Breaking News

Yearly Archives: 2026

ಕುಡಿದ ಮತ್ತಿನಲ್ಲಿ ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ – ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು, ಬಂಕ್‌

ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಹಾಗೂ ಪೆಟ್ರೋಲ್ ಪಂಪ್ ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾದ ಭೀಕರ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ನಡೆದಿದೆ. ಅತ್ತಿಬೆಲೆಯ ಹೆಚ್‌ಪಿ  ಪೆಟ್ರೋಲ್ ಬಂಕ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಂಜಯ್ ಎಂಬಾತ ಯುವತಿಯೊಬ್ಬಳ ಜೊತೆ ಜಾಗ್ವಾರ್ ಕಾರಿನಲ್ಲಿ ಬಂದಿದ್ದು, ಕುಡಿದ ಮತ್ತಿನಲ್ಲಿ ಏಕಾಏಕಿ ಕಾರನ್ನು ಪೆಟ್ರೋಲ್ ಬಂಕ್ …

Read More »

ರೇಣುಕಾಸ್ವಾಮಿ ಕೊಲೆ ಕೇಸ್‌- ಸುಪ್ರೀಂನಲ್ಲೂ ದರ್ಶನ್‌ಗೆ ಬಿಗ್‌ ಶಾಕ್‌

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ  ಮತ್ತೊಂದು ಭಾರಿ ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ (ಅಪ್ರೂವರ್) ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ವಿಜಯಲಕ್ಷ್ಮೀ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ನ್ಯಾ. ಜೆ.ಬಿ ಪಾರ್ದಿವಾಲ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ …

Read More »

ಡೀಸೆಲ್ ಕೊರತೆ – ಡಿಪೋದಲ್ಲೇ ನಿಂತ ಕೆಎಸ್‌ಆರ್‌ಟಿಸಿ ಬಸ್‌ಗಳು

ಕೊಪ್ಪಳ: ಜಿಲ್ಲೆಯ ಗಂಗಾವತಿ ಹಾಗೂ ಕುಷ್ಟಗಿ ಕೆಎಸ್‌ಆರ್‌ಟಿಸಿ) ಸಾರಿಗೆ ಡಿಪೋಗಳಲ್ಲಿ ಕಳೆದ 2–3 ದಿನಗಳಿಂದ ತೀವ್ರ ಡೀಸೆಲ್ ಅಭಾವ ಎದುರಾಗಿದ್ದು, ನೂರಾರು ಬಸ್‌ಗಳು ಡಿಪೋಗಳಲ್ಲೇ ಸಾಲುಗಟ್ಟಿ ನಿಲ್ಲುವಂತಾಗಿದೆ. ಇದರಿಂದಾಗಿ ಗ್ರಾಮೀಣ ಹಾಗೂ ದೂರದ ಊರುಗಳಿಗೆ ತೆರಳುವ ಬಸ್‌ಗಳ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿದಿನ ಬಸ್‌ಗಳ ಸಂಚಾರಕ್ಕೆ ಸಾವಿರಾರು ಲೀಟರ್ ಡೀಸೆಲ್ ಅಗತ್ಯವಿದ್ದು, ಕಂಪನಿಗಳಿಂದ ಸಕಾಲದಲ್ಲಿ ಸಮರ್ಪಕ ಡೀಸೆಲ್ ಪೂರೈಕೆಯಾಗದ ಕಾರಣ …

Read More »

ಕಾರ್ಗಿಲ್ ಯುದ್ಧದ ಸಮಯದಲ್ಲಿ ಸಿನಿಮಾ ಬಿಟ್ಟು ಸೇನೆ ಸೇರಿದ್ದ ನಾನಾ ಪಾಟೇಕರ್‌

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್‌  ಇಂದು ನಿಧನರಾಗಿದ್ದು, ಅವರು ಅಭಿನಯಕ್ಕೆ ಮಾತ್ರ ಸೀಮಿತವಾಗದೆ ಸಮಾಜ ಸೇವೆ, ದೇಶಸೇವೆಯಲ್ಲೂ ಸಹ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಗೆ ಸೇರಿ ದೇಶಸೇವೆ ಮಾಡಿದ್ದರು. 1991ರಲ್ಲಿ ತೆರೆಕಂಡ ‘ಪ್ರಹಾರ್ ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಸೇನಾ ತರಬೇತಿ ಪಡೆದಿದ್ದರು. ಈ ತರಬೇತಿಯ …

Read More »

ಲಗೇಜ್‌ ಟ್ರ್ಯಾಲಿಯಲ್ಲಿ ಸಾಗಿಸುತ್ತಿದ್ದ 1.80 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶಕ್ಕೆ‌

