Breaking News

Yearly Archives: 2026

ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ – 10 ಜನರ ವಿರುದ್ಧ FIR

ಬೆಂಗಳೂರು: ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ ಮಾಡಿದ್ದ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಾಹಿದ್ (19) ಹಲ್ಲೆಗೊಳಗಾದ ಯುವಕ. ವಾಹನಕ್ಕೆ ಅಡ್ಡ ಬಂದ ಎಂದು ಶಾಹೀದ್ ಹಾಗೂ ಫರ್ದೀನ್ ಪಾಷಾ ಎಂಬ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜಗಳವಾಡುತ್ತಿದ್ದ ಇಬ್ಬರನ್ನು ಕಳ್ಳರು ಎಂದು ಬಿಂಬಿಸಿದ್ದ. ಕೂಡಲೇ ಅಲ್ಲಿದ್ದ ಸ್ಥಳೀಯರು ಇಬ್ಬರನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಶಾಹೀದ್ ಮೇಲೆ ಗಂಭೀರ ಹಲ್ಲೆ …

Read More »

ತುಮಕೂರು ಹಾಲು ಒಕ್ಕೂಟದ ನೇಮಕಾತಿ ವಿವಾದ ಮತ್ತೆ ಮುನ್ನೆಲೆಗೆ; 38 ಅಭ್ಯರ್ಥಿಗಳಿಂದ ಕಾನೂನು ಹೋರಾಟ

ತುಮಕೂರು: ಹಾಲು ಒಕ್ಕೂಟದ  ನೇಮಕಾತಿ ಅಕ್ರಮದ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ. 2016-17ನೇ ಸಾಲಿನಲ್ಲಿ ನಡೆದ 97 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ನೌಕರಿಯಿಂದ ವಂಚಿತ ಅಭ್ಯರ್ಥಿಗಳು, ಈಗ ಮತ್ತೆ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ. ಈಗಾಗಲೇ ಕಾನೂನು ಹೋರಾಟದಲ್ಲಿ ಜಯ ಸಾಧಿಸಿರುವ ವೇಣುಗೋಪಾಲ್ ಅವರ ಬೆನ್ನಲ್ಲೇ, ಇನ್ನುಳಿದ 37 ಅಭ್ಯರ್ಥಿಗಳೂ ಹೋರಾಟಕ್ಕೆ ಸಜ್ಜಾಗಿದ್ದಾರೆ. 97 ಹುದ್ದೆಗಳ ನೇಮಕಾತಿ ಬಗ್ಗೆ ಆರೋಪ ತುಮುಲ್‌ನಲ್ಲಿ 2016-17ನೇ ಸಾಲಿನಲ್ಲಿ …

Read More »

ಕಾಕತಿ ರಾಣಿ ಚೆನ್ನಮ್ಮ ಕೋಟೆ ಅಭಿವೃದ್ಧಿಗೆ ಪರ್ಯಾಯ ಜಾಗದ ಚಿಂತನೆ: ಸಚಿವ ಸತೀಶ ಜಾರಕಿಹೊಳಿ

ಕಾಕತಿ: ಕಿತ್ತೂರು ರಾಣಿ ಚೆನ್ನಮ್ಮನ ಇತಿಹಾಸ ಸಾರುವ ಕಾಕತಿಯ ಕೋಟೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಪರ್ಯಾಯ ಜಾಗ ಲಭ್ಯವಾದರೆ ಕೋಟೆ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಕಾಕತಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ 202ನೇ ಕಿತ್ತೂರು …

Read More »

ಟಿಬೆಟ್‌ನಲ್ಲಿ ಪ್ರಬಲ ಭೂಕಂಪ; 18 ಮಂದಿ ಸಾವು, 300ಕ್ಕೂ ಹೆಚ್ಚು ಮನೆಗಳು ನೆಲಸಮ

ಬೀಜಿಂಗ್: ಚೀನಾದ ಟಿಬೆಟ್ ಪ್ರದೇಶದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ  ಸಂಭವಿಸಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 46 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಮನೆಗಳಿಗೆ ವ್ಯಾಪಕ ಹಾನಿಯಾಗಿದೆ. ಜನರು ಅಂಗಡಿ, ರೆಸ್ಟೋರೆಂಟ್‌ಗಳಿಂದ ಹೊರಗೆ ಓಡಿಬಂದಿದ್ದಾರೆ. ಸದ್ಯ ಭೂಕಂಪ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಟಿಬೆಟ್‌ನ ಪರ್ವತ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಪ್ರಾದೇಶಿಕ ರಾಜಧಾನಿ ಲಾಸಾದಿಂದ …

Read More »

ಪವಿತ್ರಾ ಗೌಡಗೆ ಬಿಗ್‌ಡೇ – ಬ್ಯಾರಕ್ ಬದಲಾವಣೆ ಬಗ್ಗೆ ಇಂದು ಕೋರ್ಟ್ ನಿರ್ಧಾರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ) ಇದ್ದ ಬ್ಯಾರಕ್ ಬದಲಾವಣೆ ವಿಚಾರವಾಗಿ ಇಂದು ನ್ಯಾಯಾಲಯ (Court) ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಬ್ಯಾರಕ್ ಬದಲಾವಣೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದೆ. ಮಹಿಳಾ ಬ್ಯಾರಕ್‌ಗಳನ್ನು ಪರಿಶೀಲಿಸಲು ನ್ಯಾಯಾಧೀಶರೇ ಜೈಲಿಗೆ ಭೇಟಿ ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಈ …

