ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿರುವ ಕಾಕ್ರೋಚ್ ಕರ್ನಾಟಕ ಜನತಾ ಪಾರ್ಟಿ ವತಿಯಿಂದ ಪ್ರತಿಭಟನಾ ಕರೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಿದೆ. ಬರುವ ಮೇ 24 ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಶಾಂತಿಯುತ ಮಾನವ ಸರಪಳಿ’ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಗಿದೆ. ಆದರೆ ಈ ಪ್ರತಿಭಟನೆಗೆ ಯಾವುದೇ ಕಾನೂನುಬದ್ಧ ಅನುಮತಿ …
Read More »Yearly Archives: 2026
ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ – ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಹೊಸ ದಾಖಲೆ
ಬೆಳಗಾವಿ: ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಹೊಸ ದಾಖಲೆ ನಿರ್ಮಿಸಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬಿಇ , ಬಿಟೆಕ್ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಪ್ರಕಟಿಸಿದೆ. ಬಿಇ, ಬಿಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಒಟ್ಟು 56,192 ವಿದ್ಯಾರ್ಥಿಗಳ ಹಾಜರಾಗಿದ್ದರು. ಇಂದು (ಮೇ 22) ಸಂಜೆ 5:30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5:40ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ವಿವಿಯು ಶೇ.99.98ರಷ್ಟು …
Read More »ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ
ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, …
Read More »ಸಿದ್ದರಾಮಯ್ಯ ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರೋದು ಅತಿರೇಕ ಆಗ್ತಿದೆ – ಯತ್ನಾಳ್
ವಿಜಯಪುರ: ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು, ಸಿದ್ದರಾಮಯ್ಯ ಅವರದ್ದು ಅತಿರೇಕ ಆಯ್ತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರದ್ದು ಅತಿರೇಕ ಆಯ್ತು. ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು. ಮಾಜಿ ಸಂಸದರ ಮೇಲೆ ಕಲ್ಲು ತೂರಾಟ ಮಾಡಿದವರು, ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿದವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ …
Read More »ದುಬಾರೆ ದುರಂತ – ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್
ಮಡಿಕೇರಿ: ದುಬಾರೆ ಆನೆ ಕ್ಯಾಂಪ್‌ನಲ್ಲಿಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ರಕ್ಷಿತ್ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಪ್ರಕರಣ ದಾಖಲಿಸಿದ್ದಾರೆ. ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ …
Read More »ಬಡವರ ಮತಗಳನ್ನು ತೆಗೆಯಲು SIR ಮೂಲಕ ಸಂಚು: ಡಿಕೆಶಿ ಕಿಡಿ
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು, ಬಿಎಲ್ಎಗಳಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ …
Read More »ಬೆಳಗಾವಿ| ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ
ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ …
Read More »51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ!
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲು ಮೇ ತಿಂಗಳಿನಿಂದಲೇ ಆರಂಭವಾಗುತ್ತಿರುವುದರಿಂದ, ಶಾಲೆಗಳ ಆರಂಭದಲ್ಲೇ ಶಿಕ್ಷಕರ ಕೊರತೆಯಾಗದಂತೆ ತಡೆಯಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳು11 ಸಾವಿರ …
Read More »ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ
ಬೆಂಗಳೂರು: ನಗರದ ಮಡಿವಾಳ ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿರೋ ಯುವತಿ, ಓದಿನ ಜೊತೆಗೆ ಮೋಮೋಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೋಮೋಸ್ ಅಂಗಡಿ ಮಾಲೀಕರಾದ ಅತುಲ್, ಗೋಷ್ ಎಂಬವರು ಮೇ 11ರಂದು ಯುವತಿಯನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಈ ವೇಳೆ ಮೋಮೋಸ್ ಅಂಗಡಿಯನ್ನು ಮಾರಾಟ ಮಾಡಲು ಮುಂದಾಗಿರೋ ವಿಚಾರ ತಿಳಿಸಿ ಹೈನಾಸ್ ಎಂಬ ಮಧ್ಯವರ್ತಿಯನ್ನು ಕರೆದಿದ್ದಾರೆ. ಅಂಗಡಿ ಮಾರಾಟದ ವಿಚಾರ ಚರ್ಚೆ …
Read More »ಸಿದ್ದರಾಮಯ್ಯ-ಡಿಕೆಶಿ ನಡುವೆ ಖರ್ಗೆ ಜಗಳ ಮಾಡಿಸ್ತಿದ್ದಾರೆ – ರಾಧಾಮೋಹನ್ ದಾಸ್
ಬೆಂಗಳೂರು: ದೆಹಲಿಯಲ್ಲಿರುವ ಕಾಂಗ್ರೆಸ್ ಮುಖಂಡರಾದ ಖರ್ಗೆಯವರು ಮಂಗನ ಮಾದರಿಯಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಎಂಬ ಎರಡು ಬೆಕ್ಕುಗಳ ನಡುವೆ ಜಗಳ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವರು ಜಗಳ ಮಾಡಿಕೊಂಡು ಇದ್ರೆ ತಾವು ಮುಖ್ಯಮಂತ್ರಿ ಆಗಲು ಅವಕಾಶ ಸಿಗಲಿ ಎಂದು ಖರ್ಗೆಯವರು …
Read More »
Laxmi News 24×7