Breaking News

ಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆ

Spread the love

ಚಿತ್ರದುರ್ಗ: ಎದೆ ಉರಿ ಎಂದ ಬಾಲಕನನ್ನು  ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ.

ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ  ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