಟ್ಯಾಕ್ಸಿ ಅಗ್ರಿಗೇಟರ್‌ಗಳಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇಂದು …
Read More »ಶಬರಿಮಲೆ ಪ್ರವಾಸಕ್ಕೆ ತೆರಳಿದ್ದ ಕೋಲಾರ ಮೂಲದ ವ್ಯಕ್ತಿ ತಮಿಳುನಾಡಿನಲ್ಲಿ ನಾಪತ್ತೆ
ಕೋಲಾರ: ಕೇರಳದ ಶಬರಿಮಲೆ ಪ್ರವಾಸಕ್ಕೆ ತೆರಳಿದ್ದ ಕೋಲಾರ ಮೂಲದ ವ್ಯಕ್ತಿಯೊಬ್ಬರು ತಮಿಳುನಾಡಿನಲ್ಲಿ ನಾಪತ್ತೆಯಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೇವಗಾನಹಳ್ಳಿಯ ರವಿ (40) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದು, ತಮಿಳುನಾಡಿನ ತಿರುಚಂದೂರ್‌ನಲ್ಲಿ ಮಂಗಳವಾರ ಪ್ರವಾಸಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿ ನಾಲ್ಕು ದಿನಗಳೇ ಕಳೆದರೂ ಯಾವುದೇ ಸುಳಿವು ಸಿಕಿಲ್ಲ. ಸದ್ಯ ಘಟನೆ ಸಂಬಂಧ ತಿರುಚಂದೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಹಾಗೂ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ನಾಪತ್ತೆಯಾಗಿರುವ ರವಿಗಾಗಿ ತೀವ್ರ …
Read More »ಜನಗಣತಿಯ ಮೊದಲ ಹಂತಕ್ಕೆ ತಯಾರಿ; 33 ಪ್ರಶ್ನೆಗಳನ್ನು ಸಿದ್ಧಪಡಿಸಿದ ಕೇಂದ್ರ ಸರ್ಕಾರ
ನವದೆಹಲಿ: 2026-27 ರ ಜನಗಣತಿಯ ಹಂತ 1 ರಲ್ಲಿ ಕೇಳಲಾಗುವ ಪ್ರಶ್ನೆಗಳನ್ನು ವಿವರಿಸುವ ಅಧಿಕೃತ ಅಧಿಸೂಚನೆಯನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ. ಇದನ್ನು ಮನೆ ಪಟ್ಟಿ ಮತ್ತು ವಸತಿ ಗಣತಿ ಎಂದೂ ಕರೆಯಲಾಗುತ್ತದೆ. ಗೃಹ ಸಚಿವಾಲಯ ಹೊರಡಿಸಿರುವ ಮತ್ತು ಗೆಜೆಟ್‌ನಲ್ಲಿ ಪ್ರಕಟವಾದ ಈ ಅಧಿಸೂಚನೆಯು, ದೇಶಾದ್ಯಂತ ಜನಗಣತಿ ಅಧಿಕಾರಿಗಳು ಮನೆಗಳಿಗೆ ಕೇಳುವ 33 ನಿರ್ದಿಷ್ಟ ಪ್ರಶ್ನೆಗಳನ್ನು ವಿವರಿಸಿದೆ. ಈ ಮೊದಲ ಹಂತವು ಮನೆಗಳ ಗುಣಮಟ್ಟ, ನೀರು, ವಿದ್ಯುತ್, ಶೌಚಾಲಯ, ಅಡುಗೆ …
Read More »ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ
ಬೆಂಗಳೂರು: ಸಾಲು ಸಾಲು ರಜೆ ಇದ್ರೆ ಸಾಕು ಬೆಂಗಳೂರಿನ ಜನ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವರು ಟ್ರಿಪ್ಗೆ ತೆರಳುತ್ತಾರೆ. ಈಗ ಜನವರಿ ಅಂತ್ಯದಲ್ಲಿ ಸತತ ಮೂರು ದಿನ ರಜೆ ಬಂದಿರುವ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಜನ ಊರುಗಳತ್ತ ತೆರಳುವ ಸಾಧ್ಯತೆಗಳಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸತತ ಮೂರು ದಿನ …
Read More »ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್ ಕೆರೆಹಳ್ಳಿ ಮತ್ತೆ ಬಂಧನ
ನೆಲಮಂಗಲ: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ …
Read More »ದಾವಣಗೆರೆ | ಸ್ನೇಹಿತೆಯೊಂದಿಗಿದ್ದ ಯುವಕನ ವಿಡಿಯೋ ಮಾಡಿ ಸುಲಿಗೆ – ಇಬ್ಬರು ಅರೆಸ್ಟ್
ದಾವಣಗೆರೆ: ಸ್ನೇಹಿತೆಯೊಂದಿಗಿದ್ದ ಯುವಕನನ್ನು ಬೆದರಿಸಿ ಸುಲಿಗೆ ಮಾಡಿದ ಇಬ್ಬರು ಕಿರಾತಕರನ್ನು ನ್ಯಾಮತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಮೊಗ್ಗ ತಾಲೂಕಿನ ಚಿಕೋನಹಳ್ಳಿಯ ಅಣ್ಣಪ್ಪನಾಯ್ಕ (27) ಹಾಗೂ ಚೇತನ್ (26) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ ಕಲ್ಪಗಿರಿ ರಂಗನಾಥ ಸ್ವಾಮಿ ದೇವಸ್ಥಾನದ ಬೆಟ್ಟದ ವಿಂಡ್ ಫ್ಯಾನ್ ಬಳಿ ಬಂದಿದ್ದ ಶಿವಮೊಗ್ಗ ಮೂಲದ ಯುವಕ – ಯುವತಿಯ ವಿಡಿಯೋ ಮಾಡಿದ್ದರು. ಬಳಿಕ ಬೆದರಿಸಿ ಹಣ ಸುಲಿಗೆ ಮಾಡಿದ್ದರು. ಹಣ ಕಳೆದುಕೊಂಡ ಯುವಕ …
Read More »ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು ಸಂಚರಿಸಿದ ಕಳ್ಳರು
ಬಾಗಲಕೋಟೆ: ರಬಕವಿಯಲ್ಲಿ ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು ಸಂಚರಿಸಿದ್ದಾರೆ. ಜ.19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಕಳ್ಳತನಕ್ಕೆ ಹೊಂಚು ಹಾಕಿ ಓಡಾಡಿದ್ದಾರೆ. 6 ಜನ ಕಳ್ಳರು ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.
Read More »
Laxmi News 24×7