Breaking News

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Spread the love

ಬೆಂಗಳೂರು: ರಾಜ್ಯದ ವಿವಿಧ ಜೈಲಿನಿಂದ ಸನ್ನಡತೆ ಆಧಾರದ ಮೇಲೆ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.

ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು 2, ಬೆಳಗಾವಿ 2, ಕಲಬುರಗಿ 2, ಶಿವಮೊಗ್ಗ 1, ವಿಜಯಪುರ 5, ಬಳ್ಳಾರಿ 3, ಧಾರವಾಡ 1, ಶಿವಮೊಗ್ಗ ಮಹಿಳಾ ಬ್ಯಾರೆಕ್‌ನಿಂದ ಒಬ್ಬರನ್ನು ಬಿಡುಗಡೆಗೆ ಆದೇಶ ಮಾಡಲಾಗಿದೆ.

ರಾಜ್ಯದ 9 ಕಾರಾಗೃಹ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಆದೇಶ ಮಾಡಲಾಗಿದೆ. 54 ಜೀವಾವಧಿ ಶಿಕ್ಷಾ ಬಂಧಿಗಳ ವ್ಯಕ್ತಿತ್ವ & ನಡತೆ ಪರಿಶೀಲಿಸಿ 31 ಜನ ಕೈದಿಗಳ ಬಿಡುಗಡೆಗೆ ಆದೇಶಿಸಲಾಗಿದೆ.

ಅವಧಿ ಪೂರ್ವ ಬಿಡುಗಡೆಯಾಗುತ್ತಿರುವ ಬಂಧಿಗಳು:
ಶ್ರೀನಿವಾಸ್ ಅಲಿಯಾಸ್ ಡ್ರೈವರ್ ಶ್ರೀನಿವಾಸ್, ಬಾಲರಾಜು, ವೆಂಕಟೇಶ್, ರಂಜಿತ್ @ ಬಟ್ಟ, ಭುವನೇಶ್ವರ ಟಿಪಿ, ಛತ್ರಪತಿ ನಾಯಕ್, ಲಿಂಗರಾಜು, ಶ್ರೀನಿವಾಸ್ ಮೂರ್ತಿ, ಯಮನಪ್ಪ, ನಿಲಕಂಠಾಚಾರ್ @ ಶಂಕರ್, ಬಾಬು, ರಾಜಾಚಾರಿ, ನಾರಾಯಣಗೌಡ, ವೆಂಕಟೇಶ್, ಚಂದ್ರಮ್ಮ, ತುಕಾರಾಮ್, ಜಯಮ್ಮ, ಸುಭಾಷ್, ತಿಮ್ಮಪ್ಪ, ಅಶೋಕ್, ಶಿವಪ್ಪ, ಆನಂದ, ಪ್ರಕಾಶ್, ಸುರೇಶ್, ಹೆಚ್‌ಕೆ ರವಿಕುಮಾರ್, ಜಿ.ಎಲ್ ಮೋಹನ್ ಕುಮಾರ್, ಮಂಜೆ ನಾಯ್ಕ್, ಲಕ್ಷ್ಮಿ ಕಾಂತ್, ಸರಸ್ವತಿ ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗುತ್ತಿದ್ದಾರೆ.


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