ಮೈಸೂರು: ನಮ್ಮ ತಂದೆಯೇ 5 ವರ್ಷ ಸಿಎಂ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಆ ಬಗ್ಗೆ ಚರ್ಚೆಯೇ ಇಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ತಂದೆಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ನಮ್ಮ ತಂದೆಯ ಮಾತೇ ನನ್ನ ಮಾತು ಕೂಡ. …
Read More »Yearly Archives: 2026
ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ
ರಾಯಚೂರು: ರೈತನಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓಗೆ ರಾಯಚೂರು ಜಿಲ್ಲಾ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 2017 ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ತಾಂಡಾದ ಚೇತನ ಎಂಬವರಿಂದ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓ ಮಹ್ಮದ ಖಾಜಾ ಸಹಾಯ ಧನದ ಶೇಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ 15 ಸಾವಿರ …
Read More »ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ
ಬೆಂಗಳೂರು: ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಆರ್‌ಆರ್ ನಗರ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಸಾವಿತ್ರಮ್ಮ (72) ಕೊಲೆಯಾದ ದುರ್ದೈವಿ. ಮಗ ವೆಂಕಟೇಶ್ ವೃದ್ಧ ತಾಯಿಯನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಸ್ಟ್ರೋಕ್ ಹೊಡೆದ ಕಾರಣ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದಿದ್ದ ಮಗ ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ …
Read More »ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ರಾಜ್ಯ …
Read More »ವಿನಯ್ ಕುಲಕರ್ಣಿ ದೋಷಿ ಇಂದು ಶಿಕ್ಷೆ ಪ್ರಮಾಣ ಪ್ರಕಟ
ಧಾರವಾಡ: ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಯೋಗೇಶ್‌ಗೌಡ ಕೊಲೆ ಕೇಸಲ್ಲಿ ಅಪರಾಧಿಯಾಗಿದ್ದಾರೆ. ಈ ಸಂಬಂಧ ನ್ಯಾಯಾಲಯ ಇಂದು (ಏ.16) ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಜನಪ್ರತಿನಿಧಿಗಳ ಕೋರ್ಟ್ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಆದೇಶಿಸಿದೆ. ಅದರಂತೆ ಪ್ರಕರಣ ಸಂಬಂಧ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಲಿದೆ. ಆರೋಪಿಗಳಿಗೆ …
Read More »ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ
ಹುಬ್ಬಳ್ಳಿ: ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು ಎಂದು ಯೋಗೇಶ್ ಗೌಡ ಸಹೋದರಿ ಅಕ್ಕಮ್ಮ ಹೇಳಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಯೋಗೇಶ್ ಗೌಡ ಕೊಲೆ ಕೇಸಲ್ಲಿ ಅಪರಾಧಿಯಾಗಿದ್ದಾರೆ. ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಇವತ್ತು ವಿನಯ್ …
Read More »ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ
ಬೆಂಗಳೂರು: ಈ ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಬ್ಯಾಟರ್‌ಗಳು ಅಬ್ಬರಿಸುತ್ತಿದ್ದರು. ಆದರೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್‌ಗಳು ಅಬ್ಬರಿಸಿದ್ದಾರೆ. ಆರ್‌ಸಿಬಿ ಬೌಲರ್‌ಗಳ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಲಕ್ನೋ 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನೂ 29 ಎಸೆತ ಬಾಕಿ ಇರುವಂತೆಯೇ 5 …
Read More »ಜೈಲಿಗೆ ವಿನಯ್ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ
ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಬಸ್ಸಿನಲ್ಲಿ ಬೆಂಕಿ ಕಾಣಿಸಿದ ಘಟನೆ ಇಂದು ರಾತ್ರಿ ನಡೆದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಮತ್ತು 17 ಅಪರಾಧಿಗಳನ್ನು ಬಿಎಂಟಿಸಿ ಬಸ್ಸಿನಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಬರುತ್ತಿದ್ದರು. ಪರಪ್ಪನ ಅಗ್ರಹಾರ ಸಮೀಪ ಬಸ್ಸಿನ ಕೆಳಗಡೆ ಬೆಂಕಿ ಕಾಣಿಸಿದೆ. ಬೆಂಕಿ ಕಾಣಿಸಿದ ತಕ್ಷಣ ಪೊಲೀಸರು ಬೇರೆ ವಾಹನದಲ್ಲಿ ಅಪರಾಧಿಗಳನ್ನು …
Read More »4 ದಶಕಗಳ ಬಳಿಕ ಸವದತ್ತಿಯಲ್ಲಿ ಗ್ರಾಮ ದೇವಿ ಜಾತ್ರೆ: ಜಿಲ್ಲಾಧಿಕಾರಿಗಳೊಂದಿಗೆ ಮೂಲಭೂತ ಸೌಕರ್ಯ ಹಾಗೂ ಅಡುಗೆ ಅನಿಲ ಪೂರೈಕೆ ಕುರಿತು ಚರ್ಚೆ
ಬೆಳಗಾವಿ: ಸವದತ್ತಿ ಪಟ್ಟಣದ ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿರುವ ಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು ಸುಮಾರು 43 ವರ್ಷಗಳ (4 ದಶಕ) ಸುದೀರ್ಘ ಕಾಲದ ನಂತರ ಇದೇ ಮೇ 4ರಂದು ಅತ್ಯಂತ ವೈಭವದಿಂದ ಜರುಗಲಿದೆ. ಈ ಐತಿಹಾಸಿಕ ಜಾತ್ರೆಗೆ ರಾಜ್ಯದಾದ್ಯಂತ ಲಕ್ಷಾಂತರ ಭಕ್ತಾದಿಗಳು ಹಾಗೂ ವ್ಯಾಪಾರಸ್ಥರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಇಂದು ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಅವರನ್ನು ಭೇಟಿ ಮಾಡಿ ಈ ಕೆಳಗಿನ ಪ್ರಮುಖ …
Read More »ಎಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳು ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ಸಂತೋಷ ಲಾಡ್
ಈ ಕುರಿತು ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಕೇಳುವವರಲ್ಲಿ ಮೊದಲ ಬಾರಿ ಎರಡನೇ ಬಾರಿ ಆಯ್ಕೆ ಆಗಿದ್ದಾರೆ ಅನ್ನುವುದು ವಿಚಾರವಲ್ಲ. ಎಲ್ಲರಿಗೂ ಸಚಿವಾರಗೋ ಅರ್ಹತೆ ಇದೆ. ಎಲ್ಲರೂ ಸಚಿವರಾಗಬೇಕು ಅಂದುಕೊಳ್ಳುವುದು ತಪ್ಪಲ್ಲ. ಪಾರ್ಟಿ ಪ್ರೋಟೋಕಾಲ್ ಅನುಸರಿಸುವುದು ತುಂಬಾ ಮುಖ್ಯವಾಗುತ್ತದೆ. ಎಲ್ಲರಿಗೂ ಹೈಕಮಾಂಡ ಭೇಟಿ ಮಾಡಿ, ತಮ್ಮ ಬಯಕೆ ಹೇಳಿಕೊಳ್ಳುವ ಅವಕಾಶವಿದೆ. ಸಚಿವಾಕಾಂಕ್ಷಿಗಳ ನಡೆಯನ್ನು ನಾನು ಸ್ವಾಗತ್ತಿಸುತ್ತೇನೆ ಎಂದು ಕಾಂಗ್ರೆಸ್ ನಾಯಕರ ದೆಹಲಿ ಟೂರನ್ನು ಸಮರ್ಥಿಸಿಕೊಂಡಿದ್ದಾರೆ. ಇದೇ …
Read More »
Laxmi News 24×7