ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಇಂದು ಜಮಖಂಡಿ ಮತ್ತು ಮುಧೋಳ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ಆಪರೇಷನ್ ನಡೆಸಿದ ಡಿಸಿ, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮಖಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಮಖಂಡಿ ಎಸಿ …
Read More »Yearly Archives: 2026
ದುರ್ಗಂಧದ ಗೂಡಾದ ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ಶಚಾಲಯ
ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ( CBT ) ಉದ್ಘಾಟನೆಯಾಗಿ ಇನ್ನೂ ಎರಡು ತಿಂಗಳು ಕೂಡ ಆಗಿಲ್ಲಾ, ಅಲ್ಲಿಯ ಶೌಚಾಲಯಗಳ ಪರಿಸ್ಥಿತಿ ನೋಡ್ರಿ. ಇಲ್ಲಿ ಎಲ್ಲೆಂದರಲ್ಲಿ ಕಸ, ನೀರು ಕೂಡ ಸರಿಯಾಗಿ ಇಲ್ಲಾ. ಈ ಶೌಚಾಲಯಗಳ ದುಸ್ಥಿತಿ ಕಂಡು ನಿಜಕ್ಕೂ ಬೇಸರವಾಯ್ತು. ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಈ ಶೌಚಾಲಯಗಳ ಶುಚಿತ್ವಕ್ಕೆ ಆಧ್ಯತೆ ನೀಡಿ.
Read More »ರಾಹುಲ್ ಸದಸ್ಯತ್ವ ರದ್ದುಗೊಳಿಸಿ – ಬಿಜೆಪಿಯಿಂದ ಪ್ರಸ್ತಾಪ ಸಲ್ಲಿಕೆ
ನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿದೆ. ಸಂಸದ ನಿಶಿಕಾಂತ್ ದುಬೆ ಅವರು, ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು ಪ್ರಸ್ತಾವನೆ ಸಲ್ಲಿಸಿದ್ದೇನೆ. ಆಜೀವ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿ ಅವರ ವಿರುದ್ಧ ಮಹತ್ವದ ನಿರ್ಣಯ ಮಂಡಿಸಿರುವುದಾಗಿ ಹೇಳಿದ್ದಾರೆ. ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ನಾನು …
Read More »ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್
ಬೆಂಗಳೂರು: ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ 9.7 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಫೆ.7 ರಂದು ಸಹ ಕಸ್ಟಮ್ಸ್ …
Read More »ಬಜೆಟ್ ಸಭೆ ಬಿಟ್ಟು ನಾಳೆ ಡಿಸಿಎಂ ಡಿಕೆಶಿ ದೆಹಲಿ ಪಯಾಣ!
ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆ ಸಂಭವಿಸಿದೆ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದರೆ, ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಮುಖ ಪೂರ್ವಭಾವಿ ಸಭೆ ಕೈಬಿಟ್ಟು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ನಡೆಯಲಿರುವ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಮಹತ್ವದ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಗೈರಾಗಲಿದ್ದಾರೆ. ಬೆಳಗ್ಗೆ 9.50ಕ್ಕೆ ಅವರು ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾಳೆ ರಾತ್ರಿ ದೆಹಲಿಯಲ್ಲೇ …
Read More »ಶಿವರಾತ್ರಿ ಹಬ್ಬದ ಬಳಿಕ ಬಜೆಟ್ ದಿನಾಂಕದ ಕುರಿತು ನಿರ್ಧಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಬಳಿಕ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗ್ಗೆ ನಗರದ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳೊಂದಿಗೆ ಅವರು ಸಭೆ ನಡೆಸಿದರು. ಇದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಬ್ಬದ ಬಳಿಕ ಬಜೆಟ್ ದಿನಾಂಕ ತಿಳಿಸಲಾಗುವುದು ಎಂದರು. ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಂತ ಖರ್ಚಿನಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು …
Read More »ಬೆಳಗಾವಿಯಲ್ಲಿ ಗಗನ ಮುಟ್ಟಿದ ಒಣ ಮೆನಸಿನಕಾಯಿ ಬೆಲೆ
ಬೆಳಗಾವಿ: ಗ್ರಾಹಕರಿಗೆ ಘಾಟು ತಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಇಳುವರಿ ಬಾರದ ಹಿನ್ನೆಲೆಯಲ್ಲಿ ಮೆಣಸಿನಕಾಯಿ ದರ ಮಾರುಕಟ್ಟೆಯಲ್ಲಿ ದರ 500 ರೂ. ಗಡಿ ದಾಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ದುಪ್ಪಟ್ಟಾಗಿದೆ ಅಂತಾ ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಬೇಸಿಗೆ ಶುರುವಾದರೆ ಸಾಕು ಉತ್ತರ ಕರ್ನಾಟಕ ಜನರು ವರ್ಷಪೂರ್ತಿ ಆಗುವಷ್ಟು ಖಾರವನ್ನು ಸಿದ್ಧಪಡಿಸಿಕೊಳ್ಳುತ್ತಾರೆ. ಈಗ ಬೇಸಿಗೆ ಶುರುವಾಗಿದ್ದು, ಮೆಣಸಿನಕಾಯಿ ತರಲು ಮಾರುಕಟ್ಟೆಗೆ ಬರುವ ಕುಂದಾನಗರಿ ಗ್ರಾಹಕರಿಗೆ ದರ ಕೇಳಿ ತಲೆ ತಿರುಗುತ್ತಿದೆ. ಕಳೆದ ವರ್ಷ ಕೆಜಿಗೆ …
Read More »ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ
ನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್‌ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್‌ಗೆ ಒಪ್ಪಿಗೆ ನೀಡುವುದರಿಂದ …
Read More »ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್
ಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಪ್ರತಿಭಟನೆಯ ಕಹಳೆ ಮೊಳಗಿಸಲಿವೆ. ಈ ಕಾರ್ಮಿಕ ರೈತ ಸಂಘಟನೆಗಳಿಗೆ …
Read More »ಮೈಸೂರು ಸ್ಯಾಂಡಲ್ ಸೋಪ್ ಜತೆ ಹಲವು ಉತ್ಪನ್ನಗಳಿಗೆ ಸ್ಪರ್ಶ ನೀಡಿದ ನಟಿ ತವನ್ನಾ
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿ., (ಕೆಎಸ್‌ಡಿಎಲ್) ಹೊಸದಾಗಿ ಹೊರತಂದಿರುವ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಸಂಸ್ಥೆಯ 57 ಉತ್ಪನ್ನಗಳನ್ನು ಬಹು ಭಾಷ ನಟಿ ತಮನ್ನಾ ಭಾಟಿಯಾ ಬಿಡುಗಡೆ ಮಾಡಿದರು. ಈ ಹಿಂದೆ ಇದ್ದ 36 ಹಳೆ ಉತ್ಪನ್ನಗಳು ಸೇರಿದರೆ ಕೆಎಸ್‌ಡಿಎಲ್ ಉತ್ಪನ್ನಗಳ ಸಂಖ್ಯೆ ಈಗ 93ಕ್ಕೆ ಏರಿದಂತಾಗಿದೆ. ತಾಜ್ ವೆಸ್ಟ್ ಎಂಡ್ ಹೋಟೆಲಿನ ಝಗಮಗಿಸುವ ಸಭಾಂಗಣದಲ್ಲಿ ಅದ್ದೂರಿಯಾಗಿ ಜಗಮಗಿಸುವ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಿಳಿಗೆಂಪು ಬಣ್ಣದ ಮೈಸೂರು …
Read More »
Laxmi News 24×7