ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಇಂದು ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. …
Read More »Yearly Archives: 2026
ಯತ್ನಾಳ್ ಭೇಟಿಯಾದ ಬಿ.ವೈ.ವಿಜಯೇಂದ್ರ ಹೇಳಿದ್ದೇನು?
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಬಿ.ವೈ.ವಿಜಯೇಂದ್ರ ಹುಬ್ಬಳ್ಳಿಯಲ್ಲಿ ಶಾಸಕ ಯತ್ನಾಳ್ ಅವರನ್ನು ಎರಡು ಬಾರಿ ಭೇಟಿಯಾಗಿದ್ದಾರೆ. ಇದು ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವ ನಿಟ್ಟಿನಲ್ಲಿ ನಡೆದ ಭೇಟಿಯೇ ಎಂಬ ಚರ್ಚೆ ಕೂಡ ಆರಂಭವಾಗಿದೆ. ಯತ್ನಾಳ್ ಭೇಟಿಯಾದ ವಿಚಾರವಾಗಿ ಬಿ.ವೈ.ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹುಬ್ಬಳ್ಳಿಗೆ ತೆರಳಿದ್ದ …
Read More »ಬೆಳಗಾವಿ ಪೊಲೀಸರಿಂದ ಅಂತರರಾಜ್ಯ ಮೂವರು ಬೈಕ್ ಕಳ್ಳರ ಬಂಧನ
ಬೆಳಗಾವಿ: ಅಂತರರಾಜ್ಯ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ₹3.70 ಲಕ್ಷ ಮೌಲ್ಯದ ಏಳು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಲೀಮ್ ಎಂ. ಗಡಾದ, ಮೊಹಮ್ಮದ್ ಅಕೀಲ್ ಎನ್. ಗಡಾದ ಹಾಗೂ ಶಿವಮೊಗ್ಗ ಜಿಲ್ಲೆಯ ಶಾಹೀದಹ್ಮದ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಬೈಕ್ ಕಳ್ಳತನದ ಕೃತ್ಯಗಳನ್ನು ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. …
Read More »ಬೆಳಗಾವಿಗೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮನ ವೀರಜ್ಯೋತಿಗೆ ಅದ್ಧೂರಿ ಸ್ವಾಗತ
ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮನ ವಿಜಯದ ಸಂಕೇತವಾಗಿರುವ ವೀರಜ್ಯೋತಿ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ್ದು, ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಮಹಾನಗರ ಪಾಲಿಕೆಯ ಉಪಮೇಯರ್ ಹನಮಂತ ಕೊಂಗಾಲಿ ಅವರು ಚನ್ನಮ್ಮನ ವೀರಜ್ಯೋತಿಯನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಚನ್ನಮ್ಮನ ವೀರಜ್ಯೋತಿ ಎರಡು ದಿನಗಳ ಕಾಲ ಬೆಳಗಾವಿ ನಗರದಲ್ಲಿ ಸಂಚರಿಸಲಿದೆ. ಬಳಿಕ ಐತಿಹಾಸಿಕ …
Read More »ಭಾರತ ಬಲಿಷ್ಠವಾಗುವುದನ್ನು ಕೆಲವು ಶಕ್ತಿಗಳು ಸಹಿಸುವುದಿಲ್ಲ: ಮೋಹನ್ ಭಾಗವತ್
ಜಗತ್ತಿನ ವಿವಿಧ ದೇಶಗಳಲ್ಲಿ ಆಡಳಿತ ಬದಲಾವಣೆಯ ಹೆಸರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿಂದೆ ಸ್ವಹಿತಾಸಕ್ತಿ ಹೊಂದಿರುವ ಶಕ್ತಿಗಳ ಕೈವಾಡವಿದೆ ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಆರೋಪಿಸಿದ್ದಾರೆ. ಭಾರತದ ಬೆಳವಣಿಗೆ ಮತ್ತು ಬಲವರ್ಧನೆಗೆ ಅಡ್ಡಿಯಾಗಲು ದೇಶವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ನಾಗ್ಪುರದಲ್ಲಿ ನಡೆದ ಆರ್ಎಸ್ಎಸ್ನ ವಿಜಯದಶಮಿ ಉತ್ಸವದಲ್ಲಿ ಮಾತನಾಡಿದ ಅವರು, ಪ್ರತಿಭಟನೆಗಳು ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೇ ಹೊರತು ಸಮಾಜದಲ್ಲಿ ಒಡಕು ಮೂಡಿಸುವ ರಾಜಕೀಯ ಅಸ್ತ್ರಗಳಾಗಬಾರದು ಎಂದು …
Read More »ಎಲ್ಲರೂ ಒಟ್ಟಾಗಿ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕಿದೆ: ಸಿಎಂ ಡಿ.ಕೆ.ಶಿವಕುಮಾರ್
“ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಎಲ್ಲರೂ ಒಟ್ಟಾಗಿ ಸೇರಿ ಬಗೆಹರಿಸಬೇಕು. ಇದು ಯಾರದೋ ಒಬ್ಬರ ಜವಾಬ್ದಾರಿಯಲ್ಲ. ಇದು ಎಲ್ಲರ ಜವಾಬ್ದಾರಿ. ನಾನು ಒಬ್ಬರ ಮೇಲೆಯೆ ಹೊರೆ ಹಾಕಲು ಇಷ್ಟಪಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. “ರೈತರು ಕಬ್ಬು ಬೆಳೆದರೆ ಕಾರ್ಖಾನೆ ಇರಲಿದೆ. ಕಾರ್ಖಾನೆಗಳು ಸಹ ನಷ್ಟವಾಗದಂತೆ ಕಬ್ಬನ್ನು ಅರೆಯಬೇಕಿದೆ. ಆಗ ಇಬ್ಬರೂ ಉಳಿಯುತ್ತಾರೆ. ಇದು ಎಲ್ಲರ ಬದುಕಿನ ಪ್ರಶ್ನೆ. ರೈತರ, ಸಕ್ಕರೆ …
Read More »ಆಯುಧ ಪೂಜೆಯ ಸಂಭ್ರಮದಲ್ಲಿ ದುರಂತ: ಕಾರಿನ ಚಕ್ರಕ್ಕೆ ಸಿಲುಕಿ 3 ವರ್ಷದ ಬಾಲಕ ಸಾವು
ಆಯುಧ ಪೂಜೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಕ್ಷಣಾರ್ಧದಲ್ಲಿ ಸೂತಕದ ಛಾಯೆ ಆವರಿಸಿದೆ. ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಕಾರನ್ನು ಬೇರೆಡೆಗೆ ಸ್ಥಳಾಂತರಿಸುವಾಗ ಮೂರು ವರ್ಷದ ಬಾಲಕ ಕಾರಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಪುಟ್ಟ ಕಂದನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯರಗನಹಳ್ಳಿ ಗ್ರಾಮದ ಸಂಪತ್ ಕುಮಾರ್ ಪುತ್ರ ಕಂದನ್ ಎಸ್. ಗೌಡ (3) ಮೃತಪಟ್ಟ ಬಾಲಕ. ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮನೆಯಲ್ಲಿ …
Read More »ಗೃಹ ಕಚೇರಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಆಯುಧ ಪೂಜೆ
ಬೆಳಗಾವಿ: ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಆಯುಧ ಪೂಜೆ ನೆರವೇರಿಸಿ, ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಆಯುಧಗಳಿಗೆ ದೈವಸ್ವರೂಪದ ಸ್ಥಾನ ನೀಡಲಾಗಿದ್ದು, ಅವುಗಳನ್ನು ಪೂಜಿಸುವುದು ವಿಶೇಷ ಮಹತ್ವ ಹೊಂದಿದೆ. ಈ ಪವಿತ್ರ ಸಂದರ್ಭದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದಿವ್ಯ ಕೃಪೆ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸಿದ ಲಕ್ಷ್ಮೀ ಹೆಬ್ಬಾಳಕರ್, …
Read More »ಎಂ. ಕೆ. ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಎಂ. ಕೆ. ಹುಬ್ಬಳ್ಳಿ: ಇಲ್ಲಿನ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಶುಭಾರಂಭ ಮಂಗಳವಾರ ಧಾರ್ಮಿಕ ವಿಧಿವಿಧಾನಗಳು ಹಾಗೂ ಪೂಜ್ಯರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು. ಕಾರ್ಖಾನೆಯ ಚೇರಮನ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಕಾರ್ಖಾನೆಯ ಆವರಣದಲ್ಲಿ ನಡೆದ ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ, ನೂತನ ಹಂಗಾಮಿಗೆ ಶುಭಾರಂಭ ಮಾಡಿದರು. ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯ ಹಾಗೂ ಆಶೀರ್ವಾದದೊಂದಿಗೆ …
Read More »ರಾಣಿ ಚನ್ನಮ್ಮಾಜಿ ಪುತ್ಥಳಿಯ ಮುರಿದ ಕೈ ತಾತ್ಕಾಲಿಕ ದುರಸ್ತಿ
ಬೆಳಗಾವಿ: ಕಿತ್ತೂರು ಉತ್ಸವ ಆರಂಭಕ್ಕೆ ಕ್ಷಣಗಣನೆ ನಡೆಯುತ್ತಿರುವ ಬೆನ್ನಲ್ಲೇ ರಾಣಿ ಚನ್ನಮ್ಮಾಜಿಯವರ ಪುತ್ಥಳಿಯ ಖಡ್ಗ ಹಿಡಿದ ಬಲಗೈ ಮುರಿದು ಬಿದ್ದ ಘಟನೆಗೆ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ರಾತ್ರೋರಾತ್ರಿ ದುರಸ್ತಿ ಕಾರ್ಯ ಕೈಗೊಂಡು, ಮುರಿದು ಬಿದ್ದಿದ್ದ ಕೈಯನ್ನು ತಾತ್ಕಾಲಿಕವಾಗಿ ಜೋಡಿಸಿದ್ದಾರೆ. ಐತಿಹಾಸಿಕ ಮಹತ್ವ ಹೊಂದಿರುವ ರಾಣಿ ಚನ್ನಮ್ಮಾಜಿಯವರ ಪುತ್ಥಳಿಯ ಬಲಗೈ ತುಂಡಾಗಿ ಬಿದ್ದಿರುವುದು ಸಾರ್ವಜನಿಕರು ಹಾಗೂ ಚನ್ನಮ್ಮಾಜಿಯ …
Read More »
Laxmi News 24×7