Breaking News

Yearly Archives: 2026

ಪ್ರದೋಷ್‌ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ; ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರಕ್ಕೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಾಗಪ್ರಸನ್ನ ಅವರು, ಈಗ ಟ್ರಯಲ್ ಆಗಲ್ಲ, ಮೂರು ದಿನ ರಜೆ ಇದೆ. ಸೋಮವಾರಕ್ಕೆ ಆದೇಶ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ. 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು‌‌. ಹೈಕೋರ್ಟ್‌ನಲ್ಲಿ ದರ್ಶನ್‌ ಪರ ವಕೀಲರು ನಿನ್ನೆ …

Read More »

ಎಂಪಿಟಿ, ಎಂಎಹೆಚ್ಎಸ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ: ಕೆಇಎ

ಬೆಂಗಳೂರು: ಎಂಪಿಟಿ, ಎಂಎಸ್ಸಿ, ಮಾಸ್ಟರ್ ಅಲೈಡ್ ಹೆಲ್ತ್ ಸೈನ್ಸ್ ಈ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಮೆರಿಟ್ ನಿರ್ಧರಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆ.5 ಕೊನೆ ದಿನ. ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಕೋರ್ಸ್‌ಗಳಲ್ಲಿ ಪದವಿ ಮಾಡಿರಬೇಕು. ಕರ್ನಾಟಕದವರಾಗಿರಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಡಿಸಿಇಟಿ: ಎರಡನೇ ಸುತ್ತಿನ ಆಪ್ಷನ್ಸ್ ದಾಖಲು …

Read More »

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಬಸ್ ಚಾಲಕರು, ನಿರ್ವಾಹಕರು, ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ

ಮಂಗಳೂರು: ನಗರ ಸಂಚಾರ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಬಸ್ ಸುರಕ್ಷತೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಬುಧವಾರ ಮಂಗಳೂರಿನ ಪುರಭವನದಲ್ಲಿ ನಡೆಯಿತು. ಸದರಿ ಕಾರ್ಯಕ್ರಮದಲ್ಲಿ ಮಂಗಳೂರು ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲಿಕರು, ಬಸ್ ಮ್ಯಾನೇಜರ್‌ಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಸುಮಾರು 600 ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಮುಖ್ಯವಾಗಿ ಶಾಲಾ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು …

Read More »

ಗುಲಾಮಗಿರಿಯಿಂದ ಹೊರಬಂದರೆ ವಿಕಾಸ

ಬೋರಗಾಂವ: ರಾಜ್ಯ ಸರ್ಕಾರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಅಭಿವೃದ್ಧಿಗೆ ಬದ್ಧವಾಗಿದೆ. ಬಡವರಿಗೆ ಭೂಮಿ ಮತ್ತು ಆಶ್ರಯ ನೀಡಲು ಯೋಜನೆ ರೂಪಿಸಲಾಗುತ್ತಿದ್ದು, ಬೋರಗಾಂವ ಪಟ್ಟಣದಿಂದ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.  ಪಟ್ಟಣದಲ್ಲಿ ಸೋಮವಾರ ಹಮ್ಮಿ ಕೊಂಡಿದ್ದ ಸಾಹಿತ್ಯ ರತ್ನ, ಡಾ.ಅಣ್ಣಾಭಾವು ಸಾಠೆ ಅವರ 106ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತ ನಾಡಿ, ಅಣ್ಣಾಭಾವು ಸಾಠೆ ಅವರ ಕಾರ್ಯ ಮಾದಿಗ ಸಮುದಾಯ ಸೇರಿದಂತೆ ಕೆಳಮಟ್ಟದಲ್ಲಿರುವರಿಗೆ ಸ್ಫೂರ್ತಿದಾಯಕವಾಗಿದೆ. …

Read More »

ಬಿಜೆಪಿ ಹಗರಣದ ದಾಖಲೆ ಬಿಡುಗಡೆ ಮಾಡಲಿ- ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿರುವ ಬಿಜೆಪಿ ನಾಯಕರು ಈವರೆಗೂ ದಾಖಲೆ ಬಿಡುಗಡೆ ಮಾಡದೆ ಜನರ ದಾರಿ ತಪ್ಪಿಸುತ್ತಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾಖಲೆ ಬಿಡುಗಡೆ ಮಾಡಿದ ನಂತರವಷ್ಟೇ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಲು ಸಾಧ್ಯ. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಚಾರಣೆ ನಡೆದಿದೆ. ಗೃಹ ಸಚಿವ ಪ್ರಿಯಾಂಕಾ ಖರ್ಗೆ ಕೆಪಿಎಸ್‌ಸಿಗೆ ಸಂಬಂಧಪಟ್ಟವರಲ್ಲ. ದಾಖಲೆಗಳು ಹೊರಬಂದ …

Read More »