Read More »

SSLC, PUC ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ಬೆಂಗಳೂರು: ಜನಗಣತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ತ್ತು ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದೆ. ಜನವರಿಯಿಂದ ಕೇಂದ್ರ ಸರ್ಕಾರದ ಜನಗಣತಿ 2ನೇ ಹಂತ ಪ್ರಾರಂಭವಾಗಲಿದೆ. ಹೀಗಾಗಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆಗೆ ಶಾಲಾ ಶಿಕ್ಷಣ ಇಲಾಖೆಗೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ ಪತ್ರ ಬರೆದಿದೆ. ಪರೀಕ್ಷೆ ಮುಂದೂಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ. ಕೇಂದ್ರದ ಎರಡನೇ ಸುತ್ತಿನ ಜನಗಣತಿ ಜನವರಿ 25ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ. ಮಾರ್ಚ್ …

Read More »

ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್‌

ಬೆಂಗಳೂರು: ದಸರಾದಲ್ಲಿ ನಂದಿಧ್ವಜ ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ  ತೆರಳುತ್ತಿದ್ದ ಸಚಿವರನ್ನು ಎಸ್‌ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌  ಪ್ರತಿಕ್ರಿಯಿಸಿ, ಮೇಲಾಧಿಕಾರಿಗಳ ಸೂಚನೆ ಪೊಲೀಸರು ಪಾಲಿಸಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ಸಚಿವರನ್ನು ಎಸ್‌ಪಿ ತಡೆದಿರುವ ವಿಡಿಯೋ ವೈರಲ್ ಆಗಿರುವ ಕುರಿತು ಮಾತನಾಡಿದ ಅವರು, ಸಿಎಂ ವಿಚಾರದಲ್ಲಿ ಕೆಲವೊಂದು ಶಿಷ್ಟಾಚಾರ ಇರುತ್ತೆ, ಅದನ್ನ ಪಾಲಿಸಬೇಕಾಗುತ್ತೆ ಎಂದು ಹೇಳಿದ್ದಾರೆ. ಈ ಕುರಿತು ಬಿಜೆಪಿ ಮಾಡಿರುವ ಆರೋಪಗಳಿಗೆ ಡಿಸಿಎಂ ಪ್ರತಿಕ್ರಿಯಿಸಿ, …

Read More »

ಆರ್‌ಎಸ್‌ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ತಂದೆಯಿಂದ ತಿಳಿದುಕೊಳ್ಳಲಿ: ಛಲವಾದಿ ತಿರುಗೇಟು

ಬೆಂಗಳೂರು: ಆರ್‌ಎಸ್‌ಎಸ್ (RSS) ಬಗ್ಗೆ ಪ್ರಿಯಾಂಕ್ ಖರ್ಗೆ  ಅವರು ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತಿಳಿದುಕೊಳ್ಳಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. RSS ಪಥ ಸಂಚಲನಕ್ಕೆ ಅನುಮತಿ ಪಡೆಯಬೇಕು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, RSS ವಿಚಾರದಲ್ಲಿ ನಾನು ಜಾಸ್ತಿ ಹೇಳಲ್ಲ. 100 ವರ್ಷಗಳ ಹಾದಿಯಲ್ಲಿ ಹೇಗೆ ಇತ್ತೋ ಹಾಗೆ ಇರಬೇಕು. ಇದಕ್ಕೆ ಸರ್ಕಾರಗಳು ಸಹಕಾರ …

Read More »

ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯ: ಪರಮೇಶ್ವರ್

ಬೆಂಗಳೂರು: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್‌  ಅವರು ಹೇಳಿದರು. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕೃಷಿ ಸಚಿವರ ಭೇಟಿಗೆ ಮೊದಲು ಸಮಯಾವಕಾಶ ಪಡೆಯಬೇಕಾಗುತ್ತದೆ. ಅವರ ಭೇಟಿಗೆ ಅವಕಾಶ ದೊರೆತ …

Read More »

ಟ್ರ್ಯಾಕ್ಟರ್ ಹರಿದು ಏಳು ವರ್ಷದ ಬಾಲಕ ದಾರುಣ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕೋಲಾರ: ಟ್ರ್ಯಾಕ್ಟರ್  ಹರಿದು ಏಳು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಮೋಹನ್ (7) ಮೃತ ಬಾಲಕ. ಕೋಲಾರದ ಇಟಿಸಿಎಂ ಆಸ್ಪತ್ರೆ ಮುಂದೆ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್‌ನಲ್ಲಿ ಕುಳಿತಿದ್ದ ಬಾಲಕ ಕೆಳಗೆ ಬಿದ್ದಿದ್ದು, ಬಾಲಕನ ಮೇಲೆಯೇ ಟ್ರ್ಯಾಕ್ಟರ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೋಲಾರ ತಾಲೂಕಿನ ವೇಮಗಲ್ ಗ್ರಾಮದ ಮಂಜೇಶ್ ಹಾಗೂ ತಮ್ಮ ವಾಸು …

Read More »