Breaking News

NEET ಮರುಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಅರೆಸ್ಟ್‌

Spread the love

ಪಾಟ್ನಾ: ಬಿಹಾರದ  ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ನಡೆದ NEET UG ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಲಖಿಸರಾಯ್  ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದೆ. ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಜನರನ್ನು ಪತ್ತೆಹಚ್ಚಿದೆ.

ಮೂಲಗಳ ಪ್ರಕಾರ, ಲಖಿಸರಾಯ್ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಸಿದ ತಪಾಸಣೆ ವೇಳೆ 30 ಜನ ಸಿಕ್ಕಿಬಿದ್ದಿದ್ದಾರೆ. ಈ ಪೈಕಿ 9 ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರೆ, ಇನ್ನುಳಿದ 21 ಜನರು ಈ ಪರೀಕ್ಷಾ ವಂಚನೆ ಜಾಲಕ್ಕೆ ಸಹಾಯ ಮತ್ತು ಅಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸದ್ಯ ಅಧಿಕಾರಿಗಳು ಈ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರ ವಿಶೇಷ ತಂಡ ಈ ದಂಧೆಯ ಹಿಂದಿರುವ ಕಿಂಗ್‌ಪಿನ್‌ಗಳ ಪತ್ತೆಗಾಗಿ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದೆ.

ಈ ಜಾಲದಲ್ಲಿ ಇನ್ನೂ ಹಲವು ಪ್ರಭಾವಿಗಳು ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇಡೀ ವಂಚನೆ ಜಾಲದ ಬಗ್ಗೆ ಬಹಿರಂಗಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ

Spread the loveಗದಗ: ಪ್ರಾಮಾಣಿಕವಾಗಿ ಎನ್‌ಡಿಎಅಭ್ಯರ್ಥಿಗೆ ಮತ ಹಾಕಿದ್ದೇನೆ. ಧರ್ಮಸ್ಥಳ ಮಂಜುನಾಥನ ಮೇಲೆ ಮಾತ್ರವಲ್ಲ, ಯಾವುದೇ ದೇವರ ಮೇಲೆ ಪ್ರಮಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