Breaking News

ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು…..54 ಕ್ಕೇರಿದ ಸೊಂಕಿತರ ಸಂಖ್ಯೆ

Spread the love

ಬೆಳಗಾವಿ ಜಿಲ್ಲೆಯ ಎಂಟು ವರ್ಷದ ಬಾಲಕ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು 54 ಕ್ಕೇರಿದ ಸೊಂಕಿತರ ಸಂಖ್ಯೆ

ಎಂಟು ವರ್ಷದ   ಬಾಲಕ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು

54 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದೆ ಎಂಟು ವರ್ಷದ ಬಾಲಕ ಸೇರಿದಂತೆ ಹಿರೇಬಾಗೇವಾಡಿಯ ಮೂವರಿಗೆ ಸೊಂಕು ತಗುಲಿ ರುವದು ದೃಡವಾಗಿದೆ

ಇಂದು ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಹಿರೇಬಾಗೇವಾಡಿ ಗ್ರಾಮದ 30 ವರ್ಷದ ಮಹೀಳೆ,20 ವರ್ಷದ ಯುವಕ ,8 ವರ್ಷದ ಬಾಲಕನಿಗೆ ಸೊಂಕು ಇರುವದು ದೃಡವಾಗಿದೆ .

ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 54 ಕ್ಕೇರಿದ ..

ರಾಜ್ಯದಲ್ಲಿ ಇಂದು ಒಂದೇ ದಿನ 26 ಜನರಿಗೆ ಕೊರೋನಾ ಸೋಂಕು ಹರಡಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಇಂದು 9 ಜನರಿಗೆ ಸೋಂಕು ದೃಢಪಟ್ಟಿದ್ದು, ಎಲ್ಲವೂ ರೋಗಿ ನಂಬರ್ 128ರಿಂದಲೇ ಬಂದಿದೆ.

ಹಿರೇಬಾಗೇವಾಡಿಯಿಂದ ನಿಜಾಮುದ್ದೀನಿ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯಿಂದಲೇ ಸೋಂಕು ತೀವ್ರವಾಗಿ ಹರಡುತ್ತಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ 25 ಜನರಿಗೆ ಸೋಂಕು ತಗುಲಿದಂತಾಗಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 26 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಬೆಳಗಾವಿಯಲ್ಲಿ 8 ವರ್ಷದ ಮಗು ಸೇರಿದಂತೆ 9 ಜನರಲ್ಲಿ ಸೋಂಕು ದೃಢಪಟ್ಟಿದೆ.

ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಇಂದು ಪತ್ತೆಯಾದ ಎಲ್ಲಾ ಕೊರೊನಾ ಸೋಂಕಿತರು ತಬ್ಲಿಗಿಗಳ ದ್ವಿತೀಯ ಸಂಪರ್ಕದಲ್ಲಿ ಇದ್ದರು ಎಂಬ ಸಂಗತಿ ಬಯಲಾಗಿದೆ.

ಇನ್ನು ಬೆಂಗಳೂರಿನಲ್ಲಿ 6 ವರ್ಷದ ಮಗು ಸೇರಿಂದಂತೆ ಸಿಲಿಕಾನ್ ಸಿಟಿಯೊಂದರಲ್ಲೇ ಒಟ್ಟು 13 ಜನರಲ್ಲಿ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಚಿಕ್ಕ ಮಕ್ಕಳಲ್ಲೂ ಕೊರೊನಾ ಸೋಂಕು ಹರಡುತ್ತಿರುವುದು ಆತಂಕವನ್ನುಂಟು ಮಾಡಿದೆ.


Spread the love

About Laxminews 24x7

Check Also

ವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ

Spread the loveವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ   ಬೆಂಗಳೂರು : ವಸತಿ ರಹಿತರಿಗೆ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