ಕಿತ್ತೂರು: ಐತಿಹಾಸಿಕ ಕಿತ್ತೂರು ಉತ್ಸವ-2026ರ ಅಂಗವಾಗಿ ಆಯೋಜಿಸಲಾಗಿರುವ ಜಲ ಕ್ರೀಡೆಗಳು ಹಾಗೂ ದೋಣಿ ವಿಹಾರದ ಕಾರ್ಯಕ್ರಮಕ್ಕೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು. ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಐತಿಹಾಸಿಕ ಪರಾಕ್ರಮ, ಶೌರ್ಯ ಮತ್ತು ಸ್ವಾಭಿಮಾನದ ಹೋರಾಟವನ್ನು ಸ್ಮರಿಸುವ ಕಿತ್ತೂರು ಉತ್ಸವದ ಭಾಗವಾಗಿ, ಸಾರ್ವಜನಿಕರು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಜಲ ಕ್ರೀಡೆಗಳು ಮತ್ತು ದೋಣಿ ವಿಹಾರದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ಥಳೀಯ ನಿವಾಸಿಗಳು ಮಾತ್ರವಲ್ಲದೆ, ದೂರದೂರುಗಳಿಂದ ಆಗಮಿಸುವ …
Read More »Yearly Archives: 2026
ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಸಮೀಕ್ಷೆ ಗಡುವು ವಿಸ್ತರಣೆ ಇಲ್ಲ: ತಕ್ಷಣ ದಾಖಲಾತಿ ಸಲ್ಲಿಸಿ
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ನೀಡಿರುವ ಗಡುವು ಅಕ್ಟೋಬರ್ 31ಕ್ಕೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನು ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು ಬೆಸ್ಕಾಂ ವಿನಂತಿಸಿದೆ.ಕಳೆದ ಮೂರುವರೆ ತಿಂಗಳಿನಿಂದ ನಡೆಯುತ್ತಿರುವ ಸಮೀಕ್ಷೆಯಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರಿಗೆ ಬೆಸ್ಕಾಂ ಕಚೇರಿಗೆ ತೆರಳಿ ದಾಖಲಾತಿ ಸಲ್ಲಿಸಲು ರಾಜ್ಯ …
Read More »ಗೌತಮ್ ಪಾಟೀಲ್ ಜೊತೆ ಸರಳವಾಗಿ ನೆರವೇರಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ
ಲೋಕಸಭೆಯ ಅತ್ಯಂತ ಕಿರಿಯ ಸಂಸದೆಯರಲ್ಲಿ ಒಬ್ಬರಾದ ಚಿಕ್ಕೋಡಿ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿಶ್ಚಿತಾರ್ಥ ಗೌತಮ್ ಪಾಟೀಲ್ ಅವರೊಂದಿಗೆ ನೆರವೇರಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿಯಾಗಿರುವ ಪ್ರಿಯಾಂಕಾ ಅವರು ರಾಯಚೂರು ಮೂಲದ ಚಾರ್ಟರ್ಡ್ ಅಕೌಂಟೆಂಟ್ ಗೌತಮ್ ಪಾಟೀಲ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಗೋಕಾಕ್ನ ಕ್ಲಬ್ ರಸ್ತೆಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ‘ಹಿಲ್ ಗಾರ್ಡನ್’ ನಿವಾಸದಲ್ಲಿ ಸರಳವಾಗಿ ಮಗಳು ಪ್ರಿಯಾಂಕ ಜಾರಕಿಹೊಳಿ ಹಾಗೂ ಗೌತಮ್ ಪಾಟೀಲ್ ನಿಶ್ಚಿತಾರ್ಥ …
Read More »ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ: ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಧನ್ವೀರ್ ತಂದೆಯಿಂದ ದೂರು
ನಟ ಧನ್ವೀರ್ ಗೌಡ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಧನ್ವೀರ್ ತಂದೆ ತಿಮ್ಮೇಗೌಡ, ವಿಜಯಲಕ್ಷ್ಮಿ ಹಾಗೂ ತಂಡದ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಗೆ ಬಂದು ಗಲಾಟೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ. ತಿಮ್ಮೇಗೌಡ ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 21ರಂದು ರಾತ್ರಿ ಸುಮಾರು 8.30ರ ವೇಳೆಗೆ ಧನ್ವೀರ್ ಮೈಸೂರಿಗೆ …
Read More »ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ
ಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ ಕೂಡ ಯಶಸ್ವಿಯಾಗಿ ನೆರವೇರಿದೆ. ಆದ್ರೆ ದಸರಾದಲ್ಲಿ ನಡೆದ ಕೆಲ ಘಟನೆಗಳ ಬಗ್ಗೆ ಈಗ ಅಪಸ್ವರ ಎದ್ದಿದೆ. ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ್ದು, ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಯತೀಂದ್ರ ಸಿದ್ದರಾಮಯ್ಯ ಅವರು, ಶಿಷ್ಟಾಚಾರ ಪಟ್ಟಿಯಲ್ಲಿ …
