Breaking News

Yearly Archives: 2026

ಕಬ್ಬು ಬೆಳೆಗಾರರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್: ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್

ಕೆಲ ದಿನಗಳಿಂದ ತೀವ್ರ ಸಂಚಲನ ಸೃಷ್ಟಿಸಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ. ತಮ್ಮ ಬೇಡಿಕೆ ಈಡೇರಿಸಲು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ. ಸರ್ಕಾರಗಳಿಗೆ ಅಂತಿಮ ಗಡುವು ನೀಡುವ ಮೂಲಕ ಪ್ರತಿಭಟನೆಗೆ ಕೊಂಚ ಬ್ರೇಕ್ ನೀಡಿದ್ದು, ಬೇಡಿಕೆ ಈಡೇರಿಸದಿದ್ದರೆ ಸಚಿವರ ಮನೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ. ಕಬ್ಬು ಬೆಳೆಗಾರರು ನವೆಂಬರ್ 26ರ ವರೆಗೂ ನಮ್ಮ ಬೇಡಿಕೆ ಈಡೇರಿಸಲು ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ …

Read More »

ಕಿತ್ತೂರು ಉತ್ಸವದ ಹೊಸ್ತಿಲಲ್ಲೇ ಅವಘಡ: ರಾಣಿ ಚನ್ನಮ್ಮಾಜಿ ಪುತ್ಥಳಿಯ ಬಲಗೈ ತುಂಡು

ಕಿತ್ತೂರು ಉತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ವೀರರಾಣಿ ಕಿತ್ತೂರು ಚನ್ನಮ್ಮಾಜಿಯವರ ಪುತ್ಥಳಿಯ ಬಲಗೈ ಮುರಿದು ಬಿದ್ದಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಣಿ ಚನ್ನಮ್ಮಾಜಿ ಖಡ್ಗ ಹಿಡಿದಿದ್ದ ಬಲಗೈ ತುಂಡಾಗಿ ಬಿದ್ದಿರುವುದು ಚನ್ನಮ್ಮಾಜಿ ಅಭಿಮಾನಿಗಳಿಗೆ ತೀವ್ರ ಬೇಸರ ಮೂಡಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಿತ್ತೂರಿಗೆ ಭೇಟಿ ನೀಡಿ ರಾಣಿ ಚನ್ನಮ್ಮಾಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದರು. ಆದರೆ, ಇದೀಗ ಪುತ್ಥಳಿಯ ಕೈ ಮುರಿದು ಬಿದ್ದಿರುವುದು …

Read More »

2027ರಲ್ಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ: ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, 2028ರಲ್ಲಿ ನಡೆಯಬೇಕಿರುವ ವಿಧಾನಸಭಾ ಚುನಾವಣೆ 2027ರಲ್ಲೇ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದು ಸರ್ಕಾರ ರಚಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ ವಿಧಾನಸಭಾ …

Read More »

ಸೌದೆ ತರಲು ಹೋದ ಮೂವರ ಹತ್ಯೆ: ಸಿಎಂ ನಿವಾಸದ ಮುಂದೆ ಪ್ರತಿಭಟನೆ

 ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಉದ್ವಿಗ್ನತೆ ಮತ್ತೆ ಹೆಚ್ಚಾಗುವ ಆತಂಕ ಎದುರಾಗಿದೆ. ನಾಂಗ್‌ಸುಮ್ ಬೆಟ್ಟಗಳ ಸಮೀಪದ ಉಯುಂಪೋಕ್ ಪ್ರದೇಶದಲ್ಲಿ ಸೌದೆ ಸಂಗ್ರಹಿಸಲು ತೆರಳಿದ್ದವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮೂವರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕಾಂಗ್‌ಪೋಕ್ಪಿ ಜಿಲ್ಲೆಯ ಗಡಿಯ ಸಮೀಪ ಈ ಘಟನೆ ನಡೆದಿದ್ದು, ದಾಳಿಯಿಂದ ಆಕ್ರೋಶಗೊಂಡ ಸ್ಥಳೀಯರು ಮೃತದೇಹಗಳನ್ನು ಮುಖ್ಯಮಂತ್ರಿ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರ ನಿವಾಸದ ಮುಂದೆ ಇರಿಸಿ ಪ್ರತಿಭಟನೆ ನಡೆಸಿದ್ದಾರೆ. …

