ಬೆಳಗಾವಿ: ರಾಜ್ಯದಲ್ಲಿ ಪಕ್ಷ ತಳಮಟ್ಟದಿಂದ ಸಂಘಟನೆಯ ಜತೆಗೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ವಾರ್ಡ್, ಬೂತ ಮಟ್ಟದಿಂದಲೇ ಕಾರ್ಯಕರ್ತರನ್ನು ಸಂಘಟಿತರನ್ನಾಗಿ ಮಾಡಬೇಕು ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ ಹೇಳಿದರು. ನಗರದ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿ, ಪಕ್ಷದ ತಾಲೂಕು, ಜಿಲ್ಲಾ ಹಾಗೂ ವಿಧಾನ ಮಂಡಲ ಮಟ್ಟದ ಮುಖಂಡರು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ …
Read More »Yearly Archives: 2026
ಜಾನುವಾರುಗಳನ್ನು ರಸ್ತೆಗಿಳಿಸಿ ರೈತರ ಪ್ರತಿಭಟನಾ ಮೆರವಣಿಗೆ
ಬೆಳಗಾವಿ : ನೀರಾವರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನೀಡಿದ ಭೂಮಿಗೆ ನ್ಯಾಯಯುತ ಪರಿಹಾರ ಹಾಗೂ ಸೂಕ್ತ ಪುನರ್ವಸತಿಗೆ ಆಗ್ರಹಿಸಿ ಎರಡು ದಿನಗಳಿಂದ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿರುವ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಬುಧವಾರ ಜಾನುವಾರುಗಳನ್ನು ರಸ್ತೆಗಿಳಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಗಳವಾರದಿಂದ ನೀರಾವರಿ ನಿಗಮದ ಆವರಣದಲ್ಲೇ ವಾಸ್ತವ್ಯ ಹೂಡಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಮಾಸ್ತ್ತಿಹೊಳಿ, ಗುಡಗನಟ್ಟಿ, ಬೀರನಹೊಳಿ, ಸುತಗಟ್ಟಿ ಹಾಗೂ ಜಾರಕಿಹೊಳಿ ಗ್ರಾಮಗಳ 500ಕ್ಕೂ ಹೆಚ್ಚು ರೈತರು …
Read More »ಹಿರೇಬಾಗೇವಾಡಿಯಲ್ಲಿ ಕೆಳ ಸೇತುವೆ ನಿರ್ಮಾಣ ಸಂಸದ ಜಗದೀಶ ಶೆಟ್ಟರ ಸೂಚನೆ
ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಜಗದೀಶ ಶೆಟ್ಟರ್ ಸಭೆ ನಡೆಸಿದರು. ಭುವನೇಶ ಕುಮಾರ, ಈರಣ್ಣ ರೊಟ್ಟಿ ಇತರರಿದ್ದರು. ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಬಸವೇಶ್ವರ ವೃತ್ತದ ಸಮೀಪ ಸಾರ್ವಜನಿಕರ ಅನುಕೂಲಕ್ಕಾಗಿ ಕೆಳ ಸೇತುವೆ (ಅಂಡರ್‌ಪಾಸ) ನಿರ್ಮಾಣ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಂಸದ ಜಗದೀಶ ಶೆಟ್ಟರ ಸೂಚನೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಈಚೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಹಿರೇಬಾಗೇವಾಡಿ ಗ್ರಾಮದ …
Read More »ಅಕ್ಕ ಕೆಫೆ ಬೆಳಗಾವಿ ಮಹಾನಗರ ಪಾಲಿಕೆ ಸೇರಿ ಜಿಲ್ಲೆಯ್ಯದ್ಯಂತ ವಿಸ್ತರಣೆಗೆ ಸಿದ್ಧತೆ
ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ, ದುಡಿಯುವ ಮಹಿಳೆಯರ ಕೈಗೆ ಕೆಲಸ ನೀಡುವ ಉದ್ದೇಶದಿಂದ ಆರಂಭಗೊಂಡಿರುವ ‘ಅಕ್ಕ ಕೆಫೆ’ ಬೆಳಗಾವಿ ಮಹಾನಗರ ಪಾಲಿಕೆ ಸೇರಿ ಜಿಲ್ಲೆಯ್ಯದ್ಯಂತ ವಿಸ್ತರಣೆಗೆ ಸರ್ಕಾರ ಮುಂದಾಗಿದೆ. ಹೌದು.ಮಹಿಳಾ ಸ್ವಸಹಾಯ ಸಂಘಗಳನ್ನು ( ಸಂಜೀವಿನಿ) ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ ಉತ್ತೇಜಿಸಲು ಮತ್ತು ಆರ್ಥಿಕ ಸ್ವಾವಲಂಬನೆಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಆರಂಭಿಸಿರುವ …
Read More »ದೇವಸ್ಥಾನದ ಬೆಳ್ಳಿ ಮೂರ್ತಿ, ಆಭರಣ ಕದಿಯುತ್ತಿದ್ದವರ ಬಂಧನ
ಬೆಳಗಾವಿ : ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು, ದೇವರ ಬೆಳ್ಳಿ ಮೂರ್ತಿ, ಆಭರಣ, ಗಂಟೆಯನ್ನೂ ಬಿಡದೇ ಕದಿಯುತ್ತಿದ್ದ ಕಳ್ಳರ ತಂಡವೊಂದನ್ನು ಬಂಧಿಸಿರುವ ಹಾರೂಗೇರಿ ಠಾಣೆ ಪೊಲೀಸರು 25.89 ಲಕ್ಷ ರೂ. ಮೌಲ್ಯದ ಮೂರ್ತಿ ಮತ್ತು ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಥಣಿ ತಾಲೂಕಿನ ಅಡಳಹಟ್ಟಿಯ ವಿಜಯ ಗುಡದಿನ್ನಿ, ಕಲ್ಮೇಶ ಮೂರಾಬಟ್ಟಿ, ಶಿವಾನಂದ ಚಿಕ್ಕಟ್ಟಿ, ಸಂಗಮೇಶ ಐನಾಪೂರ ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು …
