ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ.
ರಾಷ್ಟ್ರೀಯ ಭೂಕಂಪನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸುತ್ತಮುತ್ತಿಲು ಕಂಪನದ ಅನುಭವವಾಗಿದೆ.
ತಡರಾತ್ರಿ 2:04ಕ್ಕೆ ಭೂಕಂಪನ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಮುನ್ನಚ್ಚರಿಕೆಗಾಗಿ ಜಿಲ್ಲಾಡಳಿತಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಸೂಚನೆ.
Laxmi News 24×7