Breaking News

ಮಹಾರಾಷ್ಟ್ರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ – ಓರ್ವ ಸಾವು, ಅವಶೇಷಗಳ ಅಡಿಯಲ್ಲೇ ಹಲವರು ಸಿಲುಕಿರೋ ಶಂಕೆ

Spread the love

ಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಈಗಾಗಲೇ ಎನ್‌ಡಿಆರ್‌ಎಫ್‌ ತಂಡ  ಹಾಗೂ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಬೃಹತ್‌ ಕಟ್ಟಡ ಕುಸಿತದಿಂದ ಸುತ್ತಮುತ್ತಲಿನ ಪ್ರದೇಶದ ಜನರೂ ಆತಂಕಗೊಂಡಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

8-10 ಜನ ಸಿಲುಕಿರುವ ಶಂಕೆ
ಪ್ರಾಥಮಿಕ ವರದಿಗಳ ಪ್ರಕಾರ, ಸುಮಾರು 8 ರಿಂದ 10 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಸಾಧ್ಯತೆಯಿದೆ. ಮಾಹಿತಿ ಪಡೆದಿರುವ ಭಿವಂಡಿ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಹಾಗೂ ಎನ್‌ಡಿಆರ್‌ಎಫ್‌ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸಿಲುಕಿದವರನ್ನ ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಗಾಯಗೊಂಡವರನ್ನ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

ಸ್ಥಳದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್‌ ನಿಯೋಜಿಸಲಾಗಿದೆ. ಸ್ಥಳೀಯರು ವದಂತಿಗಳಿಗೆ ಕಿವಿಗೊಡದೇ ರಕ್ಷಣಾ ಕಾರ್ಯಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಗಾಯಗೊಂಡವರು ಅಥವಾ ಸಾವುನೋವುಗಳ ಸಂಖ್ಯೆಯ ಕುರಿತು ಅಧಿಕೃತ ವಿವರ ಇನ್ನಷ್ಟೇ ಹೊರಬರಬೇಕಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