Breaking News

Yearly Archives: 2026

ಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!

ಅಯೋಧ್ಯೆ: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 8,000 ರೂ. ನಿಂದ 12,000 ರೂ.ಗೆ ಹೆಚ್ಚಿಸುವುದಾಗಿ ಹಾಗೂ ಸಹಾಯಕಿಯರ ಗೌರವಧನ 4,000 ರೂ. ನಿಂದ 6,000 ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಅಯೋಧ್ಯೆ ಪ್ರವಾಸದ ವೇಳೆ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ …

Read More »

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ – 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!

ಲಕ್ನೋ: ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ  ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ (ಇಂದು) ಲಕ್ನೋ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಮೊದಲ ಲ್ಯಾಂಡಿಂಗ್ ಪ್ರಯತ್ನ ಸ್ಥಗಿತಗೊಳಿಸಿ ‘ಗೋ-ಅರೌಂಡ್’  ಮಾಡಿದೆ. ಬಳಿಕ 2ನೇ ಪ್ರಯತ್ನದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ವರದಿಗಳು ತಿಳಿಸಿವೆ. ‘ಗೋ-ಅರೌಂಡ್’ ಎಂದರೆ ವಿಮಾನವು ಲ್ಯಾಂಡಿಂಗ್‌ಗೆ ಮುನ್ನ ಇಳಿಯುವ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಿ ಮತ್ತೆ ಮೇಲಕ್ಕೆ ಏರಿ, ಪರಿಸ್ಥಿತಿ ಅನುಕೂಲಕರವಾದ ನಂತರ ಮತ್ತೊಮ್ಮೆ ಲ್ಯಾಂಡಿಂಗ್‌ಗೆ ಪ್ರಯತ್ನಿಸುವ …

Read More »

ಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ  ಅವರ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ. ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. ಮಂಜುನಾಥ್‌ ಅಬಕಾರಿ ಅಕ್ರಮದ ಮೇಲೆ ಈ ಹಿಂದೆ ಇ.ಡಿ ದಾಳಿ ಮಾಡಿತ್ತು. 18 ಅನಧಿಕೃತ ಲೈಸೆನ್ಸ್‌ ಕೊಡುವುದಕ್ಕೆ ಸತೀಶ್‌ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಇದೆ. ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ …

Read More »

ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದ ಎಫ್‌ಡಿಎ – ಚಿಕಿತ್ಸೆ ಫಲಿಸದೇ ಸಾವು

ಕಾರವಾರ: ಕರ್ತವ್ಯದಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕಚೇರಿಯಲ್ಲೇ ಕುಸಿದುಬಿದ್ದ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಪಂಡರಿನಾಥ್ ವಿ. ನಾಯ್ಕ (51) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ. ಘಟನೆ ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ, ತಹಶೀಲ್ದಾರ್ …

Read More »

ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿಆರ್‌ಐ ಅಧಿಕಾರಿಗಳು  ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಧಿನಗರದಲ್ಲಿ 180 ನಕ್ಷತ್ರ ಆಮೆಗಳನ್ನು  ವಶಪಡಿಸಿಕೊಂಡಿದ್ದಾರೆ. ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹತ್ತು ಸಾವಿರಕ್ಕೆ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸಿದ್ದು, ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಓರ್ವ ವ್ಯಕ್ತಿ ಕಲಾಸಿಪಾಳ್ಯದಿಂದ ನಕ್ಷತ್ರ ಆಮೆಗಳನ್ನು ತಂದುಕೊಟ್ಟಿದ್ದ. ಘಟನೆ ಸಂಬಂದ …

Read More »

ಕಚೇರಿ ಅಲೆದಾಟಕ್ಕೆ ಇನ್ಮುಂದೆ ಬ್ರೇಕ್!

