ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಅತ್ಯಂತ ಸೂಕ್ತ ಎಂದು ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಅಭಿಪ್ರಾಯಪಟ್ಟಿದ್ದಾರೆ. ಆದರೆ, ಶೀಘ್ರದಲ್ಲೇ ನಡೆಯಲಿದೆ ಎನ್ನಲಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಗಾದಿಯ ಕುರಿತು ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ …
Read More »Yearly Archives: 2026
ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ
ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಮುಂದಿನ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಯಾರು …
Read More »ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧತೆ ಕೈಗೊಳ್ಳಿ: ಸಿಇಒ ರಾಹುಲ ಶಿಂಧೆ ಸೂಚನೆ
ಜಿಲ್ಲೆಯ ಎಲ್ಲ ಶಾಲೆ ಹಾಗೂ ಅಂಗನವಾಡಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿಗಳ ಪ್ರಾರಂಭೋತ್ಸವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಾಲೆ ಹಾಗೂ ಅಂಗನವಾಡಿಗಳ ಒಳ, ಹೊರಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಆದ್ಯತೆ ನೀಡಬೇಕು. ಆಹಾರ ಪದಾರ್ಥಗಳ ದಾಸ್ತಾನು ಕೊಠಡಿ ಶುಚಿಯಾಗಿಟ್ಟುಕೊಳ್ಳಬೇಕು. ಆಹಾರ ಪದಾರ್ಥ ಗುಣಮಟ್ಟ …
Read More »ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ …
Read More »ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್ಗೆ ಒತ್ತಾಯ
ಬಾಗಲಕೋಟೆ: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್ಗೆ ಒತ್ತಾಯಿಸಿದ್ದಾರೆ. ನಾಳೆ ಎಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ. ಮುಸ್ಲಿಂ …
Read More »ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ ಅಧಿಕಾರ ರಾಜಕೀಯ ಈ ನಿರ್ಗಮನದೊಂದಿಗೆ ಕೊನೆಗೊಳ್ತಿದೆ. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಿರುಸಿನ ವಿದ್ಯಮಾನಗಳು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿವೆ. ಮೊದಲೇ ನಿರ್ಣಯಿಸಿದಂತೆ ಇಂದು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ …
Read More »ಪ್ರೇಯಸಿ ಮನೆಗೆ ಹೋಗಿ ಪತಿಗೆ ಸಿಕ್ಕಿಬಿದ್ದ ಯುವಕನ ಬರ್ಬರ ಹತ್ಯೆ
ಬೆಂಗಳೂರು: ಪ್ರೇಯಸಿ ಮನೆಗೆ ಹೋಗಿ ಪತಿಗೆ ಸಿಕ್ಕಿಬಿದ್ದು ಆಕೆಯ ಪತಿ ಹಾಗೂ ಕುಟುಂಬಸ್ಥರಿಂದ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿದ ಘಟನೆ ಬ್ಯಾಟರಾಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ಯಾಮಣ್ಣ ಗಾರ್ಡನ್‌ನಲ್ಲಿ ನಡೆದಿದೆ. ರಾಮನಗರದ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ (27) ಕೊಲೆಯಾದ ಯುವಕ. ಮಾಜಿ ಪ್ರೇಯಸಿ ಮೇ 25 ರಂದು ಕರೆ ಮಾಡಿದ್ದ ಹಿನ್ನಲೆ ಯುವಕ ಮನೆಗೆ ಹೋಗಿದ್ದ. ಈ ವೇಳೆ ಪತಿ ಹಾಗೂ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಈ ವೇಳೆ …
Read More »ಅಪ್ಪಾಜಿ ನೀವು ಹೋದ್ರೆ ನಮ್ಮನ್ನ ಕೈ ಬಿಡ್ತಾರೆ – ಸಿಎಂ ಮುಂದೆ ಕಣ್ಣೀರಿಟ್ಟ ನೌಕರರು
ಬೆಂಗಳೂರು: ಸಿದ್ದರಾಮಯ್ಯ ಅವರು ಮೇ 28 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ವಿಧಾನಸೌಧದಲ್ಲಿದ್ದ ಆಡ್ಮಿನ್ ವಿಭಾಗದ ಮಹಿಳಾ ಸಿಬ್ಬಂದಿ ಕಣ್ಣೀರಿಟ್ಟಿದ್ದಾರೆ. ಅಪ್ಪಾಜಿ ಅಪ್ಪಾಜಿ.. ನೀವು ಹೋದ್ರೆ ನಮ್ಮನ್ನ ಕೈ ಬಿಡ್ತಾರೆ ಎಂದು ಕೆಲ ನೌಕರರು ಗೋಳಾಡಿದ್ದಾರೆ. ನಿಮ್ಮ ಹೆಸರು ಹೇಳಿಕೊಂಡು ಬದುಕುತ್ತಿದ್ದೇವು ಎಂದು ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಕಣ್ಣೀರಿಟ್ಟಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ವಿಷಲ್ ಹೊಡೆದುಕೊಂಡು ಅಲ್ಲಿಂದ ತೆರಳಿದ್ದಾರೆ. …
Read More »ದೆಹಲಿಯಿಂದ ಬೆಂಗ್ಳೂರಿಗೆ ಡಿಕೆಶಿ ವಾಪಸ್ – ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಲ್ಲಿ ಪ್ರಯಾಣ
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದರು. ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸರ್ಕಾರಿ ಕಾರನ್ನು ಬಿಟ್ಟು ಖಾಸಗಿ ಕಾರಲ್ಲಿ ಮನೆಗೆ ಪ್ರಯಾಣ ಬೆಳೆಸಿದರು. ಈ ವೇಳೆ ಏನೂ ಮಾತಾಡದೇ, ಅಭಿಮಾನಿಗಳತ್ತ ಕೈಬೀಸಿ ಅಲ್ಲಿಂದ ತೆರಳಿದ್ದಾರೆ. ಮೇ 28 ರಂದು ಅವರು ಬೆಂಗಳೂರಿಗೆ ಬರುತ್ತಾರೆ ಎನ್ನಲಾಗಿತ್ತು. ಆದರೆ ಒಂದು ದಿನ ಮುಂಚೆಯೇ ಅವರು ಆಗಮಿಸಿದ್ದಾರೆ. ಅವರ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಸೇರುವ ನಿರೀಕ್ಷೆ ಇದ್ದಿದ್ದರಿಂದ ಏರ್ಪೋರ್ಟ್‌ನಲ್ಲಿ ಭಾರೀ …
Read More »ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ: ಆಸೀಫ್ ಸೇಠ್
ಬೆಳಗಾವಿ: ಉತ್ತರ ಕರ್ನಾಟಕದಿಂದ ಅಲ್ಪಸಂಖ್ಯಾತರು ಯಾರೂ ಸಚಿವರು ಆಗಿಲ್ಲ. ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ ಆಗಲಿದೆ. ಅಲ್ಪಸಂಖ್ಯಾತ ಕೋಟಾದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಆಸೀಫ್ ಸೇಠ್ ಬೇಡಿಕೆ ಇಟ್ಟರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಬರೀ ಅಲ್ಪಸಂಖ್ಯಾತ ಇಲ್ಲಾ. ಇಲ್ಲಿವರೆಗೆ ಬೆಳಗಾವಿಗೆ ಅಲ್ಪಸಂಖ್ಯಾತರ ನಾಯಕರಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಹಾಗಾಗಿ ನನಗೆ ಸ್ಥಾನ ನೀಡಬೇಕು ಎಂದು ತಿಳಿಸಿದರು. …
Read More »
Laxmi News 24×7