ರಾಮನಗರ: ಆಕಸ್ಮಿಕ ಅಗ್ನಿ ಅವಘಡದಲ್ಲಿ ಬಡ ದಂಪತಿಯ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಾಕಮ್ಮ ಹಾಗೂ ಮರಿಯಣ್ಣ ದಂಪತಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗಲಿದ್ದು, ಘಟನೆ ವೇಳೆ ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಂಪತಿ ಸ್ವಂತ ಮನೆ ನಿರ್ಮಿಸಿಕೊಳ್ಳುವ ಕನಸಿನಿಂದ ತಮ್ಮ ಹಸು ಮಾರಿ 2 ಲಕ್ಷ ಹಣವನ್ನು ಗುಡಿಸಲಿನಲ್ಲಿ ಇಟ್ಟುಕೊಂಡಿದ್ದರು. ಆದರೆ, ಮುಂಜಾನೆ ಏಕಾಏಕಿ ತಗಲಿದ ಆಕಸ್ಮಿಕ ಬೆಂಕಿಯ …
Read More »Yearly Archives: 2026
ಸಿಎಂ, ಜಮೀರ್ ಅಹ್ಮದ್ ವಿರುದ್ಧ ಧನ್ವೀರ್ದ್ದು ಎನ್ನಲಾದ ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾನೂನು ಕ್ರಮಕ್ಕೆ ಕೀರ್ತನ್ ಗೌಡ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ನಟ ಧನ್ವೀರ್ ಅವರು ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಸೂಕ್ತ ತನಿಖೆ ನಡೆಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಆಗ್ರಹಿಸಿದ್ದಾರೆ. ಪ್ರತಿಕಾ ಹೇಳಿಕೆ ನೀಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ …
Read More »ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ, ಡಿಕೆಶಿ ದೌಡು
ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪರಮೇಶ್ವರ್ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ …
Read More »ಇಸ್ತ್ರಿ ಮಾಡುವಾಗ ವಿದ್ಯುತ್ ಶಾಕ್ನಿಂದ ವಿದ್ಯಾರ್ಥಿ ಸಾವು
ಶಿವಮೊಗ್ಗ: ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ನಿಂದ ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ವಾದಿ-ಏ-ಹುಧಾದಲ್ಲಿ ನಡೆದಿದೆ. ಉಮರ್ ಫಾರುಕ್ (14) ಮೃತ ದುರ್ದೈವಿ. ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಟ್ಟೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ಆತನನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆ ಸಾಗಿಸಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಕರು ಹಾಗೂ, …
Read More »4 ಎಂಎಲ್ಸಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಪರಮೇಶ್ವರ್
ಬೆಂಗಳೂರು: ಇಂದಿನ ಎಂಎಲ್ಸಿ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಾಮಾನ್ಯವಾಗಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವಲ್ಪ ಹಿನ್ನಡೆಯನ್ನು ಅನುಭವಿಸುತ್ತಿತ್ತು. ಆದರೆ, ಈ ಬಾರಿ ಪದವೀಧರರು ಹಾಗೂ ಶಿಕ್ಷಕರ ಹಲವು ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಹೀಗಾಗಿ …
Read More »ದಸರಾ ದಂಗಲ್| ತಪ್ಪಿದ್ದರೆ ತಿದ್ದಿಕೊಳ್ಳುತ್ತೇವೆ: ಡಿಕೆಶಿ