ಮೋದಿ ಜನ್ಮದಿನಕ್ಕೆ ಸಮಾಜಮುಖಿ ಕಾರ್ಯಕ್ರಮಗಳ ಸೇವಾ ಸಂಕಲ್ಪ ಅಭಿಯಾನ

ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ್ಯದ್ಯಂತ ಸೇವಾ ಸಂಕಲ್ಪ ಅಭಿಯಾನ ಆಯೋಜಿಸಿ, ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ತಿಳಿಸಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ನರೇಂದ್ರ ಮೋದಿ  ಸಾರ್ವಜನಿಕ ಜೀವನದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸುತ್ತಿದ್ದು, ಈ ಅವಧಿಯಲ್ಲಿ ಜನಸೇವೆ, …

Read More »

Belagavi: ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿದಾರರಿಗೆ ನೋಟೀಸ್

ಬೆಳಗಾವಿ :ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವರ್ಷಗಳಿಂದ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವ  ಆಸ್ತಿಗಳ ಮಾಲೀಕರಿಗೆ ಕೂಡಲೇ ನೋಟೀಸ್ ಜಾರಿ ಮಾಡಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತ ಕಾರ್ತಿಕ್‌ಎಂ. ಸೂಚಿಸಿದರು. ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಶಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಪಾಲಿಕೆ ತೆರಿಗೆ ಕಟ್ಟದೆ ಸೌಲಭ್ಯ ಪಡೆದುಕೊಳ್ಳುತ್ತಿರುವ ಲಕ್ಷಕ್ಕೂ ಹೆಚ್ಚು ಕರ ಬಾಕಿದಾರರಿಗೆ ನೋಟೀಸ್ ನೀಡುವುದರ ಜತೆಗೆ ವಾರದ ಗಡುವು ನೀಡಬೇಕು. ಆದರೂ, ತೆರಿಗೆ …

Read More »

ರಾಮದುರ್ಗ ತಾಲೂಕಿನಲ್ಲಿ ನಡೆದ ಕಳ್ಳತನ ಕಳ್ಳಿಯರ ಬಂಧನ

ಬೆಳಗಾವಿ: ಚಿನ್ನಾಭರಣ ಕಳ್ಳತನಕ್ಕೆ ಸಂಬಂಧಿಸಿದಂತೆ  ಬೆಳಗಾವಿಯ ಗ್ಯಾಂಗವಾಡಿಯ ಉಮಾ ಚೌಗುಲೆ(40) ಹಾಗೂ ಆರತಿ ಚೌಗುಲೆ(28)ಯನ್ನು ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸರು ವಶಕ್ಲೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಾಮದುರ್ಗ ತಾಲೂಕಿನ ಬೀಡಕಿ ಗ್ರಾಮದ ಮಂಜುಳಾ ನರಗುಂದ ಲೋಕಾಪುರದಿಂದ ಸಾಲಹಳ್ಳಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕೈಚೀಲದಲ್ಲಿದ್ದ 3 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನ ಹಾಗೂ 16 ಸಾವಿರ ರೂ. ಮೌಲ್ಯದ 80 ಗ್ರಾಂ ಬೆಳ್ಳಿ ಆಭರಣ ಕಳ್ಳುವಾಗಿರುವ ಕುರಿತು …

Read More »

ಅಥಣಿ: ಕಾಲು ಜಾರಿಗೆ ಬಿದ್ದ ರೈತ ಸಾವು

ಅಥಣಿ ಗ್ರಾಮೀಣ: ಪಂಪ್ ಸೆಟ್ ಆರಂಭಿಸಲು ಗದ್ದೆಗೆ ಹೋಗಿದ್ದ ತಾಲೂಕಿನ ಬೆವನೂರ ಗ್ರಾಮದ ರೈತ ಬಸಗೌಡ ಪಾಟೀಲ(39)ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಬಸಗೌಡ ಪಾಟೀಲ ಬಾವಿಗೆ ಬಿದ್ದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ. ನಂತರ ಮೃತ ದೇಹವನ್ನು ಅಥಣಿ ಅಗ್ನಿಶಾಮಕ ದಳ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …

Read More »

40 ವಿಶೇಷ ಚೇತನ ಮಕ್ಕಳಿಗೆ ಸಾಧನ ವಿತರಿಸಿದ ಶಾಸಕ ಆಸೀಫ್ ಸೇಠ್

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅವರು ಬೆಳಗಾವಿ ನಗರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 40 ವಿಶೇಷ ಚೇತನ ಮಕ್ಕಳಿಗೆ ವಿಶೇಷ ಸಹಾಯಕ ಸಾಧನಗಳನ್ನು ವಿತರಿಸಿದರು. ಮಕ್ಕಳ ದೈನಂದಿನ ಚಟುವಟಿಕೆಗಳು, ಚಲನವಲನ, ಶಿಕ್ಷಣ ಹಾಗೂ ಸ್ವಾವಲಂಬನೆಗೆ ನೆರವಾಗುವ ಉದ್ದೇಶದಿಂದ ಈ ಸಾಧನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆಸಿಫ್ (ರಾಜು) ಸೇಠ್, ಪ್ರತಿಯೊಬ್ಬ ಮಗುವಿಗೂ ಕಲಿಯಲು, ಬೆಳೆಯಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ಸಮಾನ …

Read More »