Breaking News

Yearly Archives: 2026

ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿಗೆ ನಿರ್ಧಾರ

ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು.18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್​​ನಲ್ಲಿ ಸಿಎಂ ಘೋಷಿಸಿದ್ದಾರೆ.

Read More »

ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಸಿದ್ದರಾಮಯ್ಯ

ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ, ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Read More »

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂ

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂಪಾಯಿ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ ನಿಗದಿ ತುಂಗಭದ್ರಾ ಜಲಾಶಯದ 33 ಹೊಸ ಗೇಟ್‌ಗಳ ಅಳವಡಿಕೆ ಟಿಬಿ ಜಲಾಶಯದ ಸಾಮರ್ಥ್ಯ ಹೆಚ್ಚಿಸಲು ಸಮತೋಲನ ಜಲಾಶಯ ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಲು ಕ್ರಮ ಭದ್ರಾ ಮೇಲ್ದಂಡೆ ಯೋಜನೆಯಿಂದ 157 ಕೆರೆ ತುಂಬಿಸಲು ಕ್ರಮ ಕೊರಟಗೆರೆ ತಾಲೂಕಿನಲ್ಲಿ 1.2 ಟಿಎಂಸಿ …

Read More »

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್​ಪೋರ್ಟ್​ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

ಸವುಳು- ಜವಳಿಗೆ: ಪ್ಯಾಕೇಜ್‌ ನೀಡಿ

ಅಥಣಿ: ಒಂದು ಕಾಲದಲ್ಲಿ ಫಲವತ್ತಾದ ಭೂಮಿಯಾಗಿದ್ದ ಅಥಣಿ ತಾಲ್ಲೂಕು ಈಗ ಸವುಳು- ಜವಳ ಮಣ್ಣಾಗಿದೆ. ಕೆಲವೆಡೆ ದ್ರಾಕ್ಷಿಯ ಹೊರತಾಗಿ ಮತ್ಯಾವ ಬೆಳೆಯನ್ನೂ ಬೆಳೆಯಲು ಈ ಮಣ್ಣು ಯೋಗ್ಯವಾಗಿಲ್ಲ. ಇಂಥ ಮಣ್ಣಿಗೆ ಮತ್ತೆ ಮರುಜೀವ ನೀಡುವ ಯೋಜನೆ ರಾಜ್ಯ ಸರ್ಕಾರದಲ್ಲಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಕಾರ್ಯಗತವಾಗಿಲ್ಲ. ಅಥಣಿ ತಾಲ್ಲೂಕನ್ನು ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಪರಿಗಣಿಸಬೇಕು ಎಂಬುದು ಜನರ ಆಗ್ರಹ. ಸವುಳು-ಜವುಳು ಜಮೀನಿಗೆ ಹಿಪ್ಪರಗಿ ಅಣೆಕಟ್ಟೆ ಕಾರಣವೆಂದು ಕೆಲ ರೈತರು ಹೇಳುತ್ತಾರೆ. …

Read More »

ಕಾಗವಾಡ ತಾಲ್ಲೂಕಿಗೆ ಬೇಕಿದೆ ವಿಶೇಷ ಅನುದಾನ

ಕಾಗವಾಡ: ಕಾಗವಾಡ ಹೊಸ ತಾಲ್ಲೂಕೆಂದು ಘೋಷಣೆಯಾಗಿ ಎಂಟು ವರ್ಷ ಕಳೆದಿದೆ ಆದರೆ ಈವರೆಗೂ ಎಲ್ಲ ಇಲಾಖೆಗಳ ಕಚೇರಿ ಬಂದಿಲ್ಲ. ಇನ್ನೂ ಕೆಲವೇ ಕಚೇರಿಗಳೂ ಬಾಡಿಗೆ ಕಟ್ಟಡಗಳಲ್ಲಿ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ವಿವಿಧ ಕೆಲಸಗಳ ಅಂಗವಾಗಿ ಅಲ್ಲಿಗೆ ಬರುವವರು ತೊಂದರೆ ಅನುಭವಿಸುವಂತಾಗಿದೆ. ಈ ಬಜೆಟ್‌ನಲ್ಲಿ ತಾಲ್ಲೂಕಿಗೆ ಅನುದಾನ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಇಲ್ಲಿ ತಹಶೀಲ್ದಾರ್‌ ಕಚೇರಿಯೂ ಆರಂಭಗೊಂಡಿದೆ. ಆದರೆ ಈ ಕಚೇರಿಗೆ ಸಂಬಂಧಿಸಿದ ಹಲವು ಶಾಖೆಗಳು ಅಥಣಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಜನ …

Read More »

ಪ್ರವಾಹ ಪೀಡನೆಯಿಂದ ಮುಕ್ತಿ ಕೊಡಿ

ಮೂಡಲಗಿ: ಘಟಪ್ರಭಾ ನದಿಗೆ ಮಸಗುಪ್ಪಿ ಬಳಿಯಲ್ಲಿ ನಿರ್ಮಿಸಿರುವ ಸೇತುವೆಗೆ 200ಮೀ. ರವರೆಗೆ ಉದ್ದವಾದ ಒಡ್ಡವಿದ್ದು (ಅಪ್ರೋಚಿಂಗ ರೋಡ್‌) ಇದರಿಂದ ಪ್ರವಾಹ ಬಂದಾಗ ಸಂಚಾರ ನಿಲ್ಲುವುದು ಮತ್ತು ನದಿ ನೀರಿನ ವಿಸ್ತಾರ ಅಧಿಕವಾಗಿ ಸಾವಿರಾರು ಎಕರೆಯಷ್ಟು ಬೆಳೆ ಹಾನಿಯಾಗುತ್ತದೆ. ನೂರಾರು ಮನೆಗಳು ಜಲಾವೃತಗೊಳ್ಳುತ್ತವೆ. ಸೇತುವೆಯನ್ನು ವಿಸ್ತರಿಸಿ ಕಮಾನುಗಳನ್ನು ನಿರ್ಮಿಸಿದರೆ ಪ್ರವಾಹದಿಂದಾಗುವ ಹಾನಿ ಮುಕ್ತಗೊಳಿಸಲು ಸಾಧ್ಯ. ಇವೆಲ್ಲವನ್ನು ಪ್ರಸಕ್ತ ಆಯವ್ಯಯದಲ್ಲಿ ಪರಿಗಣಿಸಬೇಕಾಗಿದೆ. ಘಟಪ್ರಭಾ ನದಿಗೆ ಪ್ರವಾಹ ಬಂದಾಗೊಮ್ಮೆ ಸುಣಧೋಳಿ ಮತ್ತು ಅವರಾದಿ ಬ್ರಿಡ್ಜ್‌ …

Read More »

ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,934 ಪೌರಕಾರ್ಮಿಕರಿಗೆ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಸ್ವಚ್ಛತಾ ಯೋಧರಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿ ಪಾಲಿಕೆಯ ಮೇಲಿದೆ. ಇವರ ಆರೋಗ್ಯ ತಪಾಸಣೆಯನ್ನು ಪಾಲಿಕೆಯಿಂದ ಆಗಾಗ್ಗೆ ನಿರ್ವಹಿಸಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಬಾಲಸುಂದರ್ ತಿಳಿಸಿದರು. ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 49 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ …

Read More »