ಬೆಳಗಾವಿ: ರಾಜಮನೆತನಕ್ಕೆ ನೀಡಬೇಕಾದ ಗೌರವ ಹಾಗೂ ಸಾಂಪ್ರದಾಯಿಕ ಪದ್ಧತಿಗಳಿಗೆ ಯಾವುದೇ ಚ್ಯುತಿ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವ ಆಚರಣೆ ವಿಚಾರವಾಗಿ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ದಸರಾ ಮಹೋತ್ಸವ ಸರ್ಕಾರದ ಕಾರ್ಯಕ್ರಮವೇ ಹೊರತು ಡಿಕೆಶಿ ಕಾರ್ಯಕ್ರಮವಲ್ಲ. ನಮ್ಮ ಕಡೆಯಿಂದ ಏನಾದರೂ ತಪ್ಪಾಗಿದ್ದರೆ ಅದನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು …
Read More »ಧರ್ಮಸ್ಥಳ ಸೌಜನ್ಯ ಕೇಸ್ – ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್ಐಟಿ ನೋಟಿಸ್
ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೇ ಆರಂಭದಿಂದ ಕೊನೆಯ ತನಿಖೆಯವರೆಗೂ ಇದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಆರಂಭದಲ್ಲಿ ಸಾಕ್ಷಿ ನಾಶ ಮಾಡಿದ ಬಗ್ಗೆ ಇವರ ಮೇಲೆ ಆರೋಪ ಕೇಳಿಬಂದಿತ್ತು. ಆರೋಪಗಳ ಹಿನ್ನಲೆಯಲ್ಲಿ ಎಸ್ಐಟಿ ವಿಚಾರಣೆಗೆ ಮುಂದಾಗಿದೆ. ಶುಕ್ರವಾರ (ಅ.30) ವಿಚಾರಣೆಗೆ ಹಾಜರಾಗುವಂತೆ ನೊಟೀಸ್ನಲ್ಲಿ ಸೂಚಿಸಲಾಗಿದೆ. 2012ರಲ್ಲಿ ಪ್ರಕರಣದ ತನಿಖೆ ನಡೆಸಿದ …
Read More »ಆಭರಣ ಪ್ರಿಯರಿಗೆ ಗುಡ್ನ್ಯೂಸ್ – ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿರುವಾಗಲೇ, ಆಭರಣ ಪ್ರಿಯರಿಗೆ ಜಾಕ್ಪಾಟ್ ಹೊಡೆದಿದೆ. ಇತ್ತೀಚೆಗೆ ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಕಳೆದೊಂದು ತಿಂಗಳಿನಿಂದ ದಿಢೀರ್ ಇಳಿಕೆಯಾಗಿದೆ. ಹಬ್ಬದ ಸಮಯದಲ್ಲಿ ಹಾಗೂ ಮದುವೆ ಸೀಜನ್ನಲ್ಲಿ ಚಿನ್ನ ಕೊಳ್ಳುವವರಿಗೆ ಇದು ಸೂಕ್ತ ಕಾಲವಾಗಿದ್ದು, ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡಿದೆ. ಈ ವರ್ಷದಲ್ಲಿ ರೆರ್ಕಾಡ್ ಬರೆದಿದ್ದ ಚಿನ್ನ ಕಳೆದೊಂದು ತಿಂಗಳಿನಿಂದ ದಿಢೀರ್ ಕುಸಿದಿದೆ. ಅದರಲ್ಲೂ ಬೆಳ್ಳಿ …
Read More »ಕಬ್ಬು ದರ ಸಂಘರ್ಷ| ಸತತ 13 ಗಂಟೆಗಳ ಸಭೆ ಬಳಿಕ ತಾತ್ಕಾಲಿಕ ಸಂಧಾನ – ಅಂತಿಮ ನಿರ್ಧಾರಕ್ಕೆ 2 ದಿನಗಳ ಗಡುವು
ಬೆಳಗಾವಿ: ಕರ್ನಾಟಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸತತ 13 ಗಂಟೆಗಳ ಸುದೀರ್ಘ ಸಭೆ ತಾತ್ಕಾಲಿಕವಾಗಿ ಮುಕ್ತಾಯಗೊಂಡಿದೆ. ಸರ್ಕಾರಕ್ಕೆ ಪ್ರೋತ್ಸಾಹ ಧನದ ನೇರ ಹೊರೆಯಿಂದ ಸದ್ಯಕ್ಕೆ ರಿಲೀಫ್ ಸಿಕ್ಕಿದ್ದರೂ, ಅಂತಿಮ ಒಪ್ಪಂದಕ್ಕೆ ಬರಲು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರು ಎರಡು ದಿನಗಳ ಕಾಲಾವಕಾಶ ಪಡೆದಿದ್ದಾರೆ. ಸಕ್ಕರೆ ಎಂಎಸ್ಪಿ (ಕನಿಷ್ಠ ಮಾರಾಟ ಬೆಲೆ) ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ …
Read More »ಧನ್ವೀರ್ಗೆ ವಾರ್ನಿಂಗ್ ಕೊಡೋಕೆ ದರ್ಶನ್ ಅಣ್ಣ ಹೇಳಿದ್ರು: ಝೈದ್ ಖಾನ್
ಧನ್ವೀರ್ಗೆ ವಾರ್ನಿಂಗ್ ಕೊಡೋಕೆ ದರ್ಶನ್ ಅಣ್ಣ ಹೇಳಿದರು ಎಂದು ನಟ ಝೈದ್ ಖಾನ್ ತಿಳಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಝೈದ್ ಖಾನ್ ಇಂದು ಭೇಟಿಯಾದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಝೈದ್ ಖಾನ್, ಧಮ್ ಇದ್ರೆ ನನ್ ಮುಂದೆ ಮಾತಾಡ್ಲಿ. ನಾನು ಜೈಲಿನಲ್ಲಿರುವಾಗ ನನ್ ಹೆಂಡ್ತಿ-ಮಕ್ಳ ಬಗ್ಗೆ ಮಾತಾಡೋಕೆ ಅವನ್ಯಾರು ಎಂದು ದರ್ಶನ್ ಗರಂ ಆಗಿದ್ದಾರೆಂದು ಹೇಳಿದರು. ದರ್ಶನ್ ಅಣ್ಣ ಧನ್ವೀರ್ಗೆ …
Read More »
Laxmi News 24×7