Breaking News

Yearly Archives: 2026

ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ   

ಬಾಗಲಕೋಟೆ:  ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಪ್ರಾಧ್ಯಾಪಕ ಮಂಜುನಾಥ್ ಹಳ್ಳೂರ್ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರ ದೃಷ್ಟಿಯಿಂದ ಮೂಡಿಬಂದ ಸಂವಿಧಾನದ ಆಶಯಗಳಾದ ಸಮಾನತೆ, ಭ್ರಾತೃತ್ವ,  ಜಾತ್ಯತೀತತೆಯನ್ನು ಪಾಲಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯ,  ಜಾತಿ ಮತ್ತು ಧರ್ಮದ ಆಚೆಗೆ ಕಾಣುವ ವ್ಯಕ್ತಿಗಳಲ್ಲಿ ಅಗ್ರಗಣ್ಯ ನಾಯಕರಾಗಿ ಮಹಾನ್ …

Read More »

ವಿಶ್ವದಲ್ಲಿ ಭಾರತ ನಿಂತಿರುವುದಕ್ಕೆ ಸಂವಿಧಾನದ ಆಶಯಗಳೇ ಕಾರಣ

ಬೆಳಗಾವಿ:ವಿಶ್ವದಲ್ಲಿ ಸದೃಢ ಪ್ರಜಾಪ್ರಭುತ್ವ ದೇಶವಾಗಿ ಭಾರತ ನಿಂತಿರುವುದಕ್ಕೆ ಸಂವಿಧಾನದ ಆಶಯಗಳೇ ಬಹುಮುಖ್ಯ ಕಾರಣ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಭಾರತೀಯನಿಗೆ ಸಾಮಾಜಿಕ ಸಮಾನತೆ ಸಿಗಬೇಕು. ಭ್ರಾತೃತ್ವ, ಸಹೋದರತ್ವದಿಂದ ಬಾಳಬೇಕು ಎಂಬ ವೈವಿದ್ಯಮಯ ಚಿಂತನೆಗಳಿಂದ ಕೂಡಿದ ಸಂವಿಧಾನವನ್ನು ಬಾಬಾ ಸಾಹೇಬ್‌ರು ನಮಗೆ ನೀಡಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ …

Read More »

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ  ಪ್ರಧಾನಿ ಮೋದಿಯವರು  10:05ಕ್ಕೆ ಹೆಚ್‌ಎಎಲ್‌ಗೆ  ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ತಪೋವನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಈ ವೇಳೆ ಮೋದಿಗೆ ಶ್ರೀ ಮಠದವರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ.  ಮೊದಲು ಮೋದಿ ಗೋರಕ್ಷಕನಾಥ ತಪಸ್ಸು ಮಾಡಿ, ಜ್ವಾಲಾಪೀಠಕ್ಕೆ ಭೇಟಿ …

Read More »

7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂತ ಕೆಪಿಸಿಸಿ ಸಭೆಯಲ್ಲಿ ಡಿಕೆ ಶಿವಕುಮಾರ್‌, ಸುರ್ಜೇವಾಲಾ ಅವರ ಎದುರಲ್ಲೇ ಓಪನ್ ಆಗಿ ಹೇಳಿದ್ದೆ ಎಂದು ಸಚಿವ ಜಮೀರ್‌ ಅಹ್ಮದ್‌ ತಿಳಿಸಿದರು. ಬೆಂಗಳೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಟಿಕೆಟ್‌ ಕೊಡದಿದ್ದಕ್ಕೆ ಅಸಮಾಧಾನ ಇದ್ದದ್ದು ನಿಜ, ಆ ನಂತರ ಎಲ್ಲವೂ ಸರಿಹೋಗಿದೆ. ಜಬ್ಬಾರ್‌ ಜೊತೆಗೆ 7 ಮುಸ್ಲಿಂ …

Read More »

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

ಮಂಡ್ಯ: 2028ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ಹೊರತು ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್  ಹೇಳಿದ್ದಾರೆ. ನಾಳೆ ಮಂಡ್ಯ  ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಶ್ರೀಕ್ಷೇತ್ರಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಸಿದ್ಧತೆ …

Read More »

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

ಬೆಂಗಳೂರು: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಶಿಸ್ತು ಪಾಲಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಆದರೆ ಜಮೀರ್ ಅಹ್ಮದ್‌ ಪಕ್ಷದ ಶಿಸ್ತನ್ನು ಪಾಲಿಸಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ …

Read More »

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಬೆಂಗಳೂರು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ  ಶವ ಪತ್ತೆಯಾಗಿರುವ ಘಟನೆ ನೆಲಮಂಗಲ  ತಾಲೂಕಿನ ಮೋಟಗಾನಹಳ್ಳಿ  ಗ್ರಾಮದಲ್ಲಿ ನಡೆದಿದೆ. ಜೀವಿತಾ (35) ಮೃತ ಗೃಹಿಣಿ. ಮನೆಯ ಕೋಣೆಯ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಜೀವಿತಾ ಶವ ಪತ್ತೆಯಾಗಿದೆ. ಆರು ವರ್ಷಗಳ ಹಿಂದೆ ವಿನಯ್ ಕುಮಾರ್ ಎಂಬವರ ಜೊತೆಗೆ ಜೀವಿತಾ ಮದುವೆಯಾಗಿದ್ದರು. ವಿನಯ್ ಕುಮಾರ್‌ಗೆ ಮೊದಲ ಹೆಂಡತಿ ಇಲ್ಲದ ಕಾರಣ ಕುಟುಂಬಸ್ಥರು ಎರಡನೇ ಮದುವೆ ಮಾಡಿದ್ದರು. ಇಬ್ಬರ ಸಂಬಂಧಕ್ಕೆ ಒಂದೂವರೆ ವರ್ಷದ …

Read More »

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ? ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.

Read More »

ಬೆಳಗಾವಿಯಲ್ಲಿ ಮರ್ಯಾದಾ ಹತ್ಯೆ ಪ್ರಕರಣ !!! ಬೇರೆ ರಾಜ್ಯದಲ್ಲಿ ಶವ ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪ್ರಕರಣವನ್ನು ಬೇಧಿಸಿದ ಸಿಪಿಐ ಜಾವೀದ್ ಮುಶಾಪುರೆ

ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆಂಬ ಕಾರಣಕ್ಕೆ ಸ್ವಂತ ಕುಟುಂಬದವರೇ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣವನ್ನು ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ಅವರು ಬೇಧಿಸಿದ್ದಾರೆ. ಪ್ರೀತಿ ಹಾಗೂ ಕುಟುಂಬದ ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಂತಾಗಿದೆ. ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ …

Read More »

ಪವರ್ ಪ್ಲಾಂಟ್ ದುರಂತ: ಬಾಯಿಲ‌ರ್ ಸ್ಫೋಟಕ್ಕೆ 10 ಕಾರ್ಮಿಕರು ಬಲಿ

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಿಂಗಿತಾರಿ ಗ್ರಾಮದಲ್ಲಿರುವ ವೇದಾಂತ ಪವ‌ರ್ ಪ್ಲಾಂಟ್‌ನಲ್ಲಿ ಇಂದು (ಏಪ್ರಿಲ್ 14) ಮಧ್ಯಾಹ್ನ ಭೀಕರ ಬಾಯಿಲರ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಉಂಟಾದ ಆತಂಕ ಮತ್ತು ಕಾಲ್ತುಳಿತದಲ್ಲಿ ಸುಮಾರು 30-40 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ರಾಯಗಢದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Read More »