ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಸೇನೆಯ ಹಾಡು ಬಳಸಿ ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಯುವಕನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಟಿಪ್ಪು ನಗರದ ನಿವಾಸಿ ಆಫ್ರಿದ್‌ನನ್ನು (23) ಪೊಲೀಸರು ಬಂಧಿತ ಆರೋಪಿ. ಈತ ಕಾರು ಶೋರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಇನ್ಸ್ಟಾಗ್ರಾಮ್‌ನ್ನು ಈತ ಬಳಸುತ್ತಿದ್ದ. ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಇದನ್ನು ವಿಡಿಯೋ ಮಾಡಿ, ಅದಕ್ಕೆ ಪಾಕ್ ಸೇನೆಯ ಪರವಾದ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಆಫ್ರಿದ್ ವೈರಲ್ ಮಾಡಿದ್ದ.
ವೈರಿ ರಾಷ್ಟ್ರದ ಪರವಾದ ಹಾಡು ಬಳಸಿ ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಚಿಕ್ಕಮಗಳೂರು ನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೇಶವಿರೋಧಿ ಚಟುವಟಿಕೆ, ಬಿ.ಎನ್.ಎಸ್. ಕಲಂ 299, 196 ಹಾಗೂ 197ರ ಅಡಿ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿತ್ತು.
Laxmi News 24×7