Read More »

ರೈಲಿನಲ್ಲಿ ಈ ತಪ್ಪು ಮಾಡಿದರೆ ದಂಡ, ಜೈಲು ಶಿಕ್ಷೆ

ರೈಲು ಪ್ರಯಾಣದ ವೇಳೆ ಮೊಬೈಲ್‌ನಲ್ಲಿ ಜೋರಾಗಿ ಮಾತನಾಡುವುದು, ಸ್ಪೀಕರ್‌ನಲ್ಲಿ ಹಾಡು ಅಥವಾ ವಿಡಿಯೋಗಳನ್ನು ಪ್ಲೇ ಮಾಡಿ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವವರಿಗೆ ಇನ್ಮುಂದೆ ಸಂಕಷ್ಟ ಎದುರಾಗಲಿದೆ. ಇಂತಹ ವರ್ತನೆಗೆ ಕಡಿವಾಣ ಹಾಕಲು ದಕ್ಷಿಣ ರೈಲ್ವೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡದ ಜತೆಗೆ ಜೈಲು ಶಿಕ್ಷೆಯ ಎಚ್ಚರಿಕೆ ನೀಡಿದೆ. ರೈಲುಗಳಲ್ಲಿ ಮತ್ತು ರೈಲ್ವೆ ಆವರಣದಲ್ಲಿ ಶಬ್ದ ಮಾಲಿನ್ಯ ಉಂಟುಮಾಡುವ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನಲ್ಲಿರುವ ದಕ್ಷಿಣ ರೈಲ್ವೆಯ ಪ್ರಧಾನ …

Read More »

ಲೋಕಭವನದಲ್ಲಿ ರಾಜ್ಯಪಾಲೆ ಸುಧಾ ಯಾದವ್ ಪೂಜೆ: ನಾಡಿನ ಶಾಂತಿ, ಸಮೃದ್ಧಿಗೆ ಪ್ರಾರ್ಥನೆ

ಆಯುಧ ಪೂಜೆ ಮತ್ತು ವಿಜಯದಶಮಿಯ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಪಾಲೆ ಡಾ. ಸುಧಾ ಯಾದವ್ ಬೆಂಗಳೂರಿನ ಲೋಕಭವನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಶಾಂತಿ, ಸಮೃದ್ಧಿ ಮತ್ತು ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದಾರೆ. ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಸತ್ಯದ ಹಾದಿಯಲ್ಲಿ ಸಾಗುವ ಸಂಕಲ್ಪಕ್ಕೆ ಹಬ್ಬಗಳು ಸ್ಫೂರ್ತಿಯಾಗಬೇಕು ಎಂದು ಸಂದೇಶ ನೀಡಿದ್ದಾರೆ. ಲೋಕಭವನದ ಕಚೇರಿಯಲ್ಲಿ ಆಯುಧ ಪೂಜೆ ನೆರವೇರಿಸಿದ ರಾಜ್ಯಪಾಲೆ, ಬಳಿಕ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ದುರ್ಗಾದೇವಿಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. …

Read More »