ಬೆಳಗಾವಿ:ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡುವ ಪರಿಸ್ಥಿತಿ ಇನ್ನು ಮುಂದೆ ನಿರ್ಮಾಣವಾಗಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸ್ಪಂದಿಸಿ, ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಧರ್ಮಟ್ಟಿ ಗ್ರಾಮದಲ್ಲಿ ಶನಿವಾರ ತಾಲೂಕು ಆಡಳಿತ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಹೊಸ ಪ್ರಜಾಸೇವೆ ವ್ಯವಸ್ಥೆ ಕೇವಲ ಅರ್ಜಿ ಸ್ವೀಕರಿಸುವ …

Read More »

ಗ್ರಾಪಂನಲ್ಲಿ ಇ-ಸ್ವತ್ತು ಪಡೆಯಲು ಆನ್‌ಲೈನ್ ಅರ್ಜಿ

ಬೆಳಗಾವಿ:ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಗೆ ಆನ್‌ಲೈನ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಜಿಪಂ ಸಿಇಒ ರಾಹುಲ ಶಿಂಧೆ ತಿಳಿಸಿದ್ದಾರೆ.  ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಸಾರ್ವಜನಿಕರಿಂದ ಈವರೆಗೆ ಒಟ್ಟು 3,403 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 2,862 ಅರ್ಜಿಗಳಿಗೆ ಇ-ಸ್ವತ್ತು ವಿತರಿಸಲಾಗಿದೆ. ಉಳಿದ ಅರ್ಜಿಗಳ ವಿಲೇವಾರಿ …

Read More »

ಬೆಳಗಾವಿ-ಧಾರವಾಡ ನೇರ ರೈಲ್ವೆ ಯೋಜನೆ ವಿಳಂಬ

 ಬೆಳಗಾವಿ: ಬಹುನಿರೀಕ್ಷಿತ ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದ ನಿರ್ಲಕ್ಷೃ, ಭೂ ಸ್ವಾಧೀನ ಪರಿಹಾರ ಬಿಡುಗಡೆ ಮಾಡದಿರುವುದರಿಂದ ಯೋಜನೆ ನನೆಗುದಿಗೆ ಬಿದ್ದಿದೆ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು. ನಗರದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಯೋಜನೆಗೆ ಅಗತ್ಯವಿರುವ  1,200 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈಗಾಗಲೇ ರೈತರು ಭೂಮಿ ಬಿಟ್ಟುಕೊಟ್ಟಿದ್ದಾರೆ. ಆದರೆ, ರಾಜ್ಯ ಸರ್ಕಾರವು 400 ಕೋಟಿ ರೂ. ಪರಿಹಾರ ಪೈಕಿ ಇಲ್ಲಿಯವರೆಗೆ 50 …

Read More »

ಕಾರ್ಮಿಕರ ಕಿಟ್ ವಿತರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಚಿಕ್ಕೋಡಿ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಒದಗಿಸಲು ಒತ್ತು ನೀಡುವುದರ ಜತೆಗೆ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಫಲಾನುಭವಿಗಳಿಗೆ ಕಿಟ್ ವಿತರಣೆ ಕಾರ್ಯಕ್ರಮ ಅವರು ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರವು ಕಾರ್ಮಿಕರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗಾಗಿ ಹಲವು …

Read More »

ಕರ್ನಾಟಕದಲ್ಲಿ ಭತ್ತದ ಬಿತ್ತನೆಗೆ ಮುಂಗಾರು ಹೊಡೆತ – 4.28 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ  ಆಗದ ಕಾರಣ ಭತ್ತದ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಬಿತ್ತನೆ ಕಡಿಮೆಯಾಗಿದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದ್ರೆ ಭತ್ತದ ಬಿತ್ತನೆ ಪ್ರಮಾಣದಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ. ಇನ್ನೂ ಕರ್ನಾಟಕ ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಲ್ಲೂ ಭತ್ತದ ಬಿತ್ತನೆ ಪ್ರಮಾಣದಲ್ಲಿ ಕುಸಿತ ಕಂಡುಬಂದಿದೆ. ಕಳೆದ …

Read More »