ಚಿಕ್ಕಬಳ್ಳಾಪುರ: ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಹಿಳೆಯೊಬ್ಬರು ಮಾಟಮಂತ್ರ ಮಾಡಿರುವ ಅಚ್ಚರಿಯ ಘಟನೆ ಚಿಕ್ಕಬಳ್ಳಾಪುರ ನ್ಯಾಯಾಲಯದಲ್ಲಿ ನಡೆದಿದೆ. ಸಿವಿಲ್ ವ್ಯಾಜ್ಯದಲ್ಲಿ ತನ್ನ ಪರ ಅನುಕೂಲಕರ ತೀರ್ಪು ಪಡೆಯುವ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ ಮಾಡಿದ್ದ ಚಿಕ್ಕಬಳ್ಳಾಪುರ ನಗರ ಪೊಲೀಸರು ಮಂಜುಳಾ (65) ಎಂಬಾಕೆಯನ್ನ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಲಸಣ್ಣ ಬೀದಿ ನಿವಾಸಿಯಾಗಿರುವ ಮಂಜುಳಾ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ (JMFC Court) ನ್ಯಾಯಾಧೀಶರ ಡಯಾಸ್ …
Read More »Yearly Archives: 2026
ಬಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್
ಮಂಗಳೂರು: ಚಲಿಸುತ್ತಿದ್ದ ಬಸ್ನಲ್ಲೇ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಮುಕ ಕಂಡಕ್ಟರ್ ಇರ್ಫಾನ್ (32) ಬಂಧಿತ ಆರೋಪಿ. ಈತ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾನೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ (Private Bus) …
Read More »ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್
ಬೆಂಗಳೂರು: ಕೆಆರ್ ಪುರಂ ವ್ಯಾಪ್ತಿಯಲ್ಲಿ ಪ್ರಿಯಕರನ ಜೊತೆ ಸೇರಿಕೊಂಡು ಶ್ವೇತಾ ತ್ರಿವಳಿ ಕೊಲೆ ಮಾಡಿ ತಿಂಗಳು ಕಳೆಯುವ ಮುನ್ನವೇ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ತ್ರಿಬಲ್ ಮರ್ಡರ್ ಕೇಸ್ ಬೆಳಕಿಗೆ ಬಂದಿದೆ. ಕಾಮಾಕ್ಷಿಪಾಳ್ಯದ ಕೊಟ್ಟಿಗೆ ಪಾಳ್ಯದಲ್ಲಿರುವ ಗಣೇಶ ದೇವಸ್ಥಾನದ ಬಳಿಯ ನಿವಾಸದಲ್ಲಿ ಈ ಘಟನೆ ನಡೆದಿದೆ. ತಾಯಿ ಮಂಗಳಮ್ಮ (55), ಅಜ್ಜಿ ನಂಜಮ್ಮ (65) ಹಾಗೂ ಮಾವ ಸತೀಶ್ (50) ಅನ್ನು ಆರೋಪಿ ಪ್ರಶಾಂತ್ (34) ಕೊಲೆ ಮಾಡಿದ್ದಾನೆ. ಕುಟುಂಬಸ್ಥರೆಲ್ಲರು ಕಳೆದ …
Read More »ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್ ಬದಲಾಯಿಸಿದ್ದು ಯಾಕೆ?
ಪಾಟ್ನಾ: ಬಿಹಾರದ ಅತ್ಯಂತ ಪ್ರತಿಷ್ಠಿತ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ರಾಜಕೀಯ ಲೆಕ್ಕಾಚಾರಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿವೆ. ರಾಜಕೀಯ ತಂತ್ರಜ್ಞ ಹಾಗೂ ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ಎದುರು ಕಣಕ್ಕಿಳಿಸಲು ಈ ಹಿಂದೆ ತಾನು ಅಂತಿಮಗೊಳಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ(BJP) ದಿಢೀರನೆ ಬದಲಾಯಿಸಿದೆ. ಬಿಜೆಪಿ ಮೊದಲು ಘೋಷಿಸಿದ್ದ ಅಭ್ಯರ್ಥಿ ಅಭಿಷೇಕ್ ಬಂಟಿ ಗುರುವಾರವಷ್ಟೇ ಭಾರಿ ಜನಸ್ತೋಮದೊಂದಿಗೆ ಅತ್ಯಂತ ಅದ್ಧೂರಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ …
Read More »“ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಅಜ್ಜನಕಟ್ಟಿ ಗ್ರಾಮದ ಶ್ರೀ ರಂಗ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ …
Read More »ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆ
ಹೈದರಾಬಾದ್: ಪೋಕ್ಸೋ ಕೇಸಲ್ಲಿ ಜಾಮೀನು ಪಡೆದಿದ್ದ ಆರೋಪಿಯೊಬ್ಬ ಹೆಂಡತಿ, ಇಬ್ಬರು ಮಕ್ಕಳು ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಬಾಲಕಿ ಸೇರಿದಂತೆ 6 ಜನರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್‌ನಲ್ಲಿ ನಡೆದಿದೆ. ರಾಜ್‌ಕುಮಾರ್ (35) ಕೊಲೆ ಆರೋಪಿಯಾಗಿದ್ದಾನೆ. ಈತ ತನ್ನ ಪತ್ನಿ ಪಾರ್ವತಿ ಸರಿತಾ (30) ಹಾಗೂ 4, 1 ವರ್ಷದ ಇಬ್ಬರು ಗಂಡು ಮಕ್ಕಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಬಳಿಕ ಪೋಕ್ಸೊ …
Read More »ಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ
ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದ್ದರಿಂದ ಕಳೆದ ಕೆಲವು ದಿನಗಳಿಂದ ಜಲಾವೃತಗೊಂಡಿದ್ದ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಪ್ರಮುಖ 3 ಸೇತುವೆಗಳು ಶನಿವಾರ ಸಂಚಾರಕ್ಕೆ ಮುಕ್ತವಾಗಿವೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕುಸಿದಿರುವುದರಿಂದ ಕೃಷ್ಣಾ ವೇದಗಂಗಾ ಮತ್ತು ದೂಧ್‌ಗಂಗಾ ನದಿಗಳ ಒಳಹರಿವಿನಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಚಿಕ್ಕೋಡಿ ಉಪ ವಿಭಾಗದಲ್ಲಿ ಮುಳುಗಡೆಯಾಗಿದ್ದ ಒಟ್ಟು 9 ಕೆಳ ಹಂತದ ಸೇತುವೆಗಳ ಪೈಕಿ 3 ಸೇತುವೆಗಳ ಮೇಲಿಂದ ನೀರು …
Read More »ಎಸ್‌ಐಆರ್ ಡ್ಯೂಟಿ ಮುಗಿಸಿ ಮನೆಗೆ ಬಂದಿದ್ದ ಬಿಎಲ್ಒ ಹೃದಯಾಘಾತದಿಂದ ಸಾವು
ದಾವಣಗೆರೆ: ದಿನಪೂರ್ತಿ ಎಸ್‌ಐಆರ್ (SIR) ಡ್ಯೂಟಿ ಮಾಡಿ ಮನೆಗೆ ಬಂದಿದ್ದ ಬಿಎಲ್ಒ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ. ಡಿ.ಆರ್.ರಾಜಪ್ಪ (57) ಹೃದಯಾಘಾತದಿಂದ ಸಾವನ್ನಪ್ಪಿದ ಬಿಎಲ್ಒ. ಅವರು ಚಿರಡೋಣಿ ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಕಲೆಕ್ಟರ್ ಆಗಿದ್ದರು. ಜು.10 ರಂದು ಎಸ್‌ಐಆರ್ ಕೆಲಸದ ಮೇಲೆ ಮನೆ ಮನೆಗೆ ಭೇಟಿ ನೀಡಿ, ವಾಪಸ್ ಆಗಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಹೃದಯಾಘಾತದಿಂದ …
Read More »8ನೇ ತರಗತಿ ವಿಧ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ FIR
ಆನೇಕಲ್: ಶಿಕ್ಷಕಿ ಬೈದರೆಂಬ ವಿಚಾರಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಡುಗೆ ಸಹಾಯಕಿ ಹಾಗೂ ಮೂವರು ಶಿಕ್ಷಕಿಯರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಹಾಗೂ ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಧ್ಯಾರ್ಥಿನಿ ಮಧುಶ್ರೀಗೆ ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಮಧುಶ್ರೀ …
Read More »ನನಗೆ ಕೊಟ್ರೆ ರಾಜ್ಯದ KAT, KPSC ಯನ್ನೇ ರದ್ದು ಮಾಡ್ತೇನೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ನನಗೆ ಬಿಟ್ಟರೆ ರಾಜ್ಯದ ಕೆಎಟಿ ಮತ್ತು ಕೆಪಿಎಸ್ಸಿಯನ್ನೇ ರದ್ದು ಮಾಡುತ್ತೇನೆ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. KPSC ಅಧ್ಯಕ್ಷರ ಪುತ್ರಿಯ ಮೇಲೆ FIR ದಾಖಲು ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಕಲಿ ಆದಾಯ ಪ್ರಮಾಣ ಪತ್ರದ ದೂರು ಆಗಿದೆ. ನಿನ್ನೆ ರಾತ್ರಿ ಎಫ್‌ಐಆರ್ ದಾಖಲಾಗಿದೆ. ಕೆಪಿಎಸ್‌ಸಿ ಸಾಂವಿಧಾನಿಕ ಸಂಸ್ಥೆ. ಅದನ್ನ ಕಾನೂನಾತ್ಮಕವಾಗಿ ಹೇಗೆ ಟ್ಯಾಕಲ್ ಮಾಡಬಹುದು ನೋಡಬೇಕು. ಬೇಲಿನೇ ಎದ್ದು ಹೊಲ ಮೇದರೆ ಏನು …
Read More »
Laxmi News 24×7