ಮಿಗಾಗಿ ಗಂಡನಿಗೆ ಚಟ್ಟ ಕಟ್ಟಿದ ಪತ್ನಿ: ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತವೆಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹ ರಸ್ತೆ ಮೇಲೆ ಪತ್ತೆಯಾದಾಗ ಅಪಘಾತವೆಂದೇ ಭಾವಿಸಲಾಗಿತ್ತು. ಆದರೆ, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪೊಲೀಸರ ವಿಚಾರಣೆ ಪ್ರಕರಣಕ್ಕೆ ಹೊಸ ತಿರುವು ನೀಡಿವೆ. ಬಂಧಿತರಲ್ಲಿ ಓರ್ವ ಅಪ್ರಾಪ್ತ ಬಾಲಕನೂ ಸೇರಿದ್ದಾನೆ. ಮೃತನನ್ನು 42 ವರ್ಷದ ರಾಜಶೇಖರ್ ಬಿರಾದಾರ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಪತ್ನಿ ಅಶ್ವಿನಿ ಬಿರಾದಾರ್ …

Read More »

ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ: ಆರೋಪಿ ಅನಿಲ್ ಪಂಡಿತ್ ಮೇಲಿವೆ 12ಕ್ಕೂ ಹೆಚ್ಚು ಪ್ರಕರಣ

ಬಾಲಿವುಡ್ ನಟ ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಈಗ ಅಂತರರಾಷ್ಟ್ರೀಯ ಅಪರಾಧ ಜಾಲದತ್ತ ತನಿಖೆಯನ್ನು ಕೊಂಡೊಯ್ದಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಿಂದ ಕಾರ್ಯನಿರ್ವಹಿಸುತ್ತಿರುವ ಆರೋಪ ಎದುರಿಸುತ್ತಿರುವ ಅನಿಲ್ ಪಂಡಿತ್, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸಂಚಾಲಕನಾಗಿದ್ದಾನೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಟೈಗರ್ ಶ್ರಾಫ್ ಮೇಲಿನ ದಾಳಿಯ ಹೊಣೆ ಹೊತ್ತುಕೊಂಡಿರುವ ಸಂದೇಶವೂ ಆತನ ಹೆಸರಿನಲ್ಲಿ ಹರಿದಾಡಿದ್ದು, ಹರಿಯಾಣದಲ್ಲಿ ಹಲವು ಸುಲಿಗೆ ಪ್ರಕರಣಗಳಲ್ಲೂ ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. ಹರಿಯಾಣದ …

Read More »

ದಸರಾ ದೀಪಾಲಂಕಾರ ವಿಸ್ತರಣೆ*: ಸಿಎಂ ಮಾಹಿತಿ

“ಕಬ್ಬು ಬೆಳೆಗಾರರ ವಿಚಾರವಾಗಿ ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ. ಅವರಿಂದ ಪ್ರಯೋಜನವಾಗುವ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ಕಬ್ಬು ಬೆಳೆಗಾರರ ಹಿತ ಕಾಪಾಡಲು ನಾನು ಪ್ರಯತ್ನ ಪಟ್ಟಿದ್ದೇನೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಪ್ರಯತ್ನ ಪಟ್ಟು, ಕೊನೆಗೆ ಮತ್ತೆ ಕಾಂಗ್ರೆಸ್ ಮೇಲೆ ಹಾಕಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಈಗ ಏನು ಮಾತನಾಡುವುದಿಲ್ಲ. ಕಬ್ಬು …

Read More »

ಮುತಗಾ ಶ್ರೀ ಸಿದ್ಧಸಾಯಿ ಆಶ್ರಮದಲ್ಲಿ ₹25 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ

 ಮುತಗಾ: ಗ್ರಾಮದ ಶ್ರೀ ಸಿದ್ಧಸಾಯಿ ಆಶ್ರಮದಲ್ಲಿ ಸುಮಾರು ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನದ ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭೂಮಿಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು. ಶ್ರೀ ಸಿದ್ಧಸಾಯಿ ಆಶ್ರಮದ ಆವರಣದಲ್ಲಿ ನೂತನ ಸಮುದಾಯ ಭವನ ನಿರ್ಮಾಣಗೊಳ್ಳುತ್ತಿರುವುದು ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸಮುದಾಯದ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯವಾದ ಸ್ಥಳಾವಕಾಶ ಒದಗಿಸುವ …

Read More »