Read More »ಸ್ಮಾರ್ಟ್ ಸಿಟಿಯ ಸಿಟೀಸ್ 2.0 ಅನುಷ್ಠಾನ
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಸ್ಮಾರ್ಟ್ ಸಿಟಿ-2 ಯೋಜನೆ ಅನುಷ್ಠಾನ ಕುರಿತು ಮೇಯರ್ ಪ್ರೀತಿ ಕಾಮಕರ್, ಉಪಮೇಯರ್ ಹನಮಂತ ಕೊಂಗಾಲಿ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಘನ ತ್ಯಾಜ್ಯ ಸಂಸ್ಕರಣ ಘಟಕ ಸೇರಿದಂತೆ ಕ್ರಿಯಾಯೋಜನೆಗೊಳಪಡುವ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ, ಇ ತ್ಯಾಜ್ಯ ಸಂಗ್ರಹಣ ಘಟಕ, ಯಂತ್ರಗಳು, ವಾಹನಗಳು ಹಾಗೂ ಮಾನವ ಸಂಪನ್ಮೂಲದ ಅಗತ್ಯತೆ ಸೇರಿದಂತೆ ಮುಂತಾದ ಸಂಪನ್ಮೂಲಗಳ ಕುರಿತು ಚರ್ಚಿಸಲಾಯಿತು. ಪಾಲಿಕೆ ಆಯುಕ್ತ ಕಾರ್ತಿಕ ಎಂ., ಆಡಳಿತ …
Read More »ನೀಟ್ ಪರೀಕ್ಷೆ ರದ್ದುಗೊಳಿಸಿ ಸಿಇಟಿ ಮರು ಜಾರಿಗೆ ಒತ್ತಾಯ
ದಾವಣಗೆರೆ : ಕೇಂದ್ರ ಸರ್ಕಾರ ವೈದ್ಯಕೀಯ ಕೋರ್ಸ್‌ಗಳಿಗೆ ನಡೆಸುತ್ತಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನೇ ಮರು ಜಾರಿಗೆ ತರಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕ ಸಮರ್ಥ್ ಶಾಮನೂರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ, …
Read More »ಹಿಡಕಲ್ಲ ಡ್ಯಾಂ ಬಳಿ ಯುವಕನ ಹತ್ಯೆ
ಬೆಳಗಾವಿ : ಹಳೆ ವೈಷಮ್ಯಮದ ಹಿನ್ನಲೆ ಗೋಕಾಕ ತಾಲೂಕಿನ ಮಾಣಿಕವಾಡಿ ಗ್ರಾಮದ ಪಾಸ್ಕಲ್ ಹೃದಯರಾಜ್ ಮುತ್ತುಸ್ವಾಮಿ(೩೧) ಎಂಬಾತನನ್ನು ಹುಕ್ಕೇರಿ ತಾಲ್ಲೂಕಿನ ಹಿಡಕಲ್ಲ ಜಲಾಶಯದ ಸಮೀಪ ಗುಡ್ಡ ಪ್ರದೇಶದಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಕೊಲೆಯಾದ ಯುವಕ ಪಾಸ್ಕಲ್ ಹೃದಯರಾಜ್ ಮುತ್ತುಸ್ವಾಮಿ ಗೆಳೆಯರೊಂದಿಗೆ ಹಿಡಕಲ್ಲ ಜಲಾಶಯದ ಬಳಿ ಕುಳಿತಿರುವಾಗ,ಆಟೋದಲ್ಲಿ ಬಂದ ಆರೋಪಿಗಳು ಮಾರಕಾಸ್ತçದಿಂದ ದಾಳಿ ಮಾಡಿಕೊಲೆ ಮಾಡಿದೆ. ಮೃತ ಈ ಹಿಂದೆ ಗೋಕಾಕನ ಕೊಲೆ, ಅಪಹರಣ ಸೇರಿ …
Read More »ಎಂಟನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿಯ ಬಂಧನ
ಚಿಕ್ಕಬಳ್ಳಾಪುರ: ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ವ್ಯಕ್ತಿಯನ್ನು ಬಂಧಿಸಿ, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಶಿಡ್ಲಘಟ್ಟ ತಾಲೂಕಿನ ಚರಣ್ (೨೫) ಎಂಬುದಾಗಿ ಗುರುತಿಸಲಾಗಿದೆ. ೮ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯು ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪಾಲಕರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ತಪಾಸಣೆ ಕೈಗೊಂಡ ವೈದ್ಯರಿಗೆ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ತಕ್ಷಣ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ …
Read More »ಸಂಕೇಶ್ವರ ಪಟ್ಟಣದಲ್ಲಿ ದೇವಸ್ಥಾನ ಕುಳಿತು ಎಸ್ಐಆರ್ ಕಾರ್ಯ
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿಡಸೋಸಿ ರಸ್ತೆಯ ಆದರ್ಶ ನಗರದಲ್ಲಿರುವ ದೇವಸ್ಥಾನವೂಂದರ ಭವನದಲ್ಲೇ ಕುಳಿತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅರ್ಜಿಗಳನ್ನು ಕೆಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ ಒ) ಭರ್ತಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮತದಾರರ ಮನೆಗೆ ತೆರಳಿ ಮಾಹಿತಿ …
Read More »
Laxmi News 24×7