ವಿದ್ಯುತ್ ಅವಘಡಕ್ಕೆ ತಾಯಿ, ಮಗ ಇಬ್ಬರೂ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬಟ್ಟೆ ಒಣಗಿಸಲು ಹೋಗಿ ಈ ದುರಂತ ಸಂಭವಿಸಿದೆ. ತಾಯಿ ಮರ್ಸಿ ಮಸ್ಕರೇನಸ್ (45), ಪುತ್ರ ಶೋನ್ ಮಸ್ಕರೇನಸ್ (18) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿಯ ವರ್ಣಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 7 ರಿಂದ 8 ಗಂಟೆ ನಡುವೆ …
Read More »Yearly Archives: 2026
ಅಕ್ರಮ ಸಂಬಂಧದ ಅನುಮಾನಕ್ಕೆ ಪತ್ನಿಯನ್ನೇ ಕೊಂದ ಪತಿ: 9 ದಿನಗಳ ಬಳಿಕ ಪ್ರಕರಣ ಬಯಲು
ಸುದ್ದಿ: ಬೆಂಗಳೂರಿನ ಮಾಗಡಿ ರಸ್ತೆ ವ್ಯಾಪ್ತಿಯ ರಾಜಕಾಲುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿ ರುಕ್ಸಾನಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿ ಮೊಹಮ್ಮದ್ ಇರ್ಫಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ 25 ವರ್ಷದ ರುಕ್ಸಾನಾ ಕೊಲೆಯಾದ ಮಹಿಳೆ. ಅಕ್ಟೋಬರ್ 13ರಂದು ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಬಳಿಕ ಹಲವು …
Read More »ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು: ವಿಡಿಯೋ ವೈರಲ್
ಇದೆಂತಹ ವಿಲಕ್ಷಣ ಕೃತ್ಯ. ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ. ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಶ್ವಾನ ಪ್ರಿಯೆ ನಿಶ್ಚಿಂತ ನರೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪುನೀತ್, ಮುರಳಿ ಹಾಗೂ ಮುನಿಯಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಗುಂಜೂರಿನ ಗ್ರೀನ್ ವುಡ್ ಹೈಸ್ಕೂಲ್ ಬಳಿ ಇರುತ್ತಿದ್ದ ಬೀದಿನಾಯಿಯನ್ನು …
Read More »ಬೆಳಗಾವಿ ಚಳಿಗಾಲ ಅಧಿವೇಶನ -ಸಿದ್ಧತೆ ಆರಂಭ
ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ವಿಧಾನ ಮಂಡಳ ಚಳಿಗಾಲ ಅಧಿವೇಶನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಅ.೨೨) ಜರುಗಿದ ಚಳಿಗಾಲ ಅಧಿವೇಶನ-೨೦೨೬ ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಸಮಯಾವಕಾಶವಿದ್ದು, ಅಧಿವೇಶನ …
Read More »ಪ್ರತಿ ಜಿಲ್ಲೆಯಿಂದ ನಾಲ್ಕು ರೈತರಿಗೆ ಮಾತ್ರ ಅವಕಾಶ!
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ದಿನಾಂಕ ೨೬.೧೦.೨೦೨೬ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಭೆ ಜರುಗಲಿದೆ ಸಭೆಗೆ ಬೆಳಗಾವಿ ವಿಭಾಗ ಸೇರಿದಂತೆ ಸಂಬಂಧಪಟ್ಟ ೧೫ ಜಿಲ್ಲೆಗಳಿಂದ ರೈತರು ಆಗಮಿಸುವ ಹಿನ್ನೆಲೆಯಲ್ಲಿ, ಸಭೆಯ ವ್ಯವಸ್ಥಿತ ನಿರ್ವಹಣೆ, ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ, ಆಯುಕ್ತರು, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು, ಬೆಂಗಳೂರು …
Read More »ಅಕ್ಟೋಬರ್ 23 ರಿಂದ 25 ರವರೆಗೆ ಅದ್ಧೂರಿ ಉತ್ಸವ ಆಚರಣೆ
