Breaking News

Yearly Archives: 2026

ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಆತ್ಮಹತ್ಯೆ – ಡೆತ್‌ನೋಟ್ ಪತ್ತೆ!

ನವದಹೆಲಿ: ದೆಹಲಿ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರಾಕೇಶ್ ಮೆಹ್ತಾ  ಅವರು ನೋಯ್ಡಾದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ನಿವೃತ್ತ ಐಎಎಸ್ ಅಧಿಕಾರಿ ಮೆಹ್ತಾ ಅವರ ಮೃತದೇಹ ಸೆಕ್ಟರ್ 82 ರಲ್ಲಿರುವ ವಸತಿ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಫೇಸ್‌-2 ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳ ಪರಿಶೀಲಿಸಿದ ಬಳಿಕ ಮೃತದೇಹವನ್ನ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. …

Read More »

ಭಾರತದ 7.8% ಜಿಡಿಪಿ ಬೆಳವಣಿಗೆ ವಿಶ್ವಕ್ಕೆ ಹೊಸ ಭರವಸೆ – ಪ್ರಧಾನಿ ಮೋದಿ

ಮುಂಬೈ: ಜಾಗತಿಕ ಮಟ್ಟದಲ್ಲಿ ಸವಾಲಿನ ಪರಿಸ್ಥಿತಿ ಮುಂದುವರಿದಿದ್ದರೂ, ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ಶೇ.7.8ರಷ್ಟು ಬೆಳವಣಿಗೆ ದಾಖಲಿಸಿದೆ. ಇದು ಸಂಘರ್ಷಗಳು, ವ್ಯಾಪಾರ ಉದ್ವಿಗ್ನತೆ ಹಾಗೂ ಇಂಧನ ಮತ್ತು ತೈಲ ಪೂರೈಕೆ ಸರಪಳಿಗಳಲ್ಲಿನ ಅಡೆತಡೆಗಳ ನಡುವೆಯೂ ವಿಶ್ವಕ್ಕೆ ಹೊಸ ಭರವಸೆ ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನ 3ನೇ ಹಂತದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಜಗತ್ತು ದೀರ್ಘಕಾಲದಿಂದ ಸಂಘರ್ಷ ಮತ್ತು ಅನಿಶ್ಚಿತತೆಯ …

Read More »

ಸಿದ್ಧಾರ್ಥ ಟ್ರಸ್ಟ್‌ಗೆ ನಿಯಮಬಾಹಿರವಾಗಿ ಸೈಟ್‌ ವಿಚಾರ – ಖರ್ಗೆ ಕುಟುಂಬ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಿರುವು!

ಬೆಂಗಳೂರು: ಖಾಸಗಿ ದೂರು ಸಲ್ಲಿಕೆಯಲ್ಲಿನ ಪ್ರಮಾಣ ಪತ್ರದ ತಾಂತ್ರಿಕ ದೋಷ ಮುಂದಿಟ್ಟುಕೊಂಡು ರಾಜಕಾರಣಿಗಳ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಬದಲಿಗೆ ವಿಚಾರಣಾ ನ್ಯಾಯಾಲಯ ಸ್ವತಃ ವಿಚಾರಣೆಗೆ ಮುಂದಾಗುವುದು ತರವಲ್ಲ ಎಂದು ಹೈಕೋರ್ಟ್  ಅಭಿಪ್ರಾಯಪಟ್ಟಿದೆ. ಈ ಮೂಲಕ, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ( ನಿಯಮಬಾಹಿರವಾಗಿ ನಿವೇಶನ ಮಂಜೂರು ಮಾಡಲಾಗಿದೆ’ ಎಂಬ ದೂರಿನ ಪ್ರಕರಣವನ್ನ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯಕ್ಕೆ ಹಿಂದಿರುಗಿಸಿ ಆದೇಶಿಸಿದೆ. …

Read More »

ಅಪಘಾತದಲ್ಲಿ ಗಾಯಗೊಂಡ ಮಹಿಳೆ ಆರೋಗ್ಯ ವಿಚಾರಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರವಾಸದಲ್ಲಿದ್ದ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಕ್ಕಿನಕೇರಿ ಗ್ರಾಮದ ಮುಖಂಡರಾದ ನಾರಾಯಣ ಬೆಳಗಾಂವ್ಕರ್ ಅವರ ಪತ್ನಿ ಶ್ರೀಮತಿ ಶಾಂತಾ ಅವರು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿರುವ ವಿಷಯ ತಿಳಿದು, ತಕ್ಷಣ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಾರಾಯಣ ಬೆಳಗಾಂವ್ಕರ್ ಅವರು ತಮ್ಮ ಪತ್ನಿ ಶಾಂತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಶಾಂತಾ ಅವರಿಗೆ ಗಾಯಗಳಾಗಿದ್ದವು. …

Read More »

ಮಹಿಳೆಯರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಸೇವೆ ನೀಡಿ: ನಾಗಲಕ್ಷ್ಮಿ ಚೌಧರಿ ಸೂಚನೆ

ಬೆಳಗಾವಿ: ಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಎಲ್ಲ ಸಂಸ್ಥೆಗಳು, ಕಚೇರಿಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ)ಯನ್ನು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನ …

Read More »