ಬೆಂಗಳೂರು: ಡಿಆರ್‌ಐ  ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಲಗೇಜ್‌ ಟ್ರ್ಯಾಲಿಯಲ್ಲಿ ಸಾಗಿಸುತ್ತಿದ್ದ ಚಿನ್ನದ  ಬಿಸ್ಕೆಟ್‌ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 1.80 ಕೋಟಿ ಮೌಲ್ಯದ 1.3 ಕೆಜಿ ಚಿನ್ನದ ಬಿಸ್ಕೆಟ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿದೇಶದಿಂದ ಇಬ್ಬರು ಆರೋಪಿಗಳು ಚಿನ್ನ ತಂದಿದ್ದರು. ಆರೋಪಿಗಳೂ ಯಾವುದೋ ಯಾವುದೋ ಟ್ರ್ಯಾಲಿಗೆ ಚಿನ್ನದ ಬಿಸ್ಕೆಟ್ ಅಂಟಿಸಿ ಬಿಡ್ತಾ ಇದ್ದರು. ಅಮಾಯಕ ಪ್ರಯಾಣಿಕರು ಟ್ರ್ಯಾಲಿ ತೆಗೆದುಕೊಂಡು ಕಸ್ಟಮ್ಸ್ ದಾಟುತ್ತಾ ಇದ್ದರು. ಟ್ರ್ಯಾಲಿ ತೆಗೆದುಕೊಂಡು ಹೋದ ಜನರ …

Read More »

ವಿಪ್ ಉಲ್ಲಂಘನೆ – ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರು ಅನರ್ಹ

ಬಳ್ಳಾರಿ: ಪಕ್ಷದ ಅಧಿಕೃತ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಹಾಗೂ ಸಭೆಗೆ ಉದ್ದೇಶಪೂರ್ವಕವಾಗಿ ಗೈರುಹಾಜರಾದ ಆರೋಪದಡಿ ಹಗರಿಬೊಮ್ಮನಹಳ್ಳಿ ಪುರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ವಿಜಯನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಪುರಸಭೆ ಸದಸ್ಯರಾದ ಈರಣ್ಣ, ಮಲ್ಲೇಶ್ವರಿ ಹಾಗೂ ಚನ್ನಮ್ಮ ಅನರ್ಹಗೊಂಡ ಜನಪ್ರತಿನಿಧಿಗಳು. ಕಳೆದ ಏಪ್ರಿಲ್ 30 ರಂದು ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ 8ನೇ ವಾರ್ಡ್ …

Read More »

ವಿಪಕ್ಷಗಳ ಪ್ರತಿಭಟನೆಯಲ್ಲಿ ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌  ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯು 3ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ವೇಳೆ ನೂರಾರು ಜನರ ನಡುವೆ ಮೋದಿ ಪರ ಘೋಷಣೆ ಕೂಗುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆದಿದೆ. ಪ್ರತಿಭಟನೆಯಲ್ಲಿ ವಿಪಕ್ಷಗಳ ಕಾರ್ಯಕರ್ತರು ಮೋದಿ ವಿರುದ್ಧ ಘೋಷಣೆ ಕೂಗಿದರು. ಆದರೆ, ಗುಂಪಲ್ಲಿ ವ್ಯಕ್ತಿಯೊಬ್ಬ ಮೋದಿ ಪರವಾಗಿ ಘೋಷಣೆ ಕೂಗಿದ್ದು, ಸ್ಥಳದಲ್ಲಿ ಗದ್ದಲ ಉಂಟು ಮಾಡಿತು. ತಕ್ಷಣ ಜನಸಮೂಹ ಅವರನ್ನು …

Read More »

2 ಸಾವಿರ ರೂ. ಕಳ್ಳತನಕ್ಕೆ ಎರಡು ಲಕ್ಷದ ಕಾರಿನಲ್ಲಿ ಬಂದ ಅಂತರ ಜಿಲ್ಲಾ ಕಳ್ಳರು ಲಾಕ್!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಸಿದ್ದಾಪುರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ಅಂತರ ಜಿಲ್ಲಾ ಕಳ್ಳರ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? ಹಾಳದಕಟ್ಟಾ ಗ್ರಾಮದ ರಾಜು ತಂದೆ ಉಮೇಶ ಜಾಧವ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ರಾಜು ಜಾಧವ್ ಅವರು ಸಿದ್ದಾಪುರದ ಹಾಳದಕಟ್ಟಾದಲ್ಲಿರುವ ತಮ್ಮ ಮೂಲ ಮನೆಯಲ್ಲಿ ವಯಸ್ಸಾದ ತಾಯಿ ಹಾಗೂ ಮಾನಸಿಕ …

Read More »

ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಹಗರಣ – ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ  ಬಹುಕೋಟಿ ಹಾಲಿನ ಪುಡಿ ಕಲಬೆರಕೆ  ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್ ಆವರಣದ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹಾಗೂ ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ …

Read More »

ಜಯನಗರ ಪೊಲೀಸ್ ಠಾಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಭೇಟಿ

ಬೆಂಗಳೂರು: ಜಯನಗರ ಕ್ಷೇತ್ರದಲ್ಲಿ ವೋಟರ್ ಐಡಿ (ಮತದಾರರ ಪಟ್ಟಿ) ಪರಿಶೀಲನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಎಫ್‌ಐಆರ್ ಅನ್ನು ಖಂಡಿಸಿ ಹಾಗೂ ಇದನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು. ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಜಯನಗರ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ಅವರ ನೇತೃತ್ವದಲ್ಲಿ ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಯಿತು ಪ್ರಮುಖ ಮುಖಂಡರ ಭೇಟಿ ಹಾಗೂ ಆಕ್ರೋಶ: ಜಯನಗರ ಪೊಲೀಸ್ ಠಾಣೆಗೆ …

Read More »