ಬೆಳಗಾವಿ : ಜಿಲ್ಲಾ ಆಡಳಿತ ಬೆಳಗಾವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮನವರ ಕಿತ್ತೂರು ಉತ್ಸವದ ೨೦೨ನೇ ವರ್ಷದ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭವು ಅಕ್ಟೋಬರ್ ೨೩, ೨೦೨೬ ರಂದು (ಶುಕ್ರವಾರ) ಸಂಜೆ ೭ ಗಂಟೆಗೆ ಕಿತ್ತೂರಿನ, ಕಿತ್ತೂರು ಕೋಟೆ ಆವರಣದ ರಾಣಿ ಚನ್ನಮ್ಮ ವೇದಿಕೆಯಲ್ಲಿ ಜರುಗಲಿದೆ. ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮ.ನಿ.ಪ್ರ. ಸ್ವಾಮೀಜಿ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ …
Read More »ಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದ ರೀತಿಯಲ್ಲಿ AI ವಿಡಿಯೋ ಹರಿಬಿಟ್ಟ ಕಿಡಿಗೇಡಿ
ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಬೇಕು ಎಂಬ ಕಾರಣಕ್ಕೆ ಸರಿ ತಪ್ಪುಗಳ ಅರಿವೂ ಇಲ್ಲದೇ ಮನ ಬಂದಂತೆ ಎಐ ವಿಡಿಯೋಗಳನ್ನು ಮಾಡಿ ಅಪ್ ಲೋಡ್ ಮಾಡುತ್ತಿರುವ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಅದೇ ರೀತಿ ಕಿಡಿಗೇಡಿಯೊಬ್ಬ ವಿಧಾನಸೌಧವನ್ನು ಬ್ಲಾಸ್ಟ್ ಮಾಡಿದ ರೀತಿಯಲ್ಲಿ ಎಐ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ನಡೆದಿದೆ. ವಿಡಿಯೋದಲ್ಲಿ ಯುವಕನೊಬ್ಬ ವಿಧಾನಸೌಧದ ಮುಂದೆ ನಿಂತು ವಿಧಾನಸೌಧವನ್ನು ತೋರಿಸುತ್ತಾನೆ. ಕೆಲವೇ ಕ್ಷಣಗಳಲ್ಲಿ ಬಾಂಬ್ ಇಟ್ತು ಸ್ಫೋಟಿಸಿದ ರೀತಿ …
Read More »ಗೃಹಜ್ಯೋತಿ ಯೋಜನೆಯಿಂದ 1.3 ಲಕ್ಷ ಗ್ರಾಹಕರು ಹೊರಕ್ಕೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ಬರೋಬ್ಬರಿ 1.3 ಲಕ್ಷ ಗ್ರಾಹಕರು ಹೊರನಡೆದಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತಿದ್ದ 1.3 ಲಕ್ಷ ಗ್ರಾಹಕರು ವೈಯಕ್ತಿಕ ದಾಖಲೆ ನೀಡಲು ನಿರಾಕರಿಸಿ ಯೋಜನೆಯಿಂದ ಹೊರನಡೆದಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದರೂ, ಇತ್ತೀಚೆಗೆ ಇಂಧನ ಇಲಾಖೆ ನಡೆಸಿದ ಮನೆಮನೆ ಪರಿಶೀಲನಾ ಅಭಿಯಾನದಲ್ಲಿ ವೈಯಕ್ತಿಕ ದಾಖಲೆಗಳನ್ನು ನೀಡಲು ನಿರಾಕರಿಸಿ ಯೋಜನೆಯಿಂದ ಹೊರಗುಳಿಯಲು …
Read More »ಒಳ ಉಡುಪಿನಲ್ಲಿ 155ಗ್ರಾಂ ಚಿನ್ನದ ಪುಡಿ ಇಟ್ಟುಕೊಂಡು ಸಾಗಾಟ: ತಪಾಸಣೆ ವೇಳೆ ಎಸ್ಕೇಪ್ ಆಗುತ್ತಿದ್ದ ಆರೋಪಿ ಅರೆಸ್ಟ್
ಒಳ ಉಡುಪಿನಲ್ಲಿ ಚಿನ್ನದ ಪುಡಿಗಳನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬ ತಪಾಸಣೆ ವೇಳೆ ಎಸ್ಕೇಪ್ ಆಗಲು ಯತ್ನಿಸಿರುವ ಘಟನೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬೆನ್ನಟ್ಟಿ ಹಿಡಿರುವ ಘಟನೆ ನಡೆದಿದೆ. ಆರೋಪಿ ತನ್ನ ಒಳ ಉಡುಪಿನಲ್ಲಿ 155ಗ್ರಾಂ ಚಿನ್ನದ ಪುಡಿ ಇಟ್ಟುಕೊಂಡು ಸಾಗಿಸುತ್ತಿದ್ದ. ದೆಹಲಿಯ ಜಾಮಾ ಮಸೀದಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ …
Read More »ಮೂರು ಕಡೆ ದಾಳಿ: 9 ಕೆಜಿಗೂ ಅಧಿಕ ಮಾದಕವಸ್ತು ವಶ
ದೇಶಾದ್ಯಂತ ಮಾದಕವಸ್ತು ಕಳ್ಳಸಾಗಣೆಗೆ ಕಡಿವಾಣ ಹಾಕಲು ಆದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ನಡೆಸಿದ ಸರಣಿ ಕಾರ್ಯಾಚರಣೆಗಳಲ್ಲಿ 9 ಕೆಜಿಗೂ ಅಧಿಕ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು, ದೆಹಲಿ ಮತ್ತು ನಾಗಪುರದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟದ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಸುಮಾರು 5 ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ …
Read More »
Laxmi News 24×7