ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಹೊಸದಾಗಿ ಆರಂಭವಾಗುವ ಪೊಲೀಸ್ ಠಾಣೆಯ ವಿವರವನ್ನು ಘೋಷಿಸಿದರು. ದಕ್ಷಿಣ ಕನ್ನಡ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆಯನ್ನು ಘೋಷಿಸಲಾಗಿದೆ. ಹೊಸದಾಗಿ ಪ್ರಾರಂಭವಾಗುವ ಪೊಲೀಸ್ ಠಾಣೆಗಳ ವಿವರ ಇಲ್ಲಿದೆ. * ದಕ್ಷಿಣ ಕನ್ನಡ – ಮಾಣಿ ಪೊಲೀಸ್ ಠಾಣೆ * ದಕ್ಷಿಣ ಕನ್ನಡ – ಸಜಿಪನಡು ಪೊಲೀಸ್ ಠಾಣೆ …
Read More »Yearly Archives: 2026
ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ, ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ. 1.32 ಲಕ್ಷ ಕೋಟಿ …
Read More »ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂ.ಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. …
Read More »ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಅನುಭವಿ ಮುಖ್ಯಮಂತ್ರಿಗಳಿದ್ದು, 17ನೇ ಬಜೆಟ್ ಮಂಡಿಸುವ ಸುವರ್ಣಾವಕಾಶ ಅವರಿಗೆ ಸಿಕ್ಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಿನಲ್ಲಿ ಹೋಮ ಮಾಡುವ ಕೆಲಸವನ್ನು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ …
Read More »ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್
ಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು ಭಾಗವಹಿಸಿ, ಹೂವಿನ ಮಾರುಕಟ್ಟೆ ಮಳಿಗೆ ನಿರ್ಮಾಣಕ್ಕೆ ದಂಡುಮಂಡಳಿ ಪ್ರದೇಶದ ಸುಮಾರು 6045 ಚ.ಮಿ ಕ್ಷೇತ್ರವನ್ನು ಕೃಷಿ ಮರುಕಟ್ಟೆ ಸಮಿತಿಯ ಪರವಾನಗಿ ಪಡೆಯದೆ ನಿಯಮ ಬಾಹಿರವಾಗಿ ಹಂಚಿಕೆ ಮಾಡಿರುವ ವಿಚಾರವಾಗಿ ದಂಡುಮಂಡಳಿಗೆ ಲಕ್ಷಾಂತರ ರೂಪಾಯಿ ನಷ್ಟಕ್ಕೆ ದಾರಿ ಮಾಡಿಕೊಟ್ಟಿರುವ ವಿಷಯ ಪ್ರಸ್ತಾಪಿಸಿ, ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ದಂಡುಮಂಡಳಿ ಪ್ರದೇಶವನ್ನು ಯಾವುದೊ ಒಂದು …
Read More »ರಾಜ್ಯದಲ್ಲಿ ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ, ಬೆಡ್‌ಶೀಟ್ ಅಧಿಕಾರಿ ಮನೆಯಲ್ಲಿ!
ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು …
Read More »ಬಜೆಟ್ ನಲ್ಲಿ ಸ್ಪಷ್ಟ ಯೋಜನೆಗಳಿಲ್ಲ- ಡಾ.ಸೋನಾಲಿ ಸರ್ನೋಬತ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರು, ಯುವಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗೆ ಸ್ಪಷ್ಟ ಹಾಗೂ ಶಾಶ್ವತ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ. ಕೇವಲ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಮತ್ತು ಮೂಲಸೌಕರ್ಯಗಳ …
Read More »ಸಮೃದ್ಧ ಕರ್ನಾಟಕಕ್ಕೆ ಪೂರಕ ಬಜೆಟ್: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಸಮಸ್ತ ಕನ್ನಡಿಗರ ಸರ್ವಾಂಗೀಣ ಪ್ರಗತಿಯ ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 4.48 ಲಕ್ಷ ಕೋಟಿ ರೂ. ಮೊತ್ತದ ಈ ಬೃಹತ್ ಆಯವ್ಯಯವು “ಸಮೃದ್ಧ ಕರ್ನಾಟಕ” ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. 2026-27 ಸಾಲಿನ ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, …
Read More »ನಿರಾಶದಾಯಕ ಬಜೆಟ್: ಡಾ. ಪ್ರಭಾಕರ್ ಕೋರೆ
ಗ್ಯಾರೆಂಟಿಗಳ ಭರಾಟೆಯಲ್ಲಿ ಸಿದ್ದರಾಮಯ್ಯನವರ ಸರಕಾರ ರಾಜ್ಯದ ಜನತೆಗೆ ಕೇವಲ ಆಶ್ವಾಸನೆಗಳನ್ನು ನೀಡಿದೆ. ಕೃಷಿ, ಆರೋಗ್ಯ,ಸಹಕಾರ ಹಾಗೂ ನೀರಾವರಿ ಕ್ಷೇತ್ರಗಳಿಗೆ ಕೊಡ ಬೇಕಾದಂತಹ ಪ್ರಮುಖ ಆದ್ಯತೆಗಳನ್ನು ನೀಡಿಲ್ಲ. ಜನತೆಯ ಮೂಗಿಗೆ ತುಪ್ಪವನ್ನು ಸವರಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ನಿರಾಶದಾಯಕವಾದ ಬಜೆಟ್. ಪ್ರಗತಿಯ ನಾಗಾಲೋಟದಲ್ಲಿ ಸಾಗಬೇಕಾದಂತಹ ರಾಜ್ಯ ಹಲವಾರು ಗ್ಯಾರಂಟಿಗಳ ಭರದಲ್ಲಿ ರಾಜ್ಯವನ್ನು ಸಾಲದ ಸುಲಿಗಿ ಸಿಲುಕಿಸಿದೆ. ಪ್ರಗತಿದಾಯಕ ಇದಲ್ಲ.
Read More »ಜೆಸಿಬಿ ಕಾರ್ಯಾಚರಣೆ ವೇಳೆ ಮೇಘಾ ಗ್ಯಾಸ್ ಪೈಪ್‌ಲೈನ್ ಸೋರಿಕೆ: ಸ್ಥಳಕ್ಕೆ ಧಾವಿಸಿ ಅನಾಹುತ ತಪ್ಪಿಸಿದ ನಗರಸೇವಕ ನಿತೀನ್ ಜಾಧವ್
ಬೆಳಗಾವಿಯ ಹಿಂದವಾಡಿ ಭಾಗದಲ್ಲಿ ಇಂದು ಜೆಸಿಬಿ ಕಾರ್ಯಾಚರಣೆಯ ವೇಳೆ ಅನಿಲ ಪೈಪ್‌ಲೈನ್ ಸೋರಿಕೆಯಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಸ್ಥಳೀಯ ನಗರಸೇವಕರ ಸಮಯಪ್ರಜ್ಞೆಯಿಂದಾಗಿ ಸಂಭವನೀಯ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ. ಬೆಳಗಾವಿಯ ಹಿಂದವಾಡಿ ಜೈನ್ ಕಾಲೇಜ್ ಪಕ್ಕದಲ್ಲಿರುವ ವಸತಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಮನೆಯ ಕಾಂಪೌಂಡ್ ಗೋಡೆ ಕಟ್ಟುವ ಉದ್ದೇಶದಿಂದ ಜೆಸಿಬಿ ಮೂಲಕ ಮಣ್ಣು ಅಗೆಯುವಾಗ, ಅಕಸ್ಮಾತ್ತಾಗಿ ಭೂಮಿಯ ಅಡಿಯಲ್ಲಿದ್ದ ಮೇಘಾ ಗ್ಯಾಸ್ ಕಂಪನಿಯ …
Read More »
Laxmi News 24×7