ಸೆ.11 ರಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಸೆಪ್ಟೆಂಬರ 5 ರಂದು ಖಾನಾಪುರ ತಾಲೂಕಿನ ಲೋಕಮಾನ್ಯ ಭವನದಲ್ಲಿ ನಿಗದಿಯಾಗಿದ್ದ ಪ್ರಜಾ ಸೇವೆ ಆಂದೋಲನ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ ದಿನಾಂಕ:11-09-2026 ರ ಶುಕ್ರವಾರ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮರು ನಿಗದಿಪಡಿಸಲಾಗಿದೆ. ಸಭೆಯಲ್ಲಿ ಸ್ಥಳೀಯ ಶಾಸಕರು ಉಪಸ್ಥಿತರಿರಲಿದ್ದು, ಯರಗಟ್ಟಿ/ಸವದತ್ತಿ ತಾಲೂಕಿನ …

Read More »

ಪ್ರದೋಷ್ ಮಾಫಿ ಸಾಕ್ಷಿ ಪ್ರಕ್ರಿಯೆ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

ಬೆಂಗಳೂರು: ಪ್ರದೋಷ್ ಮಾಫಿ ಸಾಕ್ಷಿ ಪ್ರಕ್ರಿಯೆ ಪ್ರಶ್ನಿಸಿ ಕೊಲೆ ಆರೋಪಿ ದರ್ಶನ್   ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಅಂಗೀಕಾರ ಮಾಡಿದೆ. ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಪ್ರದೋಷ್ ಮಾಫಿ ಸಾಕ್ಷಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ದರ್ಶನ್ ಅರ್ಜಿಯನ್ನು ಭಾಗಶ: ಅಂಗೀಕಾರ ಮಾಡಿದೆ. ಜೊತೆಗೆ ಯಾವುದೇ ವಾದ-ಪ್ರತಿವಾದಕ್ಕೆ ಅವಕಾಶ ನೀಡದೇ ಒಂದು ವಾರದಲ್ಲಿ ಹೊಸ ಆದೇಶ ನೀಡಲು ಸೆಷನ್ಸ್ ಕೋರ್ಟ್‌ಗೆ ಸೂಚನೆ ನೀಡಿದೆ. ಪ್ರದೋಷ್ ಮಾಫಿ ಸಾಕ್ಷಿ …

Read More »

ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್ ಆಗಿದೆ – ಯತ್ನಾಳ್

ವಿಜಯಪುರ: ಬಿವೈ ವಿಜಯೇಂದ್ರ  ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ ಅಶೋಕ್, ಸುನೀಲ್ ಕುಮಾರ್ ಎಲ್ಲರೂ ಸದನದ ಬಾವಿಗೆ ಇಳಿದು ಹೋರಾಟ ಮಾಡಿದ್ದರು. ಆಗ ವಿಜಯೇಂದ್ರ 5 ನಿಮಿಷ ಬಾವಿಯಲ್ಲಿ ನಿಲ್ಲಲ್ಲಿಲ್ಲ. ಬರಿ ಪುಕ್ಸಟ್ಟೆ ಒಂದು ಪಾದಯಾತ್ರೆ ಮಾಡಿದ್ರೆ ಕ್ರೆಡಿಟ್ ಬರುತ್ತಾ? ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ …

Read More »

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು – ಪ್ರಿಯಕರನಿಂದ ಕೊಲೆ ಶಂಕೆ

ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕು ಚೊಕ್ಕಹಳ್ಳಿ  ಗ್ರಾಮದ ಬಾಡಿಗೆ ಮನೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕು ಇನಮಿಂಚೇನಹಳ್ಳಿಯ ನಿವಾಸಿ ಚೈತ್ರಾ ಮೃತ ಮಹಿಳೆ. ಚೈತ್ರಾ 7-8 ವರ್ಷಗಳ ಹಿಂದೆ ಗಂಡನನ್ನ ಬಿಟ್ಟು ಬೇರೆ ಮನೆಯಲ್ಲಿ ವಾಸವಾಗಿದ್ದರು. 10 ಹಾಗೂ 12 ವರ್ಷದ ಮಕ್ಕಳೊಂದಿಗೆ ಚೈತ್ರಾ ಬೇರೆ ವಾಸವಾಗಿದ್ದರು. ಕೋಲಾರ ಮೂಲದ ಪ್ರಿಯಕರ ಶಬ್ಬೀರ್ ಎಂಬಾತನ ವಿರುದ್ಧ ಹಲ್ಲೆ, ಕೊಲೆ ಆರೋಪ ಕೇಳಿಬಂದಿದೆ. ಚೈತ್ರಾಳನ್ನ …

Read More »

ಮಹದೇವಪ್ಪಣ್ಣ ನನಗೆ ತಂದೆ ಸಮಾನ, ಅವರೇ ಆ ಮನೆಯಲ್ಲಿರಲಿ: ಬೈರತಿ ಸುರೇಶ್

ಬೆಂಗಳೂರು: ನಮ್ಮ ನಡುವೆ ಯಾವುದೇ ಮನೆ ಗಲಾಟೆ ಇಲ್ಲ. ತಪ್ಪು ಮಾಹಿತಿ ಹೇಗೆ ಹರಡಿತೋ ಗೊತ್ತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್  ಹೇಳಿದ್ದಾರೆ. ಸರ್ಕಾರಿ ನಿವಾಸ ಹಂಚಿಕೆ ವಿಚಾರವಾಗಿ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮತ್ತು ತನ್ನ ಮಧ್ಯೆ ಕಿತ್ತಾಟ ನಡೆಯುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬೈರತಿ ಸುರೇಶ್ ವಿಧಾನಸೌಧದಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಮ್ಮ ನಡುವೆ ಯಾವುದೇ ಮನೆ ಗಲಾಟೆ ಇಲ್ಲ. ತಪ್ಪು ಮಾಹಿತಿ ಹೇಗೆ ಹರಡಿತೋ …

Read More »