Read More »ಕ್ರೈಂ, ಥ್ರಿಲ್ಲರ್ ಸಿನಿಮಾದಂತೆ ರೋಚಕವಾಗಿ ಕಂಡುಬಂದ ಲೂಟಿಕೋರರು ವರ್ಸಸ್ ರಕ್ಷಕರು ಟಾಸ್ಕ್
ಬಿಗ್ಬಾಸ್ನಲ್ಲಿ ಈ ವಾರ ಲೂಟಿಕೋರರು ವರ್ಸಸ್ ರಕ್ಷಕರು ಟಾಸ್ಕ್ ಭಾರೀ ಹೈಲೈಟ್ ಆಗಿದೆ. ನಾಮಿನೇಟ್ ಆಗಿ ಜೈಲಲ್ಲಿರೋ ಸ್ಪರ್ಧಿಗಳೇ ಲೂಟಿಕೋರರಾಗಿದ್ದರು. ಈ ಪೈಕಿ ಓರ್ವ ಪುರುಷ ಸ್ಪರ್ಧಿ ತಾಂಡವ್ ಸೇರಿದಂತೆ ಇನ್ನುಳಿದ ಎಲ್ಲಾ ಸ್ಪರ್ಧಿಗಳು ಮಹಿಳೆಯರೇ ಆಗಿದ್ದರು. ಸೌಂದರ್ಯ, ಆಸಿಯಾ, ಲಕ್ಷ್ಮಿ, ಕುಮಾರಿ ಹಾಗೂ ಸೋನಿಕಾ ಲೂಟಿಕೋರರ ಗ್ಯಾಂಗ್ನಲ್ಲಿ ಆಟವಾಡಿದ್ದರು. ಅತ್ಯಂತ ಕಷ್ಟವಾಗಿದ್ದ ಟಾಸ್ಕ್ನ್ನು ಚಾಣಾಕ್ಷತನದಿಂದ ಲೂಟಿಕೋರರ ಗ್ಯಾಂಗ್ ಲೂಟಿ ಮಾಡಿ ಆಡಿಯನ್ಸ್ಗೆ ಭರ್ಜರಿ ಮಜ ಕೊಟ್ಟಿದೆ. ವಜ್ರ ಕದಿಯುವ …
Read More »ಆಯೋಗದ ಅಧಿಕಾರಿ ವಿರುದ್ಧ ಇಬ್ಬರು ಚುನಾವಣಾ ಆಯುಕ್ತರ ಆಕ್ಷೇಪ – RTI ನಲ್ಲಿ ಬಹಿರಂಗ
ನವದೆಹಲಿ: ಎಸ್ಐಆರ್ ಪ್ರಕ್ರಿಯೆ ವಿರೋಧಿ, ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು, ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರ ಕಾರ್ಯವೈಖರಿಯ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿ ಟಿ.ವಿ. ಸೋಮನಾಥನ್ ಅವರಿಗೆ ಪ್ರತ್ಯೇಕವಾಗಿ ದೂರು ಸಲ್ಲಿಸಿದ್ದಾರೆ. ಆದರೆ, ಈ ಉನ್ನತ ಅಧಿಕಾರಿಯು ಯಾವುದೇ ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂಬುದು ಆರ್ಟಿಐ (ಮಾಹಿತಿ …
Read More »ಮಾಂಜಾ ದಾರ ಮಾರಾಟಗಾರರ ಮೇಲೆ ಕ್ರಿಮಿನಲ್ ಪ್ರಕರಣ – ಹುಬ್ಬಳ್ಳಿ, ಧಾರವಾಡ ವ್ಯಾಪ್ತಿಯಲ್ಲಿ 12 ಕೇಸ್ ದಾಖಲು
ಹುಬ್ಬಳ್ಳಿ: ಮಾಂಜಾ ದಾರ ಮಾರಾಟಗಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಒಟ್ಟು 12 ಕೇಸ್ ದಾಖಲಾಗಿದೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿನ್ನೆ ಮಾಂಜಾ ದಾರದಿಂದ ಮಹಿಳೆಯೊಬ್ಬರ ಜೀವ ಕಳೆದುಕೊಂಡಿದ್ದಾರೆ. ಸಾಕಷ್ಟು ಜಾಗೃತಿ ಮೂಡಿಸಿದ್ರೂ ಒಂದು ಜೀವ ಹೋಗಿದೆ. ಹೀಗಾಗಿ ಮಾಂಜಾ ದಾರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಹುಬ್ಬಳ್ಳಿ – ಧಾರವಾಡ …
Read More »ನಾಳೆಯಿಂದ 2 ದಿನ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ – ಮಲ್ಲಿಕಾರ್ಜುನ ಖರ್ಗೆಯಿಂದ ಉದ್ಘಾಟನೆ
ಚಾಮರಾಜನಗರ: ಅಕ್ಟೋಬರ್ 24 ಹಾಗೂ ಅ.25 ರಂದು ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ ನಡೆಯಲಿದೆ. ಬೃಹತ್ ಸಮ್ಮೇಳನಕ್ಕಾಗಿ ಚಾಮರಾಜನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭರದ ಸಿದ್ಧತೆ ನಡೆದಿದೆ. ಶ್ರೀಲಂಕಾ, ವಿಯೆಟ್ನಾಂ, ಜಪಾನ್, ಮಲೇಶಿಯಾ ಮೊದಲಾದ ದೇಶಗಳ ಸಾವಿರಾರು ಬೌದ್ಧ ಬಿಕ್ಕುಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಎರಡು ದಿನಗಳು ಒಟ್ಟಾರೆ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ …
Read More »ರಾಜ್ಯದಲ್ಲಿ KPSC ಆಯ್ತು, ಇದೀಗ KSOU ಸರದಿ – ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ
ಶಿವಮೊಗ್ಗ: ರಾಜ್ಯದಲ್ಲಿ ಕೆಪಿಎಸ್ಸಿ ವಿವಾದದ ಬಳಿಕ ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮವೊಂದು ಬೆಳಕಿಗೆ ಬಂದಿದ್ದು, ಹಣ ಕೊಟ್ಟರೇ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆಎಸ್ಓಯು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ನೇತೃತ್ವದಲ್ಲಿ ಹಣ ಪಡೆದು ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿರುವ ಕರಾಳ ದಂಧೆ ಬಟಾಬಯಲಾಗಿದೆ. …
Read More »
Laxmi News 24×7