ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮುಧೋಳ–ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಎರಡನೇ ಬಾರಿಗೆ ಬೃಹತ್ ಪ್ರತಿಭಟನೆ ನಡೆಸಿದ ರೈತರು, ಬೇಡಿಕೆ ಈಡೇರುವವರೆಗೆ ಅಹೋರಾತ್ರಿ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಆಗಮಿಸಿದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ …
Read More »Yearly Archives: 2026
ಕಿತ್ತೂರಿಗೆ ಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಣೆ
ಕಿತ್ತೂರು: ಕಿತ್ತೂರು ಉತ್ಸವದ ಅಂತಿಮ ದಿನ ಸಮಾರೋಪ ಭಾಷಣ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಚನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಬಜೆಟ್ ನಲ್ಲಿ ₹40 ಕೋಟಿ ಅನುದಾನ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ, ಚೆನ್ನಮ್ಮನ ಇತಿಹಾಸ ಸಾರುವ ಪಾರ್ಕ್ ನಿರ್ಮಾಣಕ್ಕೆ ಯೋಜನೆ ಘೋಷಿಸಿದ್ದಾರೆ. ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮೇರೆಗೆ ಈ ಘೋಷಣೆ ಮಾಡಿದ್ದು, ಬರುವ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ, ಇಂದೇ …
Read More »202ನೇ ಕಿತ್ತೂರು ಉತ್ಸವದಲ್ಲಿ ಸಿಎಂ ಡಿಕೆಶಿ ಭಾಗಿ: ಬೆಳಗಾವಿಯ ಇಬ್ಬರು ಸಚಿವರು ಗೈರು!
ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರು ಸಮಾರಂಭಕ್ಕೆ ಗೈರಾಗಿರುವುದು ಗಮನ ಸೆಳೆಯಿತು. ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಆತ್ಮೀಯ ಸ್ವಾಗತ ಕೋರಿದರು. ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ರಸ್ತೆಯ ಇಕ್ಕೆಲಗಳಲ್ಲಿ …
Read More »ವಾಲ್ಮೀಕಿ ಜಯಂತಿ: ವಿವಿಧ ವಾಲ್ಮೀಕಿ ಯುವಕ ಸಂಘಗಳಿಗೆ ಲಕ್ಷ್ಮೀತಾಯಿ ಫೌಂಡೇಶನ್ನಿಂದ ಆರ್ಥಿಕ ನೆರವು
ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ವಾಲ್ಮೀಕಿ ಯುವಕ ಸಂಘಗಳು ಹಾಗೂ ವಾಲ್ಮೀಕಿ ಸಂಘಟನೆಗಳಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ …
Read More »ಮೌಢ್ಯ ಬದಿಗೊತ್ತಿ ಚಾಮರಾಜನಗರಕ್ಕೆ ಭೇಟಿ ಕೊಟ್ಟ ಡಿಕೆಶಿ
ಚಾಮರಾಜನಗರ: ಈ ಕ್ಷೇತ್ರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಬದಿಗೊತ್ತಿ ಸಿಎಂ ಡಿ.ಕೆ ಶಿವಕುಮಾರ್ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ. ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ಅವರು ಭಾಗಿಯಾದರು. ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮವನ್ನು ಬುದ್ದನ ಪ್ರತಿಮೆ, ಬೋಧಿ ವೃಕ್ಷ ಹಾಗೂ ಪುಸ್ತಕಗಳಿಗೆ ಪುಷ್ಪಾರ್ಚನೆ ನೇರವೇರಿಸಿ ಧಮ್ಮ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಸಿಎಂಗೆ ಸಚಿವರಾದ ಮುನಿಯಪ್ಪ, ನರೇಂದ್ರಸ್ವಾಮಿಯವರು …
Read More »ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್: ಹೆಚ್ಡಿಕೆ ಬಾಂಬ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ವಿವಾದದ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪದ ಬಾಂಬ್ ಸಿಡಿಸಿದ್ದಾರೆ. ದೇವೇಗೌಡರ ಕುಟುಂಬದ ರಾಜಕೀಯ ಅಸ್ತಿತ್ವವನ್ನೇ ಮುಗಿಸಲು ಬರೋಬ್ಬರಿ 600 ಕೋಟಿ ರೂ. ಬೃಹತ್ ಡೀಲ್ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಪ್ರತಿಕ್ರಿಯಿಸಿದ ಹೆಚ್ಡಿಕೆ, “ಒಂದು ಕುಟುಂಬವನ್ನು ಮುಗಿಸಲು 600 ಕೋಟಿ …
Read More »ದೀಪಾವಳಿಗೆ `ವೋಕಲ್ ಫಾರ್ ಲೋಕಲ್’ ಅಭಿಯಾನ ಬಲಪಡಿಸಿ: ಪ್ರಧಾನಿ ಮೋದಿ ಕರೆ
ನವದೆಹಲಿ: ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ `ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಜನರಿಗೆ ಕರೆ ನೀಡಿದ್ದಾರೆ. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ `ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳು ಸಾಧಿಸುತ್ತಿರುವ ಯಶಸ್ಸಿನ ಬಗ್ಗೆಯೂ ಪ್ರಸ್ತಾಪಿಸಿದರು. ಬಿಹಾರದ ಮಖಾನಾ ಮತ್ತು ಕರ್ನಾಟಕದ ತೊಗರಿ ಬೇಳೆ …
Read More »ಬರದಿಂದ ಶೇ. 80ರಷ್ಟು ಬೆಳೆ ನಷ್ಟ; ರೈತರಿಗೆ ಪರಿಹಾರ ಶೀಘ್ರ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ: ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ಕೆಲವು ಪ್ರದೇಶಗಳಲ್ಲಿ ಶೇ. 80ರಷ್ಟು ಬೆಳೆ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯ ಮೇಲೂ ಇದರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಸದ್ಯಕ್ಕೆ ರಾಜ್ಯದಲ್ಲಿ ಆಹಾರ ಧಾನ್ಯಗಳ ದಾಸ್ತಾನು ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಉತ್ಪಾದನೆಯಲ್ಲಿ ಕೊರತೆ ಎದುರಾದರೆ ಅದರ ಪರಿಣಾಮಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಂಸದರು ಮತ್ತು ಸಚಿವರು ಪಕ್ಷಭೇದ ಮರೆತು ಬರ ಪರಿಸ್ಥಿತಿಯನ್ನು …
Read More »10 ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ – ನಾಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರದಾನ
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 26ರಂದು ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ 2026-27ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ಜಲಸಂಪನ್ಮೂಲ ಇಲಾಖೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯರಾದ ಜಿ.ಟಿ. ಚಂದ್ರಶೇಖರಪ್ಪ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. …
Read More »ವೈಯಕ್ತಿಕ ದ್ವೇಷಕ್ಕೆ ಬಾಂಬ್ ಸ್ಫೋಟ – ಪುಲಕೇಶಿನಗರ ಬ್ಲಾಸ್ಟ್ ಹಿಂದಿನ ಅಸಲಿ ಕಹಾನಿ ಬಯಲು
ಬೆಂಗಳೂರು: ಸಿಲಿಕಾನ್ ಸಿಟಿಯ ಪುಲಕೇಶಿನಗರದಲ್ಲಿ ನಡೆದಿದ್ದ ಬಾಂಬ್ ಸ್ಫೋಟದ ಸೂತ್ರದಾರರು ಸೆರೆಸಿಕ್ಕಿದ್ದು, ಕೇವಲ ವೈಯಕ್ತಿಕ ದ್ವೇಷ ಹಾಗೂ ಆಸ್ತಿ ವಿವಾದಕ್ಕಾಗಿ ಬಾಂಬ್ ಸ್ಫೋಟಿಸಿ ಕೊಲೆಗೆ ಸಂಚು ರೂಪಿಸಿದ್ದ ಅಸ್ಸಾಂ ಮೂಲದ ಖತರ್ನಾಕ್ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪುಲಕೇಶಿನಗರದ ನಿರ್ಮಾಣ ಹಂತದ ಕಟ್ಟಡದಲ್ಲಿನ ಬಾಂಬ್ ಬ್ಲಾಸ್ಟ್ ಕೇಸ್ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ. ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಅಲ್ಲಾವುದ್ದೀನ್ ಎಂಬಾತನನ್ನು ಮುಗಿಸುವುದಕ್ಕಾಗಿಯೇ ಈ ಬಾಂಬ್ ಸ್ಕೆಚ್ ಹಾಕಲಾಗಿತ್ತು. ಅಸ್ಸಾಂ …
Read More »
Laxmi News 24